Tomorrow Horoscope: ರಾಜಕೀಯ ಪ್ರವೇಶದ ಆಕಾಂಕ್ಷೆ ಇದ್ದಲ್ಲಿ ಉತ್ತಮ ಅವಕಾಶವೊಂದು ನಿಮ್ಮದಾಗಲಿದೆ; ದ್ವಾದಶ ರಾಶಿಗಳ ನಾಳೆಯ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ರಾಜಕೀಯ ಪ್ರವೇಶದ ಆಕಾಂಕ್ಷೆ ಇದ್ದಲ್ಲಿ ಉತ್ತಮ ಅವಕಾಶವೊಂದು ನಿಮ್ಮದಾಗಲಿದೆ; ದ್ವಾದಶ ರಾಶಿಗಳ ನಾಳೆಯ ಭವಿಷ್ಯ

Tomorrow Horoscope: ರಾಜಕೀಯ ಪ್ರವೇಶದ ಆಕಾಂಕ್ಷೆ ಇದ್ದಲ್ಲಿ ಉತ್ತಮ ಅವಕಾಶವೊಂದು ನಿಮ್ಮದಾಗಲಿದೆ; ದ್ವಾದಶ ರಾಶಿಗಳ ನಾಳೆಯ ಭವಿಷ್ಯ

26th March 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ಮಾರ್ಚ್‌ 26ರ ದಿನ ಭವಿಷ್ಯ
ಮಾರ್ಚ್‌ 26ರ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (26th March 2024 Horoscope).

ನಾಳೆಯ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಮಂಗಳವಾರ

ತಿಥಿ : ಪಾಡ್ಯ 01.15 ರವರೆಗುಗೂ ಇದ್ದು ನಂತರ ಬಿದಿಗೆ ಆರಂಭವಾಗಲಿದೆ.

ನಕ್ಷತ್ರ : ಹಸ್ತ ನಕ್ಷತ್ರವು 12.13 ರವರೆಗೂ ಇದ್ದು ನಂತರ ಚಿತ್ತ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.21

ಸೂರ್ಯಾಸ್ತ: ಸಂಜೆ 06.30

ರಾಹುಕಾಲ : 03.00 ರಿಂದ 4.30

ರಾಶಿ ಫಲ

ಮೇಷ

ವಿದ್ಯಾರ್ಥಿಗಳ ನಿರ್ಧಾರ ಬದಲಿಸಲಾಗದು. ಅಪರೂಪದ ವ್ಯಕ್ತಿಯೊಬ್ಬರ ಆಗಮನ ಆಗಲಿದೆ. ತಾಯಿಯವರು ಇಷ್ಟಪಟ್ಟ ವಾಹನವನ್ನು ಕೊಳ್ಳುವಿರಿ. ಜನರು ಹೇಳು ಹೇಳುವುದೆಲ್ಲಾ ನಿಜ ಎಂದು ನಂಬದಿರಿ. ಕಣ್ಣಿನ ತೊಂದರೆ ಉಂಟಾಗಬಹುದು. ಹಟದ ಗುಣದ ಕಾರಣ ಕೆಲವರು ನಿಮ್ಮಿಂದ ದೂರ ಉಳಿಯುತ್ತಾರೆ. ಹಣಕಾಸಿನ ವಿಚಾರದಲ್ಲಿ ಇಕ್ಕಟ್ಟಿನ ಪರಿಸ್ಥಿತಿ ಎದುರಾಗಬಹುದು. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬಿಳಿ

ವೃಷಭ

ವ್ಯಾಪಾರ ವ್ಯವಹಾರದಲ್ಲಿ ಸಮಾಧಾನಕರ ಆದಾಯ ಗಳಿಸುವಿರಿ. ವಿನಾಕಾರಣ ವಿದ್ಯಾರ್ಥಿಗಳು ಆತಂಕದ ಪರಿಸ್ಥಿತಿಯಲ್ಲಿ ಇರುತ್ತಾರೆ. ಆಸ್ತಿಯ ವಿಚಾರದಲ್ಲಿ ಆತ್ಮೀಯರ ಸಹಾಯ ಇರುತ್ತದೆ. ಸೋದರಿಯ ಭೂವಿವಾದಕ್ಕೆ ಪರಿಹಾರ ಕಂಡುಹಿಡಿಯುವಿರಿ. ರಾಜಕೀಯದಲ್ಲಿ ಪ್ರಭಾವಶಾಲಿ ವ್ಯಕ್ತಿಯಾಗುವಿರಿ. ದೃಢವಾದ ಮನಸ್ಸಿನಿಂದ ಸಮಾಜವನ್ನು ತಿದ್ದುವ ಕೆಲಸವನ್ನು ಮಾಡುವಿರಿ. ಸಾಲವಾಗಿ ಪಡೆದ ಹಣ ಹಿಂದಿರುಗಿಸುವಿರಿ. ಹಣಕಾಸಿನ ವ್ಯವಹಾರದ ಮಧ್ಯಸ್ಥಿಕೆ ಒಂದರಲ್ಲಿ ಉತ್ತಮ ಹಣವನ್ನು ಸಂಪಾದಿಸುವಿರಿ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಬೂದು

ಮಿಥುನ

ಉದ್ಯೋಗದಲ್ಲಿನ ಕೆಲಸ ಕಾರ್ಯಗಳು ತೂಗುಯ್ಯಾಲೆಯಲ್ಲಿ ಇರಲಿವೆ. ಅಧಿಕಾರಿಗಳ ಕೆಲಸದ ಮೇಲಿನ ಒತ್ತಡವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭವಿದೆ. ವಿದ್ಯಾರ್ಥಿಗಳು ಮಾನಸಿಕ ಒತ್ತಡದಿಂದ ದೂರವಾಗುತ್ತಾರೆ. ಕೆಲಸವನ್ನು ಶ್ರದ್ಧೆಯಿಂದ ಮಾಡಿದರೆ ಶುಭಫಲ ದೊರೆಯುತ್ತದೆ. ಮನಸ್ಸಿನ ವಿಷಯಗಳನ್ನು ತೋರ್ಪಡಿಸುವುದಿಲ್ಲ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕಂದು

ಕಟಕ

ಕಷ್ಟ ಎನಿಸಿದರೂ ಶ್ರದ್ಧೆಯಿಂದ ಕೈಹಿಡಿದ ಕೆಲಸಗಳನ್ನು ಪೂರ್ಣಗೊಳಿಸುವಿರಿ. ಉದ್ಯೋಗದಲ್ಲಿ ಮೇಲ್ಮಟ್ಟದ ಬದಲಾವಣೆಯ ಕೆಲಸದಲ್ಲಿ ತಲ್ಲೀನರಾಗುವಿರಿ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯಲಿದೆ. ದುಡಿದ ಹಣದಲ್ಲಿ ಬಡವರಿಗೆ ಸಹಾಯ ಮಾಡಲು ಮುಂದಾಗುವಿರಿ. ವಿದ್ಯಾರ್ಥಿಗಳು ಸಮ ವಯಸ್ಕರ ಮಧ್ಯೆ ನಾಯಕರಾಗಿ ಬಾಳುವರು. ರಾಜಕೀಯ ಪ್ರವೇಶಿಸುವ ಆಶಯ ಇದ್ದಲ್ಲಿ ಉತ್ತಮ ಅವಕಾಶವೊಂದು ನಿಮ್ಮದಾಗುತ್ತದೆ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಪ್ಪು

ಸಿಂಹ

ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ಉದ್ಯೋಗದಲ್ಲಿ ಯಾವುದೇ ರಾಜಿ ಒಪ್ಪುವುದಿಲ್ಲ. ವ್ಯಾಪಾರ ವ್ಯವಹಾರಲ್ಲಿ ವಿವಾದವೊಂದು ಎದುರಾಗಲಿದೆ. ಪ್ರತಿ ವಿಷಯದಲ್ಲಿಯೂ ನಿಮ್ಮದೇ ಅಂತಿಮ ನಿರ್ಧಾರ ಆಗಲಿದೆ. ವಂಶದ ಹಿರಿಯರನ್ನು ಬೇಟಿ ಮಾಡುವ ಅವಕಾಶ ದೊರೆಯುತ್ತದೆ. ಸ್ವಗೃಹ ಭೂಲಾಭವಿದೆ. ತಂದೆಯವರಿಂದ ಹಣದ ಸಹಾಯ ದೊರೆಯುತ್ತದೆ. ಹಣಕಾಸಿನ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ.

ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ತಿಳಿ ಹಸಿರು

ಕನ್ಯಾ

ತಪ್ಪು ಮಾಹಿತಿಯಿಂದ ಉದ್ಯೋಗದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಆರೋಗ್ಯದಲ್ಲಿ ಏರಿಳಿತಗಳು ಇರುತ್ತವೆ. ವಿದ್ಯಾರ್ಥಿಗಳು ಸ್ಥಿರವಾದ ಮನಸ್ಸಿನಿಂದ ಮುಂದಿನ ಯೋಜನೆ ರೂಪಿಸುತ್ತಾರೆ. ಸೋದರನಿಗೆ ದೂರದ ಸ್ಥಳದಲ್ಲಿ ಉದ್ಯೋಗ ದೊರೆಯುತ್ತದೆ. ಬರಹಗಾರರಿಗೆ ವಿಶೇಷವಾದ ಗೌರವಾದರಗಳು ಲಭಿಸುತ್ತವೆ. ಭೂ ಸಂಬಂಧಿತ ವ್ಯವಹಾರಗಳು ನಿಮಗೆ ಅನುಕೂಲಕರವಲ್ಲ. ಪಾಲುಗಾರಿಕೆಯ ವ್ಯಾಪಾರದಲ್ಲಿ ಆಸಕ್ತಿ ಉಂಟಾಗಲಿದೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ನಸುಗೆಂಪು

ತುಲಾ

ಉದ್ಯೋಗದಲ್ಲಿನ ತೊಂದರೆ ದೂರವಾಗಲಿದೆ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶ ಪ್ರಯಾಣ ಮಾಡುವರು. ಪಾಲುಗಾರಿಕೆಯ ವ್ಯಾಪಾರ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಇರುತ್ತದೆ. ಸ್ನೇಹಿತರೊಂದಿಗೆ ಹಣಕಾಸಿನ ಬಗ್ಗೆ ಭಿನಾಭಿಪ್ರಾಯ ಇರುತ್ತದೆ. ದಂಪತಿಗಳ ನಡುವೆ ಆತ್ಮೀಯತೆ ಮೂಡುತ್ತದೆ. ವಿರೋಧಿಗಳ ಬಗ್ಗೆ ಎಚ್ಚರಿಕೆಯಿಂದ ಇರಿ. ತಂದೆಗೆ ಸಂಬಂಧಿಸಿದ ಆಸ್ತಿಯ ವಿವಾದಕ್ಕೆ ಪ್ರಾಮುಖ್ಯತೆ ನೀಡುವುದಿಲ್ಲ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ವೃಶ್ಚಿಕ

ಉದ್ಯೋಗದಲ್ಲಿನ ಅನಾವಶ್ಯಕ ವಾದ ವಿವಾದಗಳು ದೂರಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಯಶಸ್ಸು ಗಳಿಸುವಿರಿ. ಕಲಿಕೆಯ ಅವಧಿಯಲ್ಲೇ ವಿದ್ಯಾರ್ಥಿಗಳಿಗೆ ಉದ್ಯೋಗ ಲಭಿಸುತ್ತದೆ. ಮನೆತನದ ಆಸ್ತಿ ಕಾಪಾಡುವಲ್ಲಿ ಯಶಸ್ವಿಯಾಗುವಿರಿ. ಆದಾಯದಲ್ಲಿನ ಕೊರತೆಯನ್ನು ಸರಿಪಡಿಸಲು ಸಣ್ಣ ವ್ಯಾಪಾರವನ್ನು ಆರಂಭಿಸುವಿರಿ. ಅರಿವಿಲ್ಲದೆ ವಿವಾದಿತ ಭೂಮಿಯನ್ನು ಕೊಳ್ಳುವ ಸಾಧ್ಯತೆ ಇದೆ. ವಾಹನ ಚಾಲನೆ ಮಾಡುವಾಗ ಎಚ್ಚರಿಕೆ ವಹಿಸಿ. ಬೇಸರದಿಂದ ದೂರವಾಗಲು ದೂರದ ಊರಿಗೆ ಪ್ರಯಾಣ ಬೆಳೆಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬಿಳಿ

ಧನಸ್ಸು

ಉದ್ಯೋಗದಲ್ಲಿ ಯಶಸ್ಸಿನ ಗಡಿ ದಾಟುವಿರಿ. ವ್ಯಾಪಾರದ ಲೋಪ ದೋಷವನ್ನು ಸರಿಪಡಿಸುವಿರಿ. ಕಮೀಷನ್‌ ವ್ಯವಹಾರದಲ್ಲಿ ಉತ್ತಮ ಲಾಭವಿರುತ್ತದೆ. ವಿದ್ಯಾರ್ಥಿಗಳ ಮನಸ್ಸು ಸ್ಥಿಮಿತದಲ್ಲಿ ಇರುವುದಿಲ್ಲ. ಅನಾವಶ್ಯಕ ಕೋಪಕ್ಕೆ ಒಳಗಾಗುವಿರಿ. ಅದೃಷ್ಟವಿದೆ ಆದರೆ ದೊರೆವ ಅವಕಾಶವನ್ನು ಸರಿಯಾಗಿ ಉಪಯೋಗಿಸಕೊಳ್ಳಲು ವಿಫಲರಾಗುವಿರಿ. ಪ್ರೀತಿ ವಿಶ್ವಾಸದಿಂದ ಎಲ್ಲರ ಜೊತೆ ಬೆರೆಯುವಿರಿ. ಸಂಗಾತಿಯ ಮಹದಾಸೆಯೊಂದನ್ನು ನೆರವೇರಿಸುವಿರಿ. ಅತಿಯಾದ ಹಣದ ಆಸೆ ಇರದು.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬೂದು ಬಣ್ಣ

ಮಕರ

ಆತ್ಮೀಯರ ಸಹಯೋಗದಿಂದ ಕುಟುಂಬದ ಸಮಸ್ಯೆಯೊಂದನ್ನು ಬಗೆಹರಿಸುವಿರಿ. ಹೊಂದಾಣಿಕೆಯ ಗುಣದಿಂದ ಉದ್ಯೋಗದಲ್ಲಿ ಉನ್ನತ ಸ್ಥಾನ ಪಡೆಯುವಿರಿ. ಉದ್ಯೋಗದಲ್ಲಿ ಅತಿಯಾಸೆ ಇರುವುದಿಲ್ಲ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಸಮಯಕ್ಕೆ ತಕ್ಕಂತೆ ಹೊಂದಿಕೊಳ್ಳುವ ಕಾರಣ ವಿದ್ಯಾರ್ಥಿಗಳು ಸಂತಸದಿಂದ ಇರುತ್ತಾರೆ. ನವ ದಂಪತಿಗಳು ಸಂತಸದಿಂದ ಸುಖಜೀವನ ನಡೆಸುವರು. ಮನೆತನದ ಆಸ್ತಿಯ ವಿವಾದ ಇರುತ್ತದೆ. ಕೈಕಾಲುಗಳಲ್ಲಿ ಶಕ್ತಿ ಕಡಿಮೆಯಾಗುತ್ತದೆ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಆಕಾಶ ನೀಲಿ

ಕುಂಭ

ಉದ್ಯೋಗದಲ್ಲಿನ ಬದಲಾವಣೆಗೆ ಹೊಂದಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳು ಕಲಿಕೆಯ ಜೊತೆಯಲ್ಲಿ ಮನರಂಜನೆಗೆ ಗಮನ ನೀಡುತ್ತಾರೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ಇರದೆ ಹೋದರೂ ನಷ್ಟದ ಮಾತಿಲ್ಲ. ಬೇಸರ ಕಳೆಯಲು ಸಂತೋಷಕೂಟವನ್ನು ಏರ್ಪಡಿಸುವಿರಿ. ಮಕ್ಕಳಿಗೆ ಉನ್ನತ ಅಧ್ಯಯನ ಮಾಡುವ ಅವಕಾಶ ಲಭ್ಯವಾಗುತ್ತದೆ. ಬಳಸಿದ ವಾಹನವನ್ನು ವಿಲೇವಾರಿ ಮಾಡುವಿರಿ. ಆರೋಗ್ಯವನ್ನು ಕಾಪಾಡಿಕೊಳ್ಳಲು ಸಫಲರಾಗುವಿರಿ. ಯೋಗ ಪ್ರಾಣಾಯಾಮದಲ್ಲಿ ಆಸಕ್ತಿ ಮೂಡಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು ಪೂರ್ವ

ಅದೃಷ್ಟದ ಬಣ್ಣ: ಕೆಂಪು

ಮೀನ

ಉದ್ಯೋಗದಲ್ಲಿನ ವ್ಯವಹಾರಗಳು ಸರಳವಾಗಿರುತ್ತವೆ. ಪ್ರಯತ್ನ ಪಟ್ಟಲ್ಲಿ ವ್ಯಾಪಾರ ವ್ಯವಹಾರದಲ್ಲಿನ ತೊಂದರೆಗೆ ಪರಿಹಾರ ಕಂಡುಹಿಡಿಯುವಿರಿ. ಕುಟುಂಬದ ಸದಸ್ಯರ ಸಹಾಯ ನಿಮಗಿರುತ್ತದೆ. ಸಮಾಜ ಸೇವೆ ಮಾಡುವ ಆಸೆ ಇರುತ್ತದೆ. ಸಂಘ ಸಂಸ್ಥೆಯ ಒಡೆತನ ಲಭಿಸುತ್ತದೆ. ಖರ್ಚು ವೆಚ್ಚಗಳನ್ನು ಸರಿತೂಗಿಸುವಲ್ಲಿ ಸಫಲರಾಗುವಿರಿ. ಸಾರಿಗೆ ವ್ಯವಸ್ಥೆ ಕಲ್ಪಿಸುವ ಸಂಸ್ಥೆಯನ್ನು ಆರಂಭಿಸುವಿರಿ. ನೀರಾವರಿ ಭೂಮಿಯಿಂದ ಲಾಭವಿದೆ. ಹಣ್ಣು ಮತ್ತು ತರಕಾರಿ

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಎಲೆ ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.