Tomorrow Horoscope: ಗೃಹಿಣಿಯರಿಗೆ ಎಚ್ಚರ ಅವಶ್ಯ, ತಂದೆಗೆ ಆರೋಗ್ಯ ಸಮಸ್ಯೆ ಕಾಡಬಹುದು; ನಾಳಿನ ದಿನಭವಿಷ್ಯ
10th June 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (10th June 2024 Horoscope).
ನಾಳಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲಪಕ್ಷ, ಸೋಮವಾರ
ತಿಥಿ: ಚೌತಿ ಬೆಳಿಗ್ಗೆ 4.33ರವರೆಗೂ ಇರುತ್ತದೆ. ಅನಂತರ ಪಂಚಮಿ ಆರಂಭವಾಗುತ್ತದೆ.
ನಕ್ಷತ್ರ: ಪುಷ್ಯ ನಕ್ಷತ್ರವು ರಾತ್ರಿ 10.25 ರವರೆಗೂ ಇರುತ್ತದೆ. ಅನಂತರ ಆಶ್ಲೇಷ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಿಗ್ಗೆ 5.52
ಸೂರ್ಯಾಸ್ತ: ಸಂಜೆ 6.45
ರಾಹುಕಾಲ: ಬೆಳಿಗ್ಗೆ 7.35 ರಿಂದ ಬೆಳಿಗ್ಗೆ 9.11
ರಾಶಿಫಲ
ಮೇಷ
ಚರ್ಮಕ್ಕೆ ಸಂಬಂಧಪಟ್ಟ ತೊಂದರೆ ಇರುತ್ತದೆ. ಯಾವುದನ್ನೂ ಲೆಕ್ಕಿಸದೆ ದೈನಂದಿನ ಕೆಲಸ ಕಾರ್ಯಗಳಲ್ಲಿ ತೊಡಗುವಿರಿ. ಆದರೆ ಸಹನೆ ಕಡಿಮೆಯಾಗಿ ಸಣ್ಣಪುಟ್ಟ ದೋಷಗಳಿಗೂ ಕೋಪದಿಂದ ಪ್ರತಿಕ್ರಿಯಿಸುವಿರಿ. ಹಣದ ತೊಂದರೆ ಕಂಡುಬರುವುದಿಲ್ಲ. ರುಚಿಕರವಾದ ಭೋಜನವನ್ನು ಸೇವಿಸುವಿರಿ. ಶಾಂತವಾಗಿ ಕಾಣುವ ನೀವು ಕೋಪದಲ್ಲಿ ಉದ್ವೇಗದಿಂದ ವರ್ತಿಸುವಿರಿ.
ಪರಿಹಾರ: ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ನೇರಳೆ ಬಣ್ಣ
ವೃಷಭ
ನಿಮ್ಮ ಕಾರ್ಯದಕ್ಷತೆಗೆ ಹಿರಿಯರ ಮೆಚ್ಚುಗೆ ದೊರೆಯುತ್ತದೆ. ಮಕ್ಕಳಿಗೆ ಉತ್ತಮ ಸಹಾಯ ಅಥವಾ ಸಹಕಾರದ ಅವಶ್ಯಕತೆ ಇದೆ. ನಿಮ್ಮ ಮನಸ್ಸಿಗೆ ಇಷ್ಟವೆನಿಸುವ ವಸ್ತುಗಳನ್ನು ಖರೀದಿಸುವಿರಿ. ಅನಾವಶ್ಯಕ ಖರ್ಚು ವೆಚ್ಚಗಳನ್ನು ನಿಯಂತ್ರಿಸುವಿರಿ. ಮಕ್ಕಳ ಜೊತೆಯಲ್ಲಿ ದೂರದ ಊರಿಗೆ ಪ್ರವಾಸ ಬೆಳೆಸುವಿರಿ.
ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ
ಮಿಥುನ
ಸಮಾಜದ ಗಣ್ಯ ವ್ಯಕ್ತಿಗಳಿಗೆ ಹತ್ತಿರವಾಗುವಿರಿ. ಹಣದ ತೊಂದರೆ ಎದುರಾಗುವುದಿಲ್ಲ. ಲೋಹಕ್ಕೆ ಸಂಬಂಧಿಸಿದ ವ್ಯಾಪಾರ ವ್ಯವಹಾರಗಳಲ್ಲಿ ಲಾಭವಿರುತ್ತದೆ. ಕುಟುಂಬದ ಸದಸ್ಯರಿಂದ ಅವಶ್ಯಕತೆಗೆ ಸಾಕಾಗುವಷ್ಟು ಆದಾಯ ದೊರೆಯುತ್ತದೆ. ಹೊಸ ವಿಚಾರವನ್ನು ಕಲಿಯುವಲ್ಲಿ ಆಸಕ್ತಿ ತೋರುವಿರಿ.
ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಬಿಳಿ ಬಣ್ಣ
ಕಟಕ
ಸಂಗಾತಿಗೆ ಸೋದರರ ಜೊತೆಯಲ್ಲಿ ಅನಾವಶ್ಯಕ ವಾದ ವಿವಾದಗಳಿರುತ್ತವೆ. ಅಪರೂಪವೆಂಬಂತೆ ಆತ್ಮೀಯರೊಬ್ಬರನ್ನು ಭೇಟಿ ಮಾಡುವಿರಿ. ಮನಸ್ಸಿನಲ್ಲಿ ಉಪಯೋಗವಿಲ್ಲದ ಯೋಚನೆಗಳು ಇರುತ್ತವೆ. ಧೈರ್ಯದಿಂದ ಎದುರಾಗುವ ಸವಾಲುಗಳನ್ನು ಜಯಿಸುವಿರಿ. ತಾಳ್ಮೆಯಿಂದ ಹಣಕಾಸಿನ ವಿಚಾರದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳುವಿರಿ.
ಪರಿಹಾರ: ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ: ಬೂದು ಬಣ್ಣ
ಸಿಂಹ
ಉದ್ಯೋಗದಲ್ಲಿ ಮೇಲ್ಮಟ್ಟದ ಯಶಸ್ಸನ್ನು ಕಾಣುವಿರಿ. ಕುಟುಂಬದಲ್ಲಿ ಎದುರಾಗುವ ಘಟನೆಯಿಂದ ಪರಸ್ಪರ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಉತ್ತಮ ವೇತನಕ್ಕಾಗಿ ಉದ್ಯೋಗವನ್ನು ಬದಲಾಯಿಸುವಿರಿ. ನಿಮ್ಮ ಮನಸ್ಸಿನ ಬಹುತೇಕ ಯೋಚನೆಗಳು ನಿಜವಾಗಲಿವೆ. ಹಣದ ಕೊರತೆ ಕಂಡು ಬರುತ್ತದೆ.
ಪರಿಹಾರ: ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ : ಕಂದು ಬಣ್ಣ
ಕನ್ಯಾ
ಒಮ್ಮೆ ತೆಗೆದುಕೊಂಡ ತೀರ್ಮಾನವನ್ನು ಅನಾವಶ್ಯಕವಾಗಿ ಬದಲಾಯಿಸುವಿರಿ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ. ಸಂಚಾರದಿಂದ ನಿರೀಕ್ಷಿತ ಅನುಕೂಲಗಳು ದೊರೆಯಲಿವೆ. ಇರುವ ಹಣವನ್ನು ಪೂರ್ವಯೋಜನೆ ಇಲ್ಲದೆ ಖರ್ಚು ಮಾಡುವಿರಿ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಆಸಕ್ತಿ ತೋರುವಿರಿ. ಅರಸಿ ಬಂದವರಿಗೆ ಅನ್ನದಾನ ಮಾಡುವಿರಿ.
ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಕಪ್ಪು ಬಣ್ಣ
ತುಲಾ
ಉದ್ಯೋಗ ಕ್ಷೇತ್ರದಲ್ಲಿ ವಾದ ವಿವಾದಗಳನ್ನು ಕಡಿಮೆ ಮಾಡುವುದು ಒಳ್ಳೆಯದು. ಅತಿಯಾದ ಸಿಟ್ಟಿನ ಬುದ್ಧಿ ಇರುವ ಕಾರಣ ಆತ್ಮೀಯರು ದೂರವಾಗುತ್ತಾರೆ. ಸೋದರನಿಗೆ ಗಣ್ಯ ವ್ಯಕ್ತಿಗಳಿಂದ ಸಹಾಯ ದೊರೆಯುತ್ತದೆ. ಆರೋಗ್ಯದ ಬಗ್ಗೆ ಗಮನವಿರಲಿ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಲಾಭವಿರುತ್ತದೆ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ
ವೃಶ್ಚಿಕ
ಯಾವುದೇ ಕೆಲಸ ಕಾರ್ಯಗಳನ್ನು ಸುಲಭವಾಗಿ ಮಾಡಬಲ್ಲಿರಿ. ಬುದ್ಧಿವಂತಿಕೆಯಿಂದ ಎಲ್ಲರ ಮನೆಗೆಲ್ಲುವಂತೆ ಮಾತನಾಡುವಿರಿ. ನರನಿಶ್ಯಕ್ತಿಯಿಂದ ಬಳಲುವಿರಿ. ಸಂಗಾತಿಗೆ ಅನಿರೀಕ್ಷಿತ ಶುಭ ಫಲಗಳು ದೊರೆಯುತ್ತವೆ. ದಂಪತಿಗಳ ನಡುವೆ ಉತ್ತಮ ಅನುಬಂಧ ಇರುತ್ತದೆ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಧನಸ್ಸು
ದೊರೆವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವಿರಿ. ಸಂಗಾತಿಯು ಮಾತುಕತೆಯ ಮೂಲಕ ಹಣಕಾಸಿನ ವಿವಾದಕ್ಕೆ ಪರಿಹಾರ ಕಂಡುಹಿಡಿಯುವರು. ಕಣ್ಣಿನ ಉರಿ ಅಥವಾ ನೀರು ಸೋರುವ ತೊಂದರೆ ಇರುತ್ತದೆ. ತಂದೆಯವರ ಆರೋಗ್ಯದಲ್ಲಿ ಏರಿಳಿತ ಕಂಡು ಬರಲಿದೆ. ಸೋದರನು ಯಾವುದೇ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ.
ಪರಿಹಾರ: ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ
ಮಕರ
ಧರ್ಮ ಗುರುಗಳನ್ನು ಭೇಟಿ ಮಾಡುವಿರಿ. ಕೆಲಸ ಕಾರ್ಯಗಳಲ್ಲಿ ನೀವು ನಿರೀಕ್ಷಿಸಿದ ಯಶಸ್ಸು ದೊರೆಯುವುದಿಲ್ಲ. ಕೋಪಗೊಂಡರು ಮನಸ್ಸಿನಲ್ಲಿ ಒಳ್ಳೆಯ ಭಾವನೆಯೇ ಇರುತ್ತದೆ. ಶೀತವಾಯುವಿನ ದೋಷ ನಿಮ್ಮನ್ನು ಕಾಡಲಿದೆ. ಸೋದರಿಯಿಂದ ಉಡುಗೊರೆಯೊಂದು ದೊರೆಯಲಿದೆ. ಅನಿವಾರ್ಯವಾಗಿ ಬೇರೆಯವರ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕಾಗುತ್ತದೆ.
ಪರಿಹಾರ: ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ: ಹಾಲಿನ ಬಣ್ಣ
ಕುಂಭ
ದೇವರಲ್ಲಿ ನಂಬಿಕೆ ಇದ್ದರು ಸ್ವಂತ ಪ್ರಯತ್ನದ ಮೇಲೆ ಅವಲಂಬಿತವಾಗುವಿರಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವಿರಿ. ಮಂತ್ರ ತಂತ್ರಗಳಲ್ಲಿ ನಂಬಿಕೆ ಬರಲಿದೆ. ಬೇರೆಯವರ ಭಾವನೆಗಳಿಗೆ ತೊಂದರೆಯಾಗದಂತೆ ಮಾತನಾಡುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಯಾತ್ರಾ ಸ್ಥಳಕ್ಕೆ ದೀರ್ಘಕಾಲದ ಪ್ರವಾಸ ಕೈಗೊಳ್ಳುವಿರಿ.
ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ
ಮೀನ
ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ. ಕುಟುಂಬದಲ್ಲಿ ಪರಸ್ಪರ ಪ್ರೀತಿ ವಿಶ್ವಾಸದ ಕೊರತೆ ಇರುತ್ತದೆ. ಸಂಗಾತಿಯೊಂದಿಗೆ ಅನಾವಶ್ಯಕ ವಾದ ವಿವಾದಗಳಿರುತ್ತವೆ. ಎಡಗಣ್ಣಿಗೆ ಪೆಟ್ಟು ಬೀಡಬಹುದು. ಹಣಕಾಸಿನ ವ್ಯವಹಾರದಲ್ಲಿ ಎದುರಾಗುವ ತೊಂದರೆಯಿಂದ ಪಾರಾಗುವಿರಿ.
ಪರಿಹಾರ: ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ : ಆಕಾಶ ನೀಲಿ ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).