ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಕಷ್ಟಕಾಲಕ್ಕೆ ಕೂಡಿಟ್ಟ ಹಣ ಅನಾವಶ್ಯಕವಾಗಿ ಖರ್ಚಾಗಲಿದೆ, ಅತಿಯಾದ ಕೋಪಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ; ನಾಳೆಯ ದಿನ ಭವಿಷ್ಯ

ಕಷ್ಟಕಾಲಕ್ಕೆ ಕೂಡಿಟ್ಟ ಹಣ ಅನಾವಶ್ಯಕವಾಗಿ ಖರ್ಚಾಗಲಿದೆ, ಅತಿಯಾದ ಕೋಪಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ; ನಾಳೆಯ ದಿನ ಭವಿಷ್ಯ

12th July Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ)

ಕಷ್ಟಕಾಲಕ್ಕೆ ಕೂಡಿಟ್ಟ ಹಣ ಅನಾವಶ್ಯಕವಾಗಿ ಖರ್ಚಾಗಲಿದೆ, ಅತಿಯಾದ ಕೋಪಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ; ನಾಳೆಯ ದಿನ ಭವಿಷ್ಯ
ಕಷ್ಟಕಾಲಕ್ಕೆ ಕೂಡಿಟ್ಟ ಹಣ ಅನಾವಶ್ಯಕವಾಗಿ ಖರ್ಚಾಗಲಿದೆ, ಅತಿಯಾದ ಕೋಪಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ; ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (12th July 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಡ ಮಾಸ-ಶುಕ್ಲಪಕ್ಷ-ಶುಕ್ರವಾರ

ತಿಥಿ : ಷಷ್ಠಿ ಬೆಳಗ್ಗೆ 09.57 ರವರೆಗೂ ಇರುತ್ತದೆ ನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಉತ್ತರ ನಕ್ಷತ್ರವು 02.35 ರವರೆಗೂ ಇದ್ದು ನಂತರ ಹಸ್ತ ನಕ್ಷತ್ರ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 06.00

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: 10.52 ರಿಂದ 12.28

ರಾಶಿ ಫಲ

ಮೇಷ

 ವಿದ್ಯಾರ್ಥಿಗಳು ಆಟ ಪಾಠಗಳಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತಾರೆ. ತಂದೆಯವರ ಆರೋಗ್ಯದಲ್ಲಿನ ತೊಂದರೆ ಕಡಿಮೆಯಾಗುತ್ತದೆ. ಹೊಸ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ಗಳಿಸುವಿರಿ. ಅಲ್ಪತೃಪ್ತಿಯಿಂದ ಸಂತೋಷ ಪಡುವಿರಿ. ಜನೋಪಕಾರಿ ಕೆಲಸಗಳಲ್ಲಿ ಆಸಕ್ತಿ ಉಂಟಾಗುತ್ತದೆ. ಅತಿಯಾದ ಕೋಪಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ.

ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಂದು

ವೃಷಭ

  ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆಗಳು ಉಂಟಾಗುತ್ತವೆ. ಕುಟುಂಬದಲ್ಲಿ ಸಂತೋಷದ ವಾತಾವರಣವಿರುತ್ತದೆ. ವಿದ್ಯಾರ್ಥಿಗಳು ಅನಾರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಶ್ರದ್ಧೆಯಲ್ಲಿನ ಕೊರತೆಯ ಕಾರಣ ಕಲಿಕೆಯಲ್ಲಿ ಹಿಂದುಳಿಯಲಿದ್ದಾರೆ. ವ್ಯಾಪಾರ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ವರಮಾನದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ.  

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಪ್ಪು

ಮಿಥುನ

 ಮನೆಯ ನಿರ್ವಹಣೆಯ ವಿಚಾರಕ್ಕೆ ಹೆಚ್ಚಿನ ಖರ್ಚು ವೆಚ್ಚ ಉಂಟಾಗುತ್ತದೆ. ಉದ್ಯೋಗದಲ್ಲಿ ಅಧಿಕಾರಿಯ ಸ್ಥಾನ ನಿಮಗೆ ಲಭಿಸುತ್ತದೆ. ವಿದ್ಯಾರ್ಥಿಗಳು ಕಷ್ಟಪಟ್ಟು ತಮ್ಮ ಕಾರ್ಯ ಸಾಧಿಸುತ್ತಾರೆ. ಮನರಂಜನೆ ಕಾರ್ಯಕ್ರಮಗಳಿಗಾಗಿ ಹಣ ಖರ್ಚು ಮಾಡುವಿರಿ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ವರಮಾನದಲ್ಲಿ ತೊಂದರೆ ಇರುತ್ತದೆ. ಕಿರಿಯ ಸೋದರಿ ಅಥವಾ ಸೋದರನ ಮದುವೆ ವಿಚಾರವು ಹೆಚ್ಚಿನ ಪ್ರಾಮುಖ್ಯತೆ ಗಳಿಸುತ್ತದೆ.  

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿರಿ

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ತಿಳಿ ಹಸಿರು

ಕಟಕ

 ನೀವು ಮಾಡುವ ತೀರ್ಮಾನದಿಂದ ಹಣದ ತೊಂದರೆಯಿಂದ ಪಾರಾಗುವಿರಿ. ಭೂ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ. ವಿದ್ಯಾರ್ಥಿಗಳು ಪರಿಸ್ಥಿತಿಯ ಒತ್ತಡದ ಕಾರಣ ಗೊಂದಲಕ್ಕೆ ಒಳಗಾಗುತ್ತಾರೆ. ದುಡುಕು ಮಾತಿನಿಂದ ಮೈ ಮೇಲೆ ತೊಂದರೆ ಎಳೆದುಕೊಳ್ಳುವಿರಿ. ಆತ್ಮೀಯರಲ್ಲಿ ಬೇಸರ ಉಂಟಾಗುವ ಘಟನೆಯೊಂದು ನಡೆಯುತ್ತದೆ. ಹಣ ಉಳಿತಾಯ ಮಾಡುವಿರಿ. ಅನಾವಶ್ಯಕ ಓಡಾಟ ನೆಮ್ಮದಿ ಕೆಡಿಸುತ್ತದೆ.  

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ. ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನಸು ಗೆಂಪು

ಸಿಂಹ

 ಉತ್ತಮ ನಡತೆಯ ಮೂಲಕ ಜನರ ಮನಸ್ಸನ್ನು ಗೆಲ್ಲುವಿರಿ. ಹಣಕಾಸಿನ ವಿಚಾರದಲ್ಲಿ ವಿಶೇಷ ಅನುಕೂಲ ನಿಮ್ಮದಾಗಲಿದೆ. ಉದ್ಯೋಗದಲ್ಲಿ ನಿಮ್ಮ ತೀರ್ಮಾನವೇ ಅಂತಿಮವಾಗುತ್ತದೆ. ವಾದ ವಿವಾದ ಉಂಟಾದರೂ ನಿಮ್ಮನ್ನು ಸೋಲಿಸಲಾಗದು. ಸರ್ಕಾರದ ಅಧೀನದಲ್ಲಿ ಮಾಡುವ ವ್ಯಾಪಾರದಲ್ಲಿ ಹೆಚ್ಚಿನ ಆದಾಯ ದೊರಕುತ್ತದೆ. ಭೂ ವಿವಾದವೊಂದು ಪರಿಹಾರಗೊಳ್ಳಲಿದೆ.  

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ ಬಣ್ಣ

ಕನ್ಯಾ

 ಅನಿವಾರ್ಯವಾಗಿ ಉದ್ಯೋಗ ಬದಲಿಸುವ ನಿರ್ಧಾರ ಮಾಡುವಿರಿ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ನಿಧಾನಗತಿಯ ಪ್ರಗತಿ ಸಾಧಿಸುವಿರಿ. ಸ್ವಂತ ಜಮೀನು ಅಥವಾ ಮನೆ ಖರೀದಿಸುವ ಆಸೆ ನನಸಾಗಲಿದೆ. ಅವಿವಾಹಿತರಿಗೆ ವಿವಾಹದ ಸೂಚನೆ ಇದೆ. ಉಸಿರಿನ ತೊಂದರೆ ಇರುವವರು ಎಚ್ಚರಿಕೆ ವಹಿಸಿ. ಪಾರುದಾರಿಕೆ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ವಿರುತ್ತದೆ.  

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಬಿಳಿ

ತುಲಾ

 ವಿದ್ಯಾರ್ಥಿಗಳಿಗೆ ತಮ್ಮ ಆಶೋತ್ತರಗಳನ್ನು ಈಡೇರಿಸಿಕೊಳುವ ಸಾಧ್ಯತೆ ಇದೆ. ಸಂಗಾತಿಯ ಸಹಾಯದಿಂದ ಸಣ್ಣಪುಟ್ಟ ವ್ಯಾಪಾರ ಆರಂಭಿಸಿ ಯಶಸ್ಸನ್ನು ಗಳಿಸುವಿರಿ. ಮಕ್ಕಳ ನಡುವೆ ಮನಸ್ತಾಪ ಉಂಟಾಗುವ ಸೂಚನೆಗಳಿವೆ. ಹಣಕಾಸಿನ ತೊಂದರೆ ಇರುವುದಿಲ್ಲ. ಕಲುಷಿತ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ತೊಂದರೆ ಇರಲಿದೆ. ಪಾಲುದಾರಿಕೆಯ ವ್ಯಾಪಾರ ವ್ಯವಹಾರ ಲಾಭದಾಯಕ. 

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು ಈಶಾನ್ಯ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ವೃಶ್ಚಿಕ

  ಉದ್ಯೋಗದಲ್ಲಿ ಚಿಕ್ಕಪುಟ್ಟ ಸಮಸ್ಯೆಗಳು ಎದುರಾದರೂ ತೊಂದರೆ ಇಲ್ಲ. ಕ್ರೀಡಾ ಮನೋಭಾವನೆ ಇರುವ ಕಾರಣ ಯಾವುದೇ ತೊಂದರೆ ಇಲ್ಲ. ಗೆಲ್ಲಬೇಕೆಂಬ ಆಸೆ ಒಳ್ಳೆಯದು ಆದರೆ ಹಟ ಬೇಡ. ಭೂ ಸಂಬಂಧಿತ ವ್ಯಾಪಾರ ವ್ಯವಹಾರಗಳಲ್ಲಿ ಲಾಭ ದೊರೆಯುತ್ತದೆ. ಆತ್ಮೀಯರು ನೀಡಬೇಕಿದ್ದ ಹಣವು ಸಮಯಕ್ಕೆ ದೊರೆಯಲಾರದು. ಮಕ್ಕಳಿಂದ ಹಣದ ಸಹಾಯ ದೊರೆಯುತ್ತದೆ.  

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಆಕಾಶ ನೀಲಿ

ಧನಸ್ಸು

  ಮನೆಗೆ ಸಂಬಂಧಪಟ್ಟ ಕೆಲಸ ಕಾರ್ಯಕ್ಕಾಗಿ ಹಣದ ಕೊರತೆ ಉಂಟಾಗುತ್ತದೆ. ಸಂತಾನ ಲಾಭವಿದೆ. ಅತಿ ಮುಖ್ಯವಾದ ಕೆಲಸವೊಂದು ಅರ್ಧಕ್ಕೆ ನಿಲ್ಲಲಿದೆ. ಸ್ವಗೃಹ ಭೂ ಲಾಭವಿದೆ. ಕುಟುಂಬದ ಸದಸ್ಯರೊಂದಿಗೆ ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುವಿರಿ. ಆಹಾರದಲ್ಲಿ ಮಿತಿ ಇರದೇ ಹೋದಲ್ಲಿ ಅನಾರೋಗ್ಯ ಖಚಿತ. 

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು

ಮಕರ

 ತಾಯಿ ಅಥವಾ ತಂದೆಯ ಮಾತನ್ನು ಕೇಳಿದರೆ ದೊಡ್ಡ ವಿಪತ್ತಿನಿಂದ ಪಾರಾಗಬಹುದು. ಉದ್ಯೋಗದಲ್ಲಿ ಯಾವುದೇ ಬದಲಾವಣೆ ಕಾಣುವುದಿಲ್ಲ. ದಿನವಿಡೀ ಒಂದು ರೀತಿಯ ಬೇಸರ ನಿಮ್ಮನ್ನು ಕಾಡುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚಿನ ಶ್ರದ್ಧೆಯಿಂದ ಮುಂದುವರೆಯುತ್ತಾರೆ. ರುಚಿಕರವಾದ ಆಹಾರ ಸೊಗಸಾದ ನಿದ್ದೆ ನಿಮ್ಮದಾಗುತ್ತದೆ.  

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಎಲೆ ಹಸಿರು

ಕುಂಭ

  ಮನದ ನೋವನ್ನು ಯಾರಿಗೂ ಹೇಳುವುದಿಲ್ಲ. ಕುಟುಂಬದಲ್ಲಿ ಸೌಹಾರ್ದಯುತ ವಾತಾವರಣ ಉಂಟು ಮಾಡುವಿರಿ. ಆತ್ಮೀಯರ ಜೊತೆ ಕಿರು ಪ್ರವಾಸ ಕೈಗೊಳ್ಳುವಿರಿ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಅತಿಯಾಗಿ ಯೋಚನೆ ಮಾಡಿದರೆ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ.  

ಪರಿಹಾರ : ಗೋಶಾಲೆಗೆ ಧನ ಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೇಸರಿ

ಮೀನ

 ಆಡುವ ಮಾತಿನಲ್ಲಿ ವಿಷಾದದ ಛಾಯೆ ತುಂಬಿರುತ್ತದೆ. ಅನಿರೀಕ್ಷಿತ ಧನ ಲಾಭವಿರುತ್ತದೆ. ಮಾತುಕತೆ ಮೂಲಕ ಕುಟುಂಬದ ದೊಡ್ಡ ವಿವಾದವನ್ನು ಕೊನೆಗೊಳಿಸುವಿರಿ. ಉದ್ಯೋಗದಲ್ಲಿ ನಿಮ್ಮ ಮಾತಿಗೆ ಹೆಚ್ಚಿನ ಪುರಸ್ಕಾರ ದೊರೆಯುತ್ತದೆ. ಬಡ್ತಿಯನ್ನು ನಿರೀಕ್ಷಿಸಬಹುದು. ಕೆಲಸದ ಮಧ್ಯೆ ವಿಶ್ರಾಂತಿಯ ಅಗತ್ಯತೆ ಇದೆ. ಸಂತಾನ ಲಾಭವಿದೆ. ಮನೆಯಲ್ಲಿನ ಸದಸ್ಯರ ನಡುವೆ ಅನಾವಶ್ಯಕ ವಾದ ವಿವಾದಗಳು ಇರುತ್ತವೆ.  

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಮಣ್ಣಿನ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.