Tomorrow Horoscope: ಕೃಷಿ ಭೂಮಿ ಕೊಳ್ಳಬೇಕು ಎನ್ನುವ ಬಹಳ ದಿನಗಳ ಆಸೆ ನೆರವೇರಲಿದೆ; ನಾಳೆಯ ದಿನ ಭವಿಷ್ಯ
12th April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.
ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (12th April 2024 Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಶುಕ್ರವಾರ
ತಿಥಿ : ಚೌತಿ 05.13 ರವರೆಗೂ ಇರುತ್ತದೆ ನಂತರ ಪಂಚಮಿ ಆರಂಭವಾಗುತ್ತದೆ.
ನಕ್ಷತ್ರ: ರೋಹಿಣಿ ನಕ್ಷತ್ರವು ರಾತ್ರಿ 4.37 ರವರೆಗೂ ಇರುತ್ತದೆ ನಂತರ ಮೃಗಶಿರ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 06.09
ಸೂರ್ಯಾಸ್ತ: ಸಂಜೆ 06.31
ರಾಹುಕಾಲ: 10.30 ರಿಂದ12.00
ರಾಶಿಫಲ
ಮೇಷ
ಮನದ ಬೇಸರ ಕಡಿಮೆ ಮಾಡಲು ಸಂತೋಷ ಕೂಟಗಳಲ್ಲಿ ಭಾಗವಹಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ನಾಯಕನ ಸ್ಥಾನ ಲಭಿಸುತ್ತದೆ. ಸಹೋದ್ಯೋಗಿಗಳ ಸಹಕಾರ ಮತ್ತು ವಿಶ್ವಾಸ ದೊರೆಯುತ್ತದೆ. ಅಧಿಕಾರಿಗಳ ಜೊತೆ ವಾದವಿರುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಅಗ್ರಸ್ಥಾನವನ್ನು ಪಡೆಯುವರು. ಸಂಗಾತಿಯ ನಡುವಿನ ಸಮಸ್ಯೆಯೊಂದು ಪರಿಹಾರಗೊಳ್ಳಲಿದೆ.
ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಬಿಳಿ
ವೃಷಭ
ಮಕ್ಕಳ ವಿದ್ಯಾಭ್ಯಾಸಕ್ಕೆ ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ. ಒಮ್ಮೆ ತೆಗೆದುಕೊಂಡ ನಿರ್ಧಾರಗಳನ್ನು ಅನಾವಶ್ಯಕವಾಗಿ ಬದಲಿಸದಿರಿ. ಉದ್ಯೋಗದ ವಿಚಾರವಾಗಿ ಮನದಲ್ಲಿ ಆತಂಕ ಉಂಟಾಗುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಮಧ್ಯಮ ಲಾಭ ದೊರೆಯಲಿದೆ. ಹಿರಿಯರ ಅಣತಿಯಂತಿಯಂತೆ ಮನೆಯ ಆಡಳಿತವನ್ನು ಸ್ವೀಕರಿಸುವಿರಿ.
ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ 10
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ : ಬೂದು
ಮಿಥುನ
ತಪ್ಪನ್ನು ಸರಿಪಡಿಸಿಕೊಳ್ಳಲು ಬುದ್ಧಿವಾದ ಹೇಳಿದಲ್ಲಿ ವಿವಾದ ಉಂಟಾಗಬಹುದು. ಉದ್ಯೋಗದಲ್ಲಿ ಧನಾತ್ಮಕ ಪ್ರಕ್ರಿಯೆ ಆರಂಭವಾಗುತ್ತದೆ. ಹಣದ ಸ್ಥಿತಿಯನ್ನು ಉತ್ತಮಗೊಳಿಸಲು ಪ್ರಯತ್ನಿಸುವಿರಿ. ವಿದ್ಯಾರ್ಥಿಗಳ ವಿಚಾರದಲ್ಲಿ ಸ್ಥಿರವಾದ ತೀರ್ಮಾನವನ್ನು ತೆಗೆದುಕೊಳ್ಳುವಲ್ಲಿ ವಿಫಲವಾಗುವಿರಿ. ಸಂತಾನಯೋಗವಿದೆ. ಸಂಗಾತಿಗಾಗಿ ವಿದೇಶ ಪ್ರವಾಸ ಮಾಡುವಿರಿ. ತಾಯಿಯವರ ಅರೋಗ್ಯದಲ್ಲಿ ಚೇತರಿಕೆ ನಿಮಗೆ ಸಮಾಧಾನ ನೀಡಲಿದೆ.
ಪರಿಹಾರ : ದೇವರಿಗೆ ತುಪ್ಪದ ದೀಪ ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕಂದು
ಕಟಕ
ವಿದ್ಯಾರ್ಥಿಗಳು ಕೇವಲ ಪಠ್ಯ ವಿಚಾರದಲ್ಲದೇ ಕ್ರೀಡಾಸ್ಪರ್ಧೆಗಳಲ್ಲಿಯೂ ಮುಂದಿರುತ್ತಾರೆ. ನಿಮ್ಮಲ್ಲಿರುವ ಕ್ರಿಯಾಶೀಲ ವ್ತ್ಯಕ್ತಿತ್ವ ಜನಮನ್ನಣೆ ಗಳಿಸುತ್ತದೆ. ಕುಟುಂಬ ಮತ್ತು ಸಮಾಜದಲ್ಲಿ ಗೌರವಯುತ ಸ್ಥಾನ ಗಳಿಸುವಿರಿ. ಸಂಗಾತಿಗೆ ಚಿನ್ನದ ಕಾಣಿಕೆಯೊಂದನ್ನು ನೀಡುವಿರಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ಕುತೂಹಲದಿಂದ ಮೊದಲು ಸ್ವಂತ ಕೆಲಸ ಕಾರ್ಯಗಳನ್ನು ಮಾಡಲಿಚ್ಚಿಸುವಿರಿ.
ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಕಪ್ಪು
ಸಿಂಹ
ಉದ್ಯೋಗದಲ್ಲಿ ನಿಮ್ಮ ಅವಿರತ ಪ್ರಯತ್ನದಿಂದ ಸಕಾರಾತ್ಮಕ ಬದಲಾವಣೆಗಳು ಉಂಟಾಗುತ್ತವೆ. ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳುವರು. ಆತುರದಲ್ಲಿ ತಪ್ಪು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಆತ್ಮೀಯರ ಸಲಹೆ ಸೂಚನೆಯನ್ನು ಪಾಲಿಸಿದರೆ ಕಷ್ಟ ನಷ್ಟಗಳು ಕಡಿಮೆ ಆಗುತ್ತವೆ. ಸ್ವಂತ ಉದ್ಯಮದಲ್ಲಿ ದಿನ ಪೂರ್ತಿ ಒತ್ತಡ ಇರಲಿದೆ. ಕೊಟ್ಟ ಮಾತಿನಂತೆ ಇಂದು ಸಂಘ ಸಂಸ್ಥೆಯೊಂದಕ್ಕೆ ಧನ ಸಹಾಯ ಮಾಡಬೇಕಾಗುತ್ತದೆ.
ಪರಿಹಾರ : ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ : ನಸುಗೆಂಪು
ಕನ್ಯಾ
ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ಆದಾಯವು ಮಧ್ಯಮ ಗತಿಯಲ್ಲಿ ಇರುತ್ತದೆ. ಲಾಭದ ಲೆಕ್ಕಾಚಾರ ಮಾಡಿದ ನಂತರ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಕುಟುಂಬದ ವಿಚಾರಗಳಿಗೆ ಮೊದಲ ಆದ್ಯತೆ ನೀಡುವಿರಿ. ಪ್ರೀತಿಯಿಂದ ಕೂಡಿದ ಮಾತುಕತೆಯ ಕಾರಣ ಸಂದಿಗ್ದತೆಯನ್ನು ತಿಳಿಗೊಳಿಸುತ್ತದೆ. ತಾಯಿಯಿಂದ ಹಣದ ಸಹಾಯ ದೊರೆಯಲಿದೆ. ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುವಿರಿ.
ಪರಿಹಾರ : ಪಕ್ಷಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು ಉತ್ತರ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ
ತುಲಾ
ಉದ್ಯೋಗ ಬದಲಾಯಿಸಲು ಪ್ರಯತ್ನಿಸಿದರೂ ಸಾಧ್ಯವಾಗದು. ಬಿಡುವಿಲ್ಲದ ಕೆಲಸ ಕಾರ್ಯಗಳು ದೈಹಿಕವಾಗಿ ಕುಗ್ಗುವಂತೆ ಮಾಡುತ್ತದೆ. ಅನಾವಶ್ಯಕ ಖರ್ಚು ವೆಚ್ಚುಗಳನ್ನು ಭರಿಸುವಲ್ಲಿ ಸಫಲರಾಗುವಿರಿ. ಮಿತಿಮೀರಿದ ಖರ್ಚು ವೆಚ್ಚಗಳು ನೆಮ್ಮದಿಯನ್ನು ಕೆಡಿಸುತ್ತದೆ. ದುಡುಕದೇ ಯೋಚಿಸಿ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ.
ಪರಿಹಾರ : ಸಿಹಿ ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು ಈಶಾನ್ಯ
ಅದೃಷ್ಟದ ಬಣ್ಣ: ಬಿಳಿ
ವೃಶ್ಚಿಕ
ಮಹಿಳಾ ಉದ್ಯಮಿಗಳಿಗೆ ನಿರೀಕ್ಷಿತ ಯಶಸ್ಸು ದೊರೆಯಲಿದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ತಂದೆಯವರಿಗೆ ಉದ್ಯೋಗದಲ್ಲಿ ಬಡ್ತಿ ದೊರೆವ ಸೂಚನೆಗಳಿವೆ. ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳುವಿರಿ. ವ್ಯಾಪಾರ ವ್ಯವಹಾರದಲ್ಲಿ ನಿರಾಸಕ್ತಿ ಉಂಟಾಗಲಿದೆ. ಕುಟುಂಬದ ಜೊತೆ ಯಾತ್ರಾಸ್ಥಳಕ್ಕೆ ಪ್ರವಾಸ ಕೈಗೊಳ್ಳುವಿರಿ. ಸ್ವಂತ ಭೂಮಿ ಅಥವ ಮನೆಯನ್ನು ಕೊಳ್ಳುವಿರಿ. ನಿಮ್ಮ ಮಧ್ಯಸ್ಥಿಕೆಯಿಂದ ಮನೆತನದ ಆಸ್ತಿಯ ವಿವಾದ ಬಗೆಹರಿಯುವುದು.
ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಬೂದು ಬಣ್ಣ
ಧನಸ್ಸು
ಕುಟುಂಬದಲ್ಲಿ ಉತ್ತಮ ಬದಲಾವಣೆಗಳು ಆರಂಭವಾಗುತ್ತವೆ. ಹಣಕಾಸಿನ ವಿಚಾರದಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳುವ ಅವಶ್ಯಕತೆ ಇದೆ. ನಿಮ್ಮ ಕೈ ಕಾಲುಗಳಿಗೆ ಪೆಟ್ಟು ಬೀಳ ಬಹುದು. ವಂಶದ ಹಿರಿಯರೊಬ್ಬರು ಮನೆಗೆ ಆಗಮಿಸಲಿದ್ದಾರೆ. ನಿಮ್ಮ ಪಾಲಿನ ವಂಶದ ಆಸ್ತಿಯ ಅಲ್ಪ ಭಾಗವನ್ನು ಹಣದ ಅವಶ್ಯಕತೆ ಗಾಗಿ ಮಾರಾಟ ಮಾಡುವಿರಿ. ಉಷ್ಣದ ತೊಂದರೆ ಉಂಟಾಗುತ್ತದೆ. ಕುಟುಂಬದ ಸದಸ್ಯರ ಜೊತೆಯಲ್ಲಿ ಗುರುವಿನ ದೇಗುಲಕ್ಕೆ ಬೇಟಿ ನೀಡುವಿರಿ.
ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಆಕಾಶ ನೀಲಿ
ಮಕರ
ಆಸ್ತಿಯ ವಿವಾದದಲ್ಲಿ ಕಾನೂನಾತ್ಮಕ ಯಶಸ್ಸು ದೊರೆಯುತ್ತದೆ. ವಿಶ್ರಾಂತಿ ಇಲ್ಲದೆ ದುಡಿಯುವಿರಿ. ಕೆಲಸ ಕಾರ್ಯಗಳನ್ನು ಆತುರದಿಂದ ಪೂರ್ಣಗೊಳಿಸುವಿರಿ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ಉತ್ತಮ ಫಲಿತಾಂಶ ಪಡೆಯುತ್ತಾರೆ. ವಾಸಸ್ಥಳವನ್ನು ಬದಲಾಯಿಸುವಿರಿ. ಸ್ನೇಹಿತರೊಬ್ಬರಿಂದ ಪಡೆದಿದ್ದ ಹಣವನ್ನು ಮರಳಿಸುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಕೆಂಪು
ಕುಂಭ
ಮಾತನಾಡದೆ ಮೌನವಾಗಿ ವ್ಯಾಪಾರ ವ್ಯವಹಾರದಲ್ಲಿ ಶ್ರದ್ಧೆ ತೋರುವಿರಿ. ಅತಿಯಾದ ತಲೆ ನೋವು ನಿಮ್ಮನ್ನು ಕಾಡುತ್ತದೆ. ಬೇರೆಯವರ ವಾದ ವಿವಾದಗಳ ಮಧ್ಯಸ್ಥಿಕೆ ವಹಿಸಿದರೆ ತೊಂದರೆ ಉಂಟಾಗುತ್ತದೆ. ಆಹಾರ ಸೇವನೆಯಲ್ಲಿ ಮಿತಿ ಇರಲಿ. ಹಿರಿಯ ಸೋದರನ ನಡುವೆ ಹಣಕಾಸಿನ ವಿಚಾರದಲ್ಲಿ ವಿವಾದ ಉಂಟಾಗುತ್ತದೆ. ದೂರದ ಸ್ಥಳಕ್ಕೆ ಪ್ರವಾಸಕ್ಕೆ ತೆರಳುವಿರಿ. ಹಣಕಾಸಿನ ಸಮಸ್ಯೆ ಬಗೆ ಹರಿಯುತ್ತದೆ.
ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಕೇಸರಿ
ಮೀನ
ಮನೆಯವರ ಒತ್ತಡಕ್ಕೆ ಮಣಿದು ಉದ್ಯೋಗ ಬದಲಿಸುವಿರಿ. ವ್ಯಾಪಾರದಲ್ಲಿ ಮಧ್ಯಮ ಗತಿಯ ಲಾಭವಿರುತ್ತದೆ. ವಿದ್ಯಾರ್ಥಿಗಳು ಸುಲಭವಾಗಿ ಗುರಿ ತಲುಪುತ್ತಾರೆ. ಉನ್ನತ ಅಧ್ಯಯನದ ಸೂಚನೆಗಳಿವೆ. ಗಂಟಲಿನ ಸೋಂಕು ಉಂಟಾಗುವುದು. ಅಭಿನಯ ಕ್ಷೇತ್ರದಲ್ಲಿ ಇದ್ದಲ್ಲಿ ದೊಡ್ಡ ಅವಕಾಶವೊಂದು ಬರಲಿದೆ. ಅನಿವಾರ್ಯವಾಗಿ ವ್ಯಾಪಾರವನ್ನು ಮೊಟಕುಗೊಳಿಸುವಿರಿ. ಮನಸ್ಸಿಗೆ ನೆಮ್ಮದಿ ಇರದು.
ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ : ಗುಲಾಬಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).