ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಧಾರ್ಮಿಕ ಆಚರಣೆಗಳಿಗಾಗಿ ಹಣ ಖರ್ಚು, ವಿದ್ಯಾರ್ಥಿಗಳಿಗೆ ನಿರೀಕ್ಷಿಸಿದ ಯಶಸ್ಸು; ನಾಳೆಯ ದಿನ ಭವಿಷ್ಯ

Tomorrow Horoscope: ಧಾರ್ಮಿಕ ಆಚರಣೆಗಳಿಗಾಗಿ ಹಣ ಖರ್ಚು, ವಿದ್ಯಾರ್ಥಿಗಳಿಗೆ ನಿರೀಕ್ಷಿಸಿದ ಯಶಸ್ಸು; ನಾಳೆಯ ದಿನ ಭವಿಷ್ಯ

16th May 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (16th May 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ: ಅಷ್ಠಮಿ ಬೆಳಗ್ಗೆ 07.00 ರವರೆಗೂ ಇರುತ್ತದೆ. ಆನಂತರ ನವಮಿ ಆರಂಭವಾಗುತ್ತದೆ.

ನಕ್ಷತ್ರ : ಮಖೆ ನಕ್ಷತ್ರವು ಸಂಜೆ 06.52 ರವರೆಗೂ ಇರುತ್ತದೆ. ಆನಂತರ ಪುಬ್ಬ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.54

ಸೂರ್ಯಾಸ್ತ: ಸಂಜೆ 06.37

ರಾಹುಕಾಲ: 01.55 ರಿಂದ 03.30

ರಾಶಿಫಲ

 

ಮೇಷ

ಸೋಲನ್ನು ಒಪ್ಪದೆ ಹಟದಿಂದ ಆರಂಭಿಸುವ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಕುಟುಂಬದ ಹಿರಿಯರ ಸಲಹೆ ಸೂಚನೆಗಳನ್ನು ಪಾಲಿಸಿದಲ್ಲಿ ತೊಂದರೆಯಿಂದ ಪಾರಾಗುವಿರಿ. ಉನ್ನತ ಮಟ್ಟ ಸ್ನೇಹ ಸಂಬಂಧ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಸಮುದ್ರ ಅಥವಾ ನದಿಸ್ನಾನದ ಯೋಗವಿದೆ. ಕುಟುಂಬದಲ್ಲಿ ನಡೆಯಬೇಕಿದ್ದ ವಿವಾಹ ಮುಂದೆ ಹೋಗಲಿದೆ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಎಲೆ ಹಸಿರು

ವೃಷಭ

ತಾಯಿಯವರಿಗೆ ತವರಿನಿಂದ ಆಸ್ತಿಯ ಉಡುಗೊರೆ ದೊರೆಯಲಿದೆ. ವಾದ ವಿವಾದಗಳಿಂದ ದೂರ ಉಳಿಯುವಿರಿ. ನವವಿವಾಹಿತರಿಗೆ ಶುಭಫಲಗಳು ದೊರೆಯಲಿದೆ. ಎಲ್ಲರನ್ನೂ ಅನುಮಾನದ ದೃಷ್ಠಿಯಿಂದ ನೋಡುವಿರಿ. ಆತ್ಮೀಯರನ್ನು ನಂಬಿದಲ್ಲಿ ವಿಶೇಷ ಅನುಕೂಲತೆ ದೊರೆಯುತ್ತದೆ. ವಿದ್ಯಾರ್ಥಿಗಳು ಒತ್ತಡವನ್ನು ಮರೆತು ಮನರಂಜನೆಯಲ್ಲಿ ದಿನ ಕಳೆಯುವರು.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೇಸರಿ

ಮಿಥುನ

ಧಾರ್ಮಿಕ ಆಚರಣೆಗಳಿಗಾಗಿ ಹಣ ಖರ್ಚು ಮಾಡುವಿರಿ. ತಪ್ಪು ಕಲ್ಪನೆಯಿಂದ ಆತ್ಮೀಯರೊಬ್ಬರು ನಿಮ್ಮಿಂದ ದೂರವಾಗುತ್ತಾರೆ. ವಿದ್ಯಾರ್ಥಿಗಳು ನಿರೀಕ್ಷಿಸಿದ ಯಶಸ್ಸನ್ನು ಗಳಿಸುತ್ತಾರೆ. ಕುಟುಂಬದ ಹಿರಿಯರಿಗೆ ಹಣದ ವಿಚಾರವಾಗಿ ಅಶಾಂತಿ ಇರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ದೃಢವಾದ ನಿಲುವು ತೆಗೆದುಕೊಳ್ಳುವಿರಿ. ಬಡವರಿಗೆ ಆಹಾರದ ವ್ಯವಸ್ಥೆಯನ್ನು ಕಲ್ಪಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ :7

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಕಟಕ

ಆತುರದಿಂದ ಯಾವುದೇ ತೀರ್ಮಾನವನ್ನು ತೆಗೆದುಕೊಳ್ಳುವುದಿಲ್ಲ. ಯಾವುದೇ ವಿಚಾರವಾದರೂ ಸಂಪೂರ್ಣ ಅರ್ಥಮಾಡಿಕೊಳ್ಳಲು ಪ್ರಯತ್ನಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ತೊಂದರೆಗೆ ಸಿಲುಕುವಿರಿ. ಕುಟುಂಬದಲ್ಲಿ ಅಶಾಂತಿಯ ಸನ್ನಿವೇಶ ಇರುತ್ತದೆ. ವಿದ್ಯಾರ್ಥಿಗಳಲ್ಲಿ ಓದಿನ ಬಗ್ಗೆ ಹೊಸ ಗುರಿ ಮೂಡಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಸರ್ಕಾರಿ ಉದ್ಯೋಗ ಲಭಿಸುತ್ತದೆ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪು

ಸಿಂಹ

ಉದ್ಯೋಗದಲ್ಲಿ ತೊಂದರೆ ಇರದು ಆದರೆ ಪ್ರಗತಿಯೂ ಕಂಡುಬಾರದು. ವಂಶದ ಆಸ್ತಿಯಲ್ಲಿ ನ್ಯಾಯಯುತ ಪಾಲು ನಿಮ್ಮದಾಗುತ್ತದೆ. ಭೂ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ. ಸಮಾಜ ಸೇವೆ ಮಾಡುವಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ವಿದ್ಯಾರ್ಥಿಗಳು ಬುದ್ಧಿವಂತಿಕೆಯಿಂದ ದೊರೆವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುತ್ತಾರೆ.

ಪರಿಹಾರ: ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಕಿತ್ತಳೆ

ಕನ್ಯಾ

ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಗಳಿಸುವಿರಿ. ರಾಜಕೀಯ ಕ್ಷೇತ್ರದಲ್ಲಿ ಪ್ರಭಾವಿ ವ್ಯಕ್ತಿಯಾಗಿ ಬಾಳುವಿರಿ. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ. ಗೌರವಕ್ಕೆ ಚ್ಯುತಿ ಬರುವ ಕೆಲಸ ಕಾರ್ಯಗಳನ್ನು ಮಾಡುವುದಿಲ್ಲ. ತಂದೆಯಿಂದ ನಿಮ್ಮ ಕೆಲಸಗಳಲ್ಲಿ ಉತ್ತಮ ಸಹಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಮನಸ್ಸು ಬದಲಾಯಿಸದೆ ಓದಿನಲ್ಲಿ ಮಗ್ನರಾಗುತ್ತಾರೆ.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಹಳದಿ

ತುಲಾ

ಹಣಕಾಸಿನ ವ್ಯವಹಾರದಲ್ಲಿ ದುಡುಕಿ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಚಿನ್ನಾಭರಣವನ್ನು ಕೊಳ್ಳಲು ಹಣ ವೆಚ್ಚವಾಗಲಿದೆ. ಕಷ್ಟವೆನಿಸಿದರೂ ವಿಶಾಲವಾದ ಮನೆಯನ್ನು ಕೊಳ್ಳುವಿರಿ. ಸಮಾಜದಲ್ಲಿ ಉನ್ನತ ಗೌರವ ಗಳಿಸುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ವಿದ್ಯಾರ್ಥಿಗಳು ಕಷ್ಟವಿಲ್ಲದ ವಿಷಯದಲ್ಲಿಆಸಕ್ತಿ ತೋರುವಿರಿ. ಸರ್ಕಾರದ ಅನುದಾನದ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು ಪೂರ್ವ

ಅದೃಷ್ಟದ ಬಣ್ಣ: ಹಸಿರು

ವೃಶ್ಚಿಕ

ಸಂಗಾತಿಯ ಹಟದ ಗುಣ ಕುಟುಂಬದಲ್ಲಿ ಅಶಾಂತಿಯನ್ನು ಉಂಟುಮಾಡುತ್ತದೆ. ವಿದ್ಯಾರ್ಥಿಗಳು ಅವಿರತ ಪ್ರಯತ್ನದಿಂದ ಉನ್ನತ ಮಟ್ಟವನ್ನು ತಲುಪಲಿದ್ದಾರೆ. ಯಂತ್ರ ಸಂಬಂಧಿ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಬೇರೊಬ್ಬರ ಹಣಕಾಸಿನ ವ್ಯವಹಾರದಲ್ಲಿ ಮಧ್ಯವರ್ತಿಯಾದಲ್ಲಿ ತೊಂದರೆ ಖಚಿತ. ಪಾಲುಗಾರಿಕೆಯ ವ್ಯಾಪಾರದಲ್ಲಿ ಸಾಧಾರಣ ಲಾಭವಿರುತ್ತದೆ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೀಲಿ

ಧನಸ್ಸು

ಕಾನೂನು ಪ್ರಕ್ರಿಯೆಯಲ್ಲಿ ಜಯ ಲಭಿಸುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನದಿಂದ ಯಶಸ್ಸನ್ನು ಗಳಿಸುತ್ತಾರೆ. ಧೈರ್ಯ ಸಾಹಸದ ಗುಣವನ್ನು ಬೆಳೆಸಿಕೊಳ್ಳುವಿರಿ. ಬಹುರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗ ದೊರೆಯುತ್ತದೆ. ವಾದ ವಿವಾದಕ್ಕೆ ತೆರೆ ಎಳೆದು ರಾಜಿ ಮಾಡಲು ನಿಶ್ಚಯಿಸುವಿರಿ. ಮಕ್ಕಳು ಒತ್ತಡವಿಲ್ಲದೆ ವಿದ್ಯಾರ್ಜನೆಯಲ್ಲಿ ಮುಂದುವರೆಯುವರು.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೇರಳೆ

ಮಕರ

ತಪ್ಪನ್ನು ಒಪ್ಪಿಕೊಳ್ಳುವ ಕಾರಣ ಜನರ ನಡುವೆ ಸಂತಸದಿಂದ ಇರುವಿರಿ. ವ್ಯಾಪಾರ ವ್ಯವಹಾರಲ್ಲಿ ಲಾಭ ಇರದೆ ಹೋದರೂ ನಷ್ಟವಂತೂ ಆಗುವುದಿಲ್ಲ. ತಂದೆಯವರ ಆರೋಗ್ಯದಲ್ಲಿ ಚೇತರಿಗೆ ಕಂಡುಬರುತ್ತದೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನ ನೀಡುವಿರಿ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸುವಿರಿ. ಅತಿಯಾದ ಒಳ್ಳೆಯತನದಿಂದ ಆತಂಕದ ಪರಿಸ್ಥಿತಿಯನ್ನು ಎದುರಿಸುವಿರಿ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಗುಲಾಬಿ

ಕುಂಭ

ಬೇರೆಯವರ ಮಾತನ್ನು ಕೇಳದೆ ಹೋದರು ಹಟದ ಬುದ್ದಿ ಇರದು. ಸಂಗಾತಿಯೊಡನೆ ಹಣಕಾಸಿನ ವಿಚಾರದಲ್ಲಿ ಮನಸ್ತಾಪ ಇರುತ್ತದೆ . ಆತ್ಮೀಯರ ಸಹಾಯದಿಂದ ಭೂ ಅಭಿವೃದ್ಧಿ ಕಾರ್ಯದಲ್ಲಿ ಯಶಸ್ವಿಯಾಗುವಿರಿ. ಗೃಹೋಪಯೋಗಿ ಉಪಕರಣಗಳ ವ್ಯಾಪಾರದಲ್ಲಿ ಲಾಭವಿರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ನ ತೊಂದರೆ ಬಹುಕಾಲ ಉಳಿಯದು. ಸೋದರನ ಸಲುವಾಗಿ ಹಣ ಖರ್ಚಾಗುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬಿಳಿ

ಮೀನ

ಉದ್ಯೋಗದಲ್ಲಿ ಉನ್ನತ ಸ್ಥಾನ ಗಳಿಸುವಿರಿ. ಬಡ್ತಿ ದೊರೆಯುವ ಸಾದ್ಯತೆಗಳಿವೆ. ಅವಿವಾಹಿತರಿಗೆ ಹೆಚ್ಚಿನ ಪ್ರಯತ್ನದಿಂದ ವಿವಾಹ ನಿಶ್ಚಯವಾಗಲಿದೆ. ಅರ್ಥವಿಲ್ಲದ ಚಾಡಿ ಮಾತನ್ನು ನಂಬಿದಲ್ಲಿ ಅಪಾಯಕ್ಕೆ ಸಿಲುಕುವಿರಿ. ವೈಭವಯುತ ಮನೆಯನ್ನು ಕೊಳ್ಳುವ ಆಸೆ ಉಂಟಾಗಲಿದೆ. ವಾಹನ ಚಾಲನೆಯ ವೇಳೆ ತೊಂದರೆ ಆಗುತ್ತದೆ. ವಿದ್ಯಾರ್ಥಿಗಳು ವಿಶೇಷವಾದ ಸಾಧನೆ ಮಾಡುವರು.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ 10

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಬೂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).