ಕನ್ನಡ ಸುದ್ದಿ  /  Astrology  /  Tomorrow Horoscope Astrological Prediction For 1st April 2024 Horoscope Kundali News In Kannada Sts

Tomorrow Horoscope: ವಂಶದ ಆಸ್ತಿ ವಿವಾದ ಕೋರ್ಟ್‌ ಮೆಟ್ಟಿಲೇರುವ ಸಾಧ್ಯತೆ, ಅನಾವಶ್ಯಕ ಓಡಾಟ; ನಾಳಿನ ದಿನಭವಿಷ್ಯ

1st April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ಏಪ್ರಿಲ್‌ 1ರ ದಿನಭವಿಷ್ಯ
ಏಪ್ರಿಲ್‌ 1ರ ದಿನಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (1st Aproil 2024 Horoscope)

ನಾಳಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ಸೋಮವಾರ

ತಿಥಿ: ಸಪ್ತಮಿ ಬೆಳಿಗ್ಗೆ 4.22ರವರೆಗೂ ಇರುತ್ತದೆ. ಅನಂತರ ಅಷ್ಟಮಿ ಆರಂಭವಾಗಲಿದೆ.

ನಕ್ಷತ್ರ: ಮೂಲ ನಕ್ಷತ್ರವು ಸಂಜೆ 6.51 ರವರೆಗೂ ಇರುತ್ತದೆ. ಅನಂತರ ಪೂರ್ವಾಷಾಡ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಿಗ್ಗೆ 6.17

ಸೂರ್ಯಾಸ್ತ: ಸಂಜೆ 6.31

ರಾಹುಕಾಲ: ಬೆಳಿಗ್ಗೆ 7.30 ರಿಂದ ಬೆಳಿಗ್ಗೆ 9.00

ಮೇಷ

ಕುಟುಂಬದಲ್ಲಿನ ಬದಲಾವಣೆಗಳಿಂದ ಸಂತಸ ಉಂಟಾಗಲಿವೆ. ಹಣಕಾಸಿನ ವಿಚಾರದಲ್ಲಿ ದುಡುಕದೆ ಯೋಚಿಸಿ ಮುಂದುವರೆಯುವಿರಿ. ನಂಬುಗೆಯ ವ್ಯಕ್ತಿಯೊಬ್ಬರಿಂದ ಕೆಲಸ ಕಾರ್ಯದಲ್ಲಿ ಅಡಚಣೆ ಉಂಟಾಗಬಹುದು. ಕುಟುಂಬಕ್ಕೆ ಸಂಬಂಧಿಸಿದ ಭೂವಿವಾದ ದೂರವಾಗಲಿದೆ. ಮಕ್ಕಳ ವಿಚಾರದಲ್ಲಿ ಶುಭವರ್ತಮಾನ ದೊರೆಯಲಿದೆ.

ಪರಿಹಾರ: ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ

ವೃಷಭ

ಪಾಲುದಾರಿಕೆಯ ವ್ಯವಹಾರದಲ್ಲಿ ಉತ್ತಮ ಲಾಭಾಂಶ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ವ್ಯಾಸಂಗದಲ್ಲಿ ಮುನ್ನಡೆ ಇರುತ್ತದೆ. ಹೊಸ ವ್ಯಾಪಾರವನ್ನು ಆರಂಭಿಸುವ ಯೋಜನೆ ಮುಂದೆ ಹೋಗಲಿದೆ. ಕುಟುಂಬದ ಹಿರಿಯರ ಸಲಹೆಯನ್ನು ಪಾಲಿಸಿದಲ್ಲಿ ಯಾವುದೇ ತೊಂದರೆ ಎದುರಾಗದು. ವಂಶದ ಆಸ್ತಿಯ ವಿವಾದ ಕೋರ್ಟಿನ ಮೆಟ್ಟಿಲೇರುತ್ತದೆ. ಒಳ್ಳೆಯ ಕೆಲಸಗಳಿಗೆ ಹಣವನ್ನು ಖರ್ಚು ಮಾಡುವಿರಿ.

ಪರಿಹಾರ: ತಲೆಗೆ ಹಾಲ್ಲಿಟ್ಟು ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಮಿಥುನ

ಕುಟುಂಬದ ಸದಸ್ಯರಿಂದ ಹಣಕಾಸಿನ ಸಹಾಯ ದೊರೆಯುತ್ತದೆ. ಹಣಕಾಸಿನ ವಿಷಯದಲ್ಲಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ವಿದ್ಯಾರ್ಥಿಗಳ ಜೀವನದಲ್ಲಿ ಸಕಾರಾತ್ಮಕ ಬೆಳವಣಿಗೆ ಕಂಡುಬರುತ್ತದೆ. ಆರೋಗ್ಯದಲ್ಲಿ ಏರಿಳಿತವಿರುತ್ತದೆ. ಅತಿಯಾದ ಯೋಚನೆ ಮಾಡದಿರಿ.

ಪರಿಹಾರ: ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಕಟಕ

ಆರೋಗ್ಯದ ವಿಚಾರದಲ್ಲಿ ಮಕ್ಕಳನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿ. ನೀರಿನ ಜೊತೆ ಚೆಲ್ಲಾಟವಾಡದಿರಿ. ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುವ ಅವಕಾಶ ದೊರೆಯುತ್ತದೆ. ವಂಶದ ಆಸ್ತಿಯಲ್ಲಿ ನ್ಯಾಯಯುತ ಪಾಲು ದೊರೆಯುತ್ತದೆ. ಸ್ವಂತ ವ್ಯಾಪಾರ ವ್ಯವಹಾರದ ಆರಂಭವನ್ನು ಮುಂದೂಡಬೇಕಾಗಿ ಬರುತ್ತದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಆಕಾಶ ನೀಲಿ ಬಣ್ಣ

ಸಿಂಹ

ಕುಟುಂಬದಲ್ಲಿನ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ. ವಿವಾಹ ಕಾರ್ಯವು ಆತ್ಮೀಯರ ಸಹಾಯದಿಂದ ನೆರವೇರುತ್ತದೆ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಪ್ರಶಂಸೆ ದೊರೆಯುತ್ತದೆ. ಅವಕಾಶ ಇದ್ದರೂ ಅಧಿಕಾರದ ಆಸೆ ಬಾರದು. ಸಮಾಜದಲ್ಲಿ ವಿಶೇಷವಾದ ಸ್ಥಾನಮಾನ ದೊರೆಯುತ್ತದೆ. ಸ್ವಂತ ಬಳಕೆಗಾಗಿ ಐಷಾರಾಮಿ ವಾಹನ ಕೊಳ್ಳುವಿರಿ.

ಪರಿಹಾರ: ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ : ರಕ್ತದ ಬಣ್ಣ

ಕನ್ಯಾ

ಕಠಿಣವಾದ ಕೆಲಸ ಕಾರ್ಯವಾದರೂ ಬುದ್ದಿವಂತಿಕೆಯಿಂದ ಜಯ ಸಾಧಿಸುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಿರುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳು ಮಧ್ಯಮಗತಿಯಲ್ಲಿ ಸಾಗುತ್ತವೆ. ಮಾಡದ ತಪ್ಪನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಉಸಿರಿಗೆ ಸಂಬಧಿಸಿದ ತೊಂದರೆ ಇದ್ದಲ್ಲಿ ಎಚ್ಚರಿಕೆ ಇರಲಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಎಳನೀರು ಮತ್ತು ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 10

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಎಲೆ ಹಸಿರು ಬಣ್ಣ

ತುಲಾ

ಸುಲಭವಾಗಿ ಜೀವನದಲ್ಲಿ ನಿರೀಕ್ಷಿಸಿದ ಮಟ್ಟವನ್ನು ತಲುಪುವಿರಿ. ಉದ್ಯೋಗದಲ್ಲಿನ ಧನಾತ್ಮಕ ಫಲಿತಾಂಶಗಳು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಹೊಸದಾಗಿ ಆರಂಭಿಸಿದ ಪಾಲುದಾರಿಕೆಯ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ. ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ.

ಪರಿಹಾರ: ತಾಯಿಯವರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ವೃಶ್ಚಿಕ

ಸ್ವಂತ ಪರಿಶ್ರಮದಿಂದ ಯಶಸ್ಸು ಗಳಿಸುವಿರಿ. ಉದ್ಯೋಗದಲ್ಲಿ ಎದುರಾದ ತೊಂದರೆ ಮಾತುಕತೆಯ ಮೂಲಕ ಪರಿಹಾರವಾಗಲಿದೆ. ಉತ್ತಮ ಯೋಜನಾ ತಂತ್ರಗಳು ಆಪತ್ತನ್ನು ದೂರ ಮಾಡಲಿದೆ. ಸಮಾಜದ ಮುಖ್ಯಸ್ಥರಾಗಿ ಹೊರಹೊಮ್ಮವಿರಿ. ಸಿಡುಕುತನ ಕಡಿಮೆ ಮಾಡಿಕೊಂಡಷ್ಟು ಒಳ್ಳೆಯದು.

ಪರಿಹಾರ: ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಧನಸ್ಸು

ಹಠದಿಂದ ಸ್ವಂತ ಉದ್ದಿಮೆಯನ್ನು ಆರಂಭಿಸುವ ನಿರ್ಧಾರಕ್ಕೆ ಬರಲಿರುವಿರಿ. ದಿಟ್ಟ ನಿರ್ಧಾರದಿಂದಾಗಿ ಉದ್ಯೋಗದಲ್ಲಿ ಹಿನ್ನೆಡೆ ಇರುವುದಿಲ್ಲ. ವಿದ್ಯಾರ್ಥಿಗಳು ಹಣದ ವಿಚಾರದಲ್ಲಿ ಬೇರೆಯವರನ್ನು ಆಶ್ರಯಿಸುತ್ತಾರೆ. ಉದರ ಸಂಬಂಧಿತ ತೊಂದರೆ ಕಾಡುತ್ತದೆ. ವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ.

ಪರಿಹಾರ: ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಮಕರ

ಉದ್ಯೋಗದಲ್ಲಿ ಮಾಡುವ ತಪ್ಪನ್ನು ಮನ್ನಿಸಿ ಹಿರಿಯ ಅಧಿಕಾರಿಗಳು ಮಾರ್ಗದರ್ಶನ ನೀಡಲಿದ್ದಾರೆ. ಅತಿಯಾದ ಕೆಲಸ ಕಾರ್ಯಗಳಿಂದ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಚುರುಕುತನದಿಂದ ವರ್ತಿಸಿ. ವಾದ ವಿವಾದಗಳಿಂದ ದೂರವಿರಿ. ದಿನಬಳಕೆಯ ಲೋಹದಿಂದ ತೊಂದರೆ ಉಂಟಾಗಬಹುದು.

ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕುಂಭ

ಮನಸ್ಸಿಗೆ ಮುದ ನೀಡುವಂತೆ ಕಾರ್ಯವೊಂದನ್ನು ಪೂರ್ಣಗೊಳಿಸುವಿರಿ. ನಿಮ್ಮಲ್ಲಿ ಹುದುಗಿದ ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆ ಲಭ್ಯವಾಗುತ್ತದೆ. ಪ್ರಯತ್ನಕ್ಕೆ ತಕ್ಕಂತೆ ಆದಾಯ ಇರುತ್ತದೆ. ವಿಶೇಷ ಅಧ್ಯಯನಕ್ಕೆ ವಿದೇಶಕ್ಕೆ ಪ್ರಯಾಣ ಬೆಳೆಸುವಿರಿ. ಸಾಲದ ವ್ಯವಹಾರ ಮಾಡದಿರಿ. ಆರೋಗ್ಯದ ಬಗ್ಗೆ ಗಮನ ಇರಲಿ.

ಪರಿಹಾರ: ಕೆಂಪು ಬೆಲ್ಲದಿಂದ ಮಾಡಿದ ದ್ರವಾಹಾರವನ್ನು ಸೇವಿಸಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಮೀನ

ಸ್ವಂತ ಉದ್ಯಮ ಆರಂಭಿಸುವ ಯೋಚನೆ ಇರುತ್ತದೆ. ನಿರ್ಧಾರಗಳಿಗೆ ಬದ್ಧರಾಗಿ ನೂತನ ಸಾಧನೆ ಮಾಡುವಿರಿ. ಹಣದ ಕೊರತೆಯಿಂದ ಪಾರಾಗಲು ಭೂ ವ್ಯವಹಾರವನ್ನು ಆರಂಭಿಸುವಿರಿ. ಆರೋಗ್ಯದ ಬಗ್ಗೆ ಗಮನ ಇರಲಿ. ಏಕಾಂಗಿತನದ ಕಾರಣ ಕುಟುಂಬದ ಕೆಲಸವೂಂದು ಅಪೂರ್ಣಗೊಳ್ಳಲಿದೆ.

ಪರಿಹಾರ: ಸಹೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ : ಹಸಿರು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).