ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ವಿದ್ಯಾರ್ಥಿಗಳ ಪ್ರಯತ್ನಕ್ಕೆ ತಕ್ಕ ಪ್ರತಿಫಲ, ವಿದೇಶದಲ್ಲಿ ಕೆಲಸ ದೊರೆಯುವ ಸಾಧ್ಯತೆ; ನಾಳೆಯ ದಿನ ಭವಿಷ್ಯ

Tomorrow Horoscope: ವಿದ್ಯಾರ್ಥಿಗಳ ಪ್ರಯತ್ನಕ್ಕೆ ತಕ್ಕ ಪ್ರತಿಫಲ, ವಿದೇಶದಲ್ಲಿ ಕೆಲಸ ದೊರೆಯುವ ಸಾಧ್ಯತೆ; ನಾಳೆಯ ದಿನ ಭವಿಷ್ಯ

27th May 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ವಿದ್ಯಾರ್ಥಿಗಳ ಪ್ರಯತ್ನಕ್ಕೆ ತಕ್ಕ ಪ್ರತಿಫಲ, ವಿದೇಶದಲ್ಲಿ ಕೆಲಸ ದೊರೆಯುವ ಸಾಧ್ಯತೆ; ನಾಳೆಯ ದಿನ ಭವಿಷ್ಯ
ವಿದ್ಯಾರ್ಥಿಗಳ ಪ್ರಯತ್ನಕ್ಕೆ ತಕ್ಕ ಪ್ರತಿಫಲ, ವಿದೇಶದಲ್ಲಿ ಕೆಲಸ ದೊರೆಯುವ ಸಾಧ್ಯತೆ; ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (27th May 2024 Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಸೋಮವಾರ

ತಿಥಿ: ಚೌತಿ 04.27 ರವರೆಗೂ ಇರುತ್ತದೆ ನಂತರ ಪಂಚಮಿ ಆರಂಭವಾಗುತ್ತದೆ.

ನಕ್ಷತ್ರ: ಪೂರ್ವಾಷಾಢ ನಕ್ಷತ್ರವು 10.12 ರವರೆಗೂ ಇದ್ದು ನಂತರ ಉತ್ತರಾಷಾಢ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ05.52

ಸೂರ್ಯಾಸ್ತ: ಸಂಜೆ 06.40

ರಾಹುಕಾಲಳ: ಬೆಳಗ್ಗೆ 07.32 ರಿಂದ 09.08

ಮೇಷ

ಕುಟುಂಬದಲ್ಲಿ ಬೇಸರದ ಘಟನೆಯೊಂದು ನಡೆಯುತ್ತದೆ. ಸ್ವಂತ ಕೆಲಸಗಳಿಗೆ ಮೊದಲ ಆದ್ಯತೆ ನೀಡುವಿರಿ. ಮಕ್ಕಳ ವಿದ್ಯಾಭ್ಯಾಸದ ವಿಚಾರಗಳನ್ನು ಮೊದಲು ಪೂರ್ಣಗೊಳಿಸಲು ಪ್ರಯತ್ನಿಸಿ. ಮಕ್ಕಳು ವಯಸ್ಸಿಗೆ ಮೀರಿದ ಜವಾಬ್ದಾರಿ ತೋರುತ್ತಾರೆ. ಮನೆಯನ್ನು ಕೊಳ್ಳುವ ಆಸೆ ನೆರವೇರುವ ಕಾಲ ಇದಾಗಿದೆ. ವಿದೇಶಿ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಹಿರಿಯ ಅಧಿಕಾರಿಗಳ ಪ್ರಶಂಸೆಯಿಂದ ಸಂತೋಷವಾಗಿರುತ್ತೀರಿ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನಸು ಗೆಂಪು

ವೃಷಭ

ವ್ಯಾಪಾರ ವ್ಯವಹಾರದಲ್ಲಿ ದೊರೆಯುವ ಆದಾಯದಲ್ಲಿ ಕೊರತೆ ಉಂಟಾಗುತ್ತದೆ. ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸಮಸ್ಯೆಯನ್ನು ಬಗೆಹರಿಸುವಿರಿ. ಅವಶ್ಯಕತೆ ಇದ್ದಾಗ ಸ್ನೇಹಿತರ ಮತ್ತು ಸಂಬಂಧಿಗಳ ಸಹಾಯ ದೊರೆಯುತ್ತದೆ. ಆರೋಗ್ಯ್ಕದ ಬಗ್ಗೆ ಎಚ್ಚರಿಕೆ ವಹಿಸಿ. ಹಣಕಾಸಿನ ವಿಚಾರದಲ್ಲಿ ಆತ್ಮೀಯರ ಸಲಹೆ ತಿರಸ್ಕರಿಸುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ.

ಪರಿಹಾರ: ದೇವರಮನೆಯಲ್ಲಿ ತುಪ್ಪದ ದೀಪ ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಮಿಥುನ

ಉದ್ಯೋಗದಲ್ಲಿ ದೊರೆಯುವ ಫಲಿತಾಂಶಗಳು ನಿಮಗೆ ಅನುಕೂಲಕರವಾಗಿರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ತಿರಸ್ಕಾರದ ಮನೋಭಾವನೆ ತೋರುವಿರಿ. ವಿದ್ಯಾರ್ಥಿಗಳು ನಿರ್ಧಿಷ್ಟ ವಿಚಾರದ ಬಗ್ಗೆ ಅಧ್ಯಯನ ಮಾಡುತ್ತಾರೆ. ವಧು ವರಾನ್ವೇಷನಾ ಕೇಂದ್ರದಂತಹ ಸೇವಾ ನಿರತರಿಗೆ ಹಣದ ತೊಂದರೆ ಇರುವುದಿಲ್ಲ. ಸ್ವಂತ ಮನೆ ಕೊಳ್ಳುವ ವಿಚಾರ ಮುಂದೆ ಹೋಗುತ್ತದೆ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಬಿಳಿ

ಕಟಕ

ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಾಣದು. ವಿದ್ಯಾರ್ಥಿಗಳ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸರ್ಕಾರಿ ಉದ್ಯೋಗ ದೊರೆವ ಸಾಧ್ಯತೆ ಇದೆ. ವಿಶ್ರಾಂತಿ ಇಲ್ಲದ ದುಡಿಮೆ ಇರುತ್ತದೆ. ಮಕ್ಕಳಿಗೆ ವಿವಾಹದ ಮಾತುಕತೆ ಆಗಲಿದೆ. ಐಷಾರಾಮಿ ಜೀವನ ನಡೆಸುವಿರಿ. ಕುಟುಂಬದಲ್ಲಿನ ವಯೋವೃದ್ದರು ಯಾತ್ರಾಸ್ಥಳಕ್ಕೆ ಪ್ರವಾಸ ಬೆಳೆಸುತ್ತಾರೆ.

ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬೂದು

ಸಿಂಹ

ಹಣಕಾಸಿನ ವಿಚಾರದಲ್ಲಿ ಯಾವುದೇ ತೊಂದರೆ ಕಾಣದು. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ. ವಿದ್ಯಾರ್ಥಿಗಳು ಯಾರ ಒತ್ತಡಕ್ಕೂ ಮಣಿಯದೇ ಸ್ವಂತ ನಿರ್ಧಾರಗಳಿಗೆ ಬದ್ಧರಾಗುತ್ತಾರೆ. ಆತುರದಿಂದ ಅಪೂರ್ವವಾದ ಅವಕಾಶವನ್ನು ಕಳೆದುಕೊಳ್ಳುವಿರಿ. ಗೃಹಿಣಿಯರ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಮಕ್ಕಳ ಜೀವನ ರೂಪಿಸುವಲ್ಲಿ ದಿಟ್ಟ ತೀರ್ಮಾನವನ್ನು ತೆಗೆದುಕೊಳ್ಳುವಿರಿ.

ಪರಿಹಾರ : ಹಣೆಯಲ್ಲಿ ತಿಲಕ ಇಟ್ಟು ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಆಕಾಶ ನೀಲಿ

ಕನ್ಯಾ

ತಂದೆಯ ವ್ಯಾಪಾರ ವ್ಯವಹಾರದಲ್ಲಿ ಸಹಕಾರ ನೀಡುವಿರಿ. ವಿದ್ಯಾರ್ಥಿಗಳಿಗೆ ಆಧ್ಯಾತ್ಮಿಕತೆ ಬಗ್ಗೆ ಆಸಕ್ತಿ ಮೂಡುತ್ತದೆ. ಧಾರ್ಮಿಕ ಜ್ಞಾನ ಪಡೆದುಕೊಳ್ಳುವ ತವಕವಿರುತ್ತದೆ. ಸಾರ್ವಜನಿಕ ಸೇವಾ ಕೇಂದ್ರಗಳ ನಿರ್ವಹಣೆಯಲ್ಲಿ ಜನಪ್ರಿಯತೆ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಹಣಕಾಸಿನ ಸಂಸ್ಥೆಯಲ್ಲಿ ಉದ್ಯೋಗ ಲಬಿಸುತ್ತದೆ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ .

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು ಉತ್ತರ

ಅದೃಷ್ಟದ ಬಣ್ಣ: ಕೆಂಪು

ತುಲಾ

ನಿಮ್ಮಲ್ಲಿರುವ ಕ್ರಿಯಾಶೀಲ ವ್ಯಕ್ತಿತ್ವ ಎಲ್ಲರ ಗಮನ ಸೆಳೆಯುತ್ತದೆ. ನೇರ ನಿಷ್ಠುರವಾಗಿ ಮಾತನಾಡುವುದರಿಂದ ವಿರೋಧಿಗಳು ಇರುತ್ತಾರೆ. ಉದ್ಯೋಗದಲ್ಲಿ ನಿಮ್ಮಲ್ಲಿನ ಕರ್ತವ್ಯ ಪ್ರಜ್ಞೆಯನ್ನು ಎಲ್ಲರೂ ಅಭಿನಂದಿಸುತ್ತಾರೆ. ಹಿರಿಯ ಅಧಿಕಾರಿಗಳ ಪ್ರಶಂಸೆ ಪಡೆಯುವಿರಿ. ವಿದ್ಯಾರ್ಥಿಗಳು ಸಹನೆಯಿಂದ ತಮ್ಮ ಗುರಿ ತಲುಪುತ್ತಾರೆ. ರುಚಿಯಾದ ಆಹಾರ ಇಷ್ಟ ಪಡುವಿರಿ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು ಈಶಾನ್ಯ

ಅದೃಷ್ಟದ ಬಣ್ಣ: ಎಲೆ ಹಸಿರು

ವೃಶ್ಚಿಕ

ಹಣಕಾಸಿನ ವ್ಯವಹಾರದಲ್ಲಿ ಇದ್ದ ತೊಂದರೆ ದೂರವಾಗುತ್ತದೆ. ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಬುದ್ಧಿವಂತಿಕೆಯ ತೀರ್ಮಾನವನ್ನುತೆಗೆದುಕೊಳ್ಳುತ್ತಾರೆ. ಸಾಲದ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಬೇಕು. ಮನೆಯಲ್ಲಿ ಧಾರ್ಮಿಕ ಕಾರ್ಯವೊಂದು ನಡೆಯಲಿದೆ. ಆತ್ಮೀಯರ ಆಗಮನ ಮನಸ್ಸಿಗೆ ಸಂತೋಷವನ್ನು ಉಂಟುಮಾಡುತ್ತದೆ. ಮುಂಗೋಪದ ಕಾರಣ ಆತ್ಮೀಯರು ನಿಮ್ಮಿಂದ ದೂರ ಉಳಿಯುತ್ತಾರೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೇಸರಿ

ಧನಸ್ಸು

ಉದ್ಯೋಗದಲ್ಲಿ ನಿಧಾನಗತಿಯ ಪ್ರಗತಿ ಕಂಡು ಬರುತ್ತದೆ. ಯಾವುದೇ ವಿಚಾರವಾಗಲೀ ತಾಳ್ಮೆಯಿಂದ ಇರಿ. ವಿದ್ಯಾರ್ಥಿಗಳು ಚಂಚಲ ಮನಸ್ಥಿತಿಯಿಂದ ಕಲಿಕೆಯಲ್ಲಿ ಮುಂದುವರಿಯುತ್ತಾರೆ. ಬೇರೆಯವರಿಗೆ ಅಸಾಧ್ಯವೆನಿಸುವ ಕೆಲಸ ಕಾರ್ಯಗಳನ್ನು ಸುಲಭವಾಗಿ ಮಾಡಬಲ್ಲಿರಿ. ಸಮಯಕ್ಕೆ ತಕ್ಕಂತೆ ತೆಗೆದುಕೊಳ್ಳುವ ಬುದ್ಧಿವಂತಿಕೆಯ ನಿರ್ಧಾರಗಳನ್ನು ತೊಂದರೆಯಿಂದ ಪಾರು ಮಾಡುತ್ತದೆ.

ಪರಿಹಾರ : ತಾಯಿಯ ಆಶೀರ್ವಾದ ಪಡೆದು ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಮಕರ

ದಾಂಪತ್ಯದಲ್ಲಿ ಸಂತೋಷಕರ ವಾತಾವರಣ ಉಂಟಾಗುತ್ತದೆ. ಜನರ ಉಪಯೋಗಕ್ಕಾಗಿ ಅನೇಕ ಕೆಲಸಗಳನ್ನು ಮಾಡುವಿರಿ. ವಿದ್ಯಾರ್ಥಿಗಳು ಶುದ್ದಮನಸ್ಸಿನಿಂದ ಕೆಲಸ ನಿರ್ವಹಿಸುತ್ತಾರೆ. ನಿಮ್ಮಲ್ಲಿನ ಕಾರ್ಯತತ್ಪರತೆ ಎಲ್ಲರ ಪ್ರಶಂಸೆ ವ್ಯಕ್ತವಾಗುತ್ತದೆ. ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು ಪ್ರಯತ್ನಿಸುವಿರಿ. ಒಳ್ಳೆಯ ಮನಸ್ಸಿದ್ದರೂ ದುಡುಕಿನ ಮಾತಿನಿಂದಾಗಿ ವಿರೋಧ ಎದುರಿಸುವಿರಿ.

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕೆಂಪು

ಕುಂಭ

ವಿದ್ಯಾರ್ಥಿಗಳು ಕ್ರಿಯಾಶೀಲತೆಯಿಂದ ಎಲ್ಲರ ಗಮನ ಸೆಳೆಯುತ್ತಾರೆ. ಪರರ ಕಷ್ಟಕ್ಕೆ ಸಹಾಯ ಮಾಡುವಿರಿ. ಬೇಸರದಿಂದ ಉದ್ಯೋಗವನ್ನು ಬದಲಾಯಿಸುವಿರಿ. ಕೃಷಿ ಉತ್ಪನ್ನಗಳ ಮಾರಾಟದಲ್ಲಿ ಲಾಭವಿರುತ್ತದೆ. ವಿವಾಹವು ನಿಮ್ಮ ನೇತೃತ್ವದಲ್ಲಿ ನಡೆಯಲಿದೆ. ನಿಮ್ಮ ನೆರೆಹೊರೆಯವರಿಂದ ಉತ್ತಮ ಅನುಕೂಲತೆಯನ್ನು ಗಳಿಸುವಿರಿ. ಅನಿರೀಕ್ಷಿತ ಧನಲಾಭವಿದೆ. ದೂರದ ಸಂಬಂಧಿಕರು ಮನೆಗೆ ಬೇಟಿ ನೀಡುತ್ತಾರೆ.

ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಹಳದಿ

ಮೀನ

ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ. ರಕ್ತದ ಒತ್ತಡದ ಸಮಸ್ಯೆ ಇದ್ದಲ್ಲಿ ಎಚ್ಚರಿಕೆಯಿಂದಿರಿ. ವಿದ್ಯಾರ್ಥಿಗಳು ಬುದ್ಧಿವಂತಿಕೆಯಿಂದ ತಮ್ಮ ಕಾರ್ಯ ಸಾಧಿಸುತ್ತಾರೆ. ನಿಮ್ಮ ಆಕರ್ಷಕ ಮಾತಿನಿಂದ ಎಲ್ಲರ ಮನ ಗೆಲ್ಲುವಿರಿ. ಆದಾಯ ಹೆಚ್ಚಿದರೂ ಉಳಿತಾಯ ಮಾಡಲು ಮನಸ್ಸು ಮಾಡುವುದಿಲ್ಲ. ಅವಿವಾಹಿತರಿಗೆ ವಿವಾಹದ ಮಾತುಕತೆ ಆಗಲಿದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಇರುತ್ತದೆ.

ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ನಸು ಗೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).