ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಪಾಲುದಾರಿಕೆ ವ್ಯಾಪಾರದಲ್ಲಿ ವಿವಾದ, ದಂಪತಿ ನಡುವೆ ಹಣದ ವಿಚಾರದಲ್ಲಿ ಮನಸ್ತಾಪ; ನಾಳೆಯ ದಿನ ಭವಿಷ್ಯ

Tomorrow Horoscope: ಪಾಲುದಾರಿಕೆ ವ್ಯಾಪಾರದಲ್ಲಿ ವಿವಾದ, ದಂಪತಿ ನಡುವೆ ಹಣದ ವಿಚಾರದಲ್ಲಿ ಮನಸ್ತಾಪ; ನಾಳೆಯ ದಿನ ಭವಿಷ್ಯ

13th May 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ಪಾಲುದಾರಿಕೆ ವ್ಯಾಪಾರದಲ್ಲಿ ವಿವಾದ, ದಂಪತಿ ನಡುವೆ ಹಣದ ವಿಚಾರದಲ್ಲಿ ಮನಸ್ತಾಪ; ನಾಳೆಯ ದಿನ ಭವಿಷ್ಯ
ಪಾಲುದಾರಿಕೆ ವ್ಯಾಪಾರದಲ್ಲಿ ವಿವಾದ, ದಂಪತಿ ನಡುವೆ ಹಣದ ವಿಚಾರದಲ್ಲಿ ಮನಸ್ತಾಪ; ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (13th May 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಸೋಮವಾರ

ತಿಥಿ: ಷಷ್ಠಿ ರಾತ್ರಿ 04.40 ರವರೆಗು ಇರುತ್ತದೆ. ಆನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಪುನರ್ವಸು ನಕ್ಷತ್ರವು 01.29 ರವರೆಗೂ ಇರುತ್ತದೆ. ಆನಂತರ ಪುಷ್ಯ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.55

ಸೂರ್ಯಾಸ್ತ: ಸಂಜೆ 06.36

ರಾಹುಕಾಲ: ಬೆಳಗ್ಗೆ 07.35 ರಿಂದ 09.10

ರಾಶಿಫಲ

ಮೇಷ

 ದಿನ ನಿತ್ಯದ ಜೀವನದಲ್ಲಿ ಯಾವುದೇ ತೊಂದರೆ ಎದುರಾಗುವುದಿಲ್ಲ ಹಿಂದಿನ ವಾದ ವಿವಾದಗಳನ್ನು ಮರೆತು ನೆಮ್ಮದಿಯಿಂದ ಬಾಳುವಿರಿ. ಹಣಕಾಸಿನ ಸ್ಥಿತಿಗತಿಯಲ್ಲಿ ಉತ್ತಮ ಪ್ರಗತಿ ಕಂಡು ಬರುತ್ತದೆ ಆತ್ಮೀಯರಿಂದ ಉಡುಗೊರೆಯೊಂದು ದೊರೆಯಲಿದೆ. ಕುಟುಂಬದವರ ಸಹಕಾರದಿಂದ ಹೊಸ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ.  

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಳದಿ

ವೃಷಭ

  ಆತುರ ತೋರದ ಕಾರಣ ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ನಿಮ್ಮ ಪ್ರತಿಭೆ ಮತ್ತು ಕೌಶಲ್ಯಕ್ಕೆ ತಕ್ಕಂತಹ ಅವಕಾಶಗಳು ದೊರೆಯಲಿವೆ. ಉತ್ತಮ ಆದಾಯವಿದ್ದರೂ ಭವಿಷ್ಯದ ಜೀವನಕ್ಕಾಗಿ ಹಣ ಉಳಿತಾಯ ಮಾಡುವಿರಿ. ಅವಿರತ ದುಡಿಮೆಯ ನಡುವೆಯೂ ವಿಶ್ರಾಂತಿ ತೆಗೆದುಕೊಳ್ಳಲು ಮರೆಯದಿರಿ. 

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಸಿರು

ಮಿಥುನ

 ಸ್ಟಾಕ್ ಮತ್ತು ಷೇರು ವ್ಯವಹಾರದಲ್ಲಿ ಹಣ ಹೂಡಿಕೆ ಮಾಡುವಿರಿ. ನಿಮ್ಮ ಮಾತುಕತೆಯಿಂದ ಆತ್ಮೀಯರಲ್ಲಿ ಬೇಸರ ಉಂಟಾಗುತ್ತದೆ. ಕುಟುಂಬದಲ್ಲಿ ಗಲಿಬಿಲಿಯ ವಾತಾವರಣ ಇರುತ್ತದೆ. ನಿಮ್ಮಲ್ಲಿನ ವಿಶೇಷ ಹವ್ಯಾಸಗಳಿಗೆ ಸೂಕ್ತ ವೇದಿಕೆ ದೊರೆಯುತ್ತದೆ.  

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೀಲಿ

ಕಟಕ

 ಮನದ ಬೇಸರ ದೂರವಾಗಲು ಮನರಂಜನೆಯನ್ನು ಅವಲಂಬಿಸುವಿರಿ. ಸೋದರ ಅಥವಾ ಸೋದರಿಯ ಜೊತೆ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಲಿದೆ. ಎಲ್ಲರನ್ನೂ ಗೌರವಿಸುವ ನೀವು ಬೇರೆಯವರಿಂದ ಬೇಸರ ಮಾತುಗಳನ್ನು ಕೇಳುವಿರಿ. ಹಣದ ಕೊರತೆ ಕಂಡುಬರುವುದಿಲ್ಲ.  

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೇರಳೆ

ಸಿಂಹ

 ಕುಟುಂಬದವರೊಡನೆ ವಿಹಾರಕ್ಕೆ ತೆರಳುವಿರಿ. ದಂಪತಿ ನಡುವೆ ಇರುವ ಪ್ರೀತಿ ವಿಶ್ವಾಸವು ಹೆಚ್ಚುತ್ತದೆ. ಕುಟುಂಬದ ಅಗತ್ಯತೆಗಳನ್ನು ಪೂರೈಸಲು ಹೆಚ್ಚಿನ ಹಣ ಬೇಕಾಗಬಹುದು. ಕಲುಷಿತ ಆಹಾರ ಸೇವನೆಯಿಂದ ಅಜೀರ್ಣದ ತೊಂದರೆ ಉಂಟಾಗುತ್ತದೆ. ಅನಾವಶ್ಯಕವಾಗಿ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ.  

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು ಪಶ್ಚಿಮ

ಅದೃಷ್ಟದ ಬಣ್ಣ: ಗುಲಾಬಿ

ಕನ್ಯಾ

ಪಾಲುದಾರಿಕೆ ವ್ಯಾಪಾರದಲ್ಲಿ ವಾದ ವಿವಾದ ಎದುರಾಗುತ್ತದೆ. ಬಂಧು ಬಳಗದವರ ಜೊತೆ ಅನಾವಶ್ಯಕ ಮನಸ್ತಾಪ ಉಂಟಾಗುತ್ತದೆ. ಆಡುವ ಮಾತನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ ಮೌನವಾಗಿರುವುದು ಒಳ್ಳೆಯದು. ಎದುರಾಗುವ ಅಡೆತಡೆಗಳ ನಡುವೆಯೂ ಕುಟುಂಬದ ಹಿತಾಸಕ್ತಿಯನ್ನು ಕಾಪಾಡುವಿರಿ. ಉದ್ಯೋಗದಲ್ಲಿ ಹೀರಿಯ ಅಧಿಕಾರಿಗಳ ನಿರೀಕ್ಷೆಯನ್ನು ತಲುಪಲು ಸಾಧ್ಯವಾಗುವುದಿಲ್ಲ.  

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಬಿಳಿ

ತುಲಾ

ಅನಾವಶ್ಯಕವಾಗಿ ಹಣಕಾಸಿನ ವಿಚಾರದಲ್ಲಿ ಯೋಚನೆ ಮಾಡದಿರಿ. ಅನಿರೀಕ್ಷಿತ ಧನ ಲಾಭವಿರುತ್ತದೆ. ಅವಶ್ಯಕತೆ ಇದ್ದಲ್ಲಿ ಕುಟುಂಬದವರಿಂದ ಸಹಾಯ ದೊರೆಯುತ್ತದೆ. ಜನ ಜಂಗುಳಿಯಿಂದ ದೂರವಿದ್ದು ಏಕಾಂತದಲ್ಲಿ ಸಂತಸ ಪಡುವಿರಿ. ವಿದ್ಯಾರ್ಥಿಗಳು ಹಿರಿಯರ ಆಸೆ ಆಕಾಂಕ್ಷೆಗಳನ್ನು ಪೂರೈಸುತ್ತಾರೆ. ಸಂದಿಗ್ದ ಪರಿಸ್ಥಿತಿಯೊಂದು ಎದುರಾದರೂ ಸೂಕ್ತ ನಿರ್ಧಾರದಿಂದ ಪಾರಾಗುವಿರಿ.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಬೂದು

ವೃಶ್ಚಿಕ

ಕುಟುಂಬಕ್ಕೆ ಸಂಬಂಧಿಸಿದ ಕಾನೂನಿನ ಹೋರಾಟದಲ್ಲಿ ಜಯ ಗಳಿಸುವಿರಿ. ಅನಿರೀಕ್ಷಿತ ಖರ್ಚು ವೆಚ್ಚಗಳು ನಿಮ್ಮನ್ನು ಕಾಡಲಿವೆ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ನಿಮ್ಮದಾಗುತ್ತದೆ. ಕಷ್ಟದಲ್ಲಿ ಇದ್ದವರಿಗೆ ಸ್ವಂತ ಇಚ್ಛೆಯಿಂದ ಸಹಾಯ ಮಾಡುವಿರಿ. ಹಣಕಾಸಿನ ವಿಚಾರದಲ್ಲಿ ವಿವಾದ ಉಂಟಾಗಲಿದೆ. ಆತ್ಮೀಯರಿಂದ ಪಡೆದ ಹಣವನ್ನು ಮರಳಿ ನೀಡುವಿರಿ. 

ಪರಿಹಾರ : ಕೈ ಅಥವ ಕಾಲಿನಲ್ಲಿ ಕಪ್ಪು ದಾರ ಧರಿಸುವುದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಂದು

ಧನಸ್ಸು

ದಾಂಪತ್ಯದಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಇರಲಿದೆ. ಮಕ್ಕಳ ವಿದ್ಯಾಭ್ಯಾಸ ಅಥವಾ ವಿವಾಹಕ್ಕೆ ಹೆಚ್ಚಿನ ಹಣದ ಅವಶ್ಯಕತೆ ಕಂಡು ಬರುತ್ತದೆ. ಉದ್ಯೋಗದಲ್ಲಿನ ಒತ್ತಡದಿಂದ ಕುಟುಂಬದ ಬಗ್ಗೆ ಗಮನಹರಿಸಲು ಸಾಧ್ಯವಾಗುವುದಿಲ್ಲ. ಆರೋಗ್ಯದ ಬಗ್ಗೆ ಗಮನವಹಿಸಿ. ಅವಿವಾಹಿತರು ಗೊಂದಲದ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ಯಾವುದೇ ವಿಚಾರವಾದರೂ ದೃಢವಾದ ತೀರ್ಮಾನವನ್ನು ತೆಗೆದುಕೊಳ್ಳಲು ವಿಫಲರಾಗುವಿರಿ. 

ಪರಿಹಾರ: ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಪ್ಪು

ಮಕರ

ಮನಸ್ಸಿನಲ್ಲಿ ಒಳ್ಳೆಯ ಭಾವನೆಗಳಿದ್ದರೂ ದುಡುಕು ಮಾತಿನಿಂದ ವಿವಾದಕ್ಕೆ ಒಳಗಾಗುವಿರಿ. ನಂಬಲು ಸಾಧ್ಯವಾಗದ ಮೂಲದಿಂದ ಹಣದ ಸಹಾಯ ದೊರೆಯುತ್ತದೆ. ಸುಲಭವಾಗಿ ನಿಮ್ಮ ಮನದ ಇಚ್ಛೆಗಳೆಲ್ಲ ನೆರವೇರುತ್ತದೆ. ಉದ್ಯೋಗದಲ್ಲಿ ಉತ್ತಮ ವೇತನ ಲಭಿಸುತ್ತದೆ. ಸಂಗಾತಿ ಮತ್ತು ಮಕ್ಕಳೊಂದಿಗೆ ಸಂತಸದಿಂದ ದಿನ ಕಳೆಯುವಿರಿ. 

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ಕುಂಭ

ನಿಮ್ಮಲ್ಲಿರುವ ಹಣವನ್ನು ಸುಲಭವಾಗಿ ಖರ್ಚು ಮಾಡುವುದಿಲ್ಲ. ಆತ್ಮೀಯರ ಸಲಹೆಯನ್ನು ಒಪ್ಪುವುದರಿಂದ ಅನುಕೂಲವಾಗುತ್ತದೆ. ನಿಮ್ಮ ಸುಧೀರ್ಘ ಮಾತುಕತೆ ಎಲ್ಲರಲ್ಲೂ ಬೇಸರ ಮೂಡಿಸುತ್ತದೆ. ಆತ್ಮೀಯರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗುವಿರಿ. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಬದಲಿಸುವುದಿಲ್ಲ. ಇದರಿಂದ ಆತಂಕದ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ.  

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರ ಧರಿಸಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನಸುಗೆಂಪು

ಮೀನ

ಹಣದ ಕೊರತೆ ಇರಲಿದೆ. ಕುಟುಂಬದ ಮಂಗಳ ಕಾರ್ಯಕ್ರಮವನ್ನು ಮುಂದೂಡಬೇಕಾಗುತ್ತದೆ. ದಂಪತಿ ನಡುವೆ ಹಣದ ವಿಚಾರದಲ್ಲಿ ಮನಸ್ತಾಪ ಉಂಟಾಗುತ್ತದೆ. ಯೋಚನೆ ಕಡಿಮೆ ಮಾಡಿದರೆ ಮಾತ್ರ ಉತ್ತಮ ಆರೋಗ್ಯ ನಿಮ್ಮದಾಗಲಿದೆ. ಬೇರೆಯವರ ತಪ್ಪನ್ನು ಮನ್ನಿಸಿದರೆ ಮಾನಸಿಕ ನೆಮ್ಮದಿ ದೊರೆಯುತ್ತದೆ.  

ಪರಿಹಾರ : ಸಾಧು ಸಂತರ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).