Tomorrow Horoscope: ಚಾಡಿ ಮಾತಿನಿಂದ ದಂಪತಿಗಳ ನಡುವೆ ವಿರಸ, ಐಷಾರಾಮಿ ಜೀವನದಿಂದ ಹಣ ಖರ್ಚು; ನಾಳಿನ ದಿನಭವಿಷ್ಯ
18th May 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (18th May 2024 Horoscope).
ನಾಳಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲಪಕ್ಷ, ಶನಿವಾರ
ತಿಥಿ: ದಶಮಿ ಬೆಳ್ಳಿಗ್ಗೆ 10.48 ರವರೆಗೂ ಇರುತ್ತದೆ. ಅನಂತರ ಏಕಾದಶಿ ಆರಂಭವಾಗುತ್ತದೆ.
ನಕ್ಷತ್ರ: ಉತ್ತರ ನಕ್ಷತ್ರವು ರಾತ್ರಿ 11.56 ರವರೆಗೂ ಇರುತ್ತದೆ. ಅನಂತರ ಹಸ್ತ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಿಗ್ಗೆ 5.53
ಸೂರ್ಯಾಸ್ತ: ಸಂಜೆ 6.38
ರಾಹುಕಾಲ: ಬೆಳಿಗ್ಗೆ 9.09 ರಿಂದ ಬೆಳಿಗ್ಗೆ 10.44
ರಾಶಿಫಲ
ಮೇಷ
ಉತ್ತಮ ಮನೋಭಾವದಿಂದ ದಿನ ಆರಂಭಿಸುವಿರಿ.ಜೀವನದಲ್ಲಿನ ಸರಳ ಬದಲಾವಣೆಗಳಿಂದ ಉತ್ತಮ ಆರೋಗ್ಯವನ್ನು ಗಳಿಸಬಹುದು. ಕುಟುಂಬದ ಸದಸ್ಯರ ಜೊತೆಯಲ್ಲಿ ಕಿರು ಪ್ರವಾಸ ಮಾಡುವಿರಿ. ಸಂಗಾತಿಯ ಜೊತೆಯಲ್ಲಿ ಉತ್ತಮ ಪ್ರೀತಿ ವಿಶ್ವಾಸ ಇರಲಿದೆ. ಕುಟುಂಬದ ಹಿರಿಯರ ಮಾರ್ಗದರ್ಶನವು ನಿಮಗೆ ಫಲಪ್ರದಾಯಕವಾಗಿರುತ್ತದೆ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಹಳದಿ ಬಣ್ಣ
ವೃಷಭ
ಅತಿಯಾದ ಆತ್ಮವಿಶ್ವಾಸದಿಂದ ತೊಂದರೆಯೊಂದು ಎದುರಾಗಬಹುದು. ಕುಟುಂಬದಲ್ಲಿನ ವಿಚಾರಗಳನ್ನು ಯಾರಿಗೂ ತಿಳಿಸಲಿ. ಕಮಿಷನ್ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ವಿದ್ಯಾಭ್ಯಾಸದಲ್ಲಿ ಆಸಕ್ತಿ ಕಡಿಮೆಯಾಗುತ್ತದೆ. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಎಂದಿಗೂ ಬದಲಿಸುವುದಿಲ್ಲ.
ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಹಸಿರು ಬಣ್ಣ
ಮಿಥುನ
ಉತ್ತಮ ಆದಾಯವಿರುತ್ತದೆ. ಉತ್ತಮ ಆರೋಗ್ಯವನ್ನು ಪಡೆಯಲು ಬಾಳಿನ ರೀತಿ ನೀತಿಯನ್ನು ಬದಲಿಸುವಿರಿ. ಕೆಲವೊಂದು ಸಮಸ್ಯೆಗಳು ಮರುಕಳಿಸುತ್ತವೆ. ವಿವಾಹ ಮಾತುಕತೆ ನಡೆಯಲಿದೆ. ಆರೋಗ್ಯದ ಸಮಸ್ಯೆಯು ನಿವಾರಣೆಯಾಗಲಿದೆ. ಪಾಲುಗಾರಿಕೆಯ ವ್ಯಾಪಾರವಿದ್ದಲ್ಲಿ ಎಚ್ಚರಿಕೆಯಿಂದ ವ್ಯವಹರಿಸುವುದು ಒಳ್ಳೆಯದು.
ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ನೀಲಿ ಬಣ್ಣ
ಕಟಕ
ದೂರದ ಊರಿನಲ್ಲಿ ವಿಶಾಲವಾದ ಮನೆಯನ್ನು ಕೊಳ್ಳುವಿರಿ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಸಂಗಾತಿಯ ಜೊತೆಯಿಂದ ಮನಸ್ತಾಪವು ದೂರವಾಗಲಿದೆ. ನಿಮ್ಮದಲ್ಲದ ವಾದ ವಿವಾದಗಳಲ್ಲಿ ಪಾಲ್ಗೊಳ್ಳದಿರಿ. ನಿಮ್ಮಲ್ಲಿನ ಚಟುವಟಿಕೆಯ ಗುಣವು ಎಲ್ಲರಿಗೂ ಮಾದರಿಯಾಗುತ್ತದೆ.
ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ನೇರಳೆಬಣ್ಣ
ಸಿಂಹ
ಆತ್ಮವಿಶ್ವಾಸ ಹೆಚ್ಚಾಗಿದ್ದರೂ ಆಂತರಿಕವಾದ ಯೋಚನೆಗಳು ಇರಲಿವೆ. ಆಸಕ್ತಿಯಿಂದ ಕೆಲಸ ಕಾರ್ಯಗಳನ್ನು ಆರಂಭಿಸುವ ಕಾರಣ ಸೋಲಿನ ಭಯವಿರುವುದಿಲ್ಲ. ಚಾಡಿ ಮಾತನ್ನು ಕೇಳಿ ಸಂಗಾತಿಯೊಂದಿಗೆ ಜಗಳವಾಡಬಹುದು. ನೂತನ ದಂಪತಿಗಳಿಗೆ ಅನಿರೀಕ್ಷಿತ ಶುಭಫಲಗಳು ದೊರೆಯಲಿವೆ. ಉದ್ಯೋಗ ಬದಲಿಸುವ ಮನಸ್ಸಿದ್ದರೂ ಸಾಧ್ಯವಾಗುವುದಿಲ್ಲ.
ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ
ಕನ್ಯಾ
ಕುಟುಂಬ ಸದಸ್ಯರ ಜೊತೆಯಲ್ಲಿ ವಿಹಾರಧಾಮಕ್ಕೆ ಭೇಟಿ ನೀಡುವಿರಿ. ಬೇರೆಯವರ ಮನಸ್ಸನ್ನು ಅರ್ಥ ಮಾಡಿಕೊಳ್ಳುವ ಕಾರಣ ವಾದ ವಿವಾದಗಳು ದೂರಾಗುತ್ತವೆ. ಸಮಾಜದಲ್ಲಿ ಉನ್ನತ ಸ್ಥಾನಮಾನ ಮತ್ತು ಗೌರವ ದೊರೆಯುತ್ತದೆ. ನಿಮ್ಮ ಕಾರ್ಯ ಯೋಜನೆಗಳು ಸುಲಭವಾಗಿ ಕೈಗೂಡುತ್ತವೆ.
ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ : ಬಿಳಿ ಬಣ್ಣ
ತುಲಾ
ಕೌಟುಂಬಿಕ ಜೀವನದಲ್ಲಿ ಯಾವುದೇ ತೊಂದರೆ ಎದುರಾಗುವುದಿಲ್ಲ. ನಕಾರಾತ್ಮಕ ಭಾವನೆಗಳನ್ನು ತೊರೆದು ಜೀವನ ನಡೆಸುವಿರಿ. ಹಣದ ಬಗ್ಗೆ ಯೋಚಿಸದೆ ಮಿತಿಮೀರಿ ಖರ್ಚು ಮಾಡುವಿರಿ. ನಿರೀಕ್ಷಿತ ಕೆಲಸ ಕಾರ್ಯವೊಂದು ನಿಧಾನಗತಿಯಲ್ಲಿ ಸಾಗುತ್ತದೆ. ಸಂಗಾತಿಯೊಂದಿಗೆ ಉತ್ತಮ ಒಡನಾಟ ಇರುವುದಿಲ್ಲ.
ಪರಿಹಾರ: ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಬೂದುಬಣ್ಣ
ವೃಶ್ಚಿಕ
ದೊರೆಯುವ ಉತ್ತಮ ಉದ್ಯೋಗಾವಕಾಶವನ್ನು ಬಳಸಿಕೊಳ್ಳಲು ಪ್ರಯತ್ನಿಸಿ. ಕುಟುಂಬದ ಹಿರಿಯರ ಸಹಾಯ ಸಹಕಾರ ನಿಮಗೆ ದೊರೆಯುತ್ತದೆ. ಮನದಲ್ಲಿ ಸ್ವಾರ್ಥದ ಬುದ್ಧಿ ಇಲ್ಲದೆ ಎಲ್ಲರನ್ನೂ ಪ್ರೀತಿ ವಿಶ್ವಾಸದಿಂದ ಕಾಣುವಿರಿ. ಸಂಗಾತಿಯ ಒಲುಮೆ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ.
ಪರಿಹಾರ: ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕಂದು ಬಣ್ಣ
ಧನಸ್ಸು
ಅನಾರೋಗ್ಯದ ತೊಂದರೆ ಬಹುವಾಗಿ ಕಾಡಲಿದೆ. ಮನಸ್ಸಿನ ಭಾವನೆಗಳಿಗೆ ಬೆಲೆ ನೀಡುವಿರಿ. ದಾಂಪತ್ಯದಲ್ಲಿದ್ದ ಮನಸ್ತಾಪ ಮರೆಯಾಗಲಿದೆ. ಆತ್ಮೀಯರಿಗೆ ಉತ್ತಮ ಸಲಹೆ ನೀಡಿ ಸಮಸ್ಯೆಗಳನ್ನು ದೂರ ಮಾಡುವಿರಿ. ಸಂಬಂಧಿಕರ ವಿವಾಹದ ಸಂಪೂರ್ಣ ಜವಾಬ್ದಾರಿಯನ್ನು ಒಪ್ಪಿಕೊಳ್ಳುವಿರಿ.
ಪರಿಹಾರ: ಪುಟ್ಟ ಮಕ್ಕಳಿಗೆ ಬೆಣ್ಣೆ ನೀಡಿ ಇಂದಿನ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಕಪ್ಪು ಬಣ್ಣ
ಮಕರ
ಅನಾವಶ್ಯಕ ಚಿಂತೆ ಮಾಡುವುದಿಲ್ಲ. ವಿದೇಶಿ ಸಂಬಂಧಿತ ವ್ಯಾಪಾರ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ದಾಂಪತ್ಯ ಜೀವನದಲ್ಲಿ ಸಂತಸದ ಗಳಿಗೆಗಳು ಇರಲಿವೆ. ಸಹೋದ್ಯೋಗಿಗಳ ಸಹಾಯದಿಂದ ಎದುರಾಗಿದ್ದ ತೊಂದರೆಯೂ ದೂರವಾಗುತ್ತದೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನವಿರುತ್ತದೆ.
ಪರಿಹಾರ: ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವುದರಿಂದ ಶುಭವಿರುತ್ತದೆ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ
ಕುಂಭ
ಆರೋಗ್ಯದಲ್ಲಿ ಚೇತರಿಕೆ ಕಂಡು ಬರಲಿದೆ. ಆಪ್ತರಿಗಾಗಿ ಸಂತೋಷಕೂಟವನ್ನು ಏರ್ಪಡಿಸುವಿರಿ. ಸಂಗಾತಿಯ ಮಾತುಕತೆಗಳಿಂದ ಮನಸ್ಸಿಗೆ ಬೇಸರ ಉಂಟಾಗುತ್ತದೆ. ವಿದ್ಯಾರ್ಥಿಗಳು ತೃಪ್ತಿಕರ ಫಲಿತಾಂಶವನ್ನು ಪಡೆಯಲಿದ್ದಾರೆ. ಕುಟುಂಬದ ಸದಸ್ಯರೊಂದಿಗೆ ದಿನದ ಹೆಚ್ಚಿನ ಸಮಯವನ್ನು ಕಳೆಯುವಿರಿ.
ಪರಿಹಾರ: ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ನಸುಗೆಂಪು
ಮೀನ
ಆರೋಗ್ಯದಲ್ಲಿ ತೊಂದರೆ ಉಂಟಾಗುವ ಸಾಧ್ಯತೆಗಳಿವೆ. ಐಷಾರಾಮಿ ಜೀವನಕ್ಕೆ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಸಂಗಾತಿಯ ಸಹಾಯದಿಂದ ನಿಮ್ಮ ನಿರೀಕ್ಷೆಗಳು ಕೈಗೂಡಲಿವೆ. ಆಧಾರವಿಲ್ಲದ ಮಾತುಕತೆಯಿಂದ ದೂರವಿರುವುದು ಒಳ್ಳೆಯದು. ಬೇರೆಯವರಿಂದ ಹಣದ ಸಹಾಯವನ್ನು ಬಯಸುವುದಿಲ್ಲ.
ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ : ನೀಲಿಮಿಶ್ರಿತ ಬಿಳಿ ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).