ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಕುಟುಂಬದಲ್ಲಿ ನಡೆಯಬೇಕಿದ್ದ ಮಂಗಳ ಕಾರ್ಯವೊಂದನ್ನು ಮುಂದೂಡಲಿದ್ದೀರಿ; ನಾಳೆಯ ದಿನ ಭವಿಷ್ಯ

Tomorrow Horoscope: ಕುಟುಂಬದಲ್ಲಿ ನಡೆಯಬೇಕಿದ್ದ ಮಂಗಳ ಕಾರ್ಯವೊಂದನ್ನು ಮುಂದೂಡಲಿದ್ದೀರಿ; ನಾಳೆಯ ದಿನ ಭವಿಷ್ಯ

22nd May 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (22nd May 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಬುಧವಾರ

ತಿಥಿ: ಚತುರ್ದಶಿ ಸಂಜೆ 05.35 ರವರೆಗೂ ಇರುತ್ತದೆ ನಂತರ ಹುಣ್ಣಿಮೆ ಆರಂಭವಾಗುತ್ತದೆ.

ನಕ್ಷತ್ರ : ಸ್ವಾತಿ ನಕ್ಷತ್ರವು ಬೆಳಗ್ಗೆ 07.01 ರವರೆಗು ಇರುತ್ತದೆ ನಂತರ ವಿಶಾಖ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.39

ರಾಹುಕಾಲ: 12.20 ರಿಂದ ಹ. 01.55

ರಾಶಿಫಲ

ಮೇಷ

ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಸೋಲನ್ನು ಒಪ್ಪದೆ ಹೆಚ್ಚಿನ ಪ್ರಯತ್ನದಿಂದ ಗೆಲುವನ್ನು ಸಾಧಿಸುತ್ತಾರೆ. ಕುಟುಂಬದ ಭೂ ವಿವಾದವೊಂದು ನಿಮ್ಮಿಂದಾಗಿ ಬಗೆಹರಿಯಲಿದೆ. ಬಂಧು ಬಳಗದವರು ನಿಮ್ಮ ಕಾರ್ಯ ನೈಪುಣ್ಯತೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಮುಂಗೋಪ ಕಡಿಮೆ ಮಾಡಿಕೊಂಡಲ್ಲಿ ಎದುರಾಗುವ ಸಮಸ್ಯೆ ದೂರವಾಗುವುದು.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು

ವೃಷಭ

ಉದ್ಯೋಗದಲ್ಲಿನ ಬದಲಾವಣೆಗಳು ಬೇಸರ ಮೂಡಿಸುತ್ತದೆ. ಹಣಕಾಸಿನ ಪ್ರಗತಿ ಕಾಣದೆ ಹೋದರು ಯಾವುದೇ ಸಮಸ್ಯೆ ಇರದು. ಒಂದೇ ರೀತಿಯ ಕೆಲಸ ಬೇಸರ ಮೂಡಿಸುತ್ತದೆ. ಕರ್ತವ್ಯದ ನಡುವೆ ವಿಶ್ರಾಂತಿ ಪಡೆಯುವುದು ನಿಮಗೆ ಅವಶ್ಯಕ. ಆರೋಗ್ಯ ಸುಧಾರಿಸಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯಕ್ಕೆ ಕೊರತೆ ಕಾಣದು. ವಿದ್ಯಾರ್ಥಿಗಳು ಸ್ಥಿರವಾದ ಮನಸ್ಥಿತಿಯನ್ನು ಹೊಂದಿರುತ್ತಾರೆ.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ

ಮಿಥುನ

ಮಕ್ಕಳ ಜೊತೆ ಆನಂದದಿಂದ ದಿನ ಕಳೆಯುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಎದುರಾದರೂ ಲೆಕ್ಕಿಸುವುದಿಲ್ಲ. ಉತ್ತಮ ಆದಾಯ ಇರುತ್ತದೆ. ಮನಸ್ಸಿಗೆ ಇಷ್ಟವೆನಿಸುವ ಒಡವೆ ವಸ್ತ್ರವನ್ನು ಕೊಳ್ಳುವಿರಿ. ದಾಂಪತ್ಯದಲ್ಲಿ ಉತ್ತಮ ಅನ್ಯೋನ್ಯತೆ ಇರುತ್ತದೆ. ಖರ್ಚು ಕಡಿಮೆ ಮಾಡಿ ಹಣ ಉಳಿಸಲಿದ್ದೀರಿ. ಬಿಡುವಿನ ವೇಳೆ ವಿದ್ಯಾರ್ಥಿಗಳು ಹೊಸ ಕಾರ್ಯ ಯೋಜನೆಗಳನ್ನು ರೂಪಿಸುತ್ತಾರೆ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಹಳದಿ

ಕಟಕ

ಕೆಲಸ ಕಾರ್ಯಗಳಲ್ಲಿ ದುಡುಕದೆ ವರ್ತಿಸಿದರೆ ಉತ್ತಮ ಫಲಿತಾಂಶ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಒತ್ತಡವಿಲ್ಲದೆ ಉತ್ತಮ ಆದಾಯ ಗಳಿಸುವಿರಿ. ಬೇರೆಯವರ ಪ್ರಭಾವಕ್ಕೆ ಒಳಗಾಗದೆ ಕೆಲಸ ನಿರ್ವಹಿಸುವಿರಿ. ಗೃಹಿಣಿಯರು ತಮ್ಮ ದೈನಂದಿನ ಕೆಲಸಗಳಿಗೆ ಸಂಪೂರ್ಣವಾಗಿ ಬೇರೆಯವರನ್ನು ಅವಲಂಬಿಸುತ್ತಾರೆ. ಉತ್ತಮ ಆದಾಯವಿದ್ದರೂ ಹಣ ಉಳಿಸಲಾರಿರಿ.

ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಸಿರು

ಸಿಂಹ

ಕೆಲಸ ಕಾರ್ಯಗಳ ನದುವೆ ವಿಶ್ರಾಂತಿ ದೊರೆಯುತ್ತದೆ. ಯಾರಿಗೂ ತಿಳಿಯದಂತೆ ಹಣಕಾಸಿನ ವ್ಯವಹಾರ ಮಾಡುವಿರಿ. ವ್ಯಾಪಾರ ವ್ಯವಹಾರದಲ್ಲಿ ಅಭಿವೃದ್ಧಿ ಇರಲಿದೆ. ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳ ನಡುವೆ ನಾಯಕರಾಗಿ ಬಾಳುತ್ತಾರೆ. ದಿನಾಂತ್ಯಕ್ಕೆ ಹಣದ ಕೊರತೆ ಕಂಡು ಬರುತ್ತದೆ. ಕುಟುಂಬದ ಮಂಗಳ ಕಾರ್ಯವು ಮುಂದೂಡಲ್ಪಡುತ್ತದೆ.

ಪರಿಹಾರ : ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ನೀಲಿ

ಕನ್ಯಾ

ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ಇರುತ್ತದೆ. ವಿದ್ಯಾರ್ಥಿಗಳು ಬೇರೆಯವರನ್ನು ಟೀಕಿಸುವುದನ್ನು ಬಿಡಬೇಕು. ದಿಢೀರನೆ ಹಣದ ಕೊರತೆ ಉಂಟಾಗಬಹುದು. ಗುರು ಹಿರಿಯರ ಕೆಲಸ ಕಾರ್ಯಗಳಲ್ಲಿ ನೆರವಾಗುವಿರಿ. ನಿಮ್ಮಲ್ಲಿ ಹುದುಗಿರುವ ಪ್ರತಿಭೆಗೆ ತಕ್ಕ ವೇದಿಕೆ ದೊರೆಯಲಿದೆ. ದಂಪತಿಗಳ ನಡುವೆ ವಾದ ವಿವಾದ ಇರುತ್ತದೆ. ಕುಟುಂಬದ ಜವಾಬ್ದಾರಿಯನ್ನು ಎಲ್ಲರೊಡನೆ ಹಂಚಿಕೊಳ್ಳುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ನೇರಳೆ

ತುಲಾ

ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರಮಾನ ದೊರೆಯುತ್ತದೆ. ವಿದ್ಯಾರ್ಥಿಗಳು ಕ್ರಿಯಾಶೀಲ ಮನಸಿನಿಂದ ಮುಂದುವರೆಯುತ್ತಾರೆ. ಸ್ಟಾಕ್ ಮತ್ತು ಷೇರಿನ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಕುಟುಂಬದ ಸದಸ್ಯರು ನಿಮ್ಮ ಪರ ನಿಲ್ಲಲಿದ್ದಾರೆ. ಪಾಲುದಾರಿಕೆಯ ವ್ಯಾಪಾರ ವ್ಯವಹಾರ ಲಾಭದಾಯಕ. ಸಾಲದ ವ್ಯವಹಾರದಲ್ಲಿ ತೊಂದರೆ ಇದೆ. ಅರೋಗ್ಯದ ಬಗ್ಗೆ ಕಾಳಜಿ ಇರಲಿ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಗುಲಾಬಿ

ವೃಶ್ಚಿಕ

ವ್ಯಾಪಾರ ವ್ಯವಹಾರಗಳಲ್ಲಿ ವರಮಾನಕ್ಕೆ ತೊಂದರೆ ಇರದು. ಮುಕ್ತ ಮನಸ್ಸಿನಿಂದ ಆತ್ಮೀಯರಿಗೆ ಸಹಾಯ ಮಾಡುವಿರಿ. ವಿದ್ಯಾರ್ಥಿಗಳು ಹಟದಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಕುಟುಂಬದ ಹಿರಿಯರು ಎಲ್ಲರನ್ನೂ ಸಮಾನ ಭಾವನೆಯಿಂದ ಕಾಣುತ್ತಾರೆ. ದುಡುಕದೆ ತಾಳ್ಮೆಯಿಂದ ಇದ್ದಲ್ಲಿ ಜೀವನ ಸುಖಮಯವಾಗಿರುತ್ತದೆ. ಉದ್ಯೋಗದ ವಿಚಾರವಾಗಿ ಪರಸ್ಥಳಕ್ಕೆ ತೆರಳ ಬೇಕಾಗುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬಿಳಿ

ಧನಸ್ಸು

ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತಂದೆಯಿಂದ ಹಣದ ಸಹಾಯ ದೊರೆಯುತ್ತದೆ. ಸ್ವಂತ ಕೆಲಸ ಕಾರ್ಯಗಳಲ್ಲಿ ಪ್ರಗತಿ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ಹಿಂದೊಮ್ಮೆ ತೆಗೆದುಕೊಂಡ ನಿರ್ಧಾರಗಳಿಗೆ ಬದ್ಧರಾಗುವಿರಿ. ಕ್ರಮೇಣವಾಗಿ ಆರೋಗ್ಯ ಸುಧಾರಿಸುತ್ತದೆ. ಮಿತಿ ಮೀರಿದ ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವಿರಿ. ಆತ್ಮೀಯರಿಂದ ಉಡುಗೊರೆ ದೊರೆಯಲಿದೆ.

ಪರಿಹಾರ: ತಾಯಿಯ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬೂದು

ಮಕರ

ವ್ಯಾಪಾರ ವ್ಯವಹಾರಗಳಲ್ಲಿ ವೆಚ್ಚಕ್ಕೆ ತಕ್ಕಷ್ಟು ಆದಾಯ ದೊರೆಯಲಿದೆ. ಮಾಡುವ ಕೆಲಸ ಕಾರ್ಯಗಳನ್ನು ನಿಧಾನಗತಿಯಲ್ಲಿ ಪೂರ್ಣಗೊಳಿಸುವಿರಿ. ಸಹೋದ್ಯೋಗಿಗಳ ವಿಶ್ವಾಸ ಗಳಿಸುವಿರಿ. ವಿದ್ಯಾರ್ಥಿಗಳು ಕಷ್ಟಪಟ್ಟು ಎಲ್ಲರ ಗಮನ ಸೆಳೆದು ಸಾಧನೆ ಮಾಡುವರು. ಬೇರೆಯವರ ಹಣಕಾಸಿನ ವಿವಾದವನ್ನು ಪರಿಹರಿಸುವಿರಿ. ಆಸ್ತಿ ವಿಚಾರದಲ್ಲಿ ಅನಾವಶ್ಯಕವಾಗಿ ಮಧ್ಯಸ್ಥಿಕೆ ವಹಿಸದಿರಿ.

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಂದು

ಕುಂಭ

ವ್ಯಾಪಾರ ವ್ಯವಹಾರಗಳ ಆದಾಯ ಹೆಚ್ಚುತ್ತದೆ. ಆಡುವ ಮಾತಿನ ಮೇಲೆ ಗಮನ ಇರಲಿ. ನಿಮ್ಮ ಪ್ರೀತಿ ಆರೈಕೆಯಲ್ಲಿ ಮಕ್ಕಳು ಸಂತೋಷವಾಗಿರುತ್ತಾರೆ. ಸ್ವಂತಂತ್ಯ್ರ ಜೀವನ ಇಷ್ಟಪಡುತ್ತಾರೆ. ವಿದ್ಯಾರ್ಥಿಗಳ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಅನಾವಶ್ಯಕವಾಗಿ ಶಾಂತಿ ಕದಡುವ ಕೆಲಸವೊಂದು ನಡೆಯುತ್ತದೆ. ಪೋಷಕರ ಸಹಾಯದಿಂದ ಮಕ್ಕಳಿಗೆ ಹೊಸ ಭವಿಷ್ಯ ದೊರೆಯುತ್ತದೆ.

ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ತಿಳಿ ಹಸಿರು

ಮೀನ

ದಾಂಪತ್ಯದಲ್ಲಿ ಇದ್ದ ಮನಸ್ತಾಪ ಬಗೆಹರಿಯುತ್ತದೆ. ನೆರೆಹೊರೆಯವರ ಜೊತೆ ಉತ್ತಮ ಬಾಂಧವ್ಯ ಮೂಡುತ್ತದೆ. ಅವಿವಾಹಿತರಿಗೆ ವಿವಾಹ ನಿಶ್ಚಯ ಆಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಸರ್ವಾಧಿಕಾರಿಯ ಧೋರಣೆ ತೋರುವಿರಿ. ಅನಾರೋಗ್ಯದ ತೊಂದರೆಯನ್ನು ಎದುರಿಸುವಿರಿ. ಆತಂತಕ ಪರಿಸ್ಥಿತಿಯಲ್ಲಿಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವಿರಿ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮನಸ್ಸಿನಿಂದ ಅಭ್ಯಾಸದಲ್ಲಿ ನಿರತರಾಗುತ್ತಾರೆ.

ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿ ದಾರದಲ್ಲಿ ಕಟ್ಟಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)