ಕನ್ನಡ ಸುದ್ದಿ  /  Astrology  /  Tomorrow Horoscope Astrological Prediction For 27th March 2024 Horoscope Kundali News In Kannada Sts

Tomorrow Horoscope: ಸಹೋದ್ಯೋಗಿಗಳ ವರ್ತನೆಗೆ ಬೇಸತ್ತು ಕೆಲಸ ಬದಲಿಸುವ ಸಾಧ್ಯತೆ; ದ್ವಾದಶ ರಾಶಿಗಳ ನಾಳೆಯ ದಿನ ಭವಿಷ್ಯ

27th March 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (27th March 2024 Horoscope).

ನಾಳೆಯ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಬುಧವಾರ

ತಿಥಿ : ಬಿದಿಗೆ 02.55 ರವರೆಗೂ ಇರುತ್ತದೆ ನಂತರ ತದಿಗೆ ಆರಂಭವಾಗಲಿದೆ.

ನಕ್ಷತ್ರ : ಚಿತ್ತ ನಕ್ಷತ್ರ 02.25 ರವರೆಗೂ ಇದ್ದು ನಂತರ ಸ್ವಾತಿ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.19

ಸೂರ್ಯಾಸ್ತ: ಸಂಜೆ 06.30

ರಾಹುಕಾಲ : 12.00 ರಿಂದ 01.30

ರಾಶಿಫಲ

ಮೇಷ

ಉದ್ಯೋಗದಲ್ಲಿನ ನಿರೀಕ್ಷೆ ಹುಸಿಯಾಗದು. ದೈನಂದಿನ ಜೀವನದಲ್ಲಿ ಪ್ರಯೋಜನಕಾರಿ ಬದಲಾವಣೆಗಳು ಕಂಡು ಬರುತ್ತವೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯಲಿದೆ. ವಿದ್ಯಾರ್ಥಿಗಳ ಕ್ರೀಡಾ ಮನೋಭಾವನೆ ಯಶಸ್ಸನ್ನು ನೀಡಲಿದೆ. ಬಯಸಿದ ಅನುಕೂಲತೆಯ ನಡುವೆ ಮಾನಸಿಕ ಒತ್ತಡ ಇರುತ್ತದೆ. ಅನಾವಶ್ಯಕವಾದ ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವಿರಿ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ವೃಷಭ

ಅನಾವಶ್ಯಕ ಖರ್ಚುವೆಚ್ಚಗಳಿಂದ ಚಿಂತೆ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯಕ್ಕೆ ತಕ್ಕಂತ ವೆಚ್ಚ ಇರಲಿದೆ. ಹಣಕಾಸಿನ ವ್ಯವಹಾರದಲ್ಲಿ ಸಂಬಂಧಿಕರ ಜೊತೆ ಮನಸ್ತಾಪವಿರುತ್ತದೆ. ಮಾತಿನ ಮೇಲೆ ಹಿಡಿತವಿದ್ದಲ್ಲಿ ಎಲ್ಲವೂ ಒಳ್ಳೆಯದು. ವಿದ್ಯಾರ್ಥಿಗಳು ಒತ್ತಡಕ್ಕೆ ಮಣಿಯದೆ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ದಂಪತಿಗಳ ನಡುವೆ ಅನಾವಶ್ಯಕ ಬೇಸರ ಮತ್ತು ಮನಸ್ತಾಪವಿರುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಕಂದು

ಮಿಥುನ

ಪ್ರಯೋಜನವಿಲ್ಲದ ವಿಚಾರಗಳಿಗೆ ಸಮಯ ವ್ಯರ್ಥವಾಗಲಿದೆ. ಹಿರಿಯರ ಅನುಭವದಿಂದ ಪಾಠ ಕಲಿತು ಸರಿ ದಾರಿಯಲ್ಲಿ ನಡೆಯುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ದೊರೆವ ಆದಾಯವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ವಿದ್ಯಾರ್ಥಿಗಳು ದಿಟ್ಟ ನಿಲುವಿನಿಂದ ಕಲಿಕೆಯಲ್ಲಿ ಮುನ್ನಡೆಯುತ್ತಾರೆ. ಅವಶ್ಯಕತೆ ಇದ್ದಷ್ಟು ಹಣವನ್ನು ಬುದ್ಧಿವಂತಿಕೆಯಿಂದ ಸಂಪಾದಿಸುವಿರಿ. ಸ್ವಂತ ಉದ್ದಿಮೆ ಇದ್ದಲ್ಲಿ ಕಾರ್ಮಿಕರ ನಡುವೆ ವಾದ ವಿವಾದಗಳು ಇರುತ್ತವೆ. ಏಕಾಂಗಿತನವನ್ನು ಇಷ್ಟಪಡುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಕಟಕ

ಉದ್ಯೋಗದಲ್ಲಿ ಅಸಹಜ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ವ್ಯಾಪಾರ ವ್ಯವಹಾರಗಳು ಸುಗಮವಾಗಿ ನಡೆಯಲಿವೆ. ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಆಸಕ್ತಿ ವಹಿಸುತ್ತಾರೆ. ವಾಸವಿರುವ ಮನೆಯನ್ನು ಬದಲಿಸುವಿರಿ. ಹೊಸ ವಿಚಾರಗಳಲ್ಲಿ ಆಸಕ್ತಿ ತೋರುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಹಣ ಬೇಕಾಗುತ್ತದೆ. ಹಣದ ಕೊರತೆಯಿಂದ ಪಾರಾಗಲು ಹೊಸ ಯೋಜನೆಗಳನ್ನು ರೂಪಿಸುವಿರಿ. ಪಾಲುಗಾರಿಕೆಯ ವ್ಯಾಪಾರದಲ್ಲಿ ಲಾಭ ಇರುತ್ತದೆ. ಸಂಗಾತಿಯೊಂದಿಗೆ ಮಾತುಕತೆಯಿಂದ ಆತ್ಮವಿಶ್ವಾಸ ಮೂಡುತ್ತದೆ.

ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಿತ್ತಳೆ

ಸಿಂಹ

ಬೇರೆಯವರ ಸರಿಯಾದ ಸಾಕ್ಷಿ ಇಲ್ಲದ ಮಾತನ್ನು ನಂಬಿದರೆ ತೊಂದರೆ ಖಚಿತ. ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿ ಸಾಧನೆಯತ್ತ ನಡೆಯುತ್ತಾರೆ. ಸಮಾಜದ ಗಣ್ಯ ವ್ಯಕ್ತಿಯೊಬ್ಬರ ಆಶ್ರಯ ದೊರೆಯುತ್ತದೆ. ದಾಂಪತ್ಯದಲ್ಲಿ ಇದ್ದ ಸಂಶಯವೊಂದು ದೂರವಾಗುತ್ತದೆ. ಕುಟುಂಬದ ಸದಸ್ಯದಿಂದ ಹಣದ ಸಹಾಯ ದೊರೆಯುತ್ತದೆ. ಕುಟುಂಬದ ಹೆಣ್ಣು ಮಕ್ಕಳಿಗೆ ಸಿಹಿ ಸುದ್ದಿಯೊಂದು ಬರಲಿದೆ.

ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಹಳದಿ ಬಣ್ಣ

ಕನ್ಯಾ

ಉದ್ಯೋಗದಲ್ಲಿ ಬಡ್ತಿ ದೊರೆತು ಪರ ಸ್ಥಳಕ್ಕೆ ತೆರಳುವ ಸಾಧ್ಯತೆಗಳಿವೆ. ವ್ಯಾಪಾರ ವ್ಯವಹಾರಗಳಲ್ಲಿ ಸಂಗಾತಿಯ ಪಾತ್ರ ಅತಿ ಮುಖ್ಯವಾಗುತ್ತದೆ. ಹೆಚ್ಚಿನ ಲಾಭದ ಆಸೆ ಇರುವುದಿಲ್ಲ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಉತ್ತಮ ಫಲಿತಾಂಶ ಗಳಿಸುತ್ತಾರೆ. ಹಣಕಾಸಿನ ವಿವಾದದಿಂದ ಪಾರಾಗುವಿರಿ. ಆತ್ಮೀಯರ ಸಹಾಯದಿಂದ ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ಮಕ್ಕಳಿಗೆ ದುಬಾರಿ ಉಡುಗೊರೆ ನೀಡುವಿರಿ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು ನೈರುತ್ಯ

ಅದೃಷ್ಟದ ಬಣ್ಣ: ಹಸಿರು

ತುಲಾ

ಪ್ರಮುಖ ವಿಚಾರವನ್ನು ಮರೆವ ಕಾರಣ ಉದ್ಯೋಗದಲ್ಲಿ ಗಲಿಬಿಲಿಯ ವಾತಾವರಣ ಉಂಟಾಗುತ್ತದೆ. ಕೈ ಹಿಡಿದ ಕೆಲಸ ಪೂರೈಸುವವರೆಗೂ ವಿಶ್ರಾಂತಿ ಇರದು. ಕಡಿಮೆ ಬಂಡವಾಳದ ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ ಗಳಿಸಲು ಪ್ರಯತ್ನಿಸುವಿರಿ. ಭೂ ವ್ಯವಹಾರದಲ್ಲಿ ಉತ್ತಮ ಲಾಭವಿದೆ. ತಂದೆಯವರ ಸಹಾಯದಿಂದ ಹಣಕಾಸಿನ ಸಮಸ್ಯೆಯೊಂದು  ನೆರವೇರಲಿದೆ. ವಂಶಾಧಾರಿತ ವೃತ್ತಿಯಿಂದ ಉತ್ತಮ ಆದಾಯ ಗಳಿಸುವಿರಿ. ಮನೆಯಲ್ಲಿರುವ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ

ವೃಶ್ಚಿಕ

ಒತ್ತಡದ ಸನ್ನಿವೇಶದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವಿರಿ. ನಿಮ್ಮ ನೇರವಾದ ನಡೆ ನುಡಿಗೆ ಎಲ್ಲರೂ ಬೇಸರಗೊಳ್ಳುತ್ತಾರೆ. ಬೇಗನೆ ಕೋಪಗೊಳ್ಳುವಿರಿ ಅದರಿಂದ ಯಾರಿಗೂ ತೊಂದರೆ ಆಗದು. ತಂದೆಯವರ ಪ್ರಭಾವಕ್ಕೆ ಒಳಗಾಗಿ ಮನೆಯ ಜವಾಬ್ದಾರಿಯನ್ನು ವಹಿಸಿಕೊಳ್ಳುವಿರಿ. ಉದ್ಯೋಗದಲ್ಲಿ ತೊಂದರೆ ಬಾರದು. ಪಾಲುಗಾರಿಕೆಯ ವ್ಯಾಪಾರದ ಹಕ್ಕನ್ನು ಕಾನೂನುರೀತ್ಯ ಪಡೆಯುವಿರಿ. ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ಬೇಸರ ಉಂಟಾಗುತ್ತದೆ. ದೊರೆವ ಅವಕಾಶವನ್ನು ಲಾಭವಾಗಿ ಪರಿವರ್ತಿಸಿಕೊಳ್ಳುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನೇರಳೆ

ಧನಸ್ಸು

ವ್ಯಾಪಾರದಲ್ಲಿನ ಲೋಪ ದೋಷವನ್ನು ಸರಿಪಡಿಸುವಿರಿ. ಕಮೀಷನ್‌ ವ್ಯವಹಾರದಲ್ಲಿ ಉತ್ತಮ ಲಾಭವಿರುತ್ತದೆ. ವಿದ್ಯಾರ್ಥಿಗಳ ಮನಸ್ಸು ಭಯದ ಕಾರಣ ಸ್ಥಿಮಿತದಲ್ಲಿ ಇರುವುದಿಲ್ಲ. ಅನಾವಶ್ಯಕ ಕೋಪಕ್ಕೆ ಒಳಗಾಗುವಿರಿ. ಅದೃಷ್ಟವಿದೆ ಆದರೆ ದೊರೆವ ಅವಕಾಶವನ್ನು ಸರಿಯಾಗಿ ಉಪಯೋಗಿಸಕೊಳ್ಳಲು ವಿಫಲರಾಗುವಿರಿ. ಪ್ರೀತಿ ವಿಶ್ವಾಸದಿಂದ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ಸಂಗಾತಿಯ ಬೇಡಿಕೆಯನ್ನು ಈಡೇರಿಸುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

.ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಗುಲಾಬಿ

ಮಕರ

ಶ್ರದ್ಧೆಯಿಂದ ಕಷ್ಟ ಪಟ್ಟು ಕೆಲಸ ಮಾಡುವಲ್ಲಿ ಎಲ್ಲರಿಗೂ ಮಾದರಿಯಾಗುವಿರಿ. ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆ ದೊರೆಯಲಿದೆ. ಸಮಯಕ್ಕೆ ಸರಿಯಾಗಿ ತೀರ್ಮಾನ ತೆಗೆದುಕೊಂಡಲ್ಲಿ ವಿಪತ್ತಿನಿಂದ ಪಾರಾಗಬಹುದು. ಆಧುನಿಕ ತಂತ್ರಜ್ಞಾನದ ಬಗ್ಗೆ ವಿಶೇಷವಾದ ಅಧ್ಯಯನ ಮಾಡುವಿರಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಜವಾಬ್ದಾರಿ ದೊರೆಯುತ್ತದೆ. ಸಮಾಜದಲ್ಲಿ ಉನ್ನತ ಸ್ಥಾನ ಮಾನ ದೊರೆಯುತ್ತದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಕುಂಭ

ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿಸಿದ ಮಟ್ಟ ತಲುಪುವಿರಿ. ಹಿರಿಯ ಅಧಿಕಾರಿಗಳ ಅನುಕಂಪ ಪಡೆಯುವಿರಿ. ಹಣದ ವ್ಯಾಮೋಹ ಇರದು. ವಿದ್ಯಾರ್ಥಿಗಳು ಮೌನಕ್ಕೆ ಶರಣಾಗುವರು. ಆತ್ಮೀಯರ ವ್ಯಾಪಾರದಲ್ಲಿ ಪಾಲುಗಾರಿಕೆ ಪಡೆಯುವಿರಿ. ಕಷ್ಟವಿಲ್ಲದ ಸಂಪಾದನೆಯ ದಾರಿಯನ್ನು ಹುಡುಕುವಿರಿ. ಹಣದ ವಿವಾದವೊಂದು ಎದುರಾಗಲಿದೆ. ಮಾರಾಟ ಪ್ರತಿನಿಧಿಗಳು ಉತ್ತಮ ಆದಾಯ ಗಳಿಸುತ್ತಾರೆ. ಜನಸೇವೆ ಮಾಡುವ ಆಸೆ ನನಸಾಗುತ್ತದೆ. 

ಪರಿಹಾರ : . ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು ನೈರುತ್ಯ

ಅದೃಷ್ಟದ ಬಣ್ಣ: ಬೂದು ಬಣ್ಣ

ಮೀನ

ಉದ್ಯೋಗದಲ್ಲಿ ನಿಮ್ಮದೇ ನಿರ್ಧಾರಗಳಿಗೆ ಬದ್ದರಾಗುವಿರಿ. ಹಣಕಾಸಿನ ವಿಚಾರದಲ್ಲಿ ಯಾರೊಬ್ಬರ ಸಲಹೆಯನ್ನೂ ಪಾಲಿಸುವುದಿಲ್ಲ. ಸಹೋದ್ಯೋಗಿಗಳ ವರ್ತನೆಗೆ ಬೇಸತ್ತು ಉದ್ಯೋಗ ಬದಲಿಸುವಿರಿ. ಯಾರ ಸಹಾಯವೂ ಇಲ್ಲದೆ ಸ್ವತಂತ್ರವಾಗಿ ಕೆಲಸ ನಿರ್ವಹಿಸಬಲ್ಲಿರಿ. ವಿದ್ಯಾರ್ಥಿಗಳಿಗೆ ಶಿಕ್ಷಕರ ಸಹಾಯ ದೊರೆಯಲಿದೆ. ವಂಶಾಧಾರಿತ ವ್ಯಾಪಾರದಿಂದ ಆದಾಯ ಗಳಿಸುವಿರಿ. ತಂದೆಯವರಿಗೆ ಸಂಬಂಧಿಸಿದ ಭೂವಿವಾದವನ್ನು ಬಗೆಹರಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಕಂದು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).