ನಿರುದ್ಯೋಗಿಗಳಿಗೆ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ, ಆತುರದಿಂದ ಪ್ರಮುಖ ನಿರ್ಧಾರ ತೆಗೆದುಕೊಳ್ಳದಿರಿ; ನಾಳೆಯ ದಿನ ಭವಿಷ್ಯ
21st June 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ. (ಬರಹ: ಎಚ್. ಸತೀಶ್, ಜ್ಯೋತಿಷಿ)

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (21st June 2024 Horoscope).
ನಾಳೆಯ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಶುಕ್ರವಾರ
ತಿಥಿ : ಚತುರ್ದಶಿ ಬೆಳಗ್ಗೆ 06.32 ರವರೆಗೂ ಇದ್ದು ನಂತರ ಹುಣ್ಣಿಮೆ ಆರಂಭವಾಗುತ್ತದೆ.
ನಕ್ಷತ್ರ : ಜ್ಯೇಷ್ಠ ನಕ್ಷತ್ರವು ಸಂಜೆ 06.08 ರವರೆಗೆ ಇದ್ದು ನಂತರ ಮೂಲ ನಕ್ಷತ್ರ ಆರಂಭವಾಗಲಿದೆ.
ಸೂರ್ಯೋದಯ ಬೆಳಗ್ಗೆ : 05.53
ಸೂರ್ಯಾಸ್ತ: ಸಂಜೆ 06.48
ರಾಹುಕಾಲ: 10.48 ರಿಂದ 12.24
ರಾಶಿ ಫಲ
ಮೇಷ
ನಿಮ್ಮ ಮನಸ್ಸಿಗೆ ತೋಚಿದ್ದನ್ನು ಮಾಡುವಿರಿ. ಇದರಿಂದ ನಿಮ್ಮ ಬಗ್ಗೆ ತಪ್ಪು ಅಭಿಪ್ರಾಯ ಉಂಟಾಗುತ್ತದೆ. ಹಣಕಾಸಿನ ತೊಂದರೆ ಇರುವುದಿಲ್ಲ. ಅನಾರೋಗ್ಯದ ಕಾರಣ ತೂಕ ಕಡಿಮೆಯಾಗುತ್ತದೆ. ಸೋದರದ ಜೊತೆ ಉತ್ತಮ ಭಾಂದವ್ಯವಿರುತ್ತದೆ. ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ಕಷ್ಟವೆನಿಸಿದರೂ ಹಣ ಉಳಿತಾಯ ಮಾಡುವಿರಿ. ಸಂತೋಷದಿಂದ ಮಕ್ಕಳೊಂದಿಗೆ ವೇಳೆ ಕಳೆಯುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ನೇರಳೆ
ವೃಷಭ
ನಿಮ್ಮ ವಿರೋಧಿಗಳು ಸಹ ನಿಮಗೆ ಸಹಾಯ ಮಾಡುತ್ತಾರೆ. ಕುಟುಂಬದ ಒಟ್ಟಾರೆ ವರಮಾನದಲ್ಲಿ ಪ್ರಗತಿ ಕಂಡುಬರುತ್ತದೆ. ಅಧಿಕಾರಿಗಳಾದಲ್ಲಿ ನಿಮಗೆ ಸಹ ನೌಕರರ ಸಹಕಾರ ದೊರೆಯುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸು ಗಳಿಸುತ್ತಾರೆ. ಅನಿರೀಕ್ಷಿತ ಧನಲಾಭವಿದೆ. ಸೋದರರು ನಿಮ್ಮೊಂದಿಗೆ ವ್ಯಾಪಾರವೊಂದನ್ನು ಆರಂಭಿಸಲಿದ್ದಾರೆ.
ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ
ಮಿಥುನ
ನೀವು ಮಾಡುವ ಕೆಲಸ ಕಾರ್ಯಗಳಿಂದ ಯಾರಿಗೂ ತೊಂದರೆ ಉಂಟಾಗುವುದಿಲ್ಲ. ನಿರುದ್ಯೋಗಿಗಳಿಗೆ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಕುಟುಂಬದ ಸದಸ್ಯರ ಜೊತೆ ಸಂತೋಷದಿಂದ ದಿನ ಕಳೆಯುವಿರಿ. ನಿಮ್ಮ ಆತ್ಮ ಗೌರವವನ್ನು ಕಾಪಾಡಿಕೊಳ್ಳುವಿರಿ. ದೈಹಿಕವಾಗಿ ಸಬಲರಾಗುವಿರಿ. ಬೇಗನೆ ಸಹನೆ ಕಳೆದುಕೊಂಡು ಉದ್ವೇಗದಿಂದ ನಡೆದುಕೊಳ್ಳುವಿರಿ.
ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಬಿಳಿ ಬಣ್ಣ
ಕಟಕ
ಸಂತಾನ ಲಾಭವಿದೆ. ಮಕ್ಕಳಿಗೆ ಸಾಹಸದ ಗುಣ ಧರ್ಮ ಇರುತ್ತದೆ. ಎದುರಾಗುವ ಅಪಾಯವನ್ನು ಲೆಕ್ಕಿಸದೆ ತಮ್ಮದೇ ಹಾದಿಯಲ್ಲಿ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಸೋಲಿನ ಸಮಯದಲ್ಲಿ ಸಿಡುಕುತನದಿಂದ ವರ್ತಿಸುವಿರಿ. ಬಂದು ಬಳಗದವರಿಂದ ಯಾವುದೇ ರೀತಿಯ ಸಹಾಯ ದೊರೆಯುವುದಿಲ್ಲ.
ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಬೂದು
ಸಿಂಹ
ತಂದೆಯವರ ಧೈರ್ಯ ಸಾಹಸದ ಬುದ್ದಿ ನಿಮ್ಮ ಸುಖಿ ಜೀವನಕ್ಕೆ ಕಾರಣವಾಗುತ್ತದೆ. ಶುಭದಾಯಕ ವರ್ತಮಾನವೊಂದು ಬರಲಿದೆ. ಭಾವ ಮೈದುನನಿಗೆ ಹಣದ ಸಹಾಯ ಮಾಡುವಿರಿ. ನಿಮ್ಮ ಬಗ್ಗೆ ಅಪಾರ್ಥ ಕಲ್ಪಿಸಿಕೊಂಡು ನಿಮ್ಮ ಸಂಗಾತಿಯು ಕೋಪದಿಂದ ವರ್ತಿಸುತ್ತಾರೆ. ಕೆಲವೊಂದು ಕೆಲಸ ಕಾರ್ಯಗಳು ಮುಂದೂಡಲ್ಪಡುತ್ತವೆ. ಗೃಹಿಣಿಯರಿಗೆ ತಮ್ಮ ತವರು ಮನೆಯ ಮೇಲೆ ವಿಶೇಷವಾದ ಅಕ್ಕರೆ ಮೂಡುತ್ತದೆ.
ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ 6
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ : ಕಂದು ಬಣ್ಣ
ಕನ್ಯಾ
ಹಣಕಾಸಿನ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ದೊರೆಯಲಿದೆ. ಸಮಾಜದಲ್ಲಿ ಜನಪ್ರಿಯ ವ್ಯಕ್ತಿಯಾಗಿ ಬಾಳುವಿರಿ. ಸ್ವಂತ ಸಾಮರ್ಥ್ಯದಿಂದ ಕುಟುಂಬದ ಸಮಸ್ಯೆಯನ್ನು ದೂರ ಮಾಡುವಿರಿ. ಆರೋಗ್ಯದ ಬಗ್ಗೆ ಗಮನವಿರಲಿ. ಸಾಹಸದ ಗುಣ ಇರುತ್ತದೆ. ಆತ್ಮೀಯರ ಕಷ್ಟದ ಕಾಲದಲ್ಲಿ ನೆರವಾಗುವಿರಿ. ಬಂಧು ಬಳಗದವರ ಜೊತೆಗೂಡಿ ಯಾತ್ರಾಸ್ಥಳಕ್ಕೆ ಪ್ರವಾಸಕ್ಕೆ ತೆರಳುವಿರಿ. ಮನೆಯಲ್ಲಿನ ಮಂಗಳ ಕಾರ್ಯವೊಂದಕ್ಕೆ ಹೆಚ್ಚಿನ ಹಣ ಬೇಕಾಗುತ್ತದೆ.
ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ. .
ಅದೃಷ್ಟದ ಸಂಖ್ಯೆ :9
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ : ಕಪ್ಪು
ತುಲಾ
ನಿಮ್ಮ ಗೌರವಕ್ಕೆ ಧಕ್ಕೆ ಉಂಟು ಮಾಡುವ ಸನ್ನಿವೇಶವೊಂದು ಎದುರಾಗುತ್ತದೆ. ನಿಮ್ಮ ತಂದೆಯವರ ಧೈರ್ಯದ ಗುಣ ನಿಮ್ಮ ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತದೆ. ನಿಮ್ಮಲ್ಲಿ ಸಾಹಸದ ಗುಣ ಇರುತ್ತದೆ. ಕಷ್ಟಗಳಿಗೆ ಕುಗ್ಗುವುದಿಲ್ಲ. ಭಾವ ಮೈದುನರ ಸಹಾಯದಿಂದ ಆರ್ಥಿಕ ಪ್ರಗತಿ ಕಂಡು ಬರುತ್ತದೆ. ಗೃಹಿಣಿಯರಿಗೆ ತವರು ಮನೆಯ ಜನರ ಮೇಲೆ ವಿಶೇಷ ಮಮಕಾರ ತೋರುವಿರಿ.
ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ತಿಳಿ ಹಸಿರು
ವೃಶ್ಚಿಕ
ನಿರೀಕ್ಷೆಗಿಂತ ಹೆಚ್ಚಿನ ಯಶಸ್ಸು ದೊರೆಯಲಿದೆ. ಉತ್ತಮ ಆದಾಯ ಇಲ್ಲದ ಕೆಲಸವನ್ನು ಮಾಡುವುದಿಲ್ಲ. ಮನದಲ್ಲಿ ಆತ್ಮವಿಶ್ವಾಸದ ಕೊರತೆ ಇರುತ್ತದೆ. ಕೋಪ ಬಂದರೂ ಯಾವುದೇ ತಪ್ಪು ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಪ್ರೀತಿಯ ಮಾತುಗಳಿಂದ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ತಪ್ಪಿಲ್ಲದೇ ಹೋದರು ಸಂಗಾತಿಯನ್ನು ನಿಂದಿಸುವಿರಿ. ಸ್ವಂತ ವಾಹನ ಕೊಳ್ಳುವಿರಿ.
ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ನಸು ಗೆಂಪು
ಧನಸ್ಸು
ಸಮಾಜದಲ್ಲಿ ಗೌರವಾನ್ವಿತ ಸ್ಥಾನ ಗಳಿಸುವಿರಿ. ದಂಪತಿಗಳು ಸಂತಸದಿಂದ ಬಾಳುತ್ತಾರೆ. ತಾಯಿಯ ಸಂಬಂಧದಲ್ಲಿ ಉತ್ತಮ ಬಾಂಧವ್ಯ ಇರುತ್ತದೆ. ಅನಾವಶ್ಯಕವಾಗಿ ಕೋಪಕ್ಕೆ ಒಳಗಾಗುವಿರಿ. ಸುಳ್ಳನ್ನು ಹೇಳಿ ಸಂದಿಗ್ದ ಪರಿಸ್ಥಿತಿಯಿಂದ ಪಾರಾಗುವಿರಿ. ಸದಾ ವಂಶದ ಆಸ್ತಿಯ ವಿವಾದದಲ್ಲಿ ನಿಮಗೆ ಹಿನ್ನೆಡೆ ಇರುತ್ತದೆ. ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಲಿದೆ.
ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ
ಮಕರ
ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ಗಳಿಸುವಿರಿ. ಶಾಸ್ತ್ರ ಸಂಪ್ರದಾಯದಲ್ಲಿ ಆಸಕ್ತಿ ಮೂಡುತ್ತದೆ. ಉತ್ತಮ ಆದಾಯವಿರುತ್ತದೆ. ಖರ್ಚು ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸುವಿರಿ. ಮನದಲ್ಲಿ ಯಾವುದೋ ಒಂದು ಯೋಚನೆ ಮನೆ ಮಾಡಿರುತ್ತದೆ. ಸಂತಾನ ಲಾಭವಿದೆ. ಬುದ್ಧಿವಂತಿಕೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ.
ಪರಿಹಾರ : ಕೈ ಅಥವ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವುದರಿಂದ ಶುಭವಿರುತ್ತದೆ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಹಾಲಿನ ಬಣ್ಣ
ಕುಂಭ
ವಿದ್ಯಾರ್ಥಿಗಳು ಏಕಾಂಗಿಯಾಗಿ ಅಭ್ಯಾಸದಲ್ಲಿ ತೊಡಗುತ್ತಾರೆ. ನಿಮ್ಮ ಮಕ್ಕಳಿಗೆ ಅತಿಯಾದ ಕೋಪವಿರುತ್ತದೆ. ತಾಯಿಯ ಜೊತೆ ಅನಾವಶ್ಯಕ ವಾದ ವಿವಾದಗಳು ಇರುತ್ತವೆ. ಸಮಯಕ್ಕೆ ತಕ್ಕಂತೆ ಬುದ್ಧಿವಂತಿಕೆಯಿಂದ ಮಾತನಾಡುವಿರಿ. ಬೇರೆಯವರಿಗೆ ನೀಡುವ ಮಾತನ್ನು ಉಳಿಸಿಕೊಳ್ಳಲಾಗದೆ ಹೋಗುವಿರಿ. ಚಂಚಲ ಮನಸ್ಸು ಇರುತ್ತದೆ. ಸ್ನೇಹಿತರಿಗಿಂತ ವಿರೋಧಿಗಳೇ ಹೆಚ್ಚಾಗಿರುತ್ತಾರೆ.
ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ..
ಅದೃಷ್ಟದ ಸಂಖ್ಯೆ 8
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಬೂದು ಬಣ್ಣ
ಮೀನ
ನೀವು ಸುಲಭವಾಗಿ ಯಾವುದೇ ತೀರ್ಮಾನಕ್ಕೆ ಬದ್ಧರಾಗುವುದಿಲ್ಲ. ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದ ಇರಿ. ದಾನ ಧರ್ಮದಲ್ಲಿ ನಿರತರಾಗುವಿರಿ. ನೂತನ ದಂಪತಿಗಳಿಗೆ ಸಂತಾನ ಲಾಭವಿದೆ. ನಿಮ್ಮ ಮಕ್ಕಳು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುತ್ತಾರೆ. ಕಷ್ಟಪಟ್ಟು ದುಡಿದ ಹಣವನ್ನು ಒಳ್ಳೆಯ ಕೆಲಸಗಳಿಗಾಗಿ ಮಾತ್ರ ಖರ್ಚು ಮಾಡುವಿರಿ.
ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ : ಆಕಾಶ ನೀಲಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
