ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ನಿಮ್ಮಲ್ಲಿರುವ ತಾಳ್ಮೆ ಗುಣದಿಂದ ವಿರೋಧಿಗಳನ್ನೂ ಗೆಲ್ಲುವಿರಿ; ದ್ವಾದಶ ರಾಶಿಗಳ ನಾಳೆಯ ದಿನ ಭವಿಷ್ಯ

Tomorrow Horoscope: ನಿಮ್ಮಲ್ಲಿರುವ ತಾಳ್ಮೆ ಗುಣದಿಂದ ವಿರೋಧಿಗಳನ್ನೂ ಗೆಲ್ಲುವಿರಿ; ದ್ವಾದಶ ರಾಶಿಗಳ ನಾಳೆಯ ದಿನ ಭವಿಷ್ಯ

19th June 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ)

ನಿಮ್ಮಲ್ಲಿರುವ ತಾಳ್ಮೆ ಗುಣದಿಂದ ವಿರೋಧಿಗಳನ್ನೂ ಗೆಲ್ಲುವಿರಿ; ದ್ವಾದಶ ರಾಶಿಗಳ ನಾಳೆಯ ದಿನ ಭವಿಷ್ಯ
ನಿಮ್ಮಲ್ಲಿರುವ ತಾಳ್ಮೆ ಗುಣದಿಂದ ವಿರೋಧಿಗಳನ್ನೂ ಗೆಲ್ಲುವಿರಿ; ದ್ವಾದಶ ರಾಶಿಗಳ ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (19th June 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಬುಧವಾರ

ತಿಥಿ: ತ್ರಯೋದಶಿ ತಿಥಿ ದಿನಪೂರ್ತಿ ಇರುತ್ತದೆ.

ನಕ್ಷತ್ರ: ವಿಶಾಖ ನಕ್ಷತ್ರವು 04.08 ರವರೆಗೂ ಇದ್ದು ನಂತರ ಅನೂರಾಧ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.47

ರಾಹುಕಾಲ: ಮಧ್ಯಾಹ್ನ 12.24 ರಿಂದ 2.01

ಮೇಷ

ಜೀವನದಲ್ಲಿ ಸುಖ ಸಂತೃಪ್ತಿ ತುಂಬಿರುತ್ತದೆ. ನಿತ್ಯ ಜೀವನದಲ್ಲಿ ಯಾವುದೇ ರೀತಿಯ ಬದಲಾವಣೆಗಳು ಕಾಣುವುದಿಲ್ಲ. ದೈಹಿಕ ಅನಾರೋಗ್ಯ, ಮಾನಸಿಕ ಒತ್ತಡವಿರುತ್ತದೆ. ನಿಮ್ಮಲ್ಲಿರುವ ಬುದ್ಧಿಶಕ್ತಿ ಮತ್ತು ಪ್ರತಿಭೆಗೆ ತಕ್ಕಂಥ ಉದ್ಯೋಗ ದೊರೆಯುತ್ತದೆ. ವಂಶಕ್ಕೆ ಸೇರಿದ ಭೂಮಿಯ ವಿಚಾರದಲ್ಲಿ ವಿವಾದವಿರುತ್ತದೆ. ವಿರೋಧಿಗಳನ್ನು ವಿರೋಧಿಸುವ ಬದಲು ಸಹನೆಯಿಂದ ಅವರ ಮನಸ್ಸನ್ನು ಗೆಲ್ಲುವಿರಿ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಸಿರು

ವೃಷಭ

ಸಮಾಜದ ಓರೆ ಕೋರೆಗಳನ್ನು ತಿದ್ದುವ ಹವ್ಯಾಸವಿರುತ್ತದೆ. ದಂಪತಿ ನಡುವೆ ಉತ್ತಮ ಸಹಕಾರವಿರುತ್ತದೆ. ಹೊಸದಾಗಿ ಆರಂಭಿಸುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ಕುಟುಂಬದ ವಿಚಾರವಾಗಿ ನೆರೆಹೊರೆಯವರೊಂದಿಗೆ ವಿವಾದವಿರುತ್ತದೆ. ಅಪನಂಬಿಕೆಯಿಂದ ನಿಜವಾದ ಸ್ನೇಹಿತರನ್ನು ದೂರ ಮಾಡಿಕೊಳ್ಳುವಿರಿ. ಕ್ರಮೇಣವಾಗಿ ಆರ್ಥಿಕ ಪ್ರಗತಿಯು ಕಂಡುಬರುತ್ತದೆ. ರಕ್ತ ಸಂಬಂಧಿಕರೊಂದಿಗೆ ಉತ್ತಮ ಅನುಬಂಧ ಇರುವುದಿಲ್ಲ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೀಲಿ

ಮಿಥುನ

ಶಾಂತಿ ನೆಮ್ಮದಿ ನೆಮ್ಮದಿಯ ಬಾಳ್ವೆ ನಿಮ್ಮದಾಗಿರುತ್ತದೆ. ಶುಭ ಕಾರ್ಯವೊಂದು ನಡೆಯಲಿದೆ. ಉದ್ಯೋಗದಲ್ಲಿ ನಿಮ್ಮ ಸ್ಥಾನಕ್ಕೆ ಚ್ಯುತಿ ಬರಬಹುದು ಶೀತದ ತೊಂದರೆ ಇರುತ್ತದೆ. ಸಮಾಜದಲ್ಲಿ ನಿಮಗಿದ್ದ ಗೌರವ ಹೆಚ್ಚುತ್ತದೆ. ನಿಮ್ಮ ವೈಯುಕ್ತಿಕ ಕೆಲಸ ಕಾರ್ಯಗಳಲ್ಲಿ ಹಿನ್ನೆಡೆ ಇರುತ್ತದೆ. ಕರಿದ ಆಹಾರ ಪದಾರ್ಥಗಳಿಂದ ದೂರವಿರುವುದು ಒಳ್ಳೆಯದು.

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೇರಳೆ

ಕಟಕ

ಸಂಬಂಧಿಕರಿಂದ ದೂರ ಇರುವಿರಿ. ಯಾರು ಕಷ್ಟ ಎಂದು ಬಂದರೂ ಕರಗಿ ಸಹಾಯ ಮಾಡುವಿರಿ. ಯಾವುದೇ ಕೆಲಸವಾದರೂ ಹೆಚ್ಚಿನ ಶ್ರದ್ಧೆಯಿಂದ ಪೂರ್ಣಗೊಳಿಸುವಿರಿ. ಸುಖ ಸಂತೋಷದಿಂದ ಬಾಳುವಿರಿ. ಸಮಾಜದ ಗಣ್ಯ ವ್ಯಕ್ತಿಗಳ ಭೇಟಿಯಾಗುತ್ತದೆ. ಸ್ವತಂತ್ರವಾಗಿ ಜೀವನ ನಡೆಸಲು ಇಷ್ಟಪಡುವಿರಿ. ಹಣದ ಕೊರತೆ ಕಂಡು ಬರುತ್ತದೆ. ಹೊಟ್ಟೆಗೆ ಸಂಬಂಧಿಸಿದ ದೋಷದಿಂದ ಬಳಲುವಿರಿ.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಸಿಂಹ

ಕಷ್ಟದ ಪರಿಸ್ಥಿತಿಯಲ್ಲೂ ಬುದ್ದಿವಂತಿಕೆಯಿಂದ ಪಾರಾಗುವಿರಿ. ಸಾಮಾಜಿಕ ರಂಗದಲ್ಲಿ ಗೌರವಯುತ ಸ್ಥಾನ ದೊರೆಯಲಿದೆ. ನಾನೇ ದೊಡ್ಡವನೆಂಬ ಭಾವನೆ ಇರುತ್ತದೆ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಉಷ್ಣದ ತೊಂದರೆ ಇರುತ್ತದೆ. ಎಲ್ಲರಿಗೂ ಮಾದರಿಯಾಗಿ ಜೀವನ ನಡೆಸುವಿರಿ. ಧಾರ್ಮಿಕ ಕಾರ್ಯಗಳಿಗಾಗಿ ಹಣ ಖರ್ಚಾಗುತ್ತದೆ.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಬಿಸಿ.

ಅದೃಷ್ಟದ ಸಂಖ್ಯೆ :9

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಬಿಳಿ ಬಣ್ಣ

ಕಟಕ

ಜೀವನದಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ. ಕೋಪ ಕಡಿಮೆ ಮಾಡಿಕೊಂಡು ಪ್ರೀತಿ ವಿಶ್ವಾಸದಿಂದ ಮಾತನಾಡಿರಿ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ದೊರೆಯುತ್ತದೆ. ಯಾವುದೇ ಕೆಲಸವನ್ನಾದರೂ ಬಹಳ ಶ್ರದ್ಧೆಯಿಂದ ಮಾಡುವಿರಿ. ಮಕ್ಕಳ ಜೀವನದಲ್ಲಿ ಉತ್ತಮ ಬದಲಾವಣೆಗಳು ಕಂಡು ಬರಲಿವೆ. ಸ್ವಂತ ಮನೆ ಯೋಜನೆ ರೂಪಿಸುವಿರಿ. ವಿಶ್ರಾಂತಿ ಇಲ್ಲದ ದುಡಿಮೆ ಇರುತ್ತದೆ.

ಪರಿಹಾರ : ಕೈ ಅಥವ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವುದರಿಂದ ಶುಭವಿರುತ್ತದೆ. .

ಅದೃಷ್ಟದ ಸಂಖ್ಯೆ :12

ಅದೃಷ್ಟದ ದಿಕ್ಕು ಈಶಾನ್ಯ

ಅದೃಷ್ಟದ ಬಣ್ಣ : ಬೂದು

ತುಲಾ

ಹಣದ ಕೊರತೆ ಕಂಡುಬರುವುದಿಲ್ಲ. ಸೋದರ ಜೊತೆಯಲ್ಲಿ ಅನಾವಶ್ಯಕ ವಾದ ವಿವಾದ ಉಂಟಾಗಲಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಪ್ರಗತಿ ಕಂಡುಬರುತ್ತದೆ. ಕಷ್ಟಗಳಿಗೆ ಹೆದರುವುದಿಲ್ಲ. ಒಮ್ಮೆ ತೆಗೆದುಕೊಂಡ ತೀರ್ಮಾನಗಳನ್ನು ಬದಲಿಸುವುದಿಲ್ಲ. ಇದರಿಂದ ತೊಂದರೆ ಆಗಬಹುದು ಎಚ್ಚರಿಕೆ ಇರಲಿ. ಸಮಾಜದಲ್ಲಿ ವಿಶೇಷ ಸ್ಥಾನಮಾನ ದೊರೆಯಲಿದೆ. ಮಕ್ಕಳ ವಿಚಾರದಲ್ಲಿ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು ಪೂರ್ವ

ಅದೃಷ್ಟದ ಬಣ್ಣ: ಕಂದು

ವೃಶ್ಚಿಕ

ಸ್ಟಾಕ್ ಮತ್ತು ಷೇರ್‌ಗಳಲ್ಲಿ ಭವಿಷ್ಯದ ಜೀವನಕ್ಕಾಗಿ ಹಣ ಹೂಡಿಕೆ ಮಾಡುವಿರಿ. ಹೊಸ ವಾಹನ ಕೊಳ್ಳುವಿರಿ. ಸುಖ ಸಂತೃಪ್ತಿಯ ಜೀವನ ನಡೆಸುವಿರಿ. ತಂದೆ ತಾಯಿಯ ಪ್ರೀತಿ ಮನಸ್ಸಿಗೆ ನೆಮ್ಮದಿ ಮತ್ತು ಸಂತೋಷ ನೀಡುತ್ತದೆ. ಮಕ್ಕಳ ಜೊತೆಗಿನ ಸಂಬಂಧವು ಸಾಮಾನ್ಯ ಮಟ್ಟದಲ್ಲಿರುತ್ತದೆ. ಇದಕ್ಕೆ ಕಾರಣ ನಿಮ್ಮ ಸಿಡುಕುತನ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಪ್ಪು

ಧನಸ್ಸು

ಕುಟುಂಬದಲ್ಲಿನ ಸದಸ್ಯರಲ್ಲಿಉತ್ತಮ ಪ್ರೀತಿ ವಿಶ್ವಾಸವಿರುತ್ತದೆ. ಸುಖ ಸಂತೋಷದ ಜೀವನ ನಡೆಸುವಿರಿ. ಕುಟುಂಬದ ಹಿರಿಯರನ್ನು ಗೌರವದಿಂದ ಕಾಣುವಿರಿ. ಮಕ್ಕಳ ಜೊತೆ ವಿಶೇಷ ಪ್ರೀತಿ ವಿಶ್ವಾಸ ಇರುತ್ತದೆ. ತಾಳ್ಮೆಯ ಕೊರತೆ ಇರುತ್ತದೆ. ಸರ್ಕಾರಕ್ಕೆ ಸಂಬಂಧಪಟ್ಟ ಕೆಲಸ ಕಾರ್ಯಗಳು ಸುಲಭವಾಗಿ ನೆರವೇರಲಿದೆ. ನಿಮ್ಮ ಮುಂದೆ ವಿರೋಧಿಗಳ ಆಟ ನಡೆಯುವುದಿಲ್ಲ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ಮಕರ

ಆತ್ಮೀಯರಿಗೆ ಕಷ್ಟದ ಕಾಲದಲ್ಲಿ ಸಹಾಯ ಮಾಡುವಿರಿ. ಹೊಸ ಕೆಲಸ ಕಾರ್ಯಗಳ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸಿ ನಂತರ ಮುಂದುವರೆಯುವಿರಿ. ಸುಖ ಶಾಂತಿಯಿಂದ ಜೀವನ ನಡೆಸುವಿರಿ. ಕುಟುಂಬದಲ್ಲಿ ಪ್ರತಿಯೊಬ್ಬರ ನಡುವೆ ಸಹಮತವಿರುತ್ತದೆ. ಉತ್ತಮ ಆದಾಯವಿರುತ್ತದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಸಂಬಂಧಿಕರಿಂದಲೇ ತೊಂದರೆ ಇರುತ್ತದೆ.

ಪರಿಹಾರ : ಸಾಧು ಸಂತರ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

ಕುಂಭ

ನಿಮ್ಮ ಕೋಪದ ಗುಣದಿಂದ ಕುಟುಂಬದಲ್ಲಿ ನೆಮ್ಮದಿ ಇರುವುದಿಲ್ಲ. ನೇರ ಮತ್ತು ನಿಷ್ಠುರದ ಮಾತುಗಳು ವಾದ ವಿವಾದಗಳಿಗೆ ಕಾರಣವಾಗಲಿದೆ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಕಂಡು ಬರುತ್ತದೆ. ವಿವಾಹ ಯೋಗವಿದೆ. ಉತ್ತಮ ಆದಾಯ ವಿರುತ್ತದೆ. ಆಕಸ್ಮಿಕವಾಗಿ ನಡೆಯುವ ಬೇರೆಯವರ ತಪ್ಪನ್ನು ಮನ್ನಿಸುವುದಿಲ್ಲ. ಇದರಿಂದಾಗಿ ಅನೇಕರಿಂದ ಟೀಕೆಗಳನ್ನು ಎದುರಿಸಬೇಕಾಗುತ್ತದೆ. ಅನಿರೀಕ್ಷಿತ ಹಣ ಗಳಿಕೆಯಿಂದ ಸಂತೋಷಗೊಳ್ಳುವಿರಿ.

ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ 11

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಮೀನ

ದಂಪತಿ ನಡುವೆ ಅನಗತ್ಯ ವಾದ ವಿವಾದ ಇರುತ್ತವೆ. ಆಡುವ ಮಾತು ಕಡಿಮೆಯಾದರೂ ಅದರಲ್ಲಿ ವಿಶೇಷ ಅರ್ಥ ಕೂಡಿರುತ್ತದೆ. ಸಮಾಜದಲ್ಲಿ ಉತ್ತಮ ಗೌರವ ಗಳಿಸುವಿರಿ. ಇತಿಮಿತಿ ಇಲ್ಲದೆ ಹಣ ಖರ್ಚು ಮಾಡುವಿರಿ. ಬುದ್ಧಿವಂತಿಕೆಯಿಂದ ಉದ್ಯೋಗದಲ್ಲಿ ಪ್ರಮುಖ ಸ್ಥಾನವನ್ನು ಪಡೆಯುವಿರಿ. ಕೌಟುಂಬಿಕ ಜೀವನದಲ್ಲಿ ಸುಖ ಸಂತೋಷ ನೆಲೆಸಿರುತ್ತದೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 2

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.