ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಈ ರಾಶಿಯವರಿಗೆ ಅರೆ ತಲೆಶೂಲೆ ಕಾಡಲಿದೆ, ಆರೋಗ್ಯದ ಕಡೆಗೆ ಗಮನ ಅಗತ್ಯ; ನಾಳೆಯ ದಿನ ಭವಿಷ್ಯ

Tomorrow Horoscope: ಈ ರಾಶಿಯವರಿಗೆ ಅರೆ ತಲೆಶೂಲೆ ಕಾಡಲಿದೆ, ಆರೋಗ್ಯದ ಕಡೆಗೆ ಗಮನ ಅಗತ್ಯ; ನಾಳೆಯ ದಿನ ಭವಿಷ್ಯ

20th April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (20th April 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಶನಿವಾರ

ತಿಥಿ : ದ್ವಾದಶಿ ರಾತ್ರಿ 10.26 ರವರೆಗೂ ಇದ್ದು ನಂತರ ತ್ರಯೋದಶಿ ಆರಂಭವಾಗುತ್ತದೆ.

ನಕ್ಷತ್ರ : ಪುಬ್ಬ ನಕ್ಷತ್ರವು 02.10 ರವರೆಗೂ ಇರುತ್ತದೆ ನಂತರ ಉತ್ತರ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.04

ಸೂರ್ಯಾಸ್ತ: ಸಂಜೆ 06.32

ರಾಹುಕಾಲ : ಬೆಳಗ್ಗೆ 09.15 ರಿಂದ 10.49

ರಾಶಿಫಲ

ಮೇಷ

ವಿಶ್ರಾಂತಿ ದೊರೆಯದೆ ಉದ್ಯೋಗ ಬದಲಿಸುವ ಯೋಚನೆ ಮಾಡುವಿರಿ. ಮಕ್ಕಳ ಸಹಾಯ ದೊರೆತು ಮನಸ್ಸಿನ ಆತಂಕ ದೂರವಾಗುತ್ತದೆ. ಸಾಕು ಪ್ರಾಣಿಗಳಿಂದ ತೊಂದರೆ ಉಂಟಾಗಬಹುದು. ಕೃಷಿ ಭೂಮಿಯನ್ನು ಕೊಳ್ಳುವಿರಿ. ಚಿಕ್ಕ ಪುಟ್ಟ ವಿಚಾರಗಳಲ್ಲಿಯೂ ಹೆಚ್ಚಿನ ಆಸಕ್ತಿ ತೋರುವಿರಿ. ಬಳಸಿದ ವಾಹನಗಳ ವಿಲೇವಾರಿ ಮಾಡುವಿರಿ. ಹಣದ ಕೊರತೆಯಿಂದ ನೆಮ್ಮದಿ ಕಡಿಮೆ ಆಗುತ್ತದೆ. ವಿದ್ಯಾರ್ಥಿಗಳು ಪ್ರಯಾಸದಿಂದ ಗುರಿ ತಲುಪಲಿದ್ದಾರೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೇಸರಿ

ವೃಷಭ

ಗಾಳಿಮಾತಿಗೆ ಓಗೊಟ್ಟು ಉದ್ಯೋಗ ಬದಲಾಯಿಸುವಿರಿ. ಕುಟುಂಬದ ಸದಸ್ಯರ ಸಹಾಯದಿಂದ ಹಣದ ಕೊರತೆಯಿಂದ ಪಾರಾಗುವಿರಿ. ಮಕ್ಕಳಿಗೆ ವಿದೇಶಿ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ. ವಾದ ವಿವಾದಗಳನ್ನು ಇಷ್ಟಪಡದೆ ಶಾಂತಿಯಿಂದ ಗೆಲುವು ಸಾಧಿಸುವಿರಿ. ಉಪಯೋಗವಿಲ್ಲದ ವಿಚಾರಗಳಿಗೆ ಹಣ ಖರ್ಚು ಮಾಡುವಿರಿ. ಮನೆಯ ಸುತ್ತಮುತ್ತಲ ಪರಿಸರವನ್ನು ಶ್ರಭ್ರವಾಗಿಟುಕೊಳ್ಳುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ 12

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಮಣ್ಣಿನ ಬಣ್ಣ

ಮಿಥುನ

ಅಧಿಕಾರಿಗಳ ನಕಾರಾತ್ಮಕ ಧೋರಣೆಯಿಂದ ಉದ್ಯೋಗದಲ್ಲಿ ಬೇಸರ ಉಂಟಾಗಲಿದೆ. ವ್ಯಾಪಾರ ವ್ಯವಹಾರದಲ್ಲಿನ ಆದಾಯವು ಹೆಚ್ಚುತ್ತದೆ. ವಿದ್ಯಾರ್ಥಿಗಳು ಹೊಸ ನಿರೀಕ್ಷೆಯಲ್ಲಿ ಸಾಗುತ್ತಾರೆ. ಮಕ್ಕಳಿಗೆ ವಿವಾಹ ಯೋಗವಿದೆ. ಕುಟುಂಬದಿಂದ ದೂರವಿದ್ದ ಸೋದರರೊಬ್ಬರು ಮರಳಿ ಬರುತ್ತಾರೆ. ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲ್ಲಿದ್ದಾರೆ. ಕರ ಕುಶಲಕಲತೆ ಬಲ್ಲವರಿಗೆ ಸಮಾಜದಲ್ಲಿ ವಿಶೇಷ ಗೌರವ ದೊರೆಯಲಿದೆ.

ಪರಿಹಾರ : ಗೋಶಾಲೆಗೆ ಧನ ಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕೆಂಪು

ಕಟಕ

ಆತುರದಿಂದ ಉದ್ಯೋಗ ಬದಲಿಸುವಿರಿ. ಕುಟುಂಬದ ಹೆಚ್ಚಿನ ಜವಾಬ್ದಾರಿ ನಿಮ್ಮದಾಗುತ್ತದೆ. ಚರ್ಚಿಸದೆ ವ್ಯಾಪಾರ ವ್ಯವಹಾರದಲ್ಲಿ ತೀರ್ಮಾನವನ್ನು ತೆಗೆದುಕೊಳ್ಳದಿರಿ. ವಿದ್ಯಾರ್ಥಿಗಳು ಚುರುಕಿನಿಂದ ಮುಂದುವರೆಯುತ್ತಾರೆ. ಬೇಸಾಯದಲ್ಲಿ ಲಾಭವಿದೆ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಕಂಡುಬರುತ್ತದೆ. ಸಣ್ಣ ಪ್ರಮಾಣದ ವ್ಯಾಪಾರದಲ್ಲಿ ಲಾಭವಿರುತ್ತದೆ. ತಾಯಿಯವರಿಗೆ ತವರಿನಿಂದ ಹಣ ಅಥವ ಆಸ್ತಿ ದೊರೆಯಲಿದೆ. ಹೊಸ ವ್ಯಾಪಾರ ಆರಂಭಿಸುವ ಪ್ರಯತ್ನ ಕೈಬಿಡುವಿರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಿತ್ತಳೆ

ಸಿಂಹ

ಕುಟುಂಬದಲ್ಲಿ ಶಾಂತಿಯ ವಾತಾವರಣ ನೆಲೆಸಿರುತ್ತದೆ. ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಪ್ರಯತ್ನಿಸಿ. ಆತ್ಮೀಯರ ಸಹಾಯದಿಂದ ವಿದೇಶಿ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಸ್ವಂತ ಮನೆ ಅಥವಾ ಭೂಮಿಯನ್ನು ಕೊಳ್ಳುವ ಯೋಚನೆ ಮಾಡುವಿರಿ. ಹಣಕಾಸಿನ ತೊಂದರೆ ಇರುವುದಿಲ್ಲ. ಕುಟುಂಬದ ಸದಸ್ಯರ ಜೊತೆ ಧಾರ್ಮಿಕ ಸ್ಥಳಕ್ಕೆ ತೆರಳುವಿರಿ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ಸದಾ ಕ್ರೀಯಾಶೀಲರಾಗಿರುತ್ತಾರೆ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 1

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ : ಹಳದಿ

ಕನ್ಯಾ

ಮಕ್ಕಳ ಮಾತಿಗೆ ಮೊದಲ ಪ್ರಾಶಸ್ತ್ಯ ನೀಡುವಿರಿ. ಕುಟುಂಬದಲ್ಲಿ ಹಣಕಾಸಿನ ವಿಚಾರದಲ್ಲಿ ವಿವಾದ ಉಂಟಾಗುತ್ತದೆ. ತಂದೆಯವರ ಸಲಹೆಯಿಂದ ಸಮಸ್ಯೆಯೊಂದು ನಿವಾರಣೆ ಆಗುವುದು. ಕಲಾವಿದರಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಉದ್ಯೋಗದಲ್ಲಿ ದುಡುಕಿನ ಮಾತುಕತೆ ಬೇಡ. ವಿದ್ಯಾರ್ಥಿಗಳಿಗೆ ಶುಭವಿದೆ. ಗಣ್ಯವ್ಯಕ್ತಿಯೊಬ್ಬರ ಸಹಾಯ ದೊರೆಯುತ್ತದೆ. ತಂದೆಯವರಿಗೆ ಅನಾವಶ್ಯಕ ಖರ್ಚು ವೆಚ್ಚಗಳಿರಲಿವೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಹಸಿರು

ತುಲಾ

ಸಾರಿಗೆ ಸಂಸ್ಥೆಯ ಜವಾಬ್ದಾರಿ ದೊರೆಯುತ್ತದೆ. ಕಷ್ಟಪಟ್ಟು ಮಾಡುವ ಕೆಲಸದಲ್ಲಿ ಆಸಕ್ತಿ ಇರದು. ಯಾರ ತೀರ್ಮಾನವನ್ನೂ ನಂಬುವುದಿಲ್ಲ. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಚಾಡಿ ಮಾತನ್ನು ನಂಬದಿರಿ. ಕುಟುಂಬದಲ್ಲಿ ಸಮರ್ಪಣಾ ಮನೋಭವನೆ ಇರುತ್ತದೆ. ಭೂ ವಿವಾದದಲ್ಲಿ ಮಾತುಕತೆಯ ಮೂಲಕ ಹಿಡಿತ ಸಾಧಿಸುವಿರಿ. ಸೋದರಿಯ ವಿವಾಹದ ಜವಾಬ್ದಾರಿ ನಿಮ್ಮದಾಗಲಿದೆ.

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ ಬಣ್ಣ

ವೃಶ್ಚಿಕ

ಕಲುಷಿತ ಆಹಾರ ಸೇವನೆಯಿಂದ ಅನಾರೋಗ್ಯ ಬಹಳ ಕಾಡುತ್ತದೆ. ವಿದ್ಯಾರ್ಥಿಗಳು ತಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ಪಡೆಯುತ್ತಾರೆ. ತಾಯಿಯವರಿಗೆ ಅನಾರೋಗ್ಯ ಇರುತ್ತದೆ. ನೀರಿನೊಂದಿಗೆ ಚೆಲ್ಲಾಟವಾಡದಿರಿ. ಮಕ್ಕಳ ಜೀವನದಲ್ಲಿ ಪ್ರಮುಖ ಘಟನೆಯೊಂದು ನಡೆಯಲಿದೆ. ಕಲಾವಿದರಿಗೆ ವಿನೂತನ ಅವಕಾಶ ದೊರೆಯಲಿದೆ. ಸಾಲದ ವ್ಯವಹಾರ ಮಾಡದಿರಿ. ಸೋದರನ ಸಹಾಯ ಸಹಕಾರ ದೊರೆಯುತ್ತದೆ.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನೇರಳೆ

ಧನಸ್ಸು

ತಂದೆಯವರ ಪ್ರಯತ್ನದಿಂದ ಕುಟುಂಬದಲ್ಲಿ ಒಮ್ಮತ ಮೂಡುತ್ತದೆ. ಮಕ್ಕಳಿಗೆ ಪರಸ್ಥಳದಲ್ಲಿ ಉದ್ಯೋಗ ದೊರಕುತ್ತದೆ. ಹಣದ ಕೊರತೆ ಕಡಿಮೆ ಆಗಲಿದೆ. ವಿದ್ಯಾರ್ಥಿಗಳು ಸುಲಭವಾಗಿ ಯಶಸ್ಸನ್ನು ಕಾಣುತ್ತಾರೆ. ತಾಯಿಗೆ ಅನಾರೋಗ್ಯ ಇರುತ್ತದೆ. ನೀರಿರುವ ಸ್ಥಳದಲ್ಲಿ ತೊಂದರೆ ಇರಲಿದೆ. ವೈವಾಹಿಕ ಜೀವನದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ಸಮಾಜದಲ್ಲಿ ಪ್ರಮುಖ ಸ್ಥಾನ ದೊರೆಯಲಿದೆ.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಗುಲಾಬಿ

ಮಕರ

ಕುಟುಂಬದ ನಿರ್ವಹಣೆಗಾಗಿ ಉಪವೃತ್ತಿಯೊಂದನ್ನು ಆರಂಭಿಸುವಿರಿ. ಬೆಲೆ ಬಾಳುವ ವಸ್ತುಗಳಿಗೆ ಹಣ ಖರ್ಚಾಗುತ್ತದೆ. ಮಾತಿನಿಂದ ಕೆಲಸ ಸಾಧಿಸಬಲ್ಲಿರಿ. ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನಕ್ಕೆ ವಿದೇಶದಲ್ಲಿ ಅವಕಾಶ ಪಡೆಯುತ್ತಾರೆ. ಗರ್ಭಿಣಿಯರು ಎಚ್ಚರಿಕೆಯಿಂದ ಇರಬೇಕು. ಕುಟುಂಬದಲ್ಲಿ ಅನಾವಶ್ಯಕ ವಾದ ವಿವಾದಗಳು ಇರುತ್ತವೆ. ಬಡವರ ಮದುವೆಗೆ ಸಹಾಯ ಮಾಡುವಿರಿ.

ಪರಿಹಾರ: ಕೈ ಅಥವಾ ಕಾಲಿನಲ್ಲಿ ಕಪ್ಪು ದಾರ ಕಟ್ಟುವುದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬಿಳಿ

ಕುಂಭ

ಕುಟುಂಬದಲ್ಲಿ ವಿನಾಕಾರಣ ವಿರಸದ ಸನ್ನಿವೇಶವಿರುತ್ತದೆ. ಉದ್ಯೋಗದಲ್ಲಿನ ಆಂತರಿಕ ಸಮಸ್ಯೆಯನ್ನು ಪರಿಹರಿಸುವಿರಿ. ವಿದ್ಯಾರ್ಥಿಗಳು ಜವಾಬ್ದಾರಿಯನ್ನು ಅರಿತು ನಡೆದುಕೊಳ್ಳಲಿದ್ದಾರೆ. ಸ್ವಂತ ಬಳಕೆಗಾಗಿ ಹೊಸ ವಾಹನ ಕೊಳ್ಳುವಿರಿ. ಕುಟುಂಬದಲ್ಲಿ ಮಂಗಳಕಾರ್ಯವೊಂದು ನಡೆಯಲಿದೆ. ಸಮಾಜದ ವಿವಾದವನ್ನು ಬಗೆಹರಿಸುವಿರಿ. ಕೈಹಿಡಿದ ಕೆಲಸ ಕಾರ್ಯಗಳು ಯಶಸ್ವಿಯಾಗುವವರೆಗೂ ರಹಸ್ಯ ಕಾಪಾಡುವಿರಿ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಬೂದು ಬಣ್ಣ

ಮೀನ

ಯಾರನ್ನೂ ಸಹಾಯಕ್ಕಾಗಿ ಬೇಡುವುದಿಲ್ಲ. ಬೇರೆಯವರ ಹಣಕಾಸಿನ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಿದಲ್ಲಿ ತೊಂದರೆ ಅನುಭವಿಸುವಿರಿ. ವಿದ್ಯಾರ್ಥಿಗಳಿಗೆ ಖ್ಯಾತ ಸಂಸ್ಥೆಯೊಂದರಲ್ಲಿ ಉದ್ಯೋಗ ಲಭಿಸುತ್ತದೆ. ವಿದ್ಯಾರ್ಥಿಗಳು ಅಪರೂಪದ ಸಾಧನೆಗೆ ಸಾಕ್ಷಿಯಾಗುತ್ತಾರೆ. ಸಾಮಾಜಿಕ ರಂಗದಲ್ಲಿ ಗಣ್ಯಸ್ಥಾನ ಲಭಿಸುತ್ತದೆ. ಪಶು ಸಂಗೋಪನೆಯಲ್ಲಿ ಲಾಭವಿರುತ್ತದೆ. ಅರೆ ತಲೆಶೂಲೆ ನಿಮ್ಮನ್ನು ಕಾಡಲಿದೆ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಕಂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).