Tomorrow Horoscope: ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ, ಖರ್ಚು ವೆಚ್ಚಗಳ ಮೇಲೆ ಹಿಡಿತ ಅವಶ್ಯಕ; ನಾಳೆಯ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ, ಖರ್ಚು ವೆಚ್ಚಗಳ ಮೇಲೆ ಹಿಡಿತ ಅವಶ್ಯಕ; ನಾಳೆಯ ದಿನ ಭವಿಷ್ಯ

Tomorrow Horoscope: ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ, ಖರ್ಚು ವೆಚ್ಚಗಳ ಮೇಲೆ ಹಿಡಿತ ಅವಶ್ಯಕ; ನಾಳೆಯ ದಿನ ಭವಿಷ್ಯ

27th April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (27th April 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಶನಿವಾರ

ತಿಥಿ : ತದಿಗೆ ಬೆಳಗ್ಗೆ 06.26 ರವರೆಗೂ ಇದ್ದು ನಂತರ ಚೌತಿ ಆರಂಭವಾಗಲಿದೆ.

ನಕ್ಷತ್ರ : ಜ್ಯೇಷ್ಠ ನಕ್ಷತ್ರವು ರಾತ್ರಿ 02.33 ರವರೆಗೂ ಇದ್ದು ನಂತರ ಮೂಲ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.57

ಸೂರ್ಯಾಸ್ತ: ಸಂಜೆ 06.32

ರಾಹುಕಾಲ: ಬೆಳಗ್ಗೆ 09.13 ರಿಂದ 10.47

ರಾಶಿಫಲ

ಮೇಷ

ನಿಮ್ಮಲ್ಲಿನ ಕಾರ್ಯ ದಕ್ಷತೆ ಎಲ್ಲರಿಗೂ ಮಾದರಿಯಾಗಲಿದೆ. ಕಷ್ಟಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಪ್ರಗತಿ ಕಂಡುಬರುತ್ತದೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಮಕ್ಕಳು ಏಳಿಗೆ ಕಾಣುತ್ತಾರೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ನಿಮ್ಮ ಮನದಲ್ಲಿರುವ ಆಶೋತ್ತರಗಳು ಕೈಗೂಡಲಿವೆ. ಸಂಗಾತಿಯೊಂದಿಗೆ ಹಣಕಾಸಿನ ವಿಚಾರದಲ್ಲಿ ವಾದ ವಿವಾದಗಳು ಇರಲಿವೆ.

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನಸುಗೆಂಪು

ವೃಷಭ

ಸ್ನೇಹಿತರಿಂದ ದೊರೆಯುವ ಸಹಾಯ ಸಹಕಾರ ಸೋಲನ್ನು ದೂರ ಮಾಡುತ್ತದೆ. ಕೋಪ ಕಡಿಮೆ ಮಾಡಿಕೊಂಡು ಸಹನೆಯಿಂದ ವರ್ತಿಸಿರಿ. ಸಂಗಾತಿಯ ಪ್ರೀತಿ ವಿಶ್ವಾಸ ಆತ್ಮಶಕ್ತಿಯನ್ನು ಹೆಚ್ಚಿಸುತ್ತದೆ. ನಿಮ್ಮ ಕಾರ್ಯ ಕುಶಲತೆಗೆ ತಕ್ಕಂತೆ ಉದ್ಯೋಗ ದೊರೆಯುತ್ತದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಉನ್ನತ ಅಧ್ಯಯನದ ಬಗ್ಗೆ ಗಮನ ಹರಿಸುತ್ತಾರೆ. ಖರ್ಚು ವೆಚ್ಚಗಳ ಮೇಲೆ ಹಿಡಿತವಿರಲಿ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 4

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ಮಿಥುನ

ಹಣಕಾಸಿನ ಕೊರತೆ ಕಂಡು ಬರುತ್ತದೆ. ಸಮಯ ಬಂದಾಗ ಸೋದರ ಅಥವಾ ಸೋದರಿಯಿಂದ ಹಣದ ಸಹಾಯ ದೊರೆಯುತ್ತದೆ. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಗಮನ ವಹಿಸಿ. ದಂಪತಿಗಳ ನಡುವೆ ಉತ್ತಮ ಬಾಂಧವ್ಯ ಮೂಡುತ್ತದೆ. ಒಮ್ಮೆ ತೆಗೆದುಕೊಂಡ ನಿರ್ಧಾರಗಳಿಗೆ ಬದ್ಧರಾಗಿ ಕೆಲಸ ಕಾರ್ಯಗಳನ್ನು ನಿರ್ವಹಿಸಿ. ಉದ್ಯೋಗದಲ್ಲಿ ಉಂಟಾಗುವ ಬದಲಾವಣೆಗಳಿಗೆ ಹೊಂದಿಕೊಂಡು ನಡೆಯುವಿರಿ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಕಟಕ

ಹಣಕಾಸಿನ ವಿಚಾರದಲ್ಲಿ ಆಪ್ತ ಸ್ನೇಹಿತರೊಂದಿಗೆ ಮನಸ್ತಾಪ ಉಂಟಾಗುತ್ತದೆ. ನಿರಾಸಕ್ತಿ ನಿಮ್ಮನ್ನು ಕಾಡುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳಿಂದ ತೊಂದರೆ ಉಂಟಾಗಬಹುದು. ಕಿರಿಕಿರಿಯ ಸನ್ನಿವೇಶದಲ್ಲಿ ದಿಟ್ಟ ನಿರ್ಧಾರವನ್ನು ತೆಗೆದುಕೊಳ್ಳಲು ಪ್ರಯತ್ನಿಸಿ. ಮಕ್ಕಳೊಂದಿಗೆ ಸಂತೋಷದಿಂದ ಸಮಯ ಕಳೆಯುವಿರಿ. ಸಂಗಾತಿಯಿಂದ ಸಮಾಜದಲ್ಲಿ ಉನ್ನತ ಸ್ಥಾನಮಾನ ದೊರೆಯುತ್ತದೆ.  

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬೂದು

ಸಿಂಹ

ತಾಳ್ಮೆಯಿಂದ ಅಧಿಕಾರಿಗಳೊಂದಿಗೆ ವರ್ತಿಸಿದರೆ ಉದ್ಯೋಗದಲ್ಲಿ ಯಾವುದೇ ತೊಂದರೆ ಉಂಟಾಗುವುದಿಲ್ಲ. ಅವಿವಾಹಿತರಿಗೆ ವಿವಾಹ ಯೋಗವಿದೆ. ಆತ್ಮೀಯರಿಗಾಗಿ ಸಂತೋಷಕೂಟ ಏರ್ಪಡಿಸುವಿರಿ. ಕುಟುಂಬಕ್ಕೆ ಸಂಬಂಧಿಸಿದ ಹಣದ ಸಮಸ್ಯೆ ಪರಿಹರಿಸುವಿರಿ. ಆರೋಗ್ಯದಲ್ಲಿ ಏರಿಳಿತ ಉಂಟಾಗಲಿದೆ. ಸಮಯದ ಅಭಾವದಿಂದ ಯೋಜಿಸಿದ ಪ್ರವಾಸವನ್ನು ರದ್ದುಪಡಿಸುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ 5

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ : ಆಕಾಶ ನೀಲಿ

ಕನ್ಯಾ

ಕುಟುಂಬದವರ ಜೊತೆ ಸಂತೋಷದಿಂದ ಕಾಲ ಕಳೆಯುವಿರಿ. ಬಹು ಕಾಲದ ನಂತರ ಆತ್ಮೀಯರನ್ನು ಭೇಟಿ ಮಾಡುವಿರಿ. ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ. ಮನದಲ್ಲಿರುವ ನೋವು ಮತ್ತು ಬೇಸರ ಕಳೆಯಲು ಸಂಬಂಧಿಕರ ಮನೆಗೆ ತೆರಳುವಿರಿ. ಕಲಾವಿದರಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಬೇರೆಯವರ ತಪ್ಪನ್ನು ಟೀಕಿಸಿ ಮಾತನಾಡುವಿರಿ.

ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ರಕ್ತದ ಬಣ್ಣ

ತುಲಾ

ಅತಿಯಾದ ಊಹೆ ಬೇಸರ ನಿರಾಸೆ ಉಂಟುಮಾಡುತ್ತದೆ. ಕ್ರೀಡಾಮನೋಭಾವನೆಯಿಂದ ಮುಂದುವರೆಯುವುದು ಒಳ್ಳೆಯದು. ಸಂಗಾತಿಯೊಒಡನೆ ಉತ್ತಮ ಅನುಬಂಧ ಇರಲಿದೆ. ಮಕ್ಕಳ ವಿಚಾರದಲ್ಲಿ ಯಾವುದೇ ಯೋಚನೆ ಇರುವುದಿಲ್ಲ. ತಪ್ಪನ್ನು ಅರಿತ ಮಕ್ಕಳು ಸರಿಯಾದ ಹಾದಿಯಲ್ಲಿ ನಡೆಯುತ್ತಾರೆ. ಉನ್ನತ ವಿದ್ಯಾಭ್ಯಾಸದ ಕನಸು ಸುಲಭವಾಗಿ ನನಸಾಗಲಿದೆ. ಖರ್ಚು ವೆಚ್ಚದ ಮೇಲೆ ಇತಿಮಿತಿ ಇರಲಿ.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಎಲೆ ಹಸಿರು

ವೃಶ್ಚಿಕ

ಎದುರಾಗುವ ಕಷ್ಟ ನಷ್ಟಗಳನ್ನು ಎದುರಿಸಿ ಕೈಹಿಡಿದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಮನಸ್ಸಿಗೆ ಮುದ ನೀಡುವ ಸಂದೇಶವೊಂದು ಬರಲಿದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಪಾಲುದಾರಿಕೆ ವ್ಯಾಪಾರದಲ್ಲಿ ನಂಬಿಕೆ ಇರುವುದಿಲ್ಲ. ಬಿಡುವಿಲ್ಲದ ಕೆಲಸದ ನಡುವೆಯೂ ಸಂಗಾತಿ ಮತ್ತು ಮಕ್ಕಳೊಂದಿಗೆ ಸಂತಸದಿಂದ ಇರುವಿರಿ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ಧನಸ್ಸು

ಸನ್ನಿವೇಶವನ್ನು ಅರ್ಥ ಮಾಡಿಕೊಂಡು ಸೂಕ್ತ ತೀರ್ಮಾನ ತೆಗೆದುಕೊಳ್ಳುವಿರಿ. ಅರಿಯದೆ ಮಾಡುವ ತಪ್ಪಿಗೆ ವಿಷಾದ ವ್ಯಕ್ತಪಡಿಸುವಿರಿ. ಮಕ್ಕಳ ಸಾಧನೆಯಿಂದ ಸಂತಸ ಗೊಳ್ಳುವಿರಿ. ಉದ್ಯೋಗದಲ್ಲಿ ಎದುರಾಗುವ ವಿವಾದ ಒಂದನ್ನು ದೂರ ಮಾಡುವಿರಿ. ಬೇರೆಯವರ ಮಾತನ್ನು ಸುಲಭವಾಗಿ ನಂಬುವುದಿಲ್ಲ. ರಾಜಕೀಯ ಕ್ಷೇತ್ರದಲ್ಲಿ ನಿರೀಕ್ಷಿತ ಮಟ್ಟ ತಲುಪುವಿರಿ.  

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಮಕರ

ಹಣಕಾಸಿನ ಅನುಕೂಲತೆ ಉಂಟಾಗುವ ಕೆಲಸವನ್ನು ಆಯ್ದುಕೊಳ್ಳುವಿರಿ. ಮಕ್ಕಳಲ್ಲಿ ಇರುವ ಅದ್ಭುತ ಕಲ್ಪನೆಗಳಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸುವಿರಿ. ಮಕ್ಕಳ ವ್ಯಾಪಾರ ವ್ಯವಹಾರಗಳ ನಿರ್ವಹಣೆ ನಿಮ್ಮದಾಗಲಿದೆ. ತಾಯಿಗೆ ತವರಿನಿಂದ ಸಹಾಯ ದೊರೆಯಲಿದೆ. ದಂಪತಿ ನಡುವೆ ವಿಶೇಷವಾದ ಪ್ರೀತಿ ಮತ್ತು ವಿಶ್ವಾಸ ಬೆಳೆಯಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕೆಂಪು

ಕುಂಭ

ಸರಿಯಾದ ಪೂರ್ವಭಾವಿ ತಯಾರಿಕೆ ಇಲ್ಲದೆ ಯಾವುದೇ ಕೆಲಸವನ್ನು ಆರಂಭಿಸುವುದಿಲ್ಲ. ನೀವು ಮಾಡಿದ ಕೆಲಸವೆಲ್ಲಾ ಸರಿ ಎಂಬ ಭಾವನೆ ಮನದಲ್ಲಿ ಇರುತ್ತದೆ. ಸಂಗಾತಿಯೊಂದಿಗೆ ವಿಶ್ವಾಸದಿಂದ ಮಾತನಾಡಿದರೆ ಸಮಸ್ಯೆಯೊಂದು ಪರಿಹಾರ ಗೊಳ್ಳುತ್ತದೆ. ನಿಮ್ಮ ಮಾತಿನಲ್ಲಿ ನಿಗೂಢವಾದ ಅರ್ಥವಿರುತ್ತದೆ. ನೀರಿರುವ ಸ್ಥಳಗಳಲ್ಲಿ ಎಚ್ಚರಿಕೆಯಿಂದ ಇರಿ. ಮಹಿಳೆಯರಿಗೆ ಹಾರ್ಮೋನ್‌ ತೊಂದರೆ ಉಂಟಾಗಲಿದೆ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಮೀನ

ಕ್ಷಣ ಕಾಲ ಕುಟುಂಬದಲ್ಲಿ ವಿಷಾದದ ಛಾಯೆ ಉಂಟಾಗುತ್ತದೆ. ಆರ್ಥಿಕವಾಗಿ ಸದೃಢರಾಗುವಿರಿ. ಅನಾವಶ್ಯಕವಾಗಿ ಕೆಲವರಿಗೆ ಧನಸಹಾಯ ಮಾಡಬೇಕಾಗುತ್ತದೆ. ಹೊಗಳುವ ಜನರಿಂದ ಮೋಸ ಹೋಗದಿರಿ. ಸಂಗಾತಿಯೊಂದಿಗೆ ಕಿರು ಪ್ರವಾಸ ಕೈಗೊಳ್ಳುವಿರಿ. ಹವ್ಯಾಸಕ್ಕೆಂದು ಆರಂಭಿಸಿದ ಕುಶಲಕಲೆಯು ಉತ್ತಮ ಖ್ಯಾತಿ ನೀಡುತ್ತದೆ. ಯಾರು ಸಹಾಯವೂ ಇಲ್ಲವೇ ಯಾವುದೇ ಕೆಲಸ ಕಾರ್ಯಗಳನ್ನು ಮಾಡಬಲ್ಲಿರಿ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಹಳದಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.