ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಮಿತಿ ಮೀರಿದ ಖರ್ಚಿನಿಂದ ಮನಸ್ಸಿಗೆ ಬೇಸರ, ಸ್ನೇಹಿತರಿಂದ ಸಾಲ ಪಡೆಯುವಿರಿ; ನಾಳೆಯ ದಿನ ಭವಿಷ್ಯ

Tomorrow Horoscope: ಮಿತಿ ಮೀರಿದ ಖರ್ಚಿನಿಂದ ಮನಸ್ಸಿಗೆ ಬೇಸರ, ಸ್ನೇಹಿತರಿಂದ ಸಾಲ ಪಡೆಯುವಿರಿ; ನಾಳೆಯ ದಿನ ಭವಿಷ್ಯ

28th April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (28th April 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಭಾನುವಾರ

ತಿಥಿ : ಚೌತಿ ಬೆಳಗ್ಗೆ 06.11 ರವರೆಗೂ ಇದ್ದು ನಂತರ ಉಪರಿ ಪಂಚಮಿ ಇರುತ್ತದೆ.

ನಕ್ಷತ್ರ : ಮೂಲ ನಕ್ಷತ್ರವು ರಾತ್ರಿ 02.35 ರವರೆಗೂ ಇದ್ದು ನಂತರ ಪೂರ್ವಾಷಾಢ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ ಬೆಳಗ್ಗೆ 05.58

ಸೂರ್ಯಾಸ್ತ: ಸಂಜೆ 06.32

ರಾಹುಕಾಲ: ಸಂಜೆ 05.03 ರಿಂದ 06.37

ರಾಶಿಫಲ

ಮೇಷ

ಬಂಧು ಬಳಗದವರ ಜೊತೆ ಯಾತ್ರಾ ಸ್ಥಳಕ್ಕೆ ಭೇಟಿ ನೀಡುವಿರಿ. ಜೀವನದಲ್ಲಿ ನಡೆದು ಹೋದ ಕೆಲವೊಂದು ಘಟನೆಗಳು ಉತ್ತಮ ಪಾಠವನ್ನು ಕಲಿಸುತ್ತದೆ. ನಿಮ್ಮ ಕಷ್ಟಕ್ಕೆ ತಕ್ಕಂತೆ ಫಲಿತಾಂಶವು ಲಭಿಸುತ್ತದೆ. ಅನಾವಶ್ಯಕವಾಗಿ ಸಮಯ ಹಾಳು ಮಾಡುವುದಿಲ್ಲ. ಕುಟುಂಬಕ್ಕೆ ಅಥವಾ ಸಮಾಜಕ್ಕೆ ಉಪಯುಕ್ತವಾದ ಕೆಲಸದಲ್ಲಿ ತಲ್ಲೀನರಾಗುವಿರಿ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಳದಿ

ವೃಷಭ

ನಿಸ್ವಾರ್ಥ ಪ್ರೀತಿ ಎಲ್ಲರ ಮನ ಗೆಲ್ಲುತ್ತದೆ. ಉತ್ತಮ ಹಾಸ್ಯ ಪ್ರಜ್ಞೆ ಇರುತ್ತದೆ. ಸಂಬಂಧಿಕರ ಹಣಕಾಸಿನ ಕೊರತೆಯು ಕಡಿಮೆಯಾಗಲು ಸಹಾಯ ಮಾಡುವಿರಿ. ಗಳಿಸಿದ ಆದಾಯದಲ್ಲಿ ಒಂದು ಭಾಗವನ್ನು ಸಮಾಜ ಸೇವೆಗೆ ಮೀಸಲಿಡುವಿರಿ. ದಂಪತಿಗಳ ನಡುವೆ ಉತ್ತಮ ಬಾಂಧವ್ಯ ಇರಲಿದೆ. ಉದ್ಯೋಗದಲ್ಲಿ ನಿರೀಕ್ಷಿಸಿದ ಯಶಸ್ಸು ನಿಮ್ಮದಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆಸಕ್ತಿ ತೋರುವುದಿಲ್ಲ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ 10

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಹಸಿರು

ಮಿಥುನ

ಸಂಗಾತಿ ಮತ್ತು ಮಕ್ಕಳಿಗೆ ಚಿನ್ನದ ಆಭರಣಗಳನ್ನು ಖರೀದಿಸಲು ನಿರ್ಧರಿಸುವಿರಿ. ಆದಾಯಕ್ಕಿಂತಲೂ ಹೆಚ್ಚು ಖರ್ಚು ವೆಚ್ಚಗಳು ಇರಲಿವೆ. ಕುಟುಂಬದ ದಂಪತಿಗಳಲ್ಲಿ ಅನುಬಂಧ ಉಂಟಾಗುತ್ತದೆ. ತಂದೆ ಮತ್ತು ತಾಯಿಯ ಜೊತೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಬಹುದಿನದಿಂದ ಕೂಡಿಟ್ಟ ಹಣವನ್ನು ಖರ್ಚು ಮಾಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೀಲಿ

ಕಟಕ

ಹಣದ ವಿಚಾರದಲ್ಲಿ ದಂಪತಿ ನಡುವೆ ವಾದ ವಿವಾದಗಳಿರುತ್ತವೆ. ಕುಟುಂಬದಲ್ಲಿ ಬಿಗುವಿನ ವಾತಾವರಣ ಇರುತ್ತದೆ. ಮನದಲ್ಲಿ ಒಳ್ಳೆಯ ಯೋಚನೆಗಳು ಮೂಡಿದರೂ ಕಾರ್ಯ ರೂಪಕ್ಕೆ ಬಾರದು. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಬಾಳಿನ ರೀತಿ ನೀತಿಗಳನ್ನು ಬದಲಾಯಿಸಿಕೊಳ್ಳಬೇಕು. ಉದ್ಯೋಗದಲ್ಲಿ ಮನಸ್ಸಿಗೆ ತೃಪ್ತಿ ನೀಡುವ ಸನ್ನಿವೇಶ ಉಂಟಾಗಲಿದೆ.

ಪರಿಹಾರ : ಗೋಶಾಲೆಗೆ ಧನ ಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೇರಳೆ

ಸಿಂಹ

ಹಿರಿಯರ ಆದೇಶ ಪಾಲನೆ ಮಾಡಿದರೆ ಕಷ್ಟ ನಷ್ಟಗಳು ಕಡಿಮೆಯಾಗುತ್ತವೆ. ನೇರ ನಿಷ್ಠುರದ ನಡೆ-ನುಡಿಯಿಂದ ಎಲ್ಲರ ಗಮನ ಸೆಳೆಯುವಿರಿ. ಆಪತ್ತಿನಲ್ಲಿ ಇದ್ದವರಿಗೆ ಸಹಾಯ ಮಾಡುವಿರಿ. ಮನದ ಬೇಸರ ಕಳೆಯಲು ಮನರಂಜನಾ ಮಾಧ್ಯಮವನ್ನು ಅವಲಂಬಿಸುವಿರಿ. ದಂಪತಿಗಳ ನಡುವೆ ಅನಾವಶ್ಯಕ ಮನಸ್ತಾಪ ಉಂಟಾಗುತ್ತದೆ. ಆರೋಗ್ಯದಲ್ಲಿ ಏರಿಳಿತ ಕಂಡು ಬರಲಿದೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು ನೈರುತ್ಯ

ಅದೃಷ್ಟದ ಬಣ್ಣ : ಗುಲಾಬಿ

ಕನ್ಯಾ

ತಾವಾಗಿಯೇ ಸಹಾಯ ಮಾಡಲು ಬಂದಾಗ ತಿರಸ್ಕರಿಸದಿರಿ. ಅತಿಯಾದ ಆತ್ಮವಿಶ್ವಾಸ ತಪ್ಪು ದಾರಿಯಲ್ಲಿ ನಡೆಸುತ್ತದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಕಂಡು ಬರಲಿದೆ. ಯಾವುದೇ ವಿಚಾರದಲ್ಲಿಯೂ ದೃಢವಾದ ನಿಲುವನ್ನು ತಾಳಲಾರಿರಿ. ಒಮ್ಮೆ ತೆಗೆದುಕೊಂಡ ನಿರ್ಧಾರಗಳನ್ನು ಪಾಲಿಸುವುದು ಅತಿ ಮುಖ್ಯ. ನಿಮ್ಮ ಬಳಿ ಇರುವ ಹಳೆಯ ವಸ್ತುಗಳನ್ನು ವಿಲೇವಾರಿ ಮಾಡಿ ಹೊಸತನ್ನು ಕೊಳ್ಳುವಿರಿ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಬಿಳಿ

ತುಲಾ

ಅತಿ ಮುಖ್ಯವಾದಂತಹ ಕೆಲಸ ಕಾರ್ಯಗಳನ್ನು ಮಾತ್ರ ಆಯ್ಕೆ ಮಾಡುವಿರಿ. ಅನಾವಶ್ಯಕ ದುಂದು ವೆಚ್ಚ ಬೇಸರ ಮೂಡಿಸುತ್ತದೆ. ಮನದಲ್ಲಿನ ಚಿಂತೆ ಕಡಿಮೆಯಾಗುತ್ತದೆ. ಎದುರಾಗುವ ವಿವಾದಗಳನ್ನು ಆತ್ಮಸ್ಥೈರ್ಯದಿಂದ ಪರಿಹರಿಸುವಿರಿ. ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುವಿರಿ. ಯಾರೊಂದಿಗೂ ಬೇರೆಯದೆ ಏಕಾಂಗಿಯಾಗಿ ದಿನ ಕಳೆಯುವಿರಿ. ಸಂಗಾತಿಯೊಂದಿಗೆ ಸಂತಸದಿಂದ ಬಾಳುವಿರಿ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಎದುರಾಗುವುದಿಲ್ಲ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಬೂದು

ವೃಶ್ಚಿಕ

ಸಾಲವಾಗಿ ನೀಡಿದ್ದ ಹಣ ಮರಳಿ ದೊರೆಯುವುದು. ನಿಮ್ಮಲ್ಲಿರುವ ಹಟದ ಗುಣ ಬೇರೆಯವರಲ್ಲಿ ಬೇಸರ ಮೂಡಿಸುತ್ತದೆ. ನಿಮ್ಮ ಅನುಕೂಲಕ್ಕೆ ತಕ್ಕಂತೆ ಸನ್ನಿವೇಶವನ್ನು ಬದಲಾಯಿಸಿಕೊಳ್ಳುವಿರಿ. ಮನದಲ್ಲಿರುವ ದುಗುಡವನ್ನು ದೂರ ಮಾಡಿ ಎಲ್ಲರೊಂದಿಗೆ ಸಂತಸದಿಂದ ಬಾಳುವಿರಿ. ಉದ್ಯೋಗದಲ್ಲಿ ಯಾವುದೇ ರೀತಿಯ ಬದಲಾವಣೆಗಳು ಕಂಡುಬರುವುದಿಲ್ಲ. ಹೊಸ ರೀತಿಯ ನಿರೀಕ್ಷೆಗಳೊಂದಿಗೆ ಉದ್ಯೋಗವನ್ನು ಬದಲಿಸಲು ನಿರ್ಧರಿಸುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಂದು

ಧನಸ್ಸು

ನಿಮ್ಮಲ್ಲಿರುವ ಧನಾತ್ಮಕ ಮನಸ್ಥಿತಿಯು ಎಲ್ಲರಲ್ಲಿಯೂ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಉದ್ಯೋಗದಲ್ಲಿ ನಿರೀಕ್ಷಿಸಿದ ಫಲಗಳು ದೊರೆಯುವಲ್ಲಿ ತಡವಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಹಿನ್ನಡೆ ಉಂಟಾಗದು. ಆದರೆ ಹಣಕಾಸಿನ ಗಳಿಕೆಯಲ್ಲಿ ತೃಪ್ತಿ ಇರುವುದಿಲ್ಲ. ಗೆಲುವು ಸಣ್ಣಮಟ್ಟದಲ್ಲಿ ಇದ್ದರೂ ಸಮಾಧಾನ ಉಂಟಾಗುತ್ತದೆ. ಸಂಗಾತಿ ಮತ್ತು ಮಕ್ಕಳ ಜೊತೆ ಸಂತೋಷದಿಂದ ದಿನ ಕಳೆಯುವಿರಿ.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಪ್ಪು

ಮಕರ

ಪದೇ ಪದೇ ಹೇಳುವ ಮಾತುಗಳು ಬೇರೆಯವರಲ್ಲಿ ಬೇಸರ ಮೂಡಿಸುತ್ತದೆ. ಆಕರ್ಷಕವಾಗಿ ಕಾಣುವ ಗೃಹಾಲಂಕಾರ ವಸ್ತುಗಳನ್ನು ಕೊಳ್ಳುವಿರಿ. ಅನಾವಶ್ಯಕ ಖರ್ಚು ವೆಚ್ಚಗಳು ಕಂಡು ಬರಲಿವೆ. ಕುಟುಂಬದ ಉನ್ನತಿಗೆ ವಿವಾದಗಳನ್ನೂ ಎದುರಿಸುವಿರಿ. ಉದ್ಯೋಗದಲ್ಲಿ ಬಿಡುವಿಲ್ಲದೆ ಕೆಲಸ ನಿರ್ವಹಿಸಬೇಕಾಗುತ್ತದೆ. ಮಕ್ಕಳ ಆರೋಗ್ಯದಲ್ಲಿ ತೊಂದರೆಯಾಗಬಹುದು.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಬಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ತಿಳಿ ಹಸಿರು

ಕುಂಭ

ಹಣಕಾಸಿನ ಪರಿಸ್ಥಿತಿಯನ್ನು ಉತ್ತಮಗೊಳಿಸಲು ಹೊಸ ರೀತಿಯ ಅವಕಾಶಗಳು ದೊರೆಯಲಿವೆ. ಯಾರೊಂದಿಗೂ ಸ್ವಂತ ವಿಚಾರಗಳನ್ನು ಹಂಚಿಕೊಳ್ಳುವುದಿಲ್ಲ. ಕುಟುಂಬದ ಹಿರಿಯರು ನಿಮ್ಮ ರೀತಿ ನೀತಿಗಳನ್ನು ವಿರೋಧಿಸುತ್ತಾರೆ. ದೊಡ್ಡ ಭರವಸೆಯಿಂದ ಮುಖ್ಯ ಕೆಲಸವನ್ನು ಆರಂಭಿಸುವಿರಿ. ಮಕ್ಕಳ ಕೋಪದ ಮಾತುಗಳಿಂದ ಅಶಾಂತಿ ಉಂಟಾಗುತ್ತದೆ.

ಪರಿಹಾರ : ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವುದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನಸು ಗೆಂಪು

ಮೀನ

ಸೋಲಿಗೆ ಭಯ ಪಡದ ನಿಮ್ಮ ಗುಣವನ್ನು ಎಲ್ಲರೂ ಮೆಚ್ಚಿಕೊಳ್ಳುತ್ತಾರೆ. ಕುಟುಂಬದ ಬಹುತೇಕ ಜವಾಬ್ದಾರಿಯು ನಿಮ್ಮದಾಗಲಿದೆ. ನಗು ಮೊಗದಿಂದ ವಿರೋಧಿಗಳ ಮನಸ್ಸನ್ನು ಗೆಲ್ಲುವಿರಿ. ಪ್ರಯೋಜನಕಾರಿ ಬದಲಾವಣೆಗಳು ಕಂಡು ಬರುತ್ತವೆ. ಕುಟುಂಬದವರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಿ. ವ್ಯಾಪಾರ ವ್ಯವಹಾರಗಳು ಸುಗಮವಾಗಿ ನಡೆಯಲಿವೆ. ನಿಮ್ಮ ಸಾಮರ್ಥ್ಯಕ್ಕೆ ತಕ್ಕನಾದ ಸವಾಲುಗಳು ಎದುರಾಗಲಿವೆ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).