Tomorrow Horoscope: ಅನಿರೀಕ್ಷಿತ ವರ್ತಮಾನವೊಂದು ಸಂತಸಕ್ಕೆ ಕಾರಣವಾಗಲಿದೆ, ಕೋಪ ಕಡಿಮೆ ಇದ್ದಷ್ಟು ಉತ್ತಮ; ನಾಳಿನ ದಿನಭವಿಷ್ಯ
14th April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.
ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (14th April 2024 Horoscope).
ನಾಳಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲಪಕ್ಷ, ಭಾನುವಾರ
ತಿಥಿ: ಷಷ್ಠಿ ಬೆಳಿಗ್ಗೆ 3.32ರವರೆಗೂ ಇರುತ್ತದೆ. ಅನಂತರ ಸಪ್ತಮಿ ಆರಂಭವಾಗುತ್ತದೆ.
ನಕ್ಷತ್ರ: ಆರ್ದ್ರೆ ನಕ್ಷತ್ರವು ಬೆಳಗಿನ ಜಾವ 5.05 ರವರೆಗೂ ಇರುತ್ತದೆ. ಅನಂತರ ಪುನರ್ವಸು ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಿಗ್ಗೆ 6.08
ಸೂರ್ಯಾಸ್ತ: ಸಂಜೆ 6.31
ರಾಹುಕಾಲ: ಸಂಜೆ 4.30 ರಿಂದ ಸಂಜೆ 6.00
ಮೇಷ
ಪೂರ್ವ ನಿಯೋಜನೆ ಇಲ್ಲದೆ ಯಾವುದೆ ಕೆಲಸ-ಕಾರ್ಯಗಳನ್ನು ಮಾಡುವುದಿಲ್ಲ. ಇದರಿಂದಾಗಿ ನಿರೀಕ್ಷಿತ ಯಶಸ್ಸು ದೊರೆಯಲಿದೆ. ಯಾರನ್ನು ಅಥವಾ ಯಾವುದೇ ವಿಚಾರವನ್ನು ಕಡೆಗಣ್ಣಿನಿಂದ ನೋಡದಿರಿ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ದೊರೆಯುತ್ತದೆ. ಆದಾಯದ ವಿಷಯದಲ್ಲಿ ಸಂತೃಪ್ತಿ ಇರುತ್ತದೆ. ದಾಂಪತ್ಯ ಜೀವನವು ಸುಖಮಯದಿಂದ ಕೂಡಿರುತ್ತದೆ.
ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ಕಪ್ಪು ಬಣ್ಣ
ವೃಷಭ
ಹೊಸ ನಿರೀಕ್ಷೆಯೊಂದಿಗೆ ದಿನದ ಕೆಲಸವನ್ನು ಆರಂಭಿಸುವಿರಿ. ಬಹುದಿನದ ಹಣಕಾಸಿನ ವ್ಯವಹಾರಗಳು ಪೂರ್ಣಗೊಳ್ಳಲಿವೆ. ಅನಿರೀಕ್ಷಿತ ವರ್ತಮಾನವೊಂದು ಕುಟುಂಬದಲ್ಲಿ ಸಂತಸವನ್ನು ಉಂಟುಮಾಡುತ್ತದೆ. ದಂಪತಿಗಳ ನಡುವೆ ಇದ್ದ ಭಿನ್ನಾಭಿಪ್ರಾಯ ದೂರಾಗುತ್ತದೆ. ಅಪರೂಪವೆಂಬಂತೆ ಆತ್ಮೀಯರ ಆಗಮನ ಪರೋಕ್ಷವಾಗಿ ಸಹಕಾರಿಯಾಗುತ್ತದೆ.
ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ : ತಿಳಿಹಸಿರು ಬಣ್ಣ
ಮಿಥುನ
ಕುಟುಂಬದಲ್ಲಿ ಶಾಂತಿ ಸಂಯಮಗಳು ಮನೆ ಮಾಡುತ್ತವೆ. ಹಣಕಾಸಿನ ತೊಂದರೆ ಎದುರಾಗದು. ಆದರೆ ಹಣ ಉಳಿಸಲು ಪ್ರಯತ್ನಿಸಿ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಆದಾಯದ ಕೊರತೆ ಇರುವುದಿಲ್ಲ. ಹೋಟೆಲ್ ಅಥವಾ ಬೇಕರಿಯನ್ನು ಆರಂಭಿಸುವ ಕನಸು ನನಸಾಗಲಿದೆ. ಪ್ರಾಣಿ ಪಕ್ಷಿಗಳ ಬಗ್ಗೆ ಅನುಕಂಪ ಮೂಡಲಿದೆ.
ಪರಿಹಾರ: ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಕಟಕ
ಆದಾಯದಲ್ಲಿ ನಿರೀಕ್ಷಿತ ಪ್ರಗತಿ ಕಂಡು ಬರುತ್ತದೆ. ಹಣಕಾಸಿನ ವ್ಯವಹಾರದ ಬಗ್ಗೆ ಎಚ್ಚರಿಕೆ ಇರಲಿ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹೊರತಾಗಿ ಪಠ್ಯೇತರ ಚಟುವಟಿಕೆಗಳಲ್ಲಿಯೂ ಮುಂದಿರುತ್ತಾರೆ. ಆಹಾರಕ್ರಮದಲ್ಲಿ ಬದಲಾವಣೆ ತಂದು ಉತ್ತಮ ಆರೋಗ್ಯವನ್ನು ಪಡೆಯುವಿರಿ.
ಪರಿಹಾರ: ಜೇನು ಸೇವಿಸಿ ನೀರು ಕುಡಿದ ನಂತರ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ
ಸಿಂಹ
ಜೀವನದಲ್ಲಿ ಎದುರಾಗುವ ಅಡ್ಡಿ ಆತಂಕಗಳನ್ನು ಧೈರ್ಯದಿಂದ ಎದುರಿಸುವಿರಿ. ಉದ್ಯೋಗದಲ್ಲಿನ ಉನ್ನತ ಮಟ್ಟದ ಬದಲಾವಣೆಗಳು ನಿಮ್ಮ ಪರವಾಗಿರುತ್ತವೆ. ಕೌಟುಂಬಿಕ ವಿಚಾರಗಳು ಸರಾಗವಾಗಿ ನಡೆಯಲಿದೆ. ವಿದ್ಯಾರ್ಥಿಗಳಲ್ಲಿ ಗೆಲ್ಲುವ ಹಂಬಲ ಮನೆಮಾಡಿರುತ್ತದೆ. ಮಕ್ಕಳಿಗೆ ಉದ್ಯೋಗ ದೊರೆಯುವ ಸಾಧ್ಯತೆಗಳು ಕಂಡು ಬರುತ್ತದೆ.
ಪರಿಹಾರ: ಪುಟ್ಟ ಮಕ್ಕಳಿಗೆ ಬೆಣ್ಣೆ ನೀಡಿ ಇಂದಿನ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಹಾಲಿನಬಣ್ಣ
ಕನ್ಯಾ
ಕಷ್ಟ ಎನಿಸಿದರೂ ಸ್ವಂತ ನಿರ್ಧಾರಗಳಿಗೆ ಬದ್ದರಾಗುವಿರಿ. ಅತಿ ಮುಖ್ಯವಾದ ಕೆಲಸ ಕಾರ್ಯಗಳನ್ನು ಮುಂದೂಡಬೇಕಾದೀತು. ಅನಿರೀಕ್ಷಿತವಾಗಿ ಆರೋಗ್ಯದಲ್ಲಿ ಏರಿಳಿತ ಕಂಡುಬರಲಿದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಲಾಭಕ್ಕೆ ತಕ್ಕ ಖರ್ಚು ವೆಚ್ಚಗಳು ಇರುತ್ತವೆ. ಹಣವನ್ನು ಉಳಿಸುವ ಅಗತ್ಯವಿದೆ.
ಪರಿಹಾರ: ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವುದರಿಂದ ಶುಭವಿರುತ್ತದೆ.
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ : ಹೊಗೆಯ ಬಣ್ಣ
ತುಲಾ
ನಿಮ್ಮ ಮನಗೆದ್ದ ಸ್ನೇಹಿತರು ಮತ್ತು ಬಂಧು-ಬಳಗದವರ ಜೊತೆ ವಿಶ್ವಾಸದಿಂದ ಬೆರೆಯುವಿರಿ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ವಿದ್ಯಾರ್ಥಿಗಳು ನಿರ್ಮಲವಾದ ಮನಸ್ಸಿನಿಂದ ಕಲಿಕೆಯಲ್ಲಿ ಮುಂದಿರುತ್ತಾರೆ. ಮನೆಯ ಸುತ್ತಮುತ್ತ ಶುಭ್ರತೆ ಕಾಪಾಡಲು ಪ್ರಯತ್ನಿಸುವಿರಿ.
ಪರಿಹಾರ: ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ
ವೃಶ್ಚಿಕ
ಆತುರದಿಂದ ಮಾಡುವ ಕೆಲಸ ಕಾರ್ಯಗಳಿಂದ ನಷ್ಟ ಅನುಭವಿಸುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿಯ ಕೊರತೆ ಕಂಡು ಬರುತ್ತದೆ. ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಕೆಲಸವೊಂದರಲ್ಲಿ ಯಶಸ್ಸನ್ನು ಗಳಿಸುವಿರಿ. ಉದ್ಯೋಗದಲ್ಲಿ ನೀರಸ ವಾತಾವರಣವಿರುತ್ತದೆ.
ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ರಕ್ತದ ಬಣ್ಣ
ಧನಸ್ಸು
ಆತ್ಮಸ್ಥೈರ್ಯವನ್ನು ರೂಢಿಸಿಕೊಂಡಲ್ಲಿ ಯಶಸ್ಸು ನಿಮ್ಮದಾಗುತ್ತದೆ. ಯಾವುದೇ ಕೆಲಸ ಕಾರ್ಯಗಳು ನಿಮಗೆ ಅಸಾಧ್ಯವಲ್ಲ. ಅಗತ್ಯವಿದ್ದಲ್ಲಿ ಹಣಕಾಸಿನ ವಿಚಾರದಲ್ಲಿ ಆಪ್ತರ ಸಲಹೆಯನ್ನು ಪಡೆಯುವಿರಿ. ಬೇಸರ ಕಡೆಯಲು ಆರಂಭಿಸಿದ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ.
ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಕೇಸರಿ ಬಣ್ಣ
ಮಕರ
ಕುಟುಂಬದ ಸದಸ್ಯರ ಮನಸ್ಸು ಗೆಲ್ಲುವಿರಿ. ಉದ್ಯೋಗದಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಸಮಪ್ರಮಾಣದ ಲಾಭ-ನಷ್ಟ ಇರುತ್ತದೆ. ದಾಂಪತ್ಯದ ಗಂಭೀರವಾದ ಸಮಸ್ಯೆ ಪರಿಹಾರಗೊಳ್ಳುತ್ತದೆ. ವಿದೇಶಕ್ಕೆ ತೆರಳುವ ಅವಕಾಶ ದೊರೆಯುತ್ತದೆ.
ಪರಿಹಾರ: ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ
ಕುಂಭ
ಸೋದರ ಅಥವಾ ಸೋದರಿಯ ಸಲುವಾಗಿ ಹಣ ಖರ್ಚು ಮಾಡಬೇಕಾಗುತ್ತದೆ. ಕುಟುಂಬದಲ್ಲಿ ಪ್ರೀತಿ ವಿಶ್ವಾಸ ನೆಲೆಸಿರುತ್ತದೆ. ಉತ್ತಮ ಅವಕಾಶವನ್ನು ಪಡೆದು ಉದ್ಯೋಗವನ್ನು ಬದಲಿಸುವಿರಿ. ವಿದ್ಯಾರ್ಥಿಗಳು ಮನ ಬಿಚ್ಚಿ ಮಾತಾಡಿದಲ್ಲಿ ಸುಲಭವಾಗಿ ಯಶಸ್ಸು ದೊರೆಯುತ್ತದೆ. ಸುತ್ತಮುತ್ತಲಿನ ವಯೋವೃದ್ಧರಿಗೆ ಸಹಾಯಹಸ್ತ ನೀಡುವಿರಿ.
ಪರಿಹಾರ: ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಬೂದುಬಣ್ಣ
ಮೀನ
ಕುಟುಂಬದಲ್ಲಿ ಪರಸ್ಪರ ಹೊಂದಾಣಿಕೆಯ ಗುಣ ಇರುತ್ತದೆ. ಉದ್ಯೋಗದಲ್ಲಿ ಉನ್ನತ ಸ್ಥಾನಮಾನ ದೊರೆಯುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಆತ್ಮೀಯರಿಂದ ಹಣಕಾಸಿನ ನೆರವನ್ನು ಪಡೆಯುತ್ತಾರೆ. ಕಟ್ಟಡ ಕಟ್ಟಲು ಬೇಕಾದ ಸಾಮಗ್ರಿಗಳ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭವಿದೆ.
ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ : ಕೆಂಪು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).