ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಕುಟುಂಬದ ಬಿಕ್ಕಟ್ಟು ಪರಿಹಾರ, ಅವಿವಾಹಿತರಿಗೆ ಪ್ರೀತಿ ಚಿಗುರೊಡೆಯಲಿದೆ; ನಾಳೆಯ ದಿನ ಭವಿಷ್ಯ

Tomorrow Horoscope: ಕುಟುಂಬದ ಬಿಕ್ಕಟ್ಟು ಪರಿಹಾರ, ಅವಿವಾಹಿತರಿಗೆ ಪ್ರೀತಿ ಚಿಗುರೊಡೆಯಲಿದೆ; ನಾಳೆಯ ದಿನ ಭವಿಷ್ಯ

21st April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (21st April 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಭಾನುವಾರ

ತಿಥಿ: ತ್ರಯೋದಶಿ ರಾತ್ರಿ 12.28 ರವರೆಗೂ ಇದ್ದು ನಂತರ ಚತುರ್ದಶಿ ಆರಂಭವಾಗುತ್ತದೆ.

ನಕ್ಷತ್ರ : ಉತ್ತರ ನಕ್ಷತ್ರವು 04.46 ರವರೆಗೂ ಇದ್ದು ನಂತರ ಹಸ್ತ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.04

ಸೂರ್ಯಾಸ್ತ: ಸಂಜೆ 06.32

ರಾಹುಕಾಲ: ಸಂಜೆ 05.03 ರಿಂದ 06.36

ರಾಶಿಫಲ

ಮೇಷ

ಹಿರಿಯರ ಮಧ್ಯಸ್ಥಿಕೆಯಿಂದ ಕೌಟುಂಬಿಕ ವಿವಾದ ದೂರವಾಗುತ್ತದೆ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ನೆರವು ನಿಮಗಿರುತ್ತದೆ. ಮಾನಸಿಕ ಚಿಂತೆ ನಿಮ್ಮನ್ನು ಕಾಡಲಿದೆ. ಧನಾತ್ಮಕ ಫಲಿತಾಂಶಗಳು ಆತ್ಮವಿಶ್ವಾಸ ಹೆಚ್ಚಿಸುತ್ತದೆ. ವಿದ್ಯಾರ್ಥಿಗಳು ಯೋಚಿಸಿ ತಮ್ಮ ಮನದಾಸೆಯನ್ನು ಪೂರ್ಣಗೊಳಿಸುವರು. ಹಣಕಾಸಿನ ವ್ಯವಹಾರದ ಬಗ್ಗೆ ಎಚ್ಚರಿಕೆ ಇರಲಿ. ಆತ್ಮೀಯರೊಬ್ಬರಿಗೆ ಹಣದ ಸಹಾಯ ಮಾಡುವಿರಿ. ಅವಿವಾಹಿತರಿಗೆ ಪ್ರೀತಿ ಚಿಗುರೊಡೆಯುತ್ತದೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ವೃಷಭ

ನಿಮ್ಮಲ್ಲಿನ ಹಾಸ್ಯದ ಮನೋಭಾವನೆಯ ಕಾರಣ ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ. ಗೆಲ್ಲುವವರೆಗೂ ಮನ ಬದಲಾಯಿಸದೆ ಕೆಲಸ ಕಾರ್ಯಗಳಲ್ಲಿ ತಲ್ಲೀನರಾಗುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಯಾವುದೇ ವಿಶೇಷತೆ ಕಂಡು ಬರದು. ವಿದ್ಯಾರ್ಥಿಗಳು ಸಮೂಹ ವ್ಯಾಸಂಗದಿಂದ ಹೆಚ್ಚಿನ ಅಂಕಗಳನ್ನು ಗಳಿಸುತ್ತಾರೆ. ಪಾಲುದಾರಿಕೆ ವ್ಯಾಪಾರದಿಂದ ಹೊರ ಬರುವಿರಿ. ವಂಶದ ಹಿರಿಯ ವ್ಯಕ್ತಿ ಒಬ್ಬರ ಜೊತೆಯಲ್ಲಿ ಉತ್ತಮ ಬಾಂಧವ್ಯ ಇರಲಿದೆ.

ಪರಿಹಾರ: ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ತಿಳಿ ಹಸಿರು

ಮಿಥುನ

ಕುಟುಂಬದಲ್ಲಿ ಉತ್ತಮ ಬಾಂಧವ್ಯ ಇರುತ್ತದೆ. ಉದ್ಯೋಗದಲ್ಲಿ ಯಾವುದೇ ಅಡಚಣೆ ಇರುವುದಿಲ್ಲ. ಹೊಸ ರೀತಿಯ ವ್ಯಾಪಾರ ವ್ಯವಹಾರಗಳು ಜೀವನಕ್ಕೆ ಆಧಾರವಾಗುತ್ತದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ನಿರೀಕ್ಷಿಸಿದ ಮಟ್ಟವನ್ನು ತಲುಪುವಿರಿ. ಸಂಯಮದ ಮನಸ್ಸನ್ನು ಬೆಳೆಸಿಕೊಳ್ಳುವಿರಿ. ಉತ್ತಮ ಭವಿಷ್ಯಕ್ಕಾಗಿ ಹೊಸ ವ್ಯಾಪಾರವನ್ನು ಆರಂಭಿಸುವಿರಿ. ಕುಟುಂಬದ ಬಿಕ್ಕಟ್ಟನ್ನು ಮಾತುಕತೆಯಿಂದ ಪರಿಹರಿಸುವಿರಿ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನಸು ಗೆಂಪು

ಕಟಕ

ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಮುಂದಿರುತ್ತಾರೆ. ಹಣಕಾಸಿನ ವಿಚಾರದಲ್ಲಿ ಚಿಂತೆ ಇರುತ್ತದೆ. ಸಣ್ಣಪುಟ್ಟ ವಿಚಾರಗಳಿಗೂ ಹೆಚ್ಚಿನ ಪ್ರಯತ್ನ ಬೇಕಾಗಬಹುದು. ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ಬಂಧು ಬಾಂಧವರೊಂದಿಗೆ ಇದ್ದ ವಿವಾದಗಳು ದೂರಾಗುತ್ತವೆ. ಸಮಾಜದಲ್ಲಿ ಹೆಚ್ಚಿನ ಗೌರವಾದರಗಳು ಲಭಿಸುತ್ತವೆ. ಭೂ ವಿವಾದದಲ್ಲಿ ಯಶಸ್ಸು ದೊರೆಯುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಸಿಂಹ

ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ದೊರೆಯುತ್ತದೆ. ವಿರೋಧಿಗಳಿದ್ದರೂ ಅವರಿಂದ ಯಾವುದೇ ತೊಂದರೆಯಾಗದು. ವಿದ್ಯಾರ್ಥಿಗಳಿಗೆ ಸುಲಭದ ಗೆಲುವು ದೊರೆಯುತ್ತದೆ. ಹಿರಿಯ ಅಧಿಕಾರಿಗಳ ಜವಾಬ್ದಾರಿ ಹೆಚ್ಚುತ್ತದೆ. ಆತ್ಮೀಯರೊಬ್ಬರನ್ನು ಭೇಟಿ ಮಾಡುವಿರಿ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ಸರ್ಕಾರದ ಅನುದಾನದಲ್ಲಿ ಹೊಸ ವ್ಯಾಪಾರವನ್ನು ಆರಂಭಿಸುವಿರಿ. ದೇವತಾ ಕಾರ್ಯಕ್ಕಾಗಿ ಯಾತ್ರಾಸ್ಥಳಕ್ಕೆ ತೆರಳುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಬಿಳಿ

ಕನ್ಯಾ

ವಾದ ವಿವಾದಗಳಿಗೆ ಆಸ್ಪದ ನೀಡದೆ ಶಾಂತಿಯಿಂದ ಕೆಲಸ ಸಾಧಿಸುವಿರಿ. ಮನೆಯಲ್ಲಿ ಪರಸ್ಪರ ಹೊಂದಾಣಿಕೆಯ ಸ್ವಭಾವ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ನಷ್ಟವಾಗದು. ವಿದ್ಯಾರ್ಥಿಗಳು ದೃಢವಾದ ಮನಸ್ಸಿನಿಂದ ಅಧ್ಯಯನದಲ್ಲಿ ತೊಡಗುವರು. ಎಡೆಬಿಡದ ಕೆಲಸದ ನಡುವೆ ವಿಶ್ರಾಂತಿಯ ಅಗತ್ಯವಿದೆ. ಆಸ್ತಿ ಪಾಲಿನ ವಿಚಾರದಲ್ಲಿ ದಿಟ್ಟ ನಿಲುವು ತೆಗೆದುಕೊಳ್ಳಿರಿ. ಹಣಕಾಸಿನ ವ್ಯವಹಾರದಲ್ಲಿ ವಿವಾದ ಒಂದು ಎದುರಾಗಬಹುದು. ಸಂತಾನ ಲಾಭವಿದೆ.

ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಬೂದು ಬಣ್ಣ

ತುಲಾ

ಶಾಂತಿ ಸಂಯಮ ಇರುವ ಕಾರಣ ಸಂತಸದ ಬಾಳ್ವೆ ನಡೆಸುವಿರಿ. ಕುಟುಂಬದಲ್ಲಿ ಒಮ್ಮತದ ನಿರ್ಧಾರ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರಮಾನ ದೊರೆಯಲಿದೆ. ಆರೋಗ್ಯದಲ್ಲಿ ಆತಂಕದ ಮನೋಭಾವನೆ ಕಂಡುಬರುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಕ್ರಿಯಾಶೀಲತೆ ಬೆಳೆಸಿಕೊಳ್ಳುತ್ತಾರೆ. ನಿಮಗೆ ಅಸಾಧ್ಯ ಎನಿಸುವ ಕೆಲಸ ಮಾಡುವ ಹವ್ಯಾಸ ಇರುತ್ತದೆ. ಸಂಬಂಧಿಕರಿಂದ ದೂರ ಉಳಿಯಲು ಬಯಸುವಿರಿ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಆಕಾಶ ನೀಲಿ

ವೃಶ್ಚಿಕ

ಮನೆಯಲ್ಲಿ ಗಂಭೀರವಾದ ವಾತಾವರಣ ಉಂಟಾಗುತ್ತದೆ. ವ್ಯಾಪಾರ ವ್ಯವಹಾರಗಳಿಂದ ದಿನನಿತ್ಯಕ್ಕೆ ಬೇಕಾಗುವಷ್ಟು ಹಣವನ್ನು ದೊರೆಯುತ್ತದೆ. ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಯಶಸ್ಸನ್ನು ಗಳಿಸುತ್ತಾರೆ. ಆತಂಕ ಬಿಟ್ಟು ಗುರು ಹಿರಿಯರ ಸಲಹೆಯನ್ನು ಸ್ವೀಕರಿಸುವುದು ಒಳ್ಳೆಯದು. ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ. ಸಂಗಾತಿಯ ಜೊತೆಗೆ ಉತ್ತಮ ಬಾಂಧವ್ಯ ಏರ್ಪಡುತ್ತದೆ ಯಾರಿಂದಲೂ ಹಣವನ್ನು ಸಾಲವಾಗಿ ಪಡೆಯುವುದಿಲ್ಲ.

ಪರಿಹಾರ : ದೇವರ ಮನೆಯಲ್ಲಿ ತುಪ್ಪದ ದೀಪ ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು

ಧನಸ್ಸು

ಕುಟುಂಬದಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ನೆಲೆಸಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಲಭಿಸುವುದು. ವಿದ್ಯಾರ್ಥಿಗಳು ಆತಂಕದ ನಡುವೆಯೂ ವಿದ್ಯಾಭ್ಯಾಸದಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ವಂಶದ ವೃತ್ತಿಯನ್ನು ಲಘುವಾಗಿ ತೆಗೆದುಕೊಳ್ಳದಿರಿ. ಹಣದ ಕೊರತೆ ಇರುವುದಿಲ್ಲ. ಕಲಾವಿದರಿಗೆ ಅವಕಾಶ ಮತ್ತು ವಿಶೇಷ ಗೌರವ ಲಭಿಸುತ್ತದೆ ಸಂಗಾತಿಯ ಸಹಾಯದಿಂದ ಪಾಲುದಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ ಹಣಕಾಸಿನ ವಿಚಾರದಲ್ಲಿ ಯಾರನ್ನೂ ಸುಲಭವಾಗಿ ನಂಬುವುದಿಲ್ಲ.

ಪರಿಹಾರ: ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಎಲೆ ಹಸಿರು

ಮಕರ

ಪ್ರತಿಯೊಂದು ವಿಚಾರಗಳಿಗೂ ಬೇರೆಯವರ ಸಹಾಯ ದೊರೆಯಲಿದೆ. ಆರಂಭಿಸಿದ ಕೆಲಸ ಪೂರ್ಣಗೊಳ್ಳುವವರೆಗೂ ವಿರಮಿಸುವುದಿಲ್ಲ. ಯಾರ ನಿರ್ಣಯವನ್ನೂ ಸುಲಭವಾಗಿ ನಂಬದೇ ಸ್ವಂತ ನಿಲುವಿಗೆ ಬದ್ಧರಾಗುವಿರಿ. ಕುಟುಂಬದಲ್ಲಿ ಪರಸ್ಪರ ಪ್ರೀತಿ ವಾತ್ಸಲ್ಯ ಇರುತ್ತದೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಎದುರಾಗದು. ಹೆಚ್ಚಿನ ಆದಾಯಕ್ಕಾಗಿ ಉದ್ಯೋಗ ಬದಲಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಬರುವ ಆದಾಯವನ್ನು ಉಳಿಸುವಿರಿ.

ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೇಸರಿ

ಕುಂಭ

ಆಪ್ತರ ಸಹಾಯದಿಂದ ಉದ್ಯೋಗದಲ್ಲಿ ಮಹತ್ತರ ಬದಲಾವಣೆ ಆಗುವ ಸಾಧ್ಯತೆ ಇದೆ. ಬುದ್ಧಿವಂತಿಕೆಯಿಂದ ಕುಟುಂಬದ ಸಮಸೆಯನ್ನುಗೆಲ್ಲುವಿರಿ. ಉತ್ತಮ ವ್ಯಕ್ತಿತ್ವದಿಂದ ಜನಮನ ಗೆಲ್ಲುವಿರಿ. ಸತತ ಪ್ರಯತ್ನಗಳು ಉನ್ನತ ಅಧಿಕಾರ ಗಳಿಸಲು ಸಹಾಯ ಮಾಡುತ್ತದೆ. ವಿದ್ಯಾರ್ಥಿಗಳು ಸ್ಣೇಹಿತರೊಂದಿಗೆ ಸಮಯ ಕಳೆಯುವರು. ವ್ಯಾಪಾರ ವ್ಯವಹಾರದಲ್ಲಿ ಉದ್ಭವಿಸುವ ಸಮಸ್ಯೆ ಮರೆಯಾಗುತ್ತದೆ. ಮಕ್ಕಳ ಜೊತೆಯಲ್ಲಿ ಸಂತಸದಿಂದ ಸಮಯವನ್ನು ಕಳೆಯುವಿರಿ.

ಪರಿಹಾರ : ಹಣೆಯಲ್ಲಿ ತಿಲಕ ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಮೀನ

ಉದ್ಯೋಗದಲ್ಲಿ ಕೆಲಸದ ಒತ್ತಡ ಇರುತ್ತದೆ. ಎದುರಾಗುವ ಸಮಸ್ಯೆಗಳನ್ನು ಪರಿಹರಿಸುವಿರಿ. ವಿವಾದಗಳನ್ನು ಸಮರ್ಪಕವಾಗಿ ಎದುರಿಸಿ ಯಶಸ್ಸಿನತ್ತ ತೆರಳುವಿರಿ. ಜೀವನದ ಕೂಡಿಟ್ಟ ಹಣವು ಬೇಡದ ವಿಚಾರಗಳಿಗೆ ಬಳಸಬೇಕಾಗುತ್ತದೆ. ಹಣವನ್ನು ಉಳಿಸುವ ಬಗ್ಗೆ ಯೋಚಿಸಿ. ದುಡುಕಿನ ಮಾತಿನಿಂದ ಸ್ನೇಹ ಕಳೆದುಕೊಳ್ಳುವಿರಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಕೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).