ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಮನೆ ನವೀಕರಣ ಆರಂಭಿಸುವಿರಿ, ಶುಚಿ ಇಲ್ಲದ ಆಹಾರ ಸೇವನೆಯಿಂದ ಅನಾರೋಗ್ಯ ಕಾಡಲಿದೆ; ದ್ವಾದಶ ರಾಶಿಗಳ ನಾಳೆಯ ದಿನ ಭವಿಷ್ಯ

ಮನೆ ನವೀಕರಣ ಆರಂಭಿಸುವಿರಿ, ಶುಚಿ ಇಲ್ಲದ ಆಹಾರ ಸೇವನೆಯಿಂದ ಅನಾರೋಗ್ಯ ಕಾಡಲಿದೆ; ದ್ವಾದಶ ರಾಶಿಗಳ ನಾಳೆಯ ದಿನ ಭವಿಷ್ಯ

14th May 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ಮನೆ ನವೀಕರಣ ಆರಂಭಿಸುವಿರಿ, ಶುಚಿ ಇಲ್ಲದ ಆಹಾರ ಸೇವನೆಯಿಂದ ಅನಾರೋಗ್ಯ ಕಾಡಲಿದೆ; ದ್ವಾದಶ ರಾಶಿಗಳ ನಾಳೆಯ ದಿನ ಭವಿಷ್ಯ
ಮನೆ ನವೀಕರಣ ಆರಂಭಿಸುವಿರಿ, ಶುಚಿ ಇಲ್ಲದ ಆಹಾರ ಸೇವನೆಯಿಂದ ಅನಾರೋಗ್ಯ ಕಾಡಲಿದೆ; ದ್ವಾದಶ ರಾಶಿಗಳ ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (14th May 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಶುಕ್ರವಾರ

ತಿಥಿ : ಅಷ್ಟಮಿ ರಾ. 10.36ರವರೆಗೂ ಇರುತ್ತದೆ ನಂತರ ನವಮಿ ಆರಂಭವಾಗುತ್ತದೆ.

ನಕ್ಷತ್ರ : ಉತ್ತರ ನಕ್ಷತ್ರವು ದಿನಪೂರ್ತಿ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಬೆಳಗ್ಗೆ 06.45

ರಾಹುಕಾಲ: 10.47 ರಿಂದ 12.23

ಮೇಷ

ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಯೋಜನೆಗಳಿಗೆ ಅನುಮತಿ ದೊರೆಯುತ್ತದೆ. ವಿದ್ಯಾರ್ಥಿಗಳು ತಮ್ಮ ಗುರಿ ತಲುಪಲಿದ್ದಾರೆ. ಹಣಕಾಸಿನ ವಿಚಾರದಲ್ಲಿ ಮೋಸ ಹೋಗಬಹುದು ಎಚ್ಚರಿಕೆಯಿಂದ ಇರಿ. ನಿಮ್ಮ ಮನಸ್ಸನ್ನು ಅರಿಯದವರು ನಿಮ್ಮನ್ನು ನಿಂದಿಸಬಹುದು. ಶುಚಿ ಇಲ್ಲದ ಆಹಾರ ಸೇವನೆಯಿಂದ ಅನಾರೋಗ್ಯ ಉಂಟಾಗುತ್ತದೆ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಸುಲಭವಾಗಿ ಖರ್ಚು ಮಾಡುವುದಿಲ್ಲ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ತಿಳಿ ಹಸಿರು

ವೃಷಭ

ನೀವು ತೆಗೆದುಕೊಳ್ಳುವ ತೀರ್ಮಾನಗಳು ಸರಿಯಾದ ಹಾದಿಯಲ್ಲಿ ಇರುತ್ತವೆ. ನಿರೀಕ್ಷಿದಂತೆ ಯಶಸ್ಸು ನಿಮ್ಮದಾಗುತ್ತದೆ. ನಿರ್ದಿಷ್ಟ ಕಾರಣದಿಂದ ಬಂಧು ಮಿತ್ರರಿಂದ ದೂರ ಉಳಿಯುವಿರಿ. ಯಾತ್ರಾ ಸ್ಥಳದ ಪ್ರವಾಸದಿಂದಾಗಿ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಅಳುಕಿನ ಸ್ವಭಾವವಿರುತ್ತದೆ. ಎಲ್ಲರ ವಿಶ್ವಾಸಕ್ಕೆ ಪಾತ್ರರಾಗುವಿರಿ. ಎಲ್ಲರೊಂದಿಗೆ ಉತ್ತಮ ಗೆಳೆತನ ಬೆಳೆಸುವಿರಿ. ಇರುವ ಮನೆಯನ್ನು ನವೀಕರಿಸಲು ತೀರ್ಮಾನಿಸುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನಸು ಗೆಂಪು 

ಮಿಥುನ

ಮನೆಯ ಅಂದ ಹೆಚ್ಚಿಸಲು ಹೆಚ್ಚಿನ ಹಣ ವೆಚ್ಚವಾಗುತ್ತದೆ. ಅನಿವಾರ್ಯವಾಗಿ ವಾಸ ಸ್ಥಳವನ್ನು ಬದಲಿಸುವ ನಿರ್ಧಾರಕ್ಕೆ ಬರುವಿರಿ. ತಾಯಿಯ ಆರೋಗ್ಯದಲ್ಲಿ ಏರಿಳಿತವಿರುತ್ತದೆ. ಬಂಧು ಬಳಗದಿಂದ ದೂರ ಉಳಿಯುವಿರಿ. ಉತ್ತಮ ಆರೋಗ್ಯ ಗಳಿಸಲು ಹೆಚ್ಚಿನ ಪ್ರಯತ್ನ ಬೇಕಾಗುತ್ತದೆ. ಸಮಾಜದಲ್ಲಿ ಪ್ರಭಾವಿ ವ್ಯಕ್ತಿಯಾಗಿ ಮುನ್ನಡೆಯುವಿರಿ. ಗಂಟಲಿಗೆ ಸಂಬಂಧಿಸಿದ ದೋಷವಿರುತ್ತದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಕಟಕ

ಆತ್ಮೀಯರಿಗೆ ಊಟ ತಿಂಡಿಯ ವ್ಯವಸ್ಥೆ ಮಾಡುವಲ್ಲಿ ಸಂತಸ ಕಾಣುವಿರಿ. ಕುಟುಂಬದಲ್ಲಿ ನಿಮಗೆ ವಿಶೇಷವಾದಂತಹ ಗೌರವ ಲಭಿಸುತ್ತದೆ. ರಾಜಕೀಯದಲ್ಲಿ ಇದ್ದಲ್ಲಿ ಉನ್ನತ ಮಟ್ಟಕ್ಕೆ ತಲುಪಿವಿರಿ. ನಿಮ್ಮ ಮಕ್ಕಳು ಯಶಸ್ಸಿನ ಪಥದಲ್ಲಿ ಸಾಗುತ್ತಾರೆ. ಉತ್ತಮ ವರಮಾನವಿರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಹಿರಿಯ ಅಧಿಕಾರಿಗಳಿಗೆ ಹಣ ನೀಡುವ ಪ್ರಸಂಗ ಬರುತ್ತದೆ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬಿಳಿ

ಸಿಂಹ

ನಿಮ್ಮೆದುರು ನಿಮ್ಮ ವಿರೋಧಿಗಳಿಗೆ ಸೋಲುಂಟಾಗುವುದು ಖಚಿತ. ಚರ್ಮದ ದೋಷದಿಂದ ಬಳಲುವಿರಿ. ಮತ್ತೊಬ್ಬರ ವಿಶ್ವಾಸವನ್ನು ಕಳೆದುಕೊಳ್ಳಬೇಕಾಗುತ್ತದೆ. ದುಡುಕದೆ ಸಹನೆಯಿಂದ ನಿಮ್ಮ ಕೆಲಸವನ್ನು ಸಾಧಿಸಿಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಅವಕಾಶವೊಂದು ದೊರೆಯುತ್ತದೆ. ಹಣಕಾಸಿನ ಕೊರತೆ ಕಂಡು ಬರುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ :5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಬೂದು ಬಣ್ಣ

ಕನ್ಯಾ

ನಿಮ್ಮ ಗೌರವವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುವಿರಿ. ಅನಾರೋಗ್ಯದಿಂದ ಬಳಲುವಿರಿ. ಬಲಹೀನತೆ ನಿಮ್ಮನ್ನು ಕಾಡುತ್ತದೆ. ವಿಶೇಷ ವ್ಯಕ್ತಿಯೊಬ್ಬರನ್ನು ಭೇಟಿ ಮಾಡುವಿರಿ. ಪ್ರಾಚೀನ ಶಾಸ್ತ್ರಗಳ ಅಧ್ಯಯನ ಮಾಡುವಿರಿ. ಸಮಯವನ್ನು ಗೌರವಿಸುವ ನೀವು ಯಾವುದಾದರೂ ಒಂದು ಕೆಲಸದಲ್ಲಿ ಸದಾ ತೊಡಗುವಿರಿ. ನಿಮ್ಮ ಮನದಲ್ಲಿರುವ ವಿಚಾರವನ್ನು ಯಾರಿಗೂ ತಿಳಿಸುವುದಿಲ್ಲ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ. 

ಅದೃಷ್ಟದ ಸಂಖ್ಯೆ : 8

ಅಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ : ಆಕಾಶ ನೀಲಿ 

ತುಲಾ

ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಮುಖ್ಯ ಪಾತ್ರ ವಹಿಸುವಿರಿ. ಯೋಗ ಪ್ರಾಣಾಯಾಮದಲ್ಲಿ ಆಸಕ್ತಿ ಮೂಡುತ್ತದೆ. ತಂದೆ ಅಥವಾ ಕುಟುಂಬದ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಜನೋಪಯೋಗಿ ಕೆಲಸಗಳನ್ನು ಮಾಡುವಿರಿ. ಸಮಾಜದಲ್ಲಿ ಪ್ರಮುಖ ಸ್ಥಾನ ಲಭಿಸುತ್ತದೆ. ಅನೇಕರಿಗೆ ಜೀವನ ನಡೆಸಲು ಸಹಾಯ ಮಾಡುವಿರಿ. ಸಾಮಾನ್ಯವಾಗಿ ಮೌನವಿರುವ ನೀವು ಮಾತನಾಡಲು ಆರಂಭಿಸಿದರೆ ಮುಕ್ತಾಯ ಇರುವುದಿಲ್ಲ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪು 

ವೃಶ್ಚಿಕ

ನಿಮ್ಮ ಬಗ್ಗೆ ಬಂದು ಬಳಗದವರಿಗೆ ಬಹಳ ಗೌರವ ಇರುತ್ತದೆ. ವಿಶೇಷವಾದ ಕೆಲಸ ಕಾರ್ಯಗಳನ್ನು ಮಾಡುವಿರಿ. ಕೆಲಸ ಕಾರ್ಯಗಳಲ್ಲಿ ಆರಂಭದಲ್ಲಿ ಅಡಚಣೆ ಉಂಟಾಗುತ್ತದೆ. ಅನಗತ್ಯವಾದ ವಿಚಾರಗಳಿಗೆ ಓಡಾಟ ಇರುತ್ತದೆ. ಸಣ್ಣಗಾಗಲು ಆತ್ಮೀಯರೊಬ್ಬರ ಸಲಹೆಯನ್ನು ಪಡೆಯುವಿರಿ. ಆತ್ಮವಿಶ್ವಾಸದ ಕೊರತೆ ಇರುತ್ತದೆ. ದಂಪತಿ ನಡುವೆ ಅನಾವಶ್ಯಕ ವಾದ ವಿವಾದ ಇರಲಿದೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಎಲೆ ಹಸಿರು 

ಧನಸ್ಸು

ಸಾಕು ಪ್ರಾಣಿಗಳಲ್ಲಿ ಆಸಕ್ತಿ ಉಂಟಾಗುತ್ತದೆ. ಅನಿರೀಕ್ಷಿತವಾಗಿ ಜೀವನದಲ್ಲಿ ಶುಭಫಲಗಳು ದೊರೆಯುತ್ತವೆ. ಅನಿರೀಕ್ಷಿತ ಧನ ಲಾಭವಿರುತ್ತದೆ. ಬೇರೆಯವರಿಗೆ ಅರ್ಥವಾಗುವಂತೆ ಬುದ್ಧಿ ಹೇಳುವಿರಿ. ಕುಟುಂಬದ ಹೊರಗು ಒಳಗೂ ನಿಮ್ಮ ಗೌರವ ಹೆಚ್ಚುತ್ತದೆ. ಹೊಟ್ಟೆಗೆ ಸಂಬಂಧಪಟ್ಟ ದೋಷವಿರುತ್ತದೆ. ಇರುವ ಹಣವನ್ನೆಲ್ಲ ಖರ್ಚು ಮಾಡಿ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ವಿಶೇಷ ಜ್ಞಾನವಿರುತ್ತದೆ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೇಸರಿ

ಮಕರ

ಸಮಯಕ್ಕೆ ತಕ್ಕಂತೆ ನಡೆದುಕೊಳ್ಳುವ ಬುದ್ಧಿ ನಿಮ್ಮಲ್ಲಿರುತ್ತದೆ. ಬೇರೆಯವರಿಗೆ ಬುದ್ಧಿವಾದ ಹೇಳುವುದರಲ್ಲಿ ನಿಸ್ಸೀಮರು. ಪಿತ್ತದ ದೋಷ ಉಂಟಾಗಲಿದೆ. ಗಣಿತಪಠ್ಯವನ್ನು ಬೋಧಿಸುವವರಿಗೆ ವಿಶೇಷ ಅವಕಾಶಗಳು ದೊರೆಯುತ್ತವೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಸಂಗಾತಿಯ ಬಗ್ಗೆ ವಿಶೇಷ ಪ್ರೀತಿ ಅಕ್ಕರೆ ಇರುತ್ತದೆ. ಹೊಸ ಒಡವೆ ವಸ್ತ್ರಗಳಿಗೆ ಹಣ ಖರ್ಚಾಗುತ್ತದೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಕುಂಭ

ಹೊಸ ವಾಹನ ಕೊಳ್ಳುವಿರಿ. ಕುಟುಂಬದಲ್ಲಿನ ಸ್ತ್ರೀಯರಿಗೆ ದೈಹಿಕ ದೌರ್ಬಲ್ಯವಿರುತ್ತದೆ. ಒಮ್ಮೆ ತೆಗೆದುಕೊಂಡ ನಿರ್ಧಾರಗಳನ್ನು ಅನಾವಶ್ಯಕವಾಗಿ ಬದಲಿಸುವಿರಿ. ನೋಡಲು ಶಾಂತರಂತೆ ಕಂಡರು ಕೋಪಗೊಂಡಾಗ ಉದ್ವೇಗದಿಂದ ವರ್ತಿಸುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ನವ ವಿವಾಹಿತರು ಹೊಸ ಮನೆ ಕೊಳ್ಳಬಹುದು. ವ್ಯಾಪಾರ ವ್ಯವಹಾರಗಳಲ್ಲಿ

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪು

ಮೀನ

ಮಧ್ಯವಯಸ್ಕರಿಗೆ ವಿವಾಹ ನಿಶ್ಚಯವಾಗುತ್ತದೆ. ಕುಟುಂಬದ ಹಿರಿಯರೊಬ್ಬರು ಉದ್ಯೋಗದ ಕಾರಣ ಕುಟುಂಬದಿಂದ ದೂರವಿರುತ್ತಾರೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ವಿರುತ್ತದೆ. ಸೋದರಿಯು ದುಡುಕುತನದಿಂದ ಕೌಟುಂಬಿಕ ಜೀವನದಲ್ಲಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ಸೋದರನಿಗೆ ಹಣದ ಸಹಾಯ ಮಾಡುವಿರಿ. ಪತ್ನಿಯ ಸಲುವಾಗಿ ಅನಾವಶ್ಯಕ ಖರ್ಚು ವೆಚ್ಚಗಳು ಇರುತ್ತವೆ.

ಪರಿಹಾರ : ತಾಯಿಯವರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 10

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಕಪ್ಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.