ಮಕ್ಕಳಿಗಾಗಿ ವಿಪರೀತ ಖರ್ಚು ಮಾಡುವಿರಿ, ಕೃಷಿಯಾಧಾರಿತ ಉತ್ಪನ್ನಗಳ ಸರಬರಾಜಿನಿಂದ ಉತ್ತಮ ಲಾಭ; ನಾಳೆಯ ದಿನ ಭವಿಷ್ಯ
24th May 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (24th May 2024 Horoscope).
ನಾಳೆಯ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಶುಕ್ರವಾರ
ತಿಥಿ: ಪಾಡ್ಯ ಸಂಜೆ 06.36 ರವರೆಗೂ ಇರುತ್ತದೆ ನಂತರ ಬಿದಿಗೆ ಆರಂಭವಾಗುತ್ತದೆ.
ನಕ್ಷತ್ರ : ಅನೂರಾಧ ನಕ್ಷತ್ರವು ಬೆಳಗ್ಗೆ 09.45 ರವರೆಗೂ ಇದ್ದು ನಂತರ ಜ್ಯೇಷ್ಠ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.52
ಸೂರ್ಯಾಸ್ತ: ಸಂಜೆ 06.40
ರಾಹುಕಾಲ: ಬೆಳಗ್ಗೆ 10.44 ರಿಂದ 12.20
ಮೇಷ
ತಂದೆಯ ಸಹಕಾರದಿಂದ ಖ್ಯಾತ ಸಂಸ್ಥೆಯೊಂದರಲ್ಲಿ ಉದ್ಯೋಗ ಲಭಿಸುತ್ತದೆ. ಬೇಸರದಿಂದ ಹೊರ ಬರಲು ಯಾತ್ರಾಸ್ಥಳಕ್ಕೆ ತೆರಳುವಿರಿ. ಆರಂಭಿಸುವ ಕೆಲಸ ಕಾರ್ಯಗಳಲ್ಲಿ ಹಟದಿಂದ ಯಶಸ್ಸನ್ನು ಗಳಿಸುವಿರಿ. ಆರೋಗ್ಯದ ಬಗ್ಗೆ ಗಮನವಿರಲಿ. ಉದ್ಯೋಗದಲ್ಲಿ ಯಾವುದೇ ತೊಂದರೆ ಎದುರಾಗದು. ಸಹಪಾಠಿಗಳ ಜೊತೆ ಕಲಿಕೆಯಲ್ಲಿ ಮುಂದುವರೆಯುವಿರಿ.
ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಎಲೆ ಹಸಿರು
ವೃಷಭ
ಉದ್ಯೋಗದಲ್ಲಿ ಎದುರಾಗುವ ಅಡಚಣೆಗಳು ದೂರವಾಗಲಿದೆ. ಮಂಗಳ ಕಾರ್ಯವೊಂದು ನಿಮ್ಮ ನೇತೃತ್ವದಲ್ಲಿ ಪೂರ್ಣಗೊಳ್ಳಲಿದೆ. ಹಣಕಾಸಿನ ವಿಚಾರದಲ್ಲಿ ಬದಲಾವಣೆಗಳೇನು ಕಾಣದು. ಅತಿ ಆಸೆ ಇಲ್ಲದೆ ಸಂತೃಪ್ತಿಯ ಜೀವನ ನಡೆಸುವಿರಿ. ಸಣ್ಣ ಪುಟ್ಟ ವ್ಯಾಪಾರ ಆರಂಭಿಸುವಿರಿ. ಮಕ್ಕಳ ಸಹಾಯದಿಂದ ಹಣ ಉಳಿಸಲು ಸಾಧ್ಯವಾಗುತ್ತದೆ. ವ್ಯಾಪಾರದ ಮಧ್ಯವರ್ತಿಗಳಿಗೆ ಉತ್ತಮ ಲಾಭಾಂಶ ದೊರೆಯುತ್ತದೆ.
ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಕೇಸರಿ
ಮಿಥುನ
ಚಂಚಲ ಮನಸ್ಸಿದ್ದರೂ ಮಾಡುವ ಕೆಲಸ ಕಾರ್ಯದಲ್ಲಿ ಹಿಂದೆ ಉಳಿಯುವುದಿಲ್ಲ. ಉತ್ತಮ ಆದಾಯದ ಜೊತೆ ಖರ್ಚು ವೆಚ್ಚಗಳು ಹೆಚ್ಚುತ್ತವೆ. ವಿದ್ಯಾರ್ಥಿಗಳು ಏಕಾಗ್ರತೆಯನ್ನು ಬೆಳೆಸಿಕೊಳ್ಳಬೇಕು. ತಂದೆ ಮಾಡುವ ವ್ಯಾಪಾರದಲ್ಲಿ ಲಾಭ ದೊರೆಯುತ್ತದೆ. ಕಾನೂನಿನ ಚೌಕಟ್ಟಿನಲ್ಲಿ ಹಣದ ವ್ಯವಹಾರವನ್ನು ಆರಂಭಿಸುವಿರಿ. ಅತಿಯಾಸೆ ಇರುವುದಿಲ್ಲ. ಸಹಬಾಳ್ವೆಯ ಜೀವನದಲ್ಲಿ ಆಸಕ್ತಿ ಮತ್ತು ನಂಬಿಕೆ ಇರುತ್ತದೆ. ಕೃಷಿಯಾಧಾರಿತ ಉತ್ಪನ್ನಗಳ ಸರಬರಾಜಿನಿಂದ ಉತ್ತಮ ಲಾಭವಿದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಕಂದು
ಕಟಕ
ಕಾನೂನಿನ ಸಹಾಯದಿಂದ ವೃತ್ತಿಜೀವನದ ತೊಂದರೆಯನ್ನು ಗೆಲ್ಲುವಿರಿ. ಮಕ್ಕಳ ಸಲುವಾಗಿ ಹೆಚ್ಚಿನ ಖರ್ಚು ಇರಲಿದೆ. ವಿದ್ಯಾರ್ಥಿಗಳು ಎಂದಿನಂತೆ ವಿದ್ಯಾಭ್ಯಾಸದಲ್ಲಿ ತೊಡಗುತ್ತಾರೆ. ಆದಾಯದಲ್ಲಿ ತೊಂದರೆ ಇರದು. ಹಣ ಉಳಿತಾಯದ ಬಗ್ಗೆ ಮನೆಮಂದಿಯೊಂದಿಗೆ ಚರ್ಚಿಸುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿಯ ವಾತಾವರಣ ಇರುತ್ತದೆ. ಅವಿವಾಹಿತರಿಗೆ ವಿವಾಹ ಯೋಗವಿದೆ.
ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕೆಂಪು
ಸಿಂಹ
ಗಣ್ಯ ವ್ಯಕ್ತಿಗಳ ಆಸರೆ ನಿಮಗೆ ದೊರೆಯುತ್ತದೆ. ರಾಜಕೀಯದಲ್ಲಿ ಆಸಕ್ತಿ ತೋರುವುದಿಲ್ಲ. ವಂಶದ ಆಸ್ತಿಯಲ್ಲಿ ನಿಮ್ಮ ತಂದೆಯವರಿಗೆ ಹೆಚ್ಚಿನ ಪಾಲು ದೊರೆಯುತ್ತದೆ. ಸಿಡುಕಿನ ಬುದ್ದಿಯಿಂದ ಆತ್ಮೀಯರೊಬ್ಬರನ್ನು ಕಳೆದುಕೊಳ್ಳುವಿರಿ. ಸಮಾಜಸೇವೆಯಲ್ಲಿ ಕುಟುಂಬದ ಜವಾಬ್ದಾರಿಯನ್ನು ಮರೆಯುವಿರಿ. ಧಾರ್ಮಿಕ ಕೇಂದ್ರಕ್ಕೆ ಕುಟುಂಬದ ಸದಸ್ಯರೊಡನೆ ಪ್ರವಾಸಕ್ಕೆ ತೆರಳುವಿರಿ.
ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ : ಕಿತ್ತಳೆ
ಕನ್ಯಾ
ಆದಾಯದಲ್ಲಿ ಯಾವುದೇ ತೊಂದರೆ ಉಂಟಾಗದು. ಆತುರದಲ್ಲಿ ತಪ್ಪನ್ನು ಮಾಡಿ ಬೇರೆಯವರನ್ನು ದೂರುವಿರಿ. ಉದ್ಯೋಗದಲ್ಲಿ ತೊಂದರೆ ಇರುವುದಿಲ್ಲ. ದುಡುಕು ಮಾತಿನಿಂದ ಜನರಿಂದ ದೂರವಾಗುವಿರಿ. ವಿದ್ಯಾರ್ಥಿಗಳು ಜವಾಬ್ದಾರಿಯಿಂದ ಕಲಿಕೆಯಲ್ಲಿ ಮುಂದುವರೆಯುವಿರಿ. ಪಾಲುದಾರಿಕೆ ವ್ಯಾಪಾರದಲ್ಲಿ ಲಾಭವಿದೆ. ಓದುವ ಹವ್ಯಾಸವನ್ನು ರೂಢಿಸಿಕೊಳ್ಳುವಿರಿ. ಆರೋಗ್ಯ ಕಾಪಾಡಿಕೊಳ್ಳಿ.
ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ಹಳದಿ
ತುಲಾ
ತಂದೆಯವರಿಂದ ಹಣದ ಸಹಾಯ ದೊರೆಯಲಿದೆ. ಉದ್ಯೋಗದಲ್ಲಿ ಆತಂಕದ ನಡುವೆಯೂ ಉನ್ನತ ಮಟ್ಟ ತಲುಪುವಿರಿ. ಸಾಂಪ್ರದಾಯಕ ಕಲೆಗಳಲ್ಲಿ ಆಸಕ್ತಿ ಮೂಡುತ್ತದೆ. ಮನಸ್ಸಿಗೆ ಒಪ್ಪುವ ಕೆಲಸವನ್ನು ಆಯ್ದು ಮಾಡುವಿರಿ. ಯಾರ ಸಲಹೆಯನ್ನೂ ಒಪ್ಪುವುದಿಲ್ಲ. ವಿದ್ಯಾರ್ಥಿಗಳು ಸುಲಭವಾಗಿ ತಮ್ಮ ಗುರಿ ತಲುಪುವರು. ಕೊನೆಯಿರದ ಕೆಲಸ ಕಾರ್ಯಗಳಿಂದ ದೈಹಿಕವಾಗಿ ಬಳಲುವಿರಿ. ಸಾಲದ ವ್ಯವಹಾರ ಮಾಡುವುದಿಲ್ಲ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು ನೈರುತ್ಯ
ಅದೃಷ್ಟದ ಬಣ್ಣ: ಹಸಿರು
ವೃಶ್ಚಿಕ
ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳದ ಕಾರಣ ಕುಟುಂಬದಲ್ಲಿ ವಿವಾದ ಉಂಟಾಗುತ್ತದೆ. ಹೆಚ್ಚಿನ ಅನುಕೂಲತೆಯನ್ನು ನಿರೀಕ್ಷಿಸಿ ಉದ್ಯೋಗವನ್ನು ಬದಲಾಯಿಸುವಿರಿ. ವಿದ್ಯಾರ್ಥಿಗಳು ಮಿತ್ರರ ಜೊತೆ ಹೊಂದಾಣಿಕೆಯಿಂದ ನಡೆದುಕೊಳ್ಳುತ್ತಾರೆ. ಸ್ವತಂತ್ರವಾಗಿ ನಿರ್ವಹಿಸುವ ವ್ಯಾಪಾರ ವ್ಯವಹಾರದಿಂದ ಆದಾಯ ಹೆಚ್ಚುತ್ತದೆ. ವಂಶದ ಹಳೆಯ ಮನೆಗೆ ಹೊಸ ರೂಪು ನೀಡುವಿರಿ.
ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 09
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ನೀಲಿ
ಧನಸ್ಸು
ಮನರಂಜನೆಯಿಂದ ದೂರ ಉಳಿದಲ್ಲಿ ವಿದ್ಯಾರ್ಥಿಗಳು ಹೊಸ ಸಾಧನೆ ಮಾಡುತ್ತಾರೆ. ಕುಟುಂಬದ ಕೆಲಸ ಕಾರ್ಯಗಳು ನಿಧಾನ ಗತಿಯಲ್ಲಿ ಸಾಗುತ್ತದೆ. ಹಿರಿಯ ಸೋದರನಿಗೆ ರಾಜಕೀಯದಲ್ಲಿ ವಿಶೇಷವಾದ ಮಾನ್ಯತೆ ದೊರೆಯುತ್ತದೆ. ಆದಾಯದಲ್ಲಿ ಏರಿಳಿತ ಇದ್ದರೂ ತೊಂದರೆ ಕಾಣುವುದಿಲ್ಲ. ಮಾತಿನ ಬಲದಿಂದಲೇ ನಿಮ್ಮ ಕೆಲಸ ಸಾಧಿಸುವಿರಿ. ಉಷ್ಣದ ತೊಂದರೆ ಇರುತ್ತದೆ.
ಪರಿಹಾರ : ಗೋಶಾಲೆಗೆ ಧನ ಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ನೇರಳೆ ಬಣ್ಣ
ಮಕರ
ದುಡುಕಿನ ಮಾತಿನಿಂದಾಗಿ ತೊಂದರೆಗೆ ಸಿಲುಕುವಿರಿ. ಕುಟುಂಬದ ಯಾವುದೇ ಕೆಲಸವಾದರೂ ಜವಾಬ್ದಾರಿಯಿಂದ ನಿರ್ವಹಿಸುವಿರಿ. ಕಷ್ಟದಲ್ಲಿ ಇದ್ದವರಿಗೆ ಸಹಾಯ ಮಾಡುವಿರಿ. ವಿದೇಶ ಪ್ರಯಾಣ ಯೋಗವಿದೆ. ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿಯೊಂದು ಬರಲಿದೆ. ಯಾವುದೇ ರೀತಿಯ ಪ್ರಭಾವಕ್ಕೆ ಮಣಿಯದೆ ಸ್ವಂತ ನಿರ್ಧಾರಗಳಿಗೆ ಬದ್ದರಾಗುವಿರಿ. ಮಕ್ಕಳ ಯಶಸ್ಸಿನಲ್ಲಿ ಪಾಲ್ಗೊಳ್ಳುವಿರಿ.
ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ
ಕುಂಭ
ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಸರ್ಕಾರಿ ನೌಕರಿ ದೊರೆಯಲಿದೆ. ಸರ್ಕಾರದ ಸಹಕಾರ ಸಂಸ್ಥೆಯ ಒಡೆತನ ದೊರೆಯುತ್ತದೆ. ತಂದೆಯ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಬುದ್ದಿಶಕ್ತಿಗೆ ಕೊರತೆ ಇರದೇ ಹೋದರೂ ಹೆದರಿಕೆಯ ವರ್ತಿಸುವಿರಿ. ಸ್ವಂತ ವ್ಯಾಪಾರದಲ್ಲಿ ಉತ್ತಮ ವರಮಾನ ಗಳಿಸುವಿರಿ. ಹಣ್ಣಿನ ವ್ಯಾಪಾರದಲ್ಲಿ ಲಾಭವಿದೆ. ಮಾತು ಕಡಿಮೆ ಮಾಡಿ ಮೌನಿಯಾಗಿದ್ದುಕೊಂಡು ಮನದಾಸೆಯನ್ನು ಈಡೇರಿಸಿಕೊಳ್ಳುವಿರಿ.
ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಬೂದು
ಮೀನ
ವ್ಯಾಪಾರ ವ್ಯಾವಹಾರದಲ್ಲಿ ಸಾಧಾರಣ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳಲಿದ್ದಾರೆ. ಸೋದರನ ವ್ಯಾಪಾರದಲ್ಲಿ ಪಾಲುದಾರಿಕೆ ಪಡೆಯುವಿರಿ. ಬಡ ವಿದ್ಯಾರ್ಥಿಗಳಿಗೆ ಹಣದ ಸಹಾಯ ಮಾಡುವಿರಿ. ಬಂಧು ಬಳಗದವ ಬಗ್ಗೆ ಬೇಸರ ಉಂಟಾಗಿ ಅವರಿಂದ ದೂರ ಉಳಿಯುವಿರಿ. ಗಾಯಕರಿಗೆ ಅಪರೂಪದ ಅವಕಾಶ ದೊರೆಯುತ್ತದೆ. ವಾಹನ ಕೊಳ್ಳುವಿರಿ.
ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ 1
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ಕೇಸರಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
