ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಕೋಪಕ್ಕೆ ಗುರಿಯಾಗುವಿರಿ, ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ; ನಾಳೆಯ ದಿನ ಭವಿಷ್ಯ

ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಕೋಪಕ್ಕೆ ಗುರಿಯಾಗುವಿರಿ, ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ; ನಾಳೆಯ ದಿನ ಭವಿಷ್ಯ

ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಕೋಪಕ್ಕೆ ಗುರಿಯಾಗುವಿರಿ, ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ; ನಾಳೆಯ ದಿನ ಭವಿಷ್ಯ
ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಕೋಪಕ್ಕೆ ಗುರಿಯಾಗುವಿರಿ, ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ; ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (12th June 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಬುಧವಾರ

ತಿಥಿ: ಷಷ್ಠಿ 06.53ರವರೆಗೂ ಇರುತ್ತದೆ. ಆನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಮಖೆ ನಕ್ಷತ್ರವು ರಾತ್ರಿ 02.16 ರವರೆಗು ಇರುತ್ತದೆ. ಆನಂತರ ಪುಬ್ಬ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.45

ರಾಹುಕಾಲ: 12.23 ರಿಂದ ಸಂಜೆ 01.59

ರಾಶಿ ಫಲ

ಮೇಷ

ಹಣದ ಕೊರತೆ ನಿಮ್ಮನ್ನು ಕಾಡಲಿದೆ. ಸಮಯಕ್ಕೆ ಸರಿಯಾಗಿ ಆಹಾರ ಸ್ವೀಕರಿಸಲು ಸಾಧ್ಯವಾಗದು. ಹಾಗೆಯೇ ವಿಶ್ರಾಂತಿ ದೊರಕದು. ಜನ್ಮಸ್ಥಳಕ್ಕೆ ತೆರಳಿ ವಂಶಕ್ಕೆ ಸೇರಿದ ಮನೆಯಲ್ಲಿ ಕೆಲ ದಿನ ನೆಲೆಸುವಿರಿ. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ. ನಿಮ್ಮ ತಾಯಿಗೆ ಉತ್ತಮ ಆರೋಗ್ಯವಿದ್ದು ಸುಖ ಸಂತೋಷದಿಂದ ಬಾಳುತ್ತಾರೆ. ಯಾರೊಂದಿಗೂ ಸ್ನೇಹ ಬೆಳೆಸದೆ ಒಂಟಿಯಾಗಿ ಬಾಳುವಿರಿ.

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬೂದು

ವೃಷಭ

ಓಡಾಟದಿಂದ ಮಾಡುವ ಕೆಲಸ ಕಾರ್ಯಗಳಲ್ಲಿ ಅಥವಾ ವ್ಯಾಪಾರದಲ್ಲಿ ಲಾಭವಿರುತ್ತದೆ. ಖರ್ಚು ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ. ಮಕ್ಕಳಿಂದ ಕೊಂಚ ನಿರಾಸೆಯಾಗಬಹುದು. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಅವಕೃಪೆಗೆ ಒಳಗಾಗುವಿರಿ. ಆದರೆ ಮಾತುಕತೆಯಿಂದ ಪರಿಸ್ಥಿತಿ ತಿಳಿಯಾಗುತ್ತದೆ. ಚಿಕ್ಕ ಮಕ್ಕಳ ಕಾಲಿಗೆ ಪೆಟ್ಟಾಗಬಹುದು ಎಚ್ಚರಿಕೆ ಇರಲಿ. ಅವಶ್ಯಕತೆ ಇದ್ದವರಿಗೆ ಅನ್ನದಾನ ಮಾಡುವಿರಿ.

ಪರಿಹಾರ : ತಾಯಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಂದು

ಮಿಥುನ

ಬಹುದಿನದಿಂದ ನಡೆಯುತ್ತಿದ್ದ ಕಾನೂನು ಸಮರವೊಂದು ಮಾತುಕತೆಯಿಂದ ಅಂತ್ಯವಾಗುತ್ತದೆ. ಪಿತ್ತ ದೋಷ ನಿಮ್ಮನ್ನು ಕಾಡುತ್ತದೆ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ಗಳಿಸುವಿರಿ. ಯಾವುದೇ ಕೆಲಸವನ್ನು ಸುಲಭವಾಗಿ ಮಾಡಬಲ್ಲಿರಿ. ಸಂತಾನ ಲಾಭವಿದೆ. ಕುಟುಂಬದ ಒಮ್ಮತದ ನಿರ್ಧಾರಕ್ಕೆ ವಿರೋಧಿಗಳು ತಲೆಬಾಗುತ್ತಾರೆ. ಹಳೆಯ ಚರ್ಮದ ದೋಷವು ಉತ್ತಮ ಚಿಕಿತ್ಸೆಯಿಂದ ಗುಣ ಹೊಂದಲಿದೆ.

ಪರಿಹಾರ : ಪಕ್ಷಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿ..

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಪ್ಪು

ಕಟಕ

ಸ್ವಂತ ವಾಹನಕೊಳ್ಳುವ ಸಾಧ್ಯತೆಗಳಿವೆ. ಜೀವನದಲ್ಲಿ ಶಾಂತಿ ನೆಮ್ಮದಿ ತುಂಬಿರುತ್ತದೆ. ಸ್ನಾಯುವಿನ ನೋವಿನಿಂದ ಬಳಲುವಿರಿ. ಮಕ್ಕಳನ್ನು ಪ್ರೀತಿ ಮಮತೆಯಿಂದ ನೋಡಿಕೊಳ್ಳುವಿರಿ. ಸೋದರನ ವಿಶೇಷ ಬುದ್ಧಿವಂತಿಕೆ ನಿಮಗೆ ಸಹಕಾರಿಯಾಗುತ್ತದೆ. ನರನಿಶ್ಯಕ್ತಿ ಇರುತ್ತದೆ. ಸಂಗಾತಿಗೆ ದೇಹದ ಗಾತ್ರವೇ ದೊಡ್ಡ ಸವಾಲಾಗುತ್ತದೆ. ಕೆಲವೊಮ್ಮೆ ಸಂಗಾತಿಯೊಂದಿಗೆ ಅನಾವಶ್ಯಕವಾಗಿ ವಾದದಲ್ಲಿ ತೊಡಗುವಿರಿ.

ಪರಿಹಾರ : ಸಿಹಿ ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ :7

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ಸಿಂಹ

ಹಣಕಾಸಿನ ವಿಚಾರದಲ್ಲಿ ಅತಿಯಾದ ಆಸೆ ಇರುವುದಿಲ್ಲ. ಇರುವ ಆದಾಯದಲ್ಲಿ ಸಂತೃಪ್ತಿಯಿಂದ ಜೀವನ ಮಾಡುವಿರಿ. ಆದರೆ ಉದ್ಯೋಗದಲ್ಲಿ ಉನ್ನತ ಅಧಿಕಾರವನ್ನು ಬಯಸುವಿರಿ. ಇದರಿಂದ ಸಹೋದ್ಯೋಗಿಗಳಿಗೆ ಅಸಮಾಧಾನ ಉಂಟಾಗುತ್ತದೆ. ಹಣಕಾಸು ಸಂಸ್ಥೆಯ ಒಡೆತನ ನಿಮ್ಮದಾಗುತ್ತದೆ. ಸಂಗಾತಿಯ ಸವಿಯಾದ ಮಾತಿನಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ :10

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ನಸು ಗೆಂಪು

ಕನ್ಯಾ

ಹಟವಾದಿಗಳಾದ ಕಾರಣ ವಾದಕ್ಕೆ ಪ್ರತಿವಾದ ಸಿದ್ಧವಾಗಿರುತ್ತದೆ. ಸೋದರನಿಗೆ ಜೀವನದ ಬಗ್ಗೆ ಗಂಭೀರತೆ ಇರುವುದಿಲ್ಲ. ಯಾರ ಮನಸ್ಸಿಗೂ ಬೇಸರ ಬಾರದಂತೆ ನಡೆದುಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ನಿರೀಕ್ಷಿತ ಫಲಿತಾಂಶ ದೊರೆಯುವುದಿಲ್ಲ. ಬೇರೆಯವರ ಪ್ರತಿ ವಿಚಾರದಲ್ಲಿಯೂ ತಪ್ಪನ್ನು ಕಂಡುಹಿಡಿಯುವಿರಿ. ಗುರು ಹಿರಿಯರಲ್ಲಿ ವಿಶೇಷ ಭಕ್ತಿ ಇರುತ್ತದೆ. ನೂತನ ದಂಪತಿಗಳು ನಿರೀಕ್ಷೆಗೂ ಮೀರಿದ ಸುಖ ಜೀವನ ನಡೆಸುತ್ತಾರೆ.

ಪರಿಹಾರ: ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ. .

ಅದೃಷ್ಟದ ಸಂಖ್ಯೆ : 1

ಅಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ತುಲಾ

ಸಮಯಕ್ಕೆ ತಕ್ಕಂತೆ ವರ್ತಿಸಿ ಆಪತ್ತಿನಿಂದ ಪಾರಾಗುವಿರಿ. ಕುಟುಂಬದ ಒಳಗೂ ಹೊರಗೂ ಉನ್ನತ ಮಟ್ಟದ ಗೌರವ ಲಭಿಸುತ್ತದೆ. ವಯಸ್ಸಿನ ಅಂತರವಿಲ್ಲದೆ ಎಲ್ಲರೂ ನಿಮ್ಮ ನಿರ್ಧಾರಕ್ಕೆ ಮನ್ನಣೆ ನೀಡುತ್ತಾರೆ. ಭೂಮಿ ಅಥವಾ ಮನೆಯನ್ನು ಕೊಳ್ಳುವ ಯೋಜನೆಯನ್ನು ಸಿದ್ಧಪಡಿಸುವಿರಿ. ಹಟದ ಗುಣವಿರುತ್ತದೆ. ಆದರೆ ದುಡುಕುವುದಿಲ್ಲ. ನಿಮ್ಮಿಂದ ಸಹಾಯ ಪಡೆದವರೇ ನಿಮಗೆ ವಿರೋಧಿಗಳಾಗುತ್ತಾರೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು ಈಶಾನ್ಯ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ವೃಶ್ಚಿಕ

ಸೋದರ ಸೋದರಿಯರ ಹಣಕಾಸಿನ ತೊಂದರೆ ದೂರವಾಗುತ್ತದೆ. ತಾಳ್ಮೆಯಿಂದ ವರ್ತಿಸಿದರೂ ಕೋಪ ಬಂದಾಗ ಉದ್ವೇಗದಿಂದ ಪ್ರತಿಕ್ರಿಯಿಸುವಿರಿ. ಸೋಲನ್ನು ಒಪ್ಪುವುದಿಲ್ಲ. ಸತತ ಪ್ರಯತ್ನದಿಂದ ಗೆಲುವನ್ನು ಸಾಧಿಸುವಿರಿ. ಅವಕಾಶ ದೊರೆತಾಗ ಬೇರೆಯವರಿಗೆ ಸಹಾಯ ಮಾಡುವಿರಿ. ಮಂತ್ರ ತಂತ್ರಗಳಲ್ಲಿ ನಂಬಿಕೆ ಇರುತ್ತದೆ. ವಿದ್ಯಾರ್ಥಿಗಳು ಸಾಧನೆ ಮಾಡುತ್ತಾರೆ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬೂದು ಬಣ್ಣ

ಧನಸ್ಸು

ನಿಮಗೆ ಸಹಾಯ ಮಾಡಲು ತಾವಾಗಿ ಹಲವಾರು ಜನ ಬರುತ್ತಾರೆ. ಯಾವುದೇ ಕೆಲಸ ಕಾರ್ಯಗಳು ಅಪೂರ್ಣವಾಗುವುದಿಲ್ಲ. ಹಣಕಾಸಿನ ಕೊರತೆ ಕಂಡುಬರುವುದಿಲ್ಲ. ಆರೋಗ್ಯ ಕಾಪಾಡಿಕೊಳ್ಳಲು ದೈಹಿಕ ಕಸರತ್ತನ್ನು ಆಶ್ರಯಿಸುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುವಿರಿ. ಅನಿರೀಕ್ಷಿತ ಧನ ಲಾಭವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಸಾಧನೆ ಮಾಡಲಿದ್ದಾರೆ.

ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಆಕಾಶ ನೀಲಿ

ಮಕರ

ಕುಟುಂಬದಲ್ಲಿ ಅನಾವಶ್ಯಕ ಪರಸ್ಪರ ಮನಸ್ತಾಪ ಉಂಟಾಗುತ್ತದೆ. ಆದರೆ ಸೋದರಿಯ ಸಹಾಯ ಸಹಕಾರ ಇರುತ್ತದೆ. ಉತ್ತಮ ಸ್ಥಾನ ಮಾನ ದೊರೆಯುತ್ತದೆ. ದಂಪತಿ ನಡುವೆ ಉತ್ತಮ ಮನೋಭಾವನೆ ಇರುವುದಿಲ್ಲ. ಧಾರ್ಮಿಕ ಕೆಲಸ ಕಾರ್ಯಗಳನ್ನು ಮಾಡುವಿರಿ. ಕಣ್ಣಿನ ದೋಷ ಉಂಟಾಗುತ್ತದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಬೇಸರದಿಂದ ಹೊರ ಬರಲು ಮನರಂಜನ ಕೇಂದ್ರಕ್ಕೆ ತೆರಳುವಿರಿ.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಕುಂಭ

ನಿಮ್ಮ ಒಳ್ಳೆಯ ಗುಣಸ್ವಭಾವ ಎಲ್ಲರ ಗಮನ ಸೆಳೆಯುತ್ತದೆ. ವಿದ್ಯಾರ್ಥಿಗಳು ಅನೇಕ ವಿಚಾರದಲ್ಲಿ ಅಧ್ಯಯನ ನಡೆಸುತ್ತಾರೆ. ಹಣಕಾಸಿನ ತೊಂದರೆ ಕಾಣುವುದಿಲ್ಲ. ಸಮಯಕ್ಕೆ ಹೊಂದಿಕೊಂಡು ನಡೆಯುವ ಬುದ್ಧಿವಂತಿಕೆ ನಿಮ್ಮಲ್ಲಿ ಇರುತ್ತದೆ. ಗಂಟಲಿಗೆ ಸಂಬಂಧಿಸಿದ ತೊಂದರೆ ಇರುತ್ತದೆ. ಒಳ್ಳೆಯ ನಡವಳಿಕೆಯಿಂದ ಎಲ್ಲರ ವಿಶ್ವಾಸ ಗಳಿಸುವಿರಿ. ಅತಿಯಾದ ಮಾತು ಕೆಲವರಲ್ಲಿ ಬೇಸರ ಮೂಡಿಸುತ್ತದೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಎಲೆ ಹಸಿರು

ಮೀನ

ನಿಮ್ಮಲ್ಲಿರುವ ಒಳ್ಳೆಯ ಗುಣಗಳಿಗೆ ಎಲ್ಲರ ಮೆಚ್ಚುಗೆ ದೊರೆಯುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ನೆರೆಹೊರೆಯವರ ಜೊತೆಯಲ್ಲಿ ಉತ್ತಮ ಬಾಂಧವ್ಯ ಇರುತ್ತದೆ. ಅತಿಯಾದ ಆಸೆ ಇರುತ್ತದೆ. ಸೋಲಿಗೆ ಹೆದರದೆ ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ಪ್ರವಾಸದ ವೇಳೆ ನಿಮಗೆ ಇಷ್ಟವಾದಂತ ಅಮೂಲ್ಯ ವಸ್ತು ಕಳೆದು ಹೋಗಬಹುದು ಎಚ್ಚರಿಕೆಯಿಂದ ಇರಿ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 3

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಕೇಸರಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).