ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಸುಲಭವಾಗಿ ಸೋಲು ಒಪ್ಪಿಕೊಳ್ಳದ ನೀವು ಮಾತಿನಿಂದಲೇ ಕೆಲಸ ಸಾಧಿಸುವಿರಿ; ನಾಳೆಯ ದಿನ ಭವಿಷ್ಯ

Tomorrow Horoscope: ಸುಲಭವಾಗಿ ಸೋಲು ಒಪ್ಪಿಕೊಳ್ಳದ ನೀವು ಮಾತಿನಿಂದಲೇ ಕೆಲಸ ಸಾಧಿಸುವಿರಿ; ನಾಳೆಯ ದಿನ ಭವಿಷ್ಯ

17th April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ಏಪ್ರಿಲ್‌ 17ರ ದಿನ ಭವಿಷ್ಯ
ಏಪ್ರಿಲ್‌ 17ರ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (17th April 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಬುಧವಾರ

ತಿಥಿ : ನವಮಿ .05.10 ರವರೆಗೂ ಇದ್ದು ನಂತರ ದಶಮಿ ಆರಂಭವಾಗುತ್ತದೆ.

ನಕ್ಷತ್ರ : ಪುಷ್ಯ ನಕ್ಷತ್ರವು ಬೆಳಗ್ಗೆ 07.25 ರವರೆಗೂ ಇದ್ದು ನಂತರ ಆಶ್ಲೇಷ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.06

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: 12.00 ರಿಂದ 01.30

ಮೇಷ

ಕುಟುಂಬದಲ್ಲಿ ಪರಸ್ಪರ ವಿಶ್ವಾಸ ಮನೆ ಮಾಡುತ್ತದೆ. ಮನ ಒಪ್ಪುವಂತಹ ಕೆಲಸಗಳನ್ನು ಆಯ್ದುಕೊಳ್ಳುವಿರಿ. ಉದ್ಯೋಗದ ಸಲುವಾಗಿ ದೂರದ ಊರಿಗೆ ಪ್ರಯಾಣ ಮಾಡುವಿರಿ. ಮನಸ್ಸನ್ನು ಬದಲಿಸದೆ ಹೋದಲ್ಲಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬಹುದು. ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುವಿರಿ. ಉತ್ತಮ ಆರೋಗ್ಯ ಲಭಿಸುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಆದಾಯ ಇರುತ್ತದೆ. ಬಿಡುವಿಲ್ಲದ ಕೆಲಸದಿಂದಾಗಿ ನಿಶ್ಯಕ್ತಿ ನಿಮ್ಮನ್ನು ಕಾಡುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ವೃಷಭ

ಕುಟುಂಬದವರ ಜೊತೆ ಸಂತೋಷದಿಂದ ಕಾಲ ಕಳೆಯುವಿರಿ. ಸ್ಟಾಕ್ ಮತ್ತು ಷೇರು ವ್ಯವಹ್ಕಾರದಲ್ಲಿ ಮಧ್ಯಮಗತಿಯ ಆದಾಯ ದೊರೆಯುತ್ತದೆ. ಕುಟುಂಬದೊಂದಿಗೆ ಯಾತ್ರಾಸ್ಥಳಕ್ಕೆ ಭೇಟಿ ನೀಡಲು ನಿರ್ಧರಿಸುರಿ. ನಿರೀಕ್ಷಿತ ಮೂಲಗಳಿಂದ ಹಣ ದೊರೆಯುತ್ತದೆ. ದುಬಾರಿ ಉಡುಗೊರೆಯೊಂದು ನಿಮಗೆ ದೊರೆಯಲಿದೆ. ಧಾರ್ಮಿಕ ಕೆಲಸಗಳಿಗಾಗಿ ಹಣ ಖರ್ಚಾಗುತ್ತದೆ. ವೃತ್ತಿ ಜೀವನದಲ್ಲಿ ಅತ್ಯುನ್ನತ ಗೌರವ ದೊರೆಯುತ್ತದೆ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ 1

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಹಾಲಿನ ಬಣ್ಣ

ಮಿಥುನ

ಗೃಹೋಪಯೋಗಿ ಕೆಲಸಗಳಿಗೆ ಹಣ ಖರ್ಚು ಮಾಡುವಿರಿ. ವೃತ್ತಿಗೆ ಸಂಬಂಧಿಸಿದ ವಿಶೇಷ ಅಧ್ಯಯನದ ಅವಕಾಶ ಬಳಸಿಕೊಳ್ಳುವಿರಿ. ವಿದೇಶಕ್ಕೆ ತೆರಳುವ ಯೋಜನೆ ಮುಂದೂಡಲ್ಪಡುತ್ತದೆ. ವಾಸ ಸ್ಥಳ ಬದಲಾಯಿಸುವಿರಿ. ವ್ಯಾಪಾರ ವ್ಯವಹಾರದಲ್ಲಿನ ವರಮಾನ ಹೆಚ್ಚಲಿದೆ. ನಿರೀಕ್ಷಿತ ವೇಳೆಗೆ ಸರಿಯಾಗಿ ಬೇರೆಯವರಿಗೆ ನೀಡಿದ ಹಣ ಮರಳಿ ದೊರೆಯುತ್ತದೆ.

ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬೂದು ಬಣ್ಣ

ಕಟಕ

ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚಿನ ಪರಿಶ್ರಮ ತೋರಲಿದ್ದಾರೆ. ಶುಭ ವರ್ತಮಾನದ ಕಾರಣ ಕುಟುಂಬದಲ್ಲಿ ಸಂಭ್ರಮದ ಆಚರಣೆ ಕಂಡು ಬರುತ್ತದೆ. ಸಂಗಾತಿಯೊಂದಿಗೆ ಕಿರು ಪ್ರವಾಸ ಕೈಗೊಳ್ಳುವಿರಿ. ಏಕಾಂಗಿಯಾಗಿ ಉಳಿಯಲು ಬಯಸುವಿರಿ. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ ಮನೆಯಲ್ಲಿ ವಿಶೇಷವಾದ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸುವಿರಿ.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಆಕಾಶ ನೀಲಿ ಬಣ್ಣ

ಸಿಂಹ

ಕೈಹಿಡಿದ ಕೆಲಸ ಕಾರ್ಯಗಳನ್ನು ಹಟದಿಂದ ಯಶಸ್ವಿಗೊಳಿಸುವಿರಿ. ಉದ್ಯೋಗದಲ್ಲಿ ಪ್ರತಿಷ್ಠಿತ ಸ್ಥಾನಮಾನ ದೊರೆಯಲಿದೆ. ವ್ಯಾಪಾರ ವ್ಯವಹಾರಗಳು ಪ್ರಯತ್ನಕ್ಕೆ ತಕ್ಕ ಫಲಿತಾಂಶವನ್ನು ನೀಡುತ್ತದೆ. ಅವಿವಾಹಿತರಿಗೆ ಪರಿಚಯ ಅಥವಾ ಸಂಬಂಧಿಕರ ಜೊತೆಯಲ್ಲಿ ವಿವಾಹವಾಗುತ್ತದೆ. ಧಾರ್ಮಿಕ ಕಾರ್ಯಗಳ ನೇತೃತ್ವವನ್ನು ವಹಿಸುವಿರಿ. ವಿದ್ಯಾರ್ಥಿಗಳು ನಿರೀಕ್ಷೆಯಂತೆ ಯಶಸ್ಸನ್ನು ಗಳಿಸುತ್ತಾರೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು ಉತ್ತರ

ಅದೃಷ್ಟದ ಬಣ್ಣ : ಕೆಂಪು

ಕನ್ಯಾ

ಆತ್ಮೀಯರ ಆಗಮನದಿಂದ ಖರ್ಚು ವೆಚ್ಚಗಳು ಹೆಚ್ಚುತ್ತವೆ. ಉದ್ಯೋಗದಿಂದ ದೂರವಿದ್ದು ವಿಶ್ರಾಂತಿ ಪಡೆಯುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭವನ್ನು ಗಳಿಸುವಿರಿ. ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪೂರ್ತಿ ಇರುತ್ತದೆ. ಹುಟ್ಟೂರಿಗೆ ತೆರಳುವಿರಿ. ಕುಟುಂಬದ ಹಿರಿಯರ ಆಶೀರ್ವಾದ ಪಡೆದು ದಿನದ ಕೆಲಸ ಆರಂಭಿಸುವಿರಿ. ಇಷ್ಟವಿಲ್ಲದಿದ್ದರೂ ಬಲವಂತ ಮಾಡುವುದರಿಂದ ಆತ್ಮೀಯರೊಬ್ಬರಿಗೆ ಹಣದ ಸಹಾಯ ಮಾಡುವಿರಿ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಎಲೆ ಹಸಿರು ಬಣ್ಣ

ತುಲಾ

ವ್ಯಾಪಾರ ವ್ಯವಹಾರಗಳು ಅನುಕೂಲಕರ ಸ್ಥಿತಿಯಲ್ಲಿ ಸಾಗಲಿವೆ. ವಿದ್ಯಾರ್ಥಿಗಳು ಸ್ನೇಹಿತರೊಂದಿಗೆ ಕಲಿಕೆಯಲ್ಲಿ ಮಗ್ನರಾಗಲಿದ್ದಾರೆ. ಕ್ರೀಡಾ ಸ್ಪರ್ಧೆಗಳಲ್ಲಿ ಸೋಲುಂಟಾಗಲಿವೆ. ಅನಿರೀಕ್ಷಿತ ಧನ ಲಾಭವಿರುತ್ತದೆ. ಕುಟುಂಬದ ಸದಸ್ಯರ ಜೊತೆಯಲ್ಲಿ ದೀರ್ಘಕಾಲದ ಪ್ರವಾಸ ಮಾಡುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಸ್ವಂತ ಜಮೀನು ಅಥವಾ ಮನೆಯನ್ನು ಕೊಳ್ಳುವ ಸಾಧ್ಯತೆಗಳಿವೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ವೃಶ್ಚಿಕ

ಕುಟುಂಬದಲ್ಲಿ ಸಹಕಾರದ ಭಾವನೆ ಮನೆ ಮಾಡಿರುತ್ತದೆ. ಉದ್ಯೋಗದಲ್ಲಿ ಹೊಸತನವನ್ನು ಎದುರು ನೋಡುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಮಿತಿಮೀರಿ ಹಣವನ್ನು ತೊಡಗಿಸದಿರಿ. ವಿದ್ಯಾರ್ಥಿಗಳು ಒತ್ತಡದಿಂದ ಕಲಿಕೆಯಲ್ಲಿ ಮುಂದುವರೆಯುವರು. ದ್ವೇಷವನ್ನು ಮರೆತು ಎಲ್ಲರ ಜೊತೆ ಸಂತಸದಿಂದ ಬಾಳುವಿರಿ. ಸಿಡುಕುತನವನ್ನು ಕಡಿಮೆ ಮಾಡಿಕೊಳ್ಳಿರಿ. ಅಪೂರ್ಣಗೊಂಡ ಕೆಲಸಗಳನ್ನು ಪೂರ್ಣಗೊಳಿಸುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಡು ಬಾದಾಮಿ

ಧನಸ್ಸು

ಕುಟುಂಬದಲ್ಲಿ ಸ್ನೇಹ ಸೌಹಾರ್ದತೆ ಸದಾ ಇರುತ್ತದೆ. ಉದ್ಯೋಗದಲ್ಲಿ ಕೇವಲ ಮುಖ್ಯವಾದ ಕೆಲಸವನ್ನು ಮಾತ್ರ ಮಾಡುವಿರಿ. ಕೆಲಸದ ಒತ್ತಡದ ನಡುವೆಯೂ ಸಂತಸದಿಂದ ಬಾಳುವಿರಿ. ವ್ಯಾಪಾರ ವ್ಯವಹಾರದಲ್ಲಿ ವಿಶೇಷ ಬದಲಾವಣೆ ಕಂಡುಬರಲಿದೆ. ವಿದ್ಯಾರ್ಥಿಗಳು ಬಾಲ್ಯದ ಸ್ನೇಹಿತರೊಂದಿಗೆ ಮನರಂಜನೆಯಲ್ಲಿ ವೇಳೆ ಕಳೆಯಲಿದ್ದಾರೆ. ಸಂಗಾತಿ ತೆಗೆದುಕೊಳ್ಳುವ ನಿರ್ಧಾರಗಳು ಕುಟುಂಬದ ತೊಂದರೆಯನ್ನು ದೂರ ಮಾಡಲಿದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈ ಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕೆಂಪು

ಮಕರ

ಕುಟುಂಬದಲ್ಲಿ ಸಂತೋಷದ ವಾತಾವರಣವಿರುತ್ತದೆ. ಅತಿ ಮುಖ್ಯ ಕೆಲಸ ಕಾರ್ಯಗಳಿಗೆ ಮೊದಲ ಪ್ರಾಶಸ್ತ್ಯ ನೀಡುವಿರಿ. ಉದ್ಯೋಗದಲ್ಲಿ ಹೆಚ್ಚಿನ ಕೆಲಸದ ಒತ್ತಡವಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ದೊರೆಯಲಿದೆ. ವಿದ್ಯಾರ್ಥಿಗಳು ಹಿರಿಯರ ಆಸರೆ ಬಯಸುತ್ತಾರೆ. ಹಣಕಾಸಿನ ಕೊರತೆ ಕಡಿಮೆ ಆಗಲಿದೆ. ಹೊಸ ಹಣಕಾಸಿನ ಯೋಜನೆಗಳನ್ನು ರೂಪಿಸುವಿರಿ. ಸಂಗಾತಿಯ ಜೊತೆ ಉತ್ತಮ ಬಾಂಧವ್ಯ ಇರುತ್ತದೆ. ಕುಟುಂಬದ ಸದಸ್ಯರ ಜೊತೆಯಲ್ಲಿ ಕಿರು ಪ್ರವಾಸ ಕೈಗೊಳ್ಳುವಿರಿ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕುಂಭ

ಪ್ರತಿ ವಿಚಾರಗಳಲ್ಲೂ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅವಕಾಶ ದೊರೆಯುತ್ತದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಂಡು ಬರದು. ವ್ಯಾಪಾರ ವ್ಯವಹಾರಗಳು ನಿರೀಕ್ಷಿಸಿದಂತೆ ನಡೆಯಲಿವೆ. ವಿದ್ಯಾರ್ಥಿಗಳು ಕಲಿಕೆಯ ವಿಚಾರದಲ್ಲಿ ಯಶಸ್ಸು ಗಳಿಸುತ್ತಾರೆ. ಸ್ವಂತ ನಿರ್ಧಾರಗಳಿಗೆ ಬದ್ದರಾಗಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಿದ್ದಾರೆ. ಆರೋಗ್ಯ ಉಳಿಸಿಕೊಳ್ಳಲು ದೈಹಿಕ ವ್ಯಾಯಾಮವನ್ನು ಅವಲಂಬಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಮೀನ

ಬೇರೆಯವರಿಗೆ ಅಸಾಧ್ಯವಾದ ಕೆಲಸಗಳನ್ನು ಸುಲಭವಾಗಿ ಮಾಡಬಲ್ಲಿರಿ. ಆತ್ಮವಿಶ್ವಾಸ ಬೆಳೆಸಿಕೊಳ್ಳಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ದೊರೆಯಲಿದೆ. ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ಕುಟುಂಬದಲ್ಲಿ ಶುಭ ಕಾರ್ಯವೊಂದು ನಡೆಯಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕುಟುಂಬದ ಸದಸ್ಯರಿಗೆ ಉಡುಗೊರೆಯನ್ನು ನೀಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).