ವಿರೋಧಿಗಳೂ ನಿಮ್ಮ ಕೆಲಸ ಮೆಚ್ಚುತ್ತಾರೆ, ಆಸ್ತಿ ಖರೀದಿಸಲಿದ್ದೀರಿ; ದ್ವಾದಶ ರಾಶಿಗಳ ನಾಳೆಯ ದಿನ ಭವಿಷ್ಯ
23rd June 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ. (ಬರಹ: ಎಚ್. ಸತೀಶ್, ಜ್ಯೋತಿಷಿ)

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (23rd June 2024 Horoscope).
ನಾಳೆಯ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಭಾನುವಾರ
ತಿಥಿ : ಬಿದಿಗೆ ರಾತ್ರಿ 04.17ರವರೆಗು ಇದ್ದು ಆನಂತರ ತದಿಗೆ ಆರಂಭವಾಗುತ್ತದೆ.
ನಕ್ಷತ್ರ : ಪೂರ್ವಾಷಾಢ ನಕ್ಷತ್ರವು 06.11 ರವರೆಗೆ ಇದ್ದು ಆನಂತರ ಉತ್ತರಾಷಾಢ ನಕ್ಷತ್ರ ಆರಂಭವಾಗಲಿದೆ.
ಸೂರ್ಯೋದಯ: ಬೆಳಗ್ಗೆ 05.53
ಸೂರ್ಯಾಸ್ತ: ಸಂಜೆ 06.48
ರಾಹುಕಾಲ: ಸಂಜೆ 05.13 ರಿಂದ 06.50
ಮೇಷ
ಉದ್ಯೋಗದಲ್ಲಿ ನಿಮ್ಮ ಜವಾಬ್ದಾರಿಗಳನ್ನು ಬೇರೆಯವರಿಗೆ ಒಪ್ಪಿಸುವಿರಿ. ತಪ್ಪು ಮಾಡಿ ದಂಡ ತೆರಬೇಕಾದ ಪರಿಸ್ಥಿತಿ ಬರುತ್ತದೆ. ಸೋದರ ಅಥವಾ ಸೋದರಿಯಿಂದ ಹಣದ ಸಹಾಯ ದೊರೆಯಲಿದೆ. ಆಲಸ್ಯದ ಮನೋಭಾವನೆಯಿಂದ ವಿಶ್ರಾಂತಿ ತೆಗೆದುಕೊಳ್ಳುವಿರಿ. ನೀವು ಸುಖ ಜೀವಿಗಳು. ಆಕಸ್ಮಿಕ ಧನ ಲಾಭವಿದೆ. ನಿಮ್ಮ ಮಕ್ಕಳು ಸಂದರ್ಭಾನುಸಾರ ವರ್ತಿಸಿ ತಮ್ಮ ಕೆಲಸ ಸಾಧಿಸಿಕೊಳ್ಳುತ್ತಾರೆ.
ಪರಿಹಾರ : ಹಣೆಯಲ್ಲಿ ತಿಲಕ ಧರಿಸಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಕಂದು
ವೃಷಭ
ಕುಟುಂಬದ ಹಿರಿಯರ ಹೆಸರಿನಲ್ಲಿ ಧರ್ಮಕಾರ್ಯಗಳನ್ನು ಮಾಡುವಿರಿ. ಆರಂಭಿಸಿದ ಪ್ರತಿಯೊಂದು ಕೆಲಸದಲ್ಲಿಯೂ ಯಶಸ್ಸು ನಿಮ್ಮದಾಗುತ್ತದೆ. ಹಣದ ತೊಂದರೆ ಇರುವುದಿಲ್ಲ. ನಿಮ್ಮ ಬುದ್ಧಿವಂತಿಕೆಯಿಂದ ಸಮಸ್ಯೆ ದೂರಾಗುತ್ತದೆ. ಉತ್ತಮ ಆದಾಯವಿದ್ದರೂ ಸುಲಭವಾಗಿ ಹಣವನ್ನು ಖರ್ಚು ಮಾಡುವುದಿಲ್ಲ. ನೀವು ಅಧಿಕಾರಿಗಳಾಗಿದ್ದರೂ ಬೇರೆಯವರ ಮಾತನ್ನು ಕೇಳಬೇಕಾಗುತ್ತದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಕಪ್ಪು
ಮಿಥುನ
ಆತ್ಮೀಯ ಸ್ನೇಹಿತರನ್ನು ಭೇಟಿ ಮಾಡುವಿರಿ. ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಸ್ಥಾನ ಮತ್ತು ಅನುಕೂಲತೆಗಳು ಕಂಡುಬರುತ್ತವೆ. ಯಾವುದಾದರೂ ಒಂದು ರೀತಿಯಲ್ಲಿ ಎಲ್ಲರ ಮೇಲೂ ಅಧಿಕಾರ ಚಲಾಯಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ಅಧಿಕಾರಿಗಳಾಗಿದ್ದಲ್ಲಿ ವಿಶೇಷ ಕೀರ್ತಿ ಪ್ರಶಂಸೆ ನಿಮಗೆ ದೊರೆಯುತ್ತದೆ. ಅನಿರೀಕ್ಷಿತವಾಗಿ ಹಣದ ಸಹಾಯ ದೊರೆಯುತ್ತದೆ. ದಂಪತಿ ನಡುವೆ ಅನಾವಶ್ಯಕ ವಾದ ವಿವಾದ ಇರುತ್ತವೆ.
ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ತಿಳಿ ಹಸಿರು
ಕಟಕ
ಪ್ರಯೋಜನವಿಲ್ಲದ ವಿಚಾರಗಳಿಗೆ ಹಣವನ್ನು ಖರ್ಚು ಮಾಡುವಿರಿ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಧಾರ್ಮಿಕ ಕ್ರಿಯಾ ವಿಧಿಗಳಲ್ಲಿ ಆಸಕ್ತಿ ಮೂಡುತ್ತದೆ. ನಿಮಗೆ ಅರಿಯದ ವಿಚಾರವನ್ನು ಬೇರೆಯವರಿಂದ ತಿಳಿಯುವಿರಿ. ಶತ್ರುಗಳೂ ನಿಮ್ಮ ರೀತಿನೀತಿಯನ್ನು ಮೆಚ್ಚುತ್ತಾರೆ. ಹಣದ ವಿಚಾರದಲ್ಲಿ ದುರಾಸೆ ಇರುವುದಿಲ್ಲ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ನಸು ಗೆಂಪು
ಸಿಂಹ
ಗುರು ಹಿರಿಯರಲ್ಲಿ ವಿಶೇಷ ಗೌರವ ತೋರುವಿರಿ. ಮೃದುವಾದ ಮಾತು ಕತೆಯಿಂದ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ಬಂಧು ಬಳಗದವರಿಂದ ನಿಮ್ಮ ಕೆಲಸ ಕಾರ್ಯಗಳಲ್ಲಿ ವಿರೋಧ ಉಂಟಾಗುತ್ತದೆ. ಸ್ವಂತ ಭೂಮಿ ಅಥವಾ ಮನೆಯನ್ನು ಕೊಳ್ಳುವ ಯೋಚನೆ ಮಾಡುವಿರಿ. ತಾಯಿಯ ಪ್ರೀತಿ ವಿಶ್ವಾಸ ವಿಶೇಷವಾಗಿ ದೊರೆಯುತ್ತದೆ.
ಪರಿಹಾರ : ತಾಯಿಯ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ
ಕನ್ಯಾ
ಮಗನ ಜೊತೆಯಲ್ಲಿ ಉತ್ತಮ ಬಾಂಧವ್ಯ ಇರುವುದಿಲ್ಲ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಹಣ ತೊಡಗಿಸಬೇಕಾಗುತ್ತದೆ. ಹಣಕಾಸಿನ ಅನುಕೂಲತೆಯು ನೀವು ನಿರೀಕ್ಷಿಸಿದ ಮಟ್ಟಕ್ಕೆ ಇರುವುದಿಲ್ಲ. ಭಾವ ಮೈದುನರ ಜೊತೆ ಮನಸ್ತಾಪವಿರುತ್ತದೆ. ಸಂಗಾತಿಯ ಸಲುವಾಗಿ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ.
ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸ ಆರಂಭಿಸಿರಿ
ಅದೃಷ್ಟದ ಸಂಖ್ಯೆ :5
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ : ಬಿಳಿ
ತುಲಾ
ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಬದಲಾವಣೆಗಳು ಕಂಡು ಬರಲಿವೆ. ಅನಾವಶ್ಯಕ ಖರ್ಚು ವೆಚ್ಚಗಳಿಂದ ತೊಂದರೆಗೆ ಸಿಲುಕುವಿರಿ. ಮಕ್ಕಳ ಜೊತೆ ಉತ್ತಮ ಒಡನಾಟ ಇರುವುದಿಲ್ಲ. ಆತ್ಮೀಯರಿಗೆ ಎಲ್ಲಾ ರೀತಿಯ ಸಹಾಯ ಸಹಕಾರ ನೀಡುವಿರಿ. ನಿಮ್ಮಿಂದ ಸಹಾಯ ಪಡೆದ ಕೆಲವರು ನಿಮ್ಮಿಂದ ದೂರ ಉಳಿಯುತ್ತದೆ. ಸಣ್ಣಪುಟ್ಟ ವಿಚಾರಗಳಿಗೂ ಉಗ್ರವಾಗಿ ವರ್ತಿಸುವಿರಿ.
ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ: ಆಕಾಶ ನೀಲಿ
ವೃಶ್ಚಿಕ
ದೃಢವಾದ ನಿಷ್ಠೆಯಿಂದ ಹಣಕಾಸಿನ ವಿವಾದದಲ್ಲಿ ಯಶಸ್ಸನ್ನು ಗಳಿಸುವಿರಿ. ನಿಮ್ಮಲ್ಲಿರುವ ಸಮರ್ಪಣಾ ಮನೋಭಾವನೆ ಗುಣ ಇತರರಿಗೂ ದಾರಿದೀಪವಾಗಲಿದೆ. ಉದ್ಯೋಗದಲ್ಲಿ ಅಧಿಕಾರಿಯ ಸ್ಥಾನಮಾನ ದೊರೆಯುತ್ತದೆ. ರಾಜಕೀಯ ವ್ಯಕ್ತಿಗಳು ಮತ್ತು ಹಿರಿಯ ಅಧಿಕಾರಿಗಳಿಗೆ ವಿಶೇಷ ಫಲಗಳು ದೊರೆಯಲಿವೆ. ಸಣ್ಣಪುಟ್ಟ ವಿಚಾರವಾದರೂ ಹೆಚ್ಚಿನ ಶ್ರಮ ವಹಿಸಿ ಗೆಲುವು ಸಾಧಿಸುವಿರಿ.
ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಕೆಂಪು
ಧನಸ್ಸು
ನೀವಾಗಿಯೇ ಕಷ್ಟದಲ್ಲಿರುವವರಿಗೆ ನೆರವಾಗುವಿರಿ. ಆರಂಭಿಸಿದ ಪ್ರತಿಯೊಂದು ಕೆಲಸದಲ್ಲಿಯೂ ಯಶಸ್ಸು ದೊರೆಯುತ್ತದೆ. ಬೇರೊಬ್ಬರ ಅಧೀನದಲ್ಲಿ ಕೆಲಸ ನಿರ್ವಹಿಸಲು ಇಷ್ಟಪಡುವುದಿಲ್ಲ. ನಿಮಗೆ ಬೇಗನೆ ಕೋಪ ಬರುತ್ತದೆ. ಆದರೆ ನೀವಾಗಿಯೇ ಸಮಾಧಾನಗೊಳ್ಳುವಿರಿ. ನಿಮ್ಮ ನೇರವಾದ ನಡೆ ನುಡಿ ಕೆಲವರಲ್ಲಿ ಬೇಸರವನ್ನು ಮೂಡಿಸುತ್ತದೆ. ತಪ್ಪು ನಿರ್ಧಾರಗಳನ್ನು ಕೈಗೊಳ್ಳುವುದಿಲ್ಲ.
ಪರಿಹಾರ : ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಎಲೆ ಹಸಿರು
ಮಕರ
ಶಾಂತಿ ಸಂಯಮದಿಂದ ಇದ್ದಷ್ಟು ನಿಮಗೆ ಒಳ್ಳೆಯದು. ನೀವಾಗಿಯೇ ದೊಡ್ಡ ಜವಾಬ್ದಾರಿಗಳನ್ನು ವಹಿಸಿಕೊಂಡು ತೊಂದರೆಗೆ ಸಿಲುಕುವಿರಿ. ಕಣ್ಣಿನ ತೊಂದರೆ ಉಂಟಾಗುತ್ತದೆ. ಹೃದಯಕ್ಕೆ ಸಂಬಂಧಪಟ್ಟ ತೊಂದರೆ ಇದ್ದವರು ಎಚ್ಚರಿಕೆಯಿಂದ ಇರಬೇಕು. ಉಷ್ಣದ ಪದಾರ್ಥಗಳನ್ನು ಸೇವಿಸದಿರಿ. ನಿಮಗೆ ಇಷ್ಟವಾದ ವಸ್ತುವೊಂದು ಕಳೆದು ಹೋಗಬಹುದು. ಸ್ವಂತ ಬಳಕೆಗಾಗಿ ವಾಹನವೊಂದನ್ನು ಕೊಳ್ಳುವಿರಿ.
ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕೇಸರಿ
ಕುಂಭ
ಉದ್ಯೋಗದಲ್ಲಿ ಉತ್ತಮ ಮುನ್ನಡೆ ಕಾಣುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಯಾವುದೇ ತೊಂದರೆಗಳಿರುವುದಿಲ್ಲ. ಆದರೆ ಪಾಲುಗಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಅಡಚಣೆ ಉಂಟಾಗುತ್ತವೆ. ದಾನ ಧರ್ಮದಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವ ಅವಕಾಶ ದೊರೆಯುತ್ತದೆ. ಚಿಕ್ಕ ಮಕ್ಕಳನ್ನು ನಾಚಿಸುವ ಉತ್ಸಾಹ ನಿಮ್ಮಲ್ಲಿರುತ್ತದೆ.
ಪರಿಹಾರ : ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ 4
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ
ಮೀನ
ಜೀವನದಲ್ಲಿ ಯಾವುದಾದರೊಂದು ಏರುಪೇರು ಇದ್ದೇ ಇರುತ್ತದೆ. ಬೇರೆಯವರ ಸಹಾಯ ಸಹಕಾರ ದೊರೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆತಾಗ ಕುಟುಂಬದವರ ಪ್ರೋತ್ಸಾಹ ಮತ್ತು ಮೆಚ್ಚುಗೆ ದೊರೆಯುತ್ತದೆ. ಇದರಿಂದ ನಿಮ್ಮ ಆತ್ಮಸ್ಥೈರ್ಯ ಹೆಚ್ಚಲಿದೆ. ಕೋಪ ಬೇಗನೆ ಬಂದರೂ ತಪ್ಪು ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಅನಾವಶ್ಯಕವಾಗಿ ಯಾರನ್ನು ನಿಂದಿಸುವುದಿಲ್ಲ.
ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ 7
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ಕೆಂಪು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).