Tomorrow Horoscope: ಸಂಗಾತಿಯೊಂದಿಗಿನ ಸಂಬಂಧ ಗಟ್ಟಿಗೊಳ್ಳುತ್ತದೆ, ಕೆಲಸದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ; ನಾಳೆಯ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಸಂಗಾತಿಯೊಂದಿಗಿನ ಸಂಬಂಧ ಗಟ್ಟಿಗೊಳ್ಳುತ್ತದೆ, ಕೆಲಸದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ; ನಾಳೆಯ ದಿನ ಭವಿಷ್ಯ

Tomorrow Horoscope: ಸಂಗಾತಿಯೊಂದಿಗಿನ ಸಂಬಂಧ ಗಟ್ಟಿಗೊಳ್ಳುತ್ತದೆ, ಕೆಲಸದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ; ನಾಳೆಯ ದಿನ ಭವಿಷ್ಯ

14th May 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (14th May 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ

ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಮಂಗಳವಾರ

ತಿಥಿ: ಸಪ್ತಮಿ ಬೆ 05.38 ರವರೆಗೂ ಇದ್ದು ನಂತರ ಅಷ್ಟಮಿ ಆರಂಭವಾಗುತ್ತದೆ.

ನಕ್ಷತ್ರ: ಪುಷ್ಯ ನಕ್ಷತ್ರವು 02.51 ರವರೆಗೂ ಇದ್ದು ನಂತರ ಆಶ್ಲೇಷ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.55

ಸೂರ್ಯಾಸ್ತ: ಸಂಜೆ 06.36

ರಾಹುಕಾಲ: 03.30 ರಿಂದ 05.05

ರಾಶಿಫಲ

ಮೇಷ

ಹಿರಿಯ ಅಧಿಕಾರಿಗಳ ಅವಕೃಪೆಗೆ ಪಾತ್ರರಾಗಬೇಕಾಗುತ್ತದೆ. ಆತುರ ಪಡದೆ, ಕೋಪ ತೋರದೆ ಮಾತನಾಡಿದರೆ ಅನೇಕ ಸಮಸ್ಯೆಗಳು ಪರಿಹಾರ ಗೊಳ್ಳುತ್ತವೆ. ನವವಿವಾಹಿತರಿಗೆ ಶುಭ ವರ್ತಮಾನ ಬರಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ವಿದ್ಯಾರ್ಥಿಗಳು ಒತ್ತಡವಿಲ್ಲದೆ ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಹೆಚ್ಚಿನ ಆಸೆ ಆಕಾಂಕ್ಷೆಗಳು ನಿರಾಸೆ ಉಂಟುಮಾಡುತ್ತವೆ.

ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ವೃಷಭ

ಕಷ್ಟದ ಕೆಲಸ ಕಾರ್ಯಗಳು ಎದುರಾಗಲಿದೆ. ಹಣಕಾಸಿನ ತೊಂದರೆ ಇರುವುದಿಲ್ಲ. ಯಾರೊಬ್ಬರೂ ನಿಮ್ಮೊಂದಿಗೆ ಮನಬಿಚ್ಚಿ ಮಾತನಾಡಲು ಸಾಧ್ಯವಾಗದು. ಮನದಲ್ಲಿರುವ ವಿಚಾರಗಳನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವುದಿಲ್ಲ. ಕುಟುಂಬದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವಿರಿ. ಇರುವ ಆದಾಯದಲ್ಲಿಯೇ ಹಣ ಉಳಿಸಲು ಯಶಸ್ವಿಯಾಗುವಿರಿ. ಸಂಗಾತಿಯೊಂದಿಗೆ ಅನಾವಶ್ಯಕ ವಾದ ವಿವಾದ ಎದುರಾಗಲಿವೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬೂದು

ಮಿಥುನ

ಕುಟುಂಬದವರಿಂದ ದಿನವಿಡೀ ಸಂತೋಷದಿಂದ ಇರುವಿರಿ. ಸಂಗಾತಿಯ ರೀತಿ ನೀತಿಗಳು ಬೇಸರ ಉಂಟುಮಾಡುತ್ತದೆ. ಕೆಟ್ಟದ್ದನ್ನು ಮರೆಯುವ ಗುಣವಿರುವ ಕಾರಣ ನೆಮ್ಮದಿ ಇರುತ್ತದೆ. ನಿಮ್ಮ ಮನದ ಉದ್ದೇಶಗಳನ್ನು ಈಡೇರಿಸಿಕೊಳ್ಳಲು ಯಾವುದೇ ತ್ಯಾಗಕ್ಕೂ ಸಿದ್ಧರಾಗುವಿರಿ. ಕುಟುಂಬದಲ್ಲಿ ಇದ್ದ ಅಪನಂಬಿಕೆ ಕಡಿಮೆಯಾಗುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳನ್ನು ನಿಯಂತ್ರಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಆಕಾಶ ನೀಲಿ

ಕಟಕ

ಕೇವಲ ಕುಟುಂಬದವರಲ್ಲದೆ ನೆರೆಹೊರೆಯವರನ್ನು ಪ್ರೀತಿ ವಿಶ್ವಾಸದಿಂದ ಕಾಣುವಿರಿ. ಎಲ್ಲರ ಸಲಹೆಯನ್ನು ಕೇಳಿ ಸರಿಯಾದ ಮಾರ್ಗದಲ್ಲಿ ನಡೆಯುವಿರಿ. ತಾನಾಗಿಯೇ ಸಮಾಜದಲ್ಲಿ ನಿಮಗೆ ಗೌರವಯುತ ಸ್ಥಾನಮಾನ ದೊರೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಶ್ರದ್ಧೆಯನ್ನು ತೋರುವುದಿಲ್ಲ. ನಿಮಗೆ ಆಗದ ಕೆಲಸಗಳನ್ನು ನಯವಾಗಿ ತಿರಸ್ಕರಿಸುವಿರಿ. ಸಂಗಾತಿಯೊಂದಿಗೆ ಸುಖ ಸಂತೋಷದಿಂದ ಜೀವನ ನಡೆಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕೆಂಪು

ಸಿಂಹ

ಸ್ವಾರ್ಥ ಬುದ್ಧಿ ಇಲ್ಲದ ನೀವು ಆತ್ಮೀಯರ ಕೆಲಸ ಕಾರ್ಯಗಳಲ್ಲಿ ಸಹಕರಿಸುವಿರಿ. ಬೇರೆಯವರಿಗೆ ನೀಡುವ ಭರವಸೆಯನ್ನು ಕಷ್ಟವಾದರೂ ಈಡೇರಿಸುವಿರಿ. ಸಂಗಾತಿಯೊಂದಿಗೆ ಕಿರು ಪ್ರವಾಸ ಕೈಗೊಳ್ಳುವಿರಿ. ತಲೆಗೆ ಪೆಟ್ಟಾಗಬಹುದು ಎಚ್ಚರಿಕೆ ಇರಲಿ. ಮಕ್ಕಳಿಗೆ ಹಣಕಾಸಿನ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ. ಬಹು ದಿನಗಳಾದ ನಂತರ ಆತ್ಮೀಯರೊಬ್ಬರನ್ನು ಭೇಟಿ ಮಾಡುವಿರಿ.

ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಎಲೆ ಹಸಿರು

ಕನ್ಯಾ

ಮೊದಲ ಆದ್ಯತೆಯನ್ನು ನಿಮ್ಮ ಸ್ವಂತ ಕೆಲಸಗಳಿಗೆ ನೀಡುವಿರಿ. ಯಾವುದೇ ವಿಚಾರದಲ್ಲಿಯೂ ದೃಢ ತೀರ್ಮಾನವನ್ನು ತೆಗೆದುಕೊಳ್ಳಲಾರಿರಿ. ಬಹಳ ಸುಲಭವಾಗಿ ಬೇರೆಯವರ ಒತ್ತಡಕ್ಕೆ ಮಣಿಯುವಿರಿ. ಹಣಕಾಸಿನ ಕೊರತೆ ಇದ್ದಲ್ಲಿ ಕುಟುಂಬದ ಸದಸ್ಯರಿಂದ ಸಹಾಯ ದೊರೆಯುತ್ತದೆ. ಹಣಕಾಸಿನ ವಿವಾದವೊಂದು ಕಾನೂನಿನ ಸಹಾಯದಿಂದ ಕೊನೆಗೊಳ್ಳುತ್ತದೆ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಕೇಸರಿ

ತುಲಾ

ಜೀವನವು ಸುಖ ಸಂತೋಷಗಳಿಂದ ಕೂಡಿರುತ್ತವೆ. ಬೇರೆಯವರ ಕೆಲಸ ಕಾರ್ಯಗಳನ್ನು ಸುಲಭವಾಗಿ ಪ್ರಶಂಶಿಸುವುದಿಲ್ಲ. ನಿಮ್ಮದೇ ಆದ ತೀರ್ಮಾನಗಳಿಗೆ ಬದ್ಧರಾಗುವಿರಿ. ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಿ. ನಿಮ್ಮ ಶ್ರಮಕ್ಕೆ ತಕ್ಕಂತಹ ಫಲಿತಾಂಶ ದೊರೆಯುತ್ತದೆ. ಒಮ್ಮೆ ತೀರ್ಮಾನಿಸಿದರೆ ಯಾವುದೇ ಕೆಲಸವು ನಿಮಗೆ ಅಸಾಧ್ಯ ಎನಿಸುವುದಿಲ್ಲ. ಮಕ್ಕಳೊಂದಿಗೆ ಉತ್ತಮ ಒಡನಾಟ ನಿಮ್ಮ ಯೋಚನೆಗಳನ್ನು ದೂರ ಮಾಡುತ್ತದೆ.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು

ವೃಶ್ಚಿಕ

ಸದಾಕಾಲ ಒಳ್ಳೆಯ ಪ್ರತಿಫಲಗಳನ್ನು ನಿರೀಕ್ಷಿಸುವಿರಿ. ಮಾನಸಿಕವಾಗಿ ಸಶಕ್ತರಾದ ನೀವು ಯಾರ ಸಹಾಯವೂ ಇಲ್ಲದೆ ಕೆಲಸ ಕಾರ್ಯಗಳನ್ನು ನಿರ್ವಹಿಸಬಲ್ಲಿರಿ. ಆತ್ಮೀಯರ ಮತ್ತು ಸ್ನೇಹಿತರೊಂದಿಗೆ ಅನಾವಶ್ಯಕವಾಗಿ ಮನಸ್ತಾಪ ಉಂಟಾಗಲಿದೆ. ಹಣಕಾಸಿನ ವಿಚಾರದಲ್ಲಿ ಒರಟುತನದಿಂದ ವರ್ತಿಸುವಿರಿ. ನಿಮ್ಮ ಮನಸ್ಸಿಗೆ ಸರಿ ಎನಿಸುವ ಕೆಲಸ ಕಾರ್ಯಗಳನ್ನು ಮಾತ್ರ ನಿರ್ವಹಿಸುವಿರಿ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ

ಧನಸ್ಸು

ಕೈ ಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ಕಷ್ಟದಲ್ಲಿ ಇದ್ದವರಿಗೆ ಸಹಾಯವನ್ನು ಮಾಡುವಿರಿ. ಎಲ್ಲರೂ ಮೆಚ್ಚುವಂತೆ ನಡೆದುಕೊಂಡು ಸಮಾಜದಲ್ಲಿ ಉನ್ನತ ಸ್ಥಾನವನ್ನು ಗಳಿಸುವಿರಿ. ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ಉಂಟಾಗುತ್ತದೆ. ತಾಯಿಗೆ ಮಕ್ಕಳ ವಿಚಾರದಲ್ಲಿ ಚಿಂತೆ ಇರುತ್ತದೆ. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗ ದೊರೆಯಲಿದೆ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಹಳದಿ

ಮಕರ

ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಆಡುವ ಮಾತನ್ನು ಕಡಿಮೆ ಮಾಡಿ ಕೆಲಸವನ್ನು ಹೆಚ್ಚಿಸುವುದು ಒಳ್ಳೆಯದು. ಯಾರ ಮೇಲೂ ಒತ್ತಡ ಹಾಕುವುದಿಲ್ಲ. ನೀವಾಯಿತು ನಿಮ್ಮ ಕೆಲಸವಾಯಿತು ಎಂಬಂತೆ ಬಾಳುವಿರಿ. ಕೇವಲ ಕುಟುಂಬವಲ್ಲದೆ ಸಮಾಜದಲ್ಲಿಯೂ ಉನ್ನತ ಗೌರವ ಗಳಿಸುವಿರಿ. ಉದ್ಯೋಗ ಬದಲಿಸುವ ಯೋಚನೆ ಇದೆ.

ಪರಿಹಾರ : ಹಣೆಯಲ್ಲಿ ತಿಲಕ ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಸಿರು

ಕುಂಭ

ನಿಮ್ಮ ರೀತಿ ನೀತಿಗಳಿಂದ ಹೆತ್ತವರಲ್ಲಿ ಬೇಸರ ಮೂಡುತ್ತದೆ. ಸಮಯದ ಪರಿವಿಲ್ಲದೆ ಸ್ವಂತ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ ಕಂಡು ಬರುತ್ತದೆ. ದಂಪತಿ ನಡುವೆ ಭಾವನಾತ್ಮಕ ಸಂಬಂಧವಿರುತ್ತದೆ. ಅನಿರೀಕ್ಷಿತವಾಗಿ ದೀರ್ಘಕಾಲದ ಪ್ರವಾಸವನ್ನು ಕೈಗೊಳ್ಳುವಿರಿ. ಆರಂಭಿಸಿದ ಮುಖ್ಯವಾದ ಕೆಲಸವೊಂದು ಅಪೂರ್ಣಗೊಳ್ಳಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೇರಳೆ

ಮೀನ

ಕುಟುಂಬದ ಸದಸ್ಯರ ನಡುವೆ ಉತ್ತಮ ಅನುಬಂಧ ಇರಲಿದೆ. ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಉದ್ಯೋಗದಲ್ಲಿ ಬದಲಾವಣೆ ಉಂಟಾಗಲಿವೆ. ಹೆಚ್ಚಿನ ಪ್ರಯತ್ನದಿಂದ ಮಾತ್ರ ವಿವಾಹ ಕಾರ್ಯ ನೆರವೇರಲಿದೆ. ಹಣಕಾಸಿನ ವ್ಯವಹಾರದಲ್ಲಿ ಆತ್ಮೀಯರೊಂದಿಗೆ ವಾದ ವಿವಾದದಲ್ಲಿ ತೊಡಗುವಿರಿ. ಪ್ರಯೋಜನವಿಲ್ಲದ ಕೆಲಸ ಕಾರ್ಯಗಳಲ್ಲಿ ತೊಡಗಬೇಕಾಗುತ್ತದೆ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.