ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ವಾಣಿಜ್ಯ ಸಂಸ್ಥೆಯ ಒಡೆತನ ದೊರೆಯಲಿದೆ, ಕೌಟುಂಬಿಕ ವಿವಾದದಲ್ಲಿ ಜಯ; ನಾಳೆಯ ದಿನ ಭವಿಷ್ಯ

Tomorrow Horoscope: ವಾಣಿಜ್ಯ ಸಂಸ್ಥೆಯ ಒಡೆತನ ದೊರೆಯಲಿದೆ, ಕೌಟುಂಬಿಕ ವಿವಾದದಲ್ಲಿ ಜಯ; ನಾಳೆಯ ದಿನ ಭವಿಷ್ಯ

17th May 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ವಾಣಿಜ್ಯ ಸಂಸ್ಥೆಯ ಒಡೆತನ ದೊರೆಯಲಿದೆ, ಕೌಟುಂಬಿಕ ವಿವಾದದಲ್ಲಿ ಜಯ; ನಾಳೆಯ ದಿನ ಭವಿಷ್ಯ
ವಾಣಿಜ್ಯ ಸಂಸ್ಥೆಯ ಒಡೆತನ ದೊರೆಯಲಿದೆ, ಕೌಟುಂಬಿಕ ವಿವಾದದಲ್ಲಿ ಜಯ; ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (17th May 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಶುಕ್ರವಾರ

ತಿಥಿ: ನವಮಿ ಬೆಳಗ್ಗೆ 08.48 ರವರೆಗೂ ಇರುತ್ತದೆ. ಆನಂತರ ದಶಮಿ ಆರಂಭವಾಗುತ್ತದೆ.

ನಕ್ಷತ್ರ: ಪುಬ್ಬ ನಕ್ಷತ್ರವು ರಾತ್ರಿ 09.20 ರವರೆಗೂ ಇದ್ದು ನಂತರ ಉತ್ತರ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.54

ಸೂರ್ಯಾಸ್ತ: ಸಂಜೆ 06.37

ರಾಹುಕಾಲ: 10.45 ರಿಂದ 12.20

ರಾಶಿಫಲ

ಮೇಷ

ವೃತ್ತಿಕ್ಷೇತ್ರದಲ್ಲಿ ವಿರೋಧ ಉಂಟಾದರೂ ಸಮರ್ಥವಾಗಿ ಎದುರಿಸಬಲ್ಲಿರಿ. ದುಡುಕಿನ ನಿರ್ಧಾರದಿಂದ ಕೂಡಿಟ್ಟ ಹಣ ವೆಚ್ಚವಾಗುತ್ತದೆ. ಆಪ್ತ ಸ್ನೇಹಿತರಿಗೆ ಅನಿವಾರ್ಯವಾಗಿ ಹಣದ ಸಹಾಯ ಮಾಡುವಿರಿ. ನಿಮ್ಮೆಲ್ಲಾ ಕೆಲಸಗಳಲ್ಲಿ ಮಕ್ಕಳ ಸಹಾಯ ಸಹಕಾರ ಸದಾ ದೊರೆಯುತ್ತದೆ. ವಿದ್ಯಾರ್ಥಿಗಳ ಆತ್ಮವಿಶ್ವಾಸವು ಹೊಸ ಜೀವನವನ್ನು ರೂಪಿಸುತ್ತದೆ. ಸಿಡುಕಿನಿಂದ ವರ್ತಿಸದೆ ಸಹನೆಯಿಂದ ವರ್ತಿಸಿ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಂದು

ವೃಷಭ

ದೈಹಿಕ ದೌರ್ಬಲ್ಯ ನಿಮ್ಮನ್ನು ಕಾಡುತ್ತದೆ. ಹೆಚ್ಚಿನ ವೇತನ ದೊರೆತು ಉದ್ಯೋಗವನ್ನು ಬದಲಾಯಿಸುವಿರಿ. ಆತ್ಮೀಯರೊಬ್ಬರ ಹಣಕಾಸಿನ ಸಮಸ್ಯೆಯನ್ನು ಪರಿಹರಿಸುವಿರಿ. ವಿದ್ಯಾರ್ಥಿಗಳು ಉತ್ಸಾಹದಿಂದ ವಿದ್ಯಾಭ್ಯಾಸವನ್ನು ಮುಂದುವರೆಸುವರು. ಸೋದರರ ಜೊತೆಗೂಡಿ ಪಾಲುದಾರಿಕೆ ವ್ಯಾಪಾರವನ್ನು ಆರಂಭಿಸುವಿರಿ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಪ್ಪು

ಮಿಥುನ

ವಿದ್ಯಾರ್ಥಿಗಳು ದೃಢಮನಸ್ಸಿನಿಂದ ಕಲಿಕೆಯಲ್ಲಿ ಮುಂದುವರೆಯುವರು. ಹಿರಿಯರ ಆರೋಗ್ಯದಲ್ಲಿ ಏರಿಳಿತ ಉಂಟಾಗಬಹುದು. ಉಸಿರಿನ ತೊಂದರೆ ಇದ್ದಲ್ಲಿ ಎಚ್ಚರಿಕೆ ವಹಿಸಿ. ವ್ಯಾಪಾರ ವ್ಯವಹಾರದಲ್ಲಿ ಆದಾಯದ ಕೊರತೆ ಇರುವುದಿಲ್ಲ ಆದರೆ ಉಳಿತಾಯ ಸಾಧ್ಯವಾಗದು. ಶುಭ ಕಾರ್ಯದ ಬಗ್ಗೆ ಮಾತುಕತೆ ನಡೆಯುತ್ತದೆ. ಸಮಾಜದಲ್ಲಿ ನಿಮ್ಮ ನೆನಪು ಉಳಿಯುವ ಕೆಲಸವೊಂದನ್ನು ಮಾಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

ಕಟಕ

ಮನದಲ್ಲಿ ಯಾವುದೋ ಯೋಚನೆ ಸದಾ ಕಾಡುತ್ತದೆ. ಬೇರೆಯವರ ನಿರ್ದಾರವನ್ನು ಸುಲಭವಾಗಿ ಒಪ್ಪುವುದಿಲ್ಲ. ಕುಟುಂಬದಲ್ಲಿ ನೆಮ್ಮದಿ ನೆಲೆಸಿರುತ್ತದೆ. ಹಣದ ಕೊರತೆ ಉಂಟಾಗುತ್ತದೆ. ಅನಗತ್ಯ ತಿರುಗಾಟದಿಂದ ಬೇಸರಕ್ಕೆ ಒಳಗಾಗುವಿರಿ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಲಾಭಗಳಿಸುವಿರಿ. ಸ್ನೇಹಿತರ ಜೊತೆಗೂಡಿ ಸಾಹಸ ಕ್ರೀಡೆಯಲ್ಲಿ ತೊಡಗುವಿರಿ. ವಿದ್ಯಾರ್ಥಿಗಳ ಆಸೆ ಈಡೇರುತ್ತದೆ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನಸು ಗೆಂಪು

ಸಿಂಹ

ನಿಮ್ಮ ಹಣಕಾಸಿನ ನಿರ್ವಹಣೆಯ ವೈಖರಿ ಎಲ್ಲರಲ್ಲಿ ಆಚ್ಚರಿಯನ್ನು ಉಂಟುಮಾಡುತ್ತದೆ. ಸೋಲನ್ನು ಗೆಲುವಾಗಿ ಪರಿವರ್ತಿಸುವ ಕಲೆ ತಿಳಿದಿರುತ್ತದೆ. ಉದ್ಯೋಗದಲ್ಲಿ ಉನ್ನತ ಅಧಿಕಾರ ದೊರೆಯುತ್ತದೆ. ಅನಿರೀಕ್ಷಿತ ಧನಲಾಭ ಉಂಟಾಗುತ್ತದೆ. ಸಮಾಜದ ನಾಯಕತ್ವದ ಹೊಣೆ ನಿಮ್ಮದಾಗಲಿದೆ. ಮಕ್ಕಳ ತಪ್ಪನ್ನು ತಿದ್ದುವ ಜವಾಬ್ದಾರಿ ನಿಮ್ಮದಾಗಲಿದೆ. ಮನಸ್ಸಿಗೆ ಸರಿಕಂಡ ಕೆಲಸ ಮಾಡುವಿರಿ.

ಪರಿಹಾರ: ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಕನ್ಯಾ

ಸಾಲದ ವ್ಯವಹಾರದಲ್ಲಿ ಆತ್ಮೀಯರ ಜೊತೆ ವಿವಾದ ಉಂಟಾಗಲಿದೆ. ಹಣದ ಕೊರತೆಯನ್ನು ನೀಗಿಸಲು ಸ್ವಂತ ವ್ಯಾಪಾರವನ್ನು ಆರಂಭಿಸುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ದೂರವಾಗಿ ನೆಮ್ಮದಿ ನೆಲೆಸಿರುತ್ತದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ವ್ಯಾಸಂಗದಲ್ಲಿ ಮುಂದುವರೆಯುತ್ತಾರೆ. ಮಿತಿ ಇಲ್ಲದ ಆಹಾರ ಸೇವನೆಯಿಂದ ಅಜೀರ್ಣದ ತೊಂದರೆ ಉಂಟಾಗಬಹುದು.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಹಾಲಿನ ಬಣ್ಣ

ತುಲಾ

ಕಾನೂನು ಸಂಬಂಧಿತ ಉದ್ಯೋಗ ದೊರೆಯುತ್ತದೆ. ಕೌಟುಂಬಿಕ ವಿವಾದದಲ್ಲಿ ಜಯ ಗಳಿಸುವಿರಿ. ಐಷಾರಾಮಿ ವಾಹನವನ್ನು ಕೊಳ್ಳುವಿರಿ. ಕುಟುಂಬದಲ್ಲಿ ಬೇಸರದ ಸನ್ನಿವೇಶವೊಂದು ನಡೆಯುತ್ತದೆ. ಒಳ್ಳೆಯ ಮಾತಿನ ಕಾರಣ ಸ್ನೇಹಿತರು ಹೆಚ್ಚುತ್ತಾರೆ. ವಿದ್ಯಾರ್ಥಿಗಳಿಗೆ ಶುಭ ಫಲಿತಾಂಶ ದೊರೆಯಲಿದೆ. ಅನಿರೀಕ್ಷಿತವಾಗಿ ವಾಣಿಜ್ಯ ಸಂಸ್ಥೆಯ ಒಡೆತನ ದೊರೆಯುತ್ತದೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಬೂದು ಬಣ್ಣ

ವೃಶ್ಚಿಕ

ಹೊಸದಾಗಿ ಆರಂಭಿಸುವ ಕೆಲಸ ಕಾರ್ಯಗಳಲ್ಲಿ ಅಡ್ಡಿ ಆತಂಕಗಳು ಉಂಟಾಗಲಿದೆ. ಆದರೆ ಧೈರ್ಯವೇ ನಿಮ್ಮನ್ನು ಪಾರುಮಾಡುತ್ತದೆ. ದುಡುಕುತನದಿಂದ, ಈಗ ಮಾಡುತ್ತಿರುವ ಉದ್ಯೋಗವನ್ನು ಬದಲಿಸುವಿರಿ. ಕುಟುಂಬದವರ ಜೊತೆ ಪಾಲುಗಾರಿಕೆ ವ್ಯಾಪಾರವನ್ನು ಆರಂಭಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ಭಾಗಶ: ಯಶಸ್ವಿಯಾಗುವಿರಿ. ಶಾಂತಿಯಿಂದ ವರ್ತಿಸಿ ಆಪತ್ತಿನಿಂದ ಪಾರಾಗುವಿರಿ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಆಕಾಶ ನೀಲಿ

ಧನಸ್ಸು

ಅನ್ಯರಿಗೆ ಅಸಾಧ್ಯವಾಗುವ ಕೆಲಸ ಕಾರ್ಯಗಳು ನಿಮ್ಮ ಹೆಗಲೇರುತ್ತವೆ. ವಿದ್ಯಾರ್ಥಿಗಳು ಕ್ರೀಡಾಮನೋಭಾವನೆಯಿಂದ ಸೋಲು ಗೆಲುವನ್ನು ಸ್ವೀಕರಿಸುತ್ತಾರೆ. ವೃತ್ತಿ ಜೀವನದಲ್ಲಿ ಮರೆಯಲಾಗದ ತಿರುವುಗಳು ಉಂಟಾಗಲಿವೆ. ಸಮಾಜಸೇವೆಯಲ್ಲಿ ಆಸಕ್ತಿ ಉಂಟಾಗುತ್ತದೆ. ಹಣದ ಕೊರತೆ ನಿಮ್ಮನ್ನು ಕಾಡುತ್ತದೆ. ಆದಾಯವನ್ನು ಹೆಚ್ಚಿಸಿ ಕೊಳ್ಳಲು ವ್ಯಾಪಾರವೊಂದನ್ನು ಆರಂಭಿಸುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕೆಂಪು

ಮಕರ

ಆರೋಗ್ಯದಲ್ಲಿ ಯಾವುದೇ ತೊಂದರೆ ಎದುರಾಗದು. ಮಾತು ಕಡಿಮೆ ಮಾಡಿದರೆ ಕಷ್ಟದಿಂದ ಪಾರಾಗಬಹುದು. ಮನಸ್ಸು ಒಳ್ಳೆಯದಾದರೂ ದುಡುಕಿನ ಮಾತುಕತೆ ವಿರೋಧಿಗಳನ್ನು ಹೆಚ್ಚಿಸುತ್ತದೆ. ಸುಖಕರ ನಿದ್ದೆ ಮತ್ತು ರುಚಿಕರ ಭೋಜನವನ್ನು ಇಷ್ಟಪಡುವಿರಿ. ಲೋಹಕ್ಕೆ ಸಂಬಂಧಿಸಿದ ವ್ಯಾಪಾರ ವ್ಯವಹಾರದಲ್ಲಿ ಲಾಭವಿರುತ್ತದೆ. ಹಂಚಿ ಹೋದ ಕುಟುಂಬದ ಜಮೀನನ್ನು ಒಂದುಗೂಡಿಸುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಎಲೆ ಹಸಿರು

ಕುಂಭ

ನಿಮ್ಮ ಯೋಚನೆ ಮತ್ತು ಯೋಜನೆಯನ್ನು ಅರಿಯಲು ಯಾರಿಂದಲೂ ಸಧ್ಯವಿಲ್ಲ. ಜೀವನದಲ್ಲಿ ಹೊಸ ಆಶಾಭಾವನೆ ಮೂಡುತ್ತದೆ. ಅಭಿನಯ ಅಥವಾ ಇನ್ನಿತರ ಕ್ಷೇತ್ರದಲ್ಲಿ ಇದ್ದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಉದ್ಯೋಗದಲ್ಲಿ ಬೇಸರ ಉಂಟಾಗಿ ಬದಲಾವಣೆಗಾಗಿ ಕಾಯುವಿರಿ. ಹಳೆಯ ವಾಹನವನ್ನು ಮಾರಾಟ ಮಾಡಿ ಹೊಸ ವಾಹನ ಕೊಳ್ಳುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಯಾತ್ರಾಸ್ಥಳಕ್ಕೆ ಭೇಟಿ ನೀಡುವಿರಿ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು

ಮೀನ

ದೂರದ ಸಂಬಂಧಿಗಳ ಜೊತೆಗಿನ ಹಣದ ವ್ಯವಹಾರದಲ್ಲಿ ವೈರತ್ವ ಉಂಟಾಗುತ್ತದೆ. ತಾಯಿಯ ಆರೋಗ್ಯದ ಕಡೆ ಗಮನವಿರಲಿ. ದೂರ ಪ್ರಯಾಣದಿಂದ ದೈಹಿಕವಾಗಿ ಬಳಲುವಿರಿ. ಉದ್ಯೋಗ ಬದಲಾಯಿಸಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಹಣದ ತೊಂದರೆ ಎದುರಾದರೂ ಭಯಪಡದೆ ಸಹಾಯವನ್ನು ನಿರೀಕ್ಷಿಸುವಿರಿ. ವಿದ್ಯಾರ್ಥಿಗಳಿಗೆ ಶುಭ ಫಲಗಳು ದೊರೆಯಲಿವೆ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 7

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಬೂದು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).