Tomorrow Horoscope: ಕೆಲಸದಲ್ಲಿ ಇದ್ದ ಗೊಂದಲಕ್ಕೆ ತೆರೆ, ಸಂಗಾತಿಗೆ ವಿದೇಶಿ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ; ನಾಳೆಯ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಕೆಲಸದಲ್ಲಿ ಇದ್ದ ಗೊಂದಲಕ್ಕೆ ತೆರೆ, ಸಂಗಾತಿಗೆ ವಿದೇಶಿ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ; ನಾಳೆಯ ದಿನ ಭವಿಷ್ಯ

Tomorrow Horoscope: ಕೆಲಸದಲ್ಲಿ ಇದ್ದ ಗೊಂದಲಕ್ಕೆ ತೆರೆ, ಸಂಗಾತಿಗೆ ವಿದೇಶಿ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ; ನಾಳೆಯ ದಿನ ಭವಿಷ್ಯ

20th May 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (20th May 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಸೋಮವಾರ

ತಿಥಿ: ದ್ವಾದಶಿ 02.44 ವರೆಗೂ ಇರುತ್ತದೆ ನಂತರ ತ್ರಯೋದಶಿ ಆರಂಭವಾಗುತ್ತದೆ.

ನಕ್ಷತ್ರ: ಚಿತ್ತೆ ನಕ್ಷತ್ರವು ರಾತ್ರಿ 04.53 ರವರೆಗೂ ಇದ್ದು ನಂತರ ಸ್ವಾತಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.51

ಸೂರ್ಯಾಸ್ತ: ಸಂಜೆ 06.38

ರಾಹುಕಾಲ: ಬೆಳಗ್ಗೆ 07.32 ರಿಂದ 09.08

ರಾಶಿಫಲ

ಮೇಷ

 ಉದ್ಯೋಗದಲ್ಲಿನ ಕಾರ್ಯದ ಒತ್ತಡ ಮನಸ್ಸಿನ ಶಾಂತಿಯನ್ನು ದೂರ ಮಾಡುತ್ತದೆ. ಮನೆಯಲ್ಲಿ ಸಾಕಿರುವ ಪ್ರಾಣಿಗಳಿಂದ ತೊಂದರೆ ಉಂಟಾಗಬಹುದು. ಹುಟ್ಟೂರಿನಲ್ಲಿ ಜಮೀನನ್ನು ಕೊಳ್ಳುವಿರಿ. ಸಣ್ಣ ಪುಟ್ಟ ವಿಚಾರಗಳಲ್ಲಿಯೂ ಹೆಚ್ಚಿನ ಆಸಕ್ತಿ ತೋರುವಿರಿ. ದಿನನಿತ್ಯ ಬಳಸುತ್ತಿರುವ ವಾಹನವನ್ನು ಮಾರಾಟ ಮಾಡುವಿರಿ. ಹೊಸ ವಾಹನವೊಂದು ಉಡುಗೊರೆಯಾಗಿ ದೊರೆಯಲಿದೆ.  

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೇರಳೆ

ವೃಷಭ

 ಅನಗತ್ಯ ಬೆಳವಣಿಗೆಗೆ ಬೇಸರಗೊಂಡು ಉದ್ಯೋಗವನ್ನು ಬದಲಾಯಿಸುವಿರಿ. ಮಕ್ಕಳ ವಿಚಾರದಲ್ಲಿ ದಿಟ್ಟ ತೀರ್ಮಾನ ತೆಗೆದುಕೊಳ್ಳುವಿರಿ. ಕುಟುಂಬದ ಹಿರಿಯರ ಸಹಾಯದಿಂದ ಹಣದ ಕೊರತೆಯಿಂದ ಪಾರಾಗುವಿರಿ. ಸಂಗಾತಿಗೆ ವಿದೇಶಿ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ವಂಶದ ಆಸ್ತಿ ಹಂಚಿಕೆಯಲ್ಲಿ ವಿವಾದ ಉಂಟಾಗುವ ಸಾದ್ಯತೆಗಳಿವೆ. ವಾದ ವಿವಾದಗಳನ್ನು ಮರೆತು ಬಾಳುವಿರಿ. 

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಗುಲಾಬಿ

ಮಿಥುನ

 ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುತ್ತದೆ. ಅಧಿಕಾರಿಗಳ ಕೆಟ್ಟ ಧೋರಣೆ ದೂರವಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಮಧ್ಯಮಗತಿಯ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಸಾಧನೆಯ ದಾರಿಯಲ್ಲಿ ಸಾಗುತ್ತಾರೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಆದಾಯ ಇರಲಿದೆ.  

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬಿಳಿ

ಕಟಕ

 ಕುಟುಂಬದ ಕೆಲಸ ಕಾರ್ಯದ ನಿರ್ಧಾರವನ್ನು ಚರ್ಚಿಸದೆ ತೆಗೆದುಕೊಳ್ಳುವುದಿಲ್ಲ. ವಿದ್ಯಾರ್ಥಿಗಳು ಕಲಿಕೆಯ ಮಟ್ಟವನ್ನು ಹೆಚ್ಚಿಸಿ ಕೊಳ್ಳುವಿರಿ. ಬೇಸಾಯದಲ್ಲಿ ಲಾಭವಿದೆ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಸಣ್ಣ ಪ್ರಮಾಣದ ಉದ್ದಿಮೆಯಲ್ಲಿ ಲಾಭ ಗಳಿಸುವಿರಿ. ನಿಮ್ಮ ತಾಯಿಯವರು ನಿಮ್ಮನ್ನು ಹಣದ ಕಷ್ಟದಿಂದ ಪಾರುಮಾಡುತ್ತಾರೆ.  

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬೂದು

ಸಿಂಹ

ಆತ್ಮವಿಶ್ವಾಸದಿಂದ ಯಶಸ್ಸಿನ ಜೀವನ ನಡೆಸುವಿರಿ. ಆತ್ಮೀಯರ ಸಹಾಯದಿಂದ ವಿದೇಶಿ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಕೃಷಿ ಕೆಲಸಕ್ಕಾಗಿ ಭೂಮಿಯನ್ನು ಕೊಳ್ಳುವಿರಿ. ಹಟದ ಕಾರಣ ಹಣಕಾಸಿನ ವಿಚಾರದಲ್ಲಿ ತೊಂದರೆಗೆ ಸಿಲುಕುವಿರಿ. ಕುಟುಂಬದ ಸದಸ್ಯರ ಜೊತೆ ಮನರಂಜನಾ ಕೂಟಕ್ಕೆ ತೆರಳುವಿರಿ. ವಿದ್ಯಾರ್ಥಿಗಳಿಗೆ ಉನ್ನತ ಅಧ್ಯಯನ ಮಾಡುವ ಅವಕಾಶ ದೊರೆಯುತ್ತದೆ. 

ಪರಿಹಾರ: ದೇವರಿಗೆ ತುಪ್ಪದ ದೀಪ ಹಚ್ಚಿ ದಿನದ ಕೆಲಸ ಆರಂಭಿಸಿ

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಕಂದು

ಕನ್ಯಾ

ತಂದೆಯವರ ಸಲಹೆಯಿಂದ ಒಪ್ಪಿದಲ್ಲಿ ಸಮಸ್ಯೆಯೊಂದು ನಿವಾರಣೆ ಆಗುವುದು. ಕಲಾವಿದರಿಗೆ ಶುಭಫಲಗಳು ದೊರೆಯಲಿದೆ. ಉದ್ಯೋಗದಲ್ಲಿ ದುಡುಕಿನ ಮಾತನಾಡದಿರಿ. ವಿದ್ಯಾರ್ಥಿಗಳಿಗೆ ಶುಭವಿದೆ. ಗಣ್ಯವ್ಯಕ್ತಿಯೊಬ್ಬರ ಸಹಾಯ ದೊರೆಯುತ್ತದೆ. ತಂದೆಯವರಿಗೆ ಅನಾವಶ್ಯಕ ಖರ್ಚು ವೆಚ್ಚಗಳು ಇರಲಿವೆ. ಕುಟುಂಬದ ಜವಾಬ್ದಾರಿ ನಿಮ್ಮದಾಗಲಿದೆ.  

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಕಪ್ಪು ಬಣ್ಣ

ತುಲಾ

ಕಷ್ಟಕರ ಕೆಲಸದಲ್ಲಿ ಆಸಕ್ತಿ ಇರದು. ಮೈದಣಿವಿಲ್ಲದೆ ಕೆಲಸ ಕಾರ್ಯಗಳನ್ನು ಮಾಡಲು ಇಚ್ಚಿಸುವಿರಿ. ಹಣಕಾಸಿನ ವಿಚಾರದಲ್ಲಿ ಯಾರನ್ನೂ ಸುಲಭವಾಗಿ ನಂಬುವುದಿಲ್ಲ. ಆರೋಗ್ಯದ ಬಗ್ಗೆ ಕಾಳಜಿ ಹೊಂದುವಿರಿ. ಎಚ್ಚರಿಕೆಯಿಂದ ದಾಂಪತ್ಯದ ಸಮಸ್ಯೆಯನ್ನು ನಿವಾರಿಸುವಿರಿ. ಚಾಡಿಮಾತನ್ನು ನಂಬಿದಲ್ಲಿ ಕುಟುಂಬದ ಒಗ್ಗಟ್ಟು ಕಡಿಮೆಯಾಗುತ್ತದೆ. 

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ವೃಶ್ಚಿಕ

ಅನಾರೋಗ್ಯ ಕಾಡುತ್ತದೆ. ವಿದ್ಯಾರ್ಥಿಗಳಿಗೆ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ತಾಯಿಗೆ ಅನಾರೋಗ್ಯ ಇರುತ್ತದೆ, ನೀರಿನೊಂದಿಗೆ ಚೆಲ್ಲಾಟವಾಡದಿರಿ. ಮಕ್ಕಳ ಜೀವನವು ಯಾವುದೇ ತೊಂದರೆ ಇಲ್ಲದೆ ನಡೆಯಲಿದೆ. ಕಲಾವಿದರಿಗೆ ವಿನೂತನದ ಅವಕಾಶ ದೊರೆಯಲಿದೆ. ಸಾಲದ ವ್ಯವಹಾರ ಮಾಡದಿರಿ.  

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನಸು ಗೆಂಪು

ಧನಸ್ಸು

ಹಣದ ಕೊರತೆ ಕಡಿಮೆ ಆಗಲಿದೆ. ವಿದ್ಯಾರ್ಥಿಗಳು ಏಕಾಗ್ರಚಿತ್ತತೆಯಿಂದ ಕಲಿಕೆಯಲ್ಲಿ ಯಶಸ್ಸನ್ನು ಕಾಣುತ್ತಾರೆ. ತಾಯಿಗೆ ಅನಾರೋಗ್ಯ ಇರುತ್ತದೆ. ನೀರಿನೊಂದಿಗೆ ಚೆಲ್ಲಾಟವಾಡದಿರಿ. ವೈವಾಹಿಕ ಜೀವನದಲ್ಲಿ ಮರೆಯದ ಘಟನೆಯೊಂದು ನಡೆಯಲಿದೆ. ಗೃಹಿಣಿಯರಿಗೆ ಉದ್ಯೋಗದಲ್ಲಿ ಧನಾತ್ಮಕ ತಿರುವು ದೊರೆಯಲಿದೆ. ಹೋಟೆಲ್ ವ್ಯಾಪಾರ ಲಾಭದಾಯಕವಾಗಿರುತ್ತದೆ.  

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಮಕರ

 ಸೋದರಿಗೆ ವಿವಾಹದ ನೆಂಟಸ್ಥಿಕೆ ಕೂಡಿ ಬರುತ್ತದೆ. ಕುಟುಂಬದ ನಿರ್ವಹಣೆಗಾಗಿ ಉಪವೃತ್ತಿಯೊಂದನ್ನು ಆರಂಭಿಸುವಿರಿ. ಮಿತಿ ಮೀರಿದ ಖರ್ಚು ವೆಚ್ಚಗಳು ಬೇಸರ ಮೂಡಿಸಲಿದೆ. ಚಿನ್ನ ಬೆಳ್ಳಿಯ ಪದಾರ್ಥಗಳಿಗೆ ಹಣ ಖರ್ಚಾಗುತ್ತದೆ. ಕಷ್ಟಪಡದೆ ಬರಿ ಮಾತಿನಿಂದ ಕೆಲಸ ಸಾಧಿಸಲು ಸಫಲರಾಗುವಿರಿ. ವಿದ್ಯಾರ್ಥಿಗಳು ಹೆಚ್ಚಿನ ಅದ್ಯಯನಕ್ಕಾಗಿ ವಿದೇಶಕ್ಕೆ ತೆರಳುವರು. 

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಕುಂಭ

 ವಿದ್ಯಾರ್ಥಿಗಳು ಕ್ರಮೇಣವಾಗಿ ತಮ್ಮ ಜವಾಬ್ದಾರಿಯನ್ನು ಅರಿಯುತ್ತಾರೆ. ಸ್ವಂತ ಬಳಕೆಗಾಗಿ ವಾಹನ ಕೊಳ್ಳುವಿರಿ. ಕುಟುಂಬದಲ್ಲಿ ಮಂಗಳಕಾರ್ಯವೊಂದು ನಡೆಯಲಿದೆ. ಸೋದರಿಯ ಜೀವನದಲ್ಲಿ ವಿವಾದ ದೂರವಾಗಲಿದೆ. ಕೈಹಿಡಿದ ಕೆಲಸ ಕಾರ್ಯಗಳು ಯಶಸ್ವಿಯಾಗುವವರೆಗೂ ರಹಸ್ಯ ಕಾಪಾಡುವಿರಿ. ತಂದೆಯ ಆರೋಗ್ಯದ ಬಗ್ಗೆ ಗಮನ ಇರಲಿ.  

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಸಸಸಣ್ಣ: ಆಕಾಶ ನೀಲಿ

ಮೀನ

ಯಂತ್ರ ವಾಹನಕ್ಕೆ ಸಂಬಂಧಿಸಿದ ವ್ಯಾಪಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಯಾರ ಸಹಾಯಕ್ಕಾಗಿಯೂ ಕಾಯುವುದಿಲ್ಲ. ಬೇರೆಯವರ ಹಣಕಾಸಿನ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಿದಲ್ಲಿ ತೊಂದರೆ ಅನುಭವಿಸುವಿರಿ. ಖ್ಯಾತ ಸಂಸ್ಥೆಯೊಂದರಲ್ಲಿ ಉದ್ಯೋಗ ಲಭಿಸುತ್ತದೆ. ವಿದ್ಯಾರ್ಥಿಗಳು ಮಹತ್ತರ ಸಾಧನೆಗೆ ಸಾಕ್ಷಿಯಾಗುತ್ತಾರೆ. ಸಾಮಾಜಿಕ ರಂಗದಲ್ಲಿ ಗಣ್ಯಸ್ಥಾನ ಲಭಿಸುತ್ತದೆ.  

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.