ಅವಿವಾಹಿತರಿಗೆ ವಿವಾಹ ಯೋಗ, ಸ್ವಂತ ಮನೆ ಕೊಳ್ಳುವ ಆಸೆ ನೆರವೇರಲಿದೆ; ದ್ವಾದಶ ರಾಶಿಗಳ ನಾಳೆಯ ದಿನ ಭವಿಷ್ಯ
ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ. (ಬರಹ: ಎಚ್. ಸತೀಶ್, ಜ್ಯೋತಿಷಿ)

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (13th July 2024 Horoscope).
ನಾಳೆಯ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಢ ಮಾಸ-ಶುಕ್ಲಪಕ್ಷ-ಶನಿವಾರ
ತಿಥಿ : ಸಪ್ತಮಿ 12.01 ರವರೆಗೂ ಇದ್ದು ನಂತರ ಅಷ್ಠಮಿ ಆರಂಭವಾಗುತ್ತದೆ.
ನಕ್ಷತ್ರ : ಹಸ್ತ ನಕ್ಷತ್ರವು ಸಂಜೆ 05.14 ರವರೆಗು ಇದ್ದು ನಂತರ ಚಿತ್ತೆ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 06.00
ಸೂರ್ಯಾಸ್ತ: ಸಂಜೆ 06.49
ರಾಹುಕಾಲ: ಬೆಳಗ್ಗೆ 09.16 ರಿಂದ 10.52
ರಾಶಿಫಲ
ಮೇಷ
ಉದ್ಯೋಗದಲ್ಲಿ ನಿಮ್ಮ ಬೇಡಿಕೆಗಳಿಗೆ ಸಮ್ಮತಿ ದೊರೆಯುತ್ತದೆ ಹಣಕಾಸಿನ ವಿಚಾರದಲ್ಲಿ ನಿಧಾನವಾಗಿ ಅಭಿವೃದ್ಧಿ ಕಂಡುಬರುತ್ತದೆ. ವಿದ್ಯಾರ್ಥಿಗಳು ತಮ್ಮ ಹೊಣೆ ಅರಿತು ಕಲಿಕೆಯಲ್ಲಿ ಮುಂದುವರೆಯುತ್ತಾರೆ. ವ್ಯಾಪಾರ ವ್ಯವಹಾರದಲ್ಲಿ ಸಹಕಾರ ಇರುವ ಕಾರಣ ಯಾವುದೇ ತೊಂದರೆ ಎದುರಾಗದು. ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ.
ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ 6
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ಕೆಂಪು ಬಣ್ಣ
ವೃಷಭ
ಉತ್ತಮ ಆದಾಯದ ಕಾರಣ ಹಣಕಾಸಿನ ತೊಂದರೆ ಇರುವುದಿಲ್ಲ. ಬೇಡದ ವಿಚಾರಗಳಿಗೆ ಹಣ ಖರ್ಚಾಗುತ್ತದೆ. ವಿದ್ಯಾರ್ಥಿಗಳು ಮನರಂಜನೆಯಿಂದ ದೂರವಾದಲ್ಲಿ ಕಲಿಕೆಯಲ್ಲಿ ಅಗ್ರಸ್ಥಾನ ಗಳಿಸುವರು. ವ್ಯಾಪಾರ ವ್ಯವಹಾರದಲ್ಲಿ ನಿಧಾನವಾಗಿ ಪ್ರಗತಿ ದೊರೆಯುತ್ತದೆ. ಹಣದ ವಿವಾದದಿಂದ ದೂರವಾಗುವಿರಿ. ದಂಪತಿ ನಡುವೆ ಶಾಂತಿ ನೆಮ್ಮದಿ ಮನೆ ಮಾಡಿರುತ್ತದೆ.
ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ
ಮಿಥುನ
ಆತ್ಮವಿಶ್ವಾಸದಿಂದ ಎಲ್ಲಾ ಸಮಸ್ಯೆಯನ್ನು ಬಗೆಹರಿಸುವಿರಿ. ವಿದ್ಯಾರ್ಥಿಗಳು ತಮ್ಮ ಗುರಿ ಸಾಧಿಸುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ. ಸಂಗಾತಿ ಜೊತೆ ನೆಮ್ಮದಿಯ ಜೀವನ ನಡೆಸುವಿರಿ. ಬಿಡುವು ತೆಗೆದುಕೊಳ್ಳಲಾಗದೆ ಕೆಲಸದಲ್ಲಿ ನಿರತರಾಗುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ.
ಪರಿಹಾರ: ತಾಯಿಯ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಹಳದಿ ಬಣ್ಣ
ಕಟಕ
ಮಾತುಕತೆಯಲ್ಲಿ ತೊಡಗಿದಲ್ಲಿ ನಿಮ್ಮನ್ನು ಸೋಲಿಸಲು ಯಾರಿಗೂ ಸಾಧ್ಯವಾಗದು. ಉದ್ಯೋಗದಲ್ಲಿ ನಿಮ್ಮ ತೀರ್ಮಾನವನ್ನು ಮೇಲಧಿಕಾರಿಗಳು ಪ್ರಶಂಸಿಸುತ್ತಾರೆ. ಹಣದ ತೊಂದರೆ ಇರುವುದಿಲ್ಲ. ಹಣದ ವ್ಯವಹಾರದ ವಿಚಾರದಲ್ಲಿ ಒತ್ತಡದ ಸನ್ನಿವೇಶವಿರುತ್ತದೆ. ವಿದ್ಯಾರ್ಥಿಗಳು ಏಕಾಂಗಿಯಾಗಿ ಅಭ್ಯಾಸದಲ್ಲಿ ನಿರತರಾಗುತ್ತಾರೆ. ಆತ್ಮೀಯ ವ್ಯಕ್ತಿಯೊಂದಿಗೆ ಪ್ರವಾಸಕ್ಕೆ ತೆರಳುವಿರಿ.
ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಹಸಿರು ಬಣ್ಣ
ಸಿಂಹ
ನಿಮಗಿಷ್ಟವಾದ ವಸ್ತು ಕಳುವಾಗಬಹುದು ಎಚ್ಚರಿಕೆ ಇರಲಿ. ಕುಟುಂಬದಲ್ಲಿ ಪರಸ್ಪರ ಸಾಮರಸ್ಯ ಇರುತ್ತದೆ. ಉದ್ಯೋಗದಲ್ಲಿ ಎಲ್ಲರ ಮನಸ್ಸಿಗೆ ಹತ್ತಿರವಾಗುವಿರಿ. ಮಕ್ಕಳಿಗೆ ಕುಟುಂಬದಲ್ಲೇ ವಿಶಿಷ್ಟ ಸ್ಥಾನಮಾನ ಲಭಿಸುತ್ತದೆ. ವಿದ್ಯಾರ್ಥಿಗಳು ಕಲಿಕೆಯೊಡನೆ ಮನರಂಜನೆಯಲ್ಲಿಯೂ ಆಸಕ್ತಿ ಮೂಡಲಿದೆ. ಹಣಕಾಸಿನ ವ್ಯವಹಾರದಲ್ಲಿ ತೊಂದರೆಬಾರದು. ಸಮಸ್ಯೆ ಎದುರಾದಾಗ ಸಂಯಮದಿಂದ ವರ್ತಿಸುವಿರಿ.
ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ : ನೀಲಿ
ಕನ್ಯಾ
ಹಣಕಾಸಿನ ಪರಿಸ್ಥಿತಿಯಲ್ಲಿ ದಿಢೀರ್ ಬದಲಾವಣೆ ಕಂಡುಬರುತ್ತದೆ. ಕಮಿಷನ್ ಆಧಾರಿತ ವ್ಯಾಪಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಉನ್ನತ ಗುಣಮಟ್ಟ ಕಾಪಾಡಿಕೊಳ್ಳುತ್ತಾರೆ. ಕುಟುಂಬದ ಹಣಕಾಸಿನ ಪರಿಸ್ಥಿತಿ ಸ್ಥಿರವಾಗಿರುತ್ತದೆ. ಕುಟುಂಬದ ಸದಸ್ಯರ ಜೊತೆ ಯಾತ್ರಾ ಸ್ಥಳಕ್ಕೆ ಭೇಟಿ ನೀಡುವಿರಿ. ಹೊಸ ವಾಹನವನ್ನು ಕೊಳ್ಳುವಿರಿ.
ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು ಪೂರ್ವ
ಅದೃಷ್ಟದ ಬಣ್ಣ: ನೇರಳೆ ಬಣ್ಣ
ತುಲಾ
ಮನಸ್ಸಿಗೆ ಸರಿ ಬರದ ಯಾವುದೇ ಕೆಲಸ ಮಾಡುವುದಿಲ್ಲ. ಚಾಡಿ ಮಾತುಗಳನ್ನು ನಂಬದಿರಿ. ಆತ್ಮೀಯರ ಜೊತೆಯಲ್ಲಿ ನೆಮ್ಮದಿಯಿಂದ ಕಿರು ಪ್ರವಾಸ ಕೈಗೊಳ್ಳುವಿರಿ. ಉದ್ಯೋಗದಲ್ಲಿ ನಿಮ್ಮ ಇಚ್ಛೆಗೆ ಅನುಗುಣವಾಗಿ ಉತ್ತಮ ಪ್ರತಿಫಲ ದೊರೆಯುತ್ತವೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಗಿವ ಮುನ್ನವೇ ಉದ್ಯೋಗ ಲಭಿಸುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ದೊರೆಯುತ್ತದೆ.
ಪರಿಹಾರ : ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ
ವೃಶ್ಚಿಕ
ಕುಟುಂಬದ ಸದಸ್ಯರ ಸಹಾಯ ಸಹಕಾರ ನಿಮಗಿರುತ್ತದೆ. ಸ್ನೇಹಿತರ ನಡುವೆ ಬಿಗುವಿನ ವಾತಾವರಣ ಉಂಟಾಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆಯಿಂದ ವ್ಯವಹರಿಸಿ. ವಿದ್ಯಾರ್ಥಿಗಳಿಗೆ ಉತ್ತಮ ಸ್ಪೂರ್ತಿಯ ಅಗತ್ಯ ಇದೆ. ಹೊಸ ವ್ಯಾಪಾರವಿದ್ದಲ್ಲಿ ಮಧ್ಯಮಗತಿ ಆದಾಯ ದೊರೆಯುತ್ತದೆ. ನಿಮ್ಮ ಬುದ್ಧಿವಂತಿಕೆಯ ನಿರ್ಧಾರದಿಂದ ಹಣದ ಕೊರತೆ ಕಡಿಮೆಯಾಗುತ್ತದೆ.
ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಬಿಳಿ ಬಣ್ಣ
ಧನಸ್ಸು
ಸ್ವಂತ ಕೆಲಸ ಕಾರ್ಯಗಳಿಗಾಗಿ ಹಿರಿಯರಿಂದ ಹಣಕಾಸಿನ ಸಹಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಚಂಚಲವಾದ ಮನಸ್ಸಿನಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ತಾಯಿಯವರ ಆರೋಗ್ಯದಲ್ಲಿ ತೊಂದರೆ ಇರಲಿದೆ. ಮಕ್ಕಳು ವಯಸ್ಸಿಗೆ ಮೀರಿದ ಪ್ರತಿಭೆಯನ್ನು ತೋರಿಸುತ್ತಾರೆ. ಕಲಾವಿದರ ಕಷ್ಟದ ದಿನಗಳು ದೂರವಾಗಲಿವೆ. ಆಪತ್ತಿನಲ್ಲಿರುವ ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ.
ಪರಿಹಾರ : ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಬೂದು ಬಣ್ಣ
ಮಕರ
ಶಾಂತಿ ಸಹನೆಯ ಚೌಕಟ್ಟಿನಲ್ಲಿ ಕುಟುಂಬದ ವಿವಾದಗಳಿಗೆ ಪರಿಹಾರ ಕಂಡುಹಿಡಿಯುವಿರಿ. ಮಕ್ಕಳ ದುಡಿಕಿನಿಂದ ನೆರೆಹೊರೆಯವರಲ್ಲಿ ವಾಗ್ವಾದ ಉಂಟಾಗುವುದು. ವ್ಯಾಪಾರ ವ್ಯವಹಾರಗಳಲ್ಲಿ ತೊಂದರೆ ಇರುವುದಿಲ್ಲ. ಸಂಗಾತಿಯ ಜೊತೆ ಕಿರು ಪ್ರವಾಸ ಕೈಗೊಳ್ಳುವಿರಿ. ಸಾರ್ವಜನಿಕ ಸಂಸ್ಥೆಗೆ ಹಣದ ಸಹಾಯವನ್ನು ಮಾಡುವಿರಿ.
ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಕಂದು
ಕುಂಭ
ಹೆಚ್ಚಿನ ನಿರೀಕ್ಷೆಯ ಕಾರಣ ಉದ್ಯೋಗವ ಬದಲಿಸುವಿರಿ. ಮಾಡದ ತಪ್ಪನ್ನು ಒಪ್ಪಬೇಕಾದ ಪ್ರಮೇಯ ಒದಗಿ ಬರುತ್ತದೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ನಿರಾಸಕ್ತಿ ತೋರುತ್ತಾರೆ. ವ್ಯಾಪಾರ ವ್ಯವಹಾರದ ಆದಾಯದ ಬಗ್ಗೆ ಹೆಚ್ಚಿನ ಒಲವು ತೋರುವುದಿಲ್ಲ. ಅನಾವಶ್ಯಕ ಖರ್ಚು ವೆಚ್ಚದಿಂದ ಬೇಸರಗೊಳ್ಳುವಿರಿ. ಸಂಗಾತಿಯ ಸಹಕಾರದಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ.
ಪರಿಹಾರ : ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕಪ್ಪು ಬಣ್ಣ
ಮೀನ
ಸಹನೆ ಕಳೆದುಕೊಂಡು ಕೆಲಸ ಕಾರ್ಯಗಳನ್ನು ಮುಂದೂಡುವಿರಿ. ಆತ್ಮೀಯರ ಸಹಾಯ ಸಹಕಾರ ಇರುತ್ತದೆ. ಕುಟುಂಬದಲ್ಲಿ ನೀರಸ ವಾತಾವರಣವಿರುತ್ತದೆ. ಸ್ವಂತ ಬುದ್ಧಿವಂತಿಕೆಯಿಂದ ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆ ಕಾಣುವಿರಿ. ವಿದ್ಯಾರ್ಥಿಗಳು ಮಾತಿನಲ್ಲೇ ಬಹುತೇಕ ಸಮಯವನ್ನು ಕಳೆಯುತ್ತಾರೆ. ವ್ಯಾಪಾರ ವ್ಯವಹಾರವನ್ನು ಆರಂಭಿಸಲು ಮನಸ್ಸಿರದು. ದುರಾಸೆಯಿಂದ ವರ್ತಿಸುವುವಿಲ್ಲ.
ಪರಿಹಾರ : ಪಕ್ಷಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ : ತಿಳಿ ಹಸಿರು ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
