Tomorrow Horoscope: ನೀವು ಮಾಡುವ ಕೆಲಸ, ಕಾರ್ಯವನ್ನು ಬಳಸಿಕೊಂಡು ಪ್ರಶಂಸೆ ಪಡೆಯುವ ಜನರಿಂದ ದೂರ ಇರಿ; ನಾಳೆಯ ದಿನ ಭವಿಷ್ಯ-tomorrow horoscope astrological prediction for 21st march 2024 horoscope kundali news in kannada sts ,ರಾಶಿ ಭವಿಷ್ಯ ಸುದ್ದಿ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ನೀವು ಮಾಡುವ ಕೆಲಸ, ಕಾರ್ಯವನ್ನು ಬಳಸಿಕೊಂಡು ಪ್ರಶಂಸೆ ಪಡೆಯುವ ಜನರಿಂದ ದೂರ ಇರಿ; ನಾಳೆಯ ದಿನ ಭವಿಷ್ಯ

Tomorrow Horoscope: ನೀವು ಮಾಡುವ ಕೆಲಸ, ಕಾರ್ಯವನ್ನು ಬಳಸಿಕೊಂಡು ಪ್ರಶಂಸೆ ಪಡೆಯುವ ಜನರಿಂದ ದೂರ ಇರಿ; ನಾಳೆಯ ದಿನ ಭವಿಷ್ಯ

21st March 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (21st March 2024 Horoscope).

ನಾಳೆಯ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ: ದ್ವಾದಶಿ ಬೆ 05.18 ರವರೆಗೂ ಇರುತ್ತದೆ. ನಂತರ ತ್ರಯೋದಶಿ ಆರಂಭವಾಗುತ್ತದೆ.

ನಕ್ಷತ್ರ: ಆಶ್ಲೇಷ ನಕ್ಷತ್ರವು ರಾತ್ರಿ 02.14 ವರೆಗೆ ಇರುತ್ತದೆ ನಂತರ ಮಖೆ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.23

ಸೂರ್ಯಾಸ್ತ: ಸಂಜೆ 06.30

ರಾಹುಕಾಲ : ಮಧ್ಯಾಹ್ನ01.30 ರಿಂದ .03.00

ಮೇಷ

ಆಧ್ಯಾತ್ಮಿಕ ಮಾರ್ಗದಿಂದ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳುವಿರಿ. ಉದ್ಯೋಗದಲ್ಲಿನ ಕೆಲಸ ಕಾರ್ಯಗಳಲ್ಲಿ ಸುಲಭವಾಗಿ ಯಶಸ್ಸು ಗಳಿಸುವಿರಿ. ಸ್ನೇಹಿತರ ಸಹಾಯದಿಂದ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ಗಳಿಸುವಿರಿ. ಕುಟುಂಬದ ಸದಸ್ಯರ ಜೊತೆ ಉತ್ತಮ ಹೊಂದಾಣಿಕೆ ಇರುತ್ತದೆ. ಆತ್ಮೀಯರನ್ನು ಭೇಟಿ ಮಾಡುವುದರಿಂದ ಲಾಭವಿರುತ್ತದೆ. ನಿಮ್ಮ ಕೆಲಸ ಕಾರ್ಯಗಳಿಗೆ ಬೇರೆಯವರು ಪ್ರಶಂಸೆ ಪಡೆಯುತ್ತಾರೆ.

ಪರಿಹಾರ : ತಾಯಿಯ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪಶ್ಚಿಮ

ಬಣ್ಣ: ಕೆಂಪು

ವೃಷಭ

ಮಕ್ಕಳ ಜೊತೆಯಲ್ಲಿ ಕಿರು ಪ್ರವಾಸ ಕೈಗೊಳ್ಳುವಿರಿ. ಅಮೂಲ್ಯವಾದ ವಸ್ತುಗಳನ್ನು ಕೊಳ್ಳಲು ನಿರ್ಧರಿಸುವಿರಿ. ದಂಪತಿ ನಡುವೆ ಉತ್ತಮ ಮನೋಭಾವನೆ ಇರುತ್ತದೆ. ನಿಮ್ಮಲ್ಲಿರುವ ಕಾರ್ಯ ದಕ್ಷತೆಗೆ ತಕ್ಕಂತಹ ಉದ್ಯೋಗ ದೊರೆಯಲಿದೆ. ಕ್ಷೀಪ್ರಗತಿಯಲ್ಲಿ ಕೆಲಸ ಕಾರ್ಯಗಳನ್ನು ಪೂರೈಸಲು ಪ್ರಯತ್ನಿಸುವಿರಿ. ಸಮಾಜದಲ್ಲಿನ ಲೋಪ ದೋಷಗಳನ್ನು ತಿದ್ದುವ ಪ್ರಯತ್ನ ಮಾಡುವಿರಿ.

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ ಎಲೆ ಹಸಿರು ಬಣ್ಣ

ಮಿಥುನ

ಕುಟುಂಬದ ಹಿರಿಯರಿಂದ ಹಣದ ಸಹಾಯ ದೊರೆಯುತ್ತದೆ. ನೆರೆಹೊರೆಯವರ ಜೊತೆ ಉತ್ತಮ ಬಾಂಧವ್ಯ ಇರುತ್ತದೆ. ಸಂಗಾತಿಯ ಆರೋಗ್ಯದಲ್ಲಿ ಏರಿಳಿತ ಉಂಟಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಕುಟುಂಬಕ್ಕೆ ಸಂಬಂಧಿಸಿದ ಕೆಲಸವೊಂದನ್ನು ಪೂರ್ಣಗೊಳಿಸುವಿರಿ. ದೈಹಿಕ ದುರ್ಬಲತೆಯ ಕಾರಣ ವಿಶ್ರಾಂತಿಯನ್ನು ಪಡೆಯುವಿರಿ. ಒಳ್ಳೆಯ ಕೆಲಸಗಳಿಗಾಗಿ ಹಣ ವಿನಿಯೋಗಿಸುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಆತ್ಮೀಯರಿಂದ ಉಡುಗೊರೆ ದೊರೆಯಲಿದೆ.

ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಈಶ್ಕಾನ್ಯ

ಅದೃಷ್ಟದ ಬಣ್ಣ: ಕೇಸರಿ

ಕಟಕ

ತಪ್ಪು ಮಾಡದೇ ಹೋದರು ಬೇರೆಯವರ ಟೀಕೆಗೆ ಗುರಿಯಾಗುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಆಸೆಯನ್ನು ಪೂರೈಸಲಿದ್ದೀರಿ. ಖರ್ಚು ವೆಚ್ಚದ ಮೇಲೆ ನಿಯಂತ್ರಣ ಗಳಿಸುವಿರಿ. ಕುಟುಂಬದ ಸಂತಸವನ್ನು ಹೆಚ್ಚಿಸುವಂತಹ ಶುಭ ವರ್ತಮಾನ ದೊರೆಯಲಿದೆ. ಬಂಧು ಬಳಗದವರ ಜೊತೆಯಲ್ಲಿ ಉತ್ತಮ ಬಾಂಧವ್ಯ ಇರುತ್ತದೆ. ಆಧುನಿಕತೆಗೆ ತಕ್ಕಂತೆ ಮನೆಯನ್ನು ನವೀಕರಣಗೊಳಿಸುವಿರಿ. ದಂಪತಿಗಳಲ್ಲಿ ಅನಾವಶ್ಯಕ ವಿವಾದಗಳು ಎದುರಾಗಲಿವೆ.

ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿ ದಾರದಲ್ಲಿ ಸುತ್ತಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಂದು

ಸಿಂಹ

ಅದೃಷ್ಟದಲ್ಲಿ ನಂಬಿಕೆ ಇರುತ್ತದೆ. ಬೇರೆಯವರ ಪ್ರೋತ್ಸಾಹವಿಲ್ಲದೆ ಯಾವುದೇ ಕೆಲಸವನ್ನು ಮಾಡಲಾರಿರಿ. ದೇಹದ ತೂಕ ಅತಿಯಾಗಬಹುದು. ದೇಹ ದಂಡನೆಯಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಏರಿಳಿತ ಇರಲಿದೆ. ಕುಟುಂಬದಲ್ಲಿ ಸಂತೋಷವನ್ನು ಹೆಚ್ಚಿಸುವ ವರ್ತಮಾನ ಬರಲಿದೆ. ಸಾರ್ವಜನಿಕ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಯಾರೊಂದಿಗೂ ಮಾತನಾಡದೆ ಮೌನ ವಹಿಸುವಿರಿ.

ಪರಿಹಾರ : ಕೆಂಪು ಬೆಲ್ಲದಿಂದ ಮಾಡಿದ ದ್ರವಾಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಕೆಂಪು ಬಣ್ಣ

ಕನ್ಯಾ

ಸಮಾಜದ ಗೌರವಾನ್ವಿತ ವ್ಯಕ್ತಿಯೊಬ್ಬರು ನಿಮ್ಮ ಸಹಾಯವನ್ನು ಬಯಸಿ ಬರಲಿದ್ದಾರೆ. ತಪ್ಪು ಕಲ್ಪನೆಯಿಂದ ದೂರಾಗಿದ್ದ ಆಪ್ತರೊಬ್ಬರು ಮರಳಿ ಬರಲಿದ್ದಾರೆ. ನಿಮ್ಮ ಮನಸ್ಸು ಮಗುವಿನಂತಿದ್ದರು, ಕೆಲವೊಮ್ಮೆ ತೆಗೆದುಕೊಳ್ಳುವ ತೀರ್ಮಾನಗಳು ಸಂದಿಗ್ದತೆಯನ್ನು ಉಂಟುಮಾಡುತ್ತದೆ. ಆತ್ಮೀಯ ಸ್ನೇಹಿತರೊಂದಿಗೆ ಮನ ಬಿಚ್ಚಿ ಮಾತನಾಡುವ ಅವಕಾಶ ದೊರೆಯಲಿದೆ. ಅನಾವಶ್ಯಕವಾಗಿ ಬೇಡದ ವಿಚಾರಗಳಲ್ಲಿ ಸಮಯ ವ್ಯರ್ಥ ಮಾಡಬೇಕಾಗುತ್ತದೆ.

ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅಷ್ಟದ ದಿಕ್ಕು ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ

ತುಲಾ

ಕುಟುಂಬದಲ್ಲಿ ಪರಸ್ಪರ ನಂಬಿಕೆ ಮತ್ತು ಭರವಸೆ ನೆಲೆಸಿರುತ್ತದೆ. ಒಳ್ಳೆಯ ಕೆಲಸಗಳನ್ನು ಪ್ರೋತ್ಸಾಹಿಸುವಿರಿ. ನಿಮ್ಮಲ್ಲಿನ ಕರ್ತವ್ಯ ನಿಷ್ಠೆಗೆ ಎಲ್ಲರ ಮೆಚ್ಚುಗೆ ದೊರೆಯುತ್ತದೆ. ಸಾರ್ವಜನಿಕ ಸಂಸ್ಥೆಯೊಂದರ ಹಣದ ನಿರ್ವಹಣೆಯ ಜವಾಬ್ದಾರಿ ದೊರೆಯಲಿದೆ. ಉದ್ಯೋಗದಲ್ಲಿ ನಿರೀಕ್ಷಿಸಿದಂತೆ ಧನಾತ್ಮಕ ಬದಲಾವಣೆಗಳು ಎದುರಾಗಲಿವೆ. ಮನೆತನಕ್ಕೆ ಸೇರಿದ ಭೂ ವಿವಾದವನ್ನು ಬಗೆಹರಿಸುವಿರಿ ಉತ್ತಮ ಆದಾಯವಿರುತ್ತದೆ ಅವಶ್ಯಕತೆ ಇದ್ದಲ್ಲಿ ಹಣದ ಸಹಾಯ ದೊರೆಯುತ್ತದೆ ಮಕ್ಕಳಿಂದ ಸಂತೋಷ ಎನಿಸುವ ವರ್ತಮಾನ ದೊರೆಯಲಿದೆ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಹಳದಿ

ವೃಶ್ಚಿಕ

ನಿಮ್ಮ ನಿರೀಕ್ಷೆಯಂತೆ ಕೆಲಸ ಕಾರ್ಯಗಳು ನಡೆಯುವ ಸಂಭವ ಕಡಿಮೆ. ನಿರಾಸೆ ಪಡದೆ ಹೆಚ್ಚಿನ ಪ್ರಯತ್ನದಿಂದ ಮುಖ್ಯವಾದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಅತಿಯಾದ ಖರ್ಚು ವೆಚ್ಚಗಳು ಬೇಸರ ಮೂಡಿಸುತ್ತದೆ. ಆದರೆ ಕುಟುಂಬದ ಸದಸ್ಯರ ಸಹಾಯ ಸಹಕಾರ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ನವ ದಂಪತಿಗಳಲ್ಲಿ ಪರಸ್ಪರ ಪ್ರೀತಿ-ವಿಶ್ವಾಸ ಹೆಚ್ಚುತ್ತದೆ. ಸಂಗಾತಿ ಮತ್ತು ಮಕ್ಕಳೊಂದಿಗೆ ಸಂತಸದಿಂದ ದಿನವನ್ನು ಕಳೆಯುವಿರಿ. ಎದುರಾಗಿರುವ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಲು ಪ್ರಯತ್ನಿಸುವಿರಿ.

ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಳದಿ

ಧನಸ್ಸು

ಮನಸ್ಸು ಇರದೇ ಹೋದರೂ ಗೆಲ್ಲಬೇಕಾದ ಛಲ ನಿಮ್ಮಲ್ಲಿರುತ್ತದೆ. ದೈಹಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ವ್ಯಾಯಾಮವನ್ನು ಅನುಸರಿಸುವಿರಿ. ನಿಮ್ಮ ಮನದ ವಿಚಾರವನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಸೋಲನ್ನು ಒಪ್ಪದೆ ಅನಾವಶ್ಯಕವಾಗಿ ವಾದ ವಿವಾದದಲ್ಲಿ ತೊಡಗುವಿರಿ. ಹೊಸ ವ್ಯಾಪಾರವನ್ನು ಆರಂಭಿಸಲು ಆತ್ಮೀಯರಿಂದ ಹಣ ಪಡೆಯುವಿರಿ. ನೀವು ಸಂತಸವಾಗಿರುವುದು ಮಾತ್ರವಲ್ಲದೆ ಬೇರೆಯವರ ಸಂತಸಕ್ಕೆ ಕಾರಣವಾಗುವಿರಿ. ವಯಸ್ಸಿನ ಭೇದವಿಲ್ಲದೆ ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ.

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಸಿರು

ಮಕರ

ನಿಮ್ಮ ಕೆಲಸ ಕಾರ್ಯಗಳಲ್ಲಿ ಆತ್ಮೀಯರ ಸಹಾಯ ದೊರೆಯಲಿದೆ. ಸಣ್ಣಪುಟ್ಟ ಕೆಲಸಗಳಾದರೂ ಹೆಚ್ಚಿನ ಶ್ರದ್ಧೆಯಿಂದ ಪೂರ್ಣಗೊಳಿಸುವಿರಿ. ಮನದಲ್ಲಿ ಅನೇಕ ಚಿಂತೆಗಳಿರುತ್ತವೆ. ಸ್ಟಾಕ್ ಮತ್ತು ಷೇರಿನ ವ್ಯವಹಾರದಲ್ಲಿ ಹಣವನ್ನು ಹೂಡುವಿರಿ. ಕುಟುಂಬದಲ್ಲಿ ಪರಸ್ಪರ ಪ್ರೀತಿ ವಿಶ್ವಾಸವು ಹೆಚ್ಚಲಿದೆ. ಹಣಕಾಸಿನ ವ್ಯವಹಾರದಲ್ಲಿ ಸಂಗಾತಿಯ ಉತ್ತಮ ಸಹಕಾರ ದೊರೆಯಲಿದೆ. ಹಿರಿಯ ಸೋದರ ಅಥವಾ ಸೋದರಿಗೆ ಉತ್ತಮ ಆದಾಯವಿರುತ್ತದೆ. ಉದ್ಯೋಗದ ಕೆಲಸ ಕಾರ್ಯಗಳಿಗೆ ಮೊದಲ ಆದ್ಯತೆ ನೀಡುವಿರಿ ಅತಿಯಾದ ಮಾತನ್ನು ಕಡಿಮೆ ಮಾಡುವುದು ಒಳ್ಳೆಯದು.

ಪರಿಹಾರ : ತಾಯಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೀಲಿ

ಕುಂಭ

ನಿಮ್ಮ ಯಶಸ್ಸನ್ನು ಕಂಡು ಅಸೂಯೆ ಪಡುವ ಜನ ಸುತ್ತಮುತ್ತ ಇರುತ್ತಾರೆ. ಆಡುವ ಮಾತಿನ ಮೇಲೆ ಹತೋಟಿ ಇರುವುದು ಒಳ್ಳೆಯದು. ಹಣಕಾಸಿನ ವಿಚಾರವನ್ನು ರಹಸ್ಯವಾಗಿಡುವಿರಿ. ಮನಸ್ಸು ಎಷ್ಟೇ ಒಳ್ಳೆಯದಾಗಲಿ ದುಡುಕಿನ ಮಾತಿನಿಂದ ಬೇರೆಯವರಲ್ಲಿ ಬೇಸರ ಮೂಡಿಸುವಿರಿ. ಮನರಂಜನಾ ಸಮಾರಂಭಗಳಿಗೆ ಹಣ ವಿನಿಯೋಗಿಸುವಿರಿ. ಉದ್ಯೋಗದಲ್ಲಿ ಯಾವುದೇ ರೀತಿಯ ಬದಲಾವಣೆಗಳು ಕಾಣುವುದಿಲ್ಲ.

ಪರಿಹಾರ : ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು ದಕ್ಷಿಣ

ಅದೃಷ್ಟದ ಬಣ್ಣ: ನೇರಳೆ

ಮೀನ

ವಿದ್ಯಾರ್ಥಿಗಳಿಗೆ ಸಹಪಾಠಿಗಳ ಜೊತೆ ಉತ್ತಮ ಸ್ನೇಹ ಇರುವುದಿಲ್ಲ. ಬುದ್ಧಿವಂತಿಕೆಯಿಂದ ಸಮಯಕ್ಕೆ ಸರಿಯಾಗಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ದೊರೆವ ಅವಕಾಶವನ್ನು ಸೂಕ್ತ ಮಾರ್ಗದಲ್ಲಿ ಉಪಯೋಗಿಸಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಕಷ್ಟಪಟ್ಟು ಹಣ ಆಸ್ತಿ ಕೀರ್ತಿ ಪ್ರತಿಷ್ಠೆ ಗಳಿಸುವಿರಿ. ಭೂವ್ಯವಹಾರಗಳಲ್ಲಿ ಉತ್ತಮ ಧನಲಾಭವಿರುತ್ತದೆ. ಮನೆಯ ಪೂಜಾಸ್ಥಳವನ್ನು ಬೆಲೆ ಬಾಳುವ ವಸ್ತುಗಳಿಂದ ಅಲಂಕೃತಗೊಳಿಸುವಿರಿ.

ಪರಿಹಾರ : ಸಿಹಿ ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಗುಲಾಬಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.