ಕನ್ನಡ ಸುದ್ದಿ  /  Astrology  /  Tomorrow Horoscope Astrological Prediction For 28th March 2024 Horoscope Kundali News In Kannada Sts

Tomorrow Horoscope: ಸಂಗಾತಿಯ ಜೊತೆ ವಾದ-ವಿವಾದ ಉಂಟಾಗಲಿದೆ, ಸಾಲದ ವ್ಯವಹಾರದಿಂದ ತೊಂದರೆ; ನಾಳಿನ ದಿನಭವಿಷ್ಯ

28th March 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ಮಾರ್ಚ್‌ 28ರ ದಿನ ಭವಿಷ್ಯ
ಮಾರ್ಚ್‌ 28ರ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (28th March 2024 Horoscope).

ನಾಳಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ಗುರುವಾರ,

ತಿಥಿ: ತದಿಗೆ ಬೆಳಿಗ್ಗೆ 4.11 ರವರೆಗೂ ಇರುತ್ತದೆ. ಅನಂತರ ಚೌತಿ ಆರಂಭವಾಗಲಿದೆ.

ನಕ್ಷತ್ರ: ಸ್ವಾತಿ ನಕ್ಷತ್ರವು ಬೆಳಿಗ್ಗೆ 4.14 ರವರೆಗೂ ಇರುತ್ತದೆ. ಅನಂತರ ವಿಶಾಖ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಿಗ್ಗೆ 6.19

ಸೂರ್ಯಾಸ್ತ: ಸಂಜೆ 6.30

ರಾಹುಕಾಲ: ಬೆಳಿಗ್ಗೆ 1.30 ರಿಂದ ಬೆಳಿಗ್ಗೆ 3.00

ಮೇಷ

ದಿನನಿತ್ಯದ ಕೆಲಸ-ಕಾರ್ಯಗಳು ಸುಗಮವಾಗಿ ಸಾಗಲಿವೆ. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ ಉಂಟಾಗಲಿದೆ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಅಡ್ಡಿಯಾಗುತ್ತದೆ. ಸ್ಟಾಕ್‌ ಮತ್ತು ಷೇರಿನ ವ್ಯವಹಾರದ ಬಗ್ಗೆ ಎಚ್ಚರಿಕೆ ಇರಲಿ. ಕುಟುಂಬದ ಪ್ರಯೋಜನಕಾರಿ ಕೆಲಸವೊಂದನ್ನು ಆರಂಭಿಸುವಿರಿ. ಕುಟುಂಬದ ಹಿರಿ ವ್ಯಕ್ತಿಗಳ ಜವಾಬ್ದಾರಿ ನಿಮ್ಮದಾಗುತ್ತದೆ.

ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು, ಮೊಸರು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ವೃಷಭ

ಒಮ್ಮತದ ಕೊರತೆಯ ಕಾರಣ ಆತಂಕದ ವಾತಾವರಣ ಸೃಷ್ಟಿಯಾಗಲಿದೆ. ವಿದ್ಯಾರ್ಥಿಗಳಲ್ಲಿನ ವಿಶ್ವಾಸ ಗೆಲುವಿಗೆ ಕಾರಣವಾಗುತ್ತದೆ. ಪ್ರಯೋಜನಕಾರಿ ಕೆಲಸವನ್ನು ಮಾತ್ರ ಆಯ್ಕೆ ಮಾಡುವಿರಿ. ಸಂಗಾತಿಯ ಜೊತೆ ಪ್ರವಾಸಕ್ಕೆ ತೆರಳುವಿರಿ. ಆರೋಗ್ಯದ ಬಗ್ಗೆ ಗಮನ ಇರಲಿ.

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಕೆಂಪು ಬಣ್ಣ

ಮಿಥುನ

ನಿಮ್ಮಲ್ಲಿ ಹೊಸ ಚೈತನ್ಯ ಮೂಡುತ್ತದೆ. ಹಣ ಉಳಿಸುವಲ್ಲಿ ಯಶಸ್ವಿಯಾಗುವಿರಿ. ನಿಮ್ಮನ್ನು ಸಂತೋಷವಾಗಿಡಲು ಆತ್ಮೀಯರು ಪ್ರಯತ್ನಿಸುತ್ತಾರೆ. ನಿಮ್ಮ ವ್ಯಕ್ತಿತ್ವವು ಎಲ್ಲರ ಮನಸೆಳೆಯಲಿದೆ. ಬಿಡುವಿನ ವೇಳೆಯಲ್ಲಿಯೂ ಕಚೇರಿಯ ಸಮಸ್ಯೆ ನಿಮ್ಮನ್ನು ಕಾಡುತ್ತದೆ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕಟಕ

ಕುಟುಂಬದಲ್ಲಿ ಆಶಾದಾಯಕ ವಾತಾವರಣ ಏರ್ಪಡುತ್ತದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಸನ್ನಿವೇಶ ಉಂಟಾಗುತ್ತದೆ. ಅತಿ ಕಷ್ಟವೆಂದುಕೊಂಡ ಕೆಲಸವನ್ನು ಪೂರ್ಣಗೊಳಿಸುವಿರಿ. ಹಣದ ಕೊರತೆ ಕಂಡುಬರುತ್ತದೆ. ವಿಶ್ರಾಂತಿ ಇಲ್ಲದೆ ದುಡಿಯಬೇಕಾಗುತ್ತದೆ. ಹಣದ ವ್ಯವಹಾರಗಳಿಂದ ದೂರವಿರಿ. ಕೈ ಕಾಲುಗಳಲ್ಲಿ ಶಕ್ತಿಯು ಕಡಿಮೆಯಾಗುತ್ತದೆ. ವಿಶ್ರಾಂತಿ ಪಡೆಯುವ ಅವಶ್ಯಕತೆ ಇದೆ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಸಿಂಹ

ಉದ್ಯೋಗದಲ್ಲಿ ವಿಭಿನ್ನ ವ್ಯಕ್ತಿತ್ವದಿಂದ ಎಲ್ಲರ ಮನ ಗೆಲ್ಲುವಿರಿ. ಅನಾವಶ್ಯಕವಾದ ಚಿಂತೆ ಎಲ್ಲರ ಬೇಸರಕ್ಕೆ ಕಾರಣರಾಗುತ್ತದೆ. ಮಕ್ಕಳ ಆಗಮನ ಸಂತೋಷ ತುಂಬಲಿದೆ. ಹೊಸ ಆರ್ಥಿಕ ಯೋಜನೆಗಳನ್ನು ರೂಪಿಸುವಿರಿ. ಸಂಗಾತಿಯಿಂದ ಆಶ್ಚರ್ಯಕರ ವಿಚಾರವೊಂದು ತಿಳಿದುಬರಲಿದೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಹಸಿರುಬಣ್ಣ

ಕನ್ಯಾ

ನೆಮ್ಮದಿ ಇರದ ಕಾರಣ ಕುಟುಂಬದಲ್ಲಿ ಮೌನ ನೆಲೆಸಿರುತ್ತದೆ. ಹೈನು ಉದ್ಯಮದ ಸಂಸ್ಥೆಯಲ್ಲಿ ಪಾಲುಗಾರಿಕೆ ಲಾಭವನ್ನು ಪಡೆಯುವಿರಿ. ವಿದ್ಯಾರ್ಥಿಗಳು ಸಹಪಾಠಿಗಳಿಗೆ ಸಹಾಯ ಮಾಡುತ್ತಾರೆ. ಮಕ್ಕಳ ಮನರಂಜನೆಗೆ ಪ್ರಾಮುಖ್ಯ ನೀಡುವಿರಿ. ಒಳ್ಳೆಯ ಮಾನವತೆಗೆ ಉದಾಹರಣೆ ಆಗುವಿರಿ. ಆರೋಗ್ಯದ ಕಡೆ ಎಚ್ಚರಿಕೆ ಇರಲಿ

ಪರಿಹಾರ: ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ ಬಣ್ಣ

ತುಲಾ

ಉದ್ಯೋಗದಲ್ಲಿ ಉತ್ತಮ ಬದಲಾವಣೆಗಳು ಇರುವ ಕಾರಣ ಚಿಂತಿಸುವ ಅಗತ್ಯವಿಲ್ಲ. ವ್ಯಾಪಾರ ವ್ಯವಹಾರದಲ್ಲಿ ಅಭಿವೃದ್ಧಿ ಇರುತ್ತದೆ. ಅಧಿಕವಾದ ಕೆಲಸದ ನಡುವೆಯೂ ಮನರಂಜನೆಯತ್ತ ಗಮನ ಹರಿಸುವಿರಿ. ಅವಿವಾಹಿತರಿಗೆ ವಿವಾಹದ ಮಾತುಕತೆ ನಡೆಯುತ್ತದೆ. ಪಾಲುಗಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಲಾಭವಿದೆ.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ವೃಶ್ಚಿಕ

ಕುಟುಂಬದ ಜವಾಬ್ದಾರಿಯು ವಿಶ್ರಾಂತಿ ಇಲ್ಲದಂತೆ ಮಾಡಲಿದೆ. ವಿದ್ಯಾರ್ಥಿಗಳು ಸೋಲು ಗೆಲುವನ್ನುಕ್ರೀಡಾಸ್ಪೂರ್ತಿಯಿಂದ ಎದುರಿಸಬಲ್ಲರು. ವ್ಯಾಪಾರ ವ್ಯವಹಾರದಲ್ಲಿ ಕುಟುಂಬದ ಹಿರಿಯರು ಬಂಡವಾಳ ಹೂಡಲಿದ್ದಾರೆ. ಅತಿಯಾದ ಆಸೆ ಇರುವುದಿಲ್ಲ. ಎಲ್ಲರ ಜೊತೆ ಸಂತೋಷದಿಂದ ಬಾಳುವಿರಿ. ಬೇಸರ ಕಳೆಯಲು ಸಭೆ ಸಮಾರಂಭಗಳಲ್ಲಿ ಭಾಗವಹಿಸುವಿರಿ.

ಪರಿಹಾರ: ಪುಟ್ಟ ಮಕ್ಕಳಿಗೆ ಬೆಣ್ಣೆ ನೀಡಿ ಇಂದಿನ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಧನಸ್ಸು

ಆತ್ಮೀಯರ ಟೀಕೆಗಳಿಗೆ ಬೇಸರಕ್ಕೆ ಒಳಗಾಗುವಿರಿ. ವಿದ್ಯಾರ್ಥಿಗಳು ಸಹಪಾಠಿಗಳ ಸ್ನೇಹದಿಂದ ನೆಮ್ಮದಿಯಿಂದ ಇರಲಿದ್ದಾರೆ. ಅಗತ್ಯಕ್ಕೆ ತಕ್ಕಷ್ಟು ಹಣವನ್ನು ಸಂಪಾದಿಸಬಲ್ಲಿರಿ. ಉದ್ಯೋಗ ಬದಲಿಸುವ ಅವಕಾಶಗಳನ್ನು ಬಳಸಿಕೊಳ್ಳಲು ವಿಫಲರಾಗುವಿರಿ. ಬುದ್ಧಿವಂತಿಕೆಯಿಂದ ವಿರೋಧಿಗಳ ಮನ ಗೆಲ್ಲುವಿರಿ.

ಪರಿಹಾರ: ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವುದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಮಕರ

ಮಾಡಿದ ತಪ್ಪನ್ನು ಒಪ್ಪಿಕೊಳ್ಳುವ ದೊಡ್ಡ ಗುಣ ನಿಮ್ಮಲ್ಲಿರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಲಾಭದಾಯಕ ಬೆಳವಣಿಗೆ ಕಂಡುಬರುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳುವರು. ಸಂತೋಷ ಕೂಟಕ್ಕಾಗಿ ಹೆಚ್ಚಿನ ಖರ್ಚು ವೆಚ್ಚಗಳು ಎದುರಾಗುತ್ತವೆ. ದೀರ್ಘಕಾಲದಿಂದ ಇದ್ದ ಆರೋಗ್ಯದ ತೊಂದರೆ ನಿವಾರಣೆಯಾಗಲಿದೆ.

ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಬೂದು ಬಣ್ಣ

ಕುಂಭ

ಕುಟುಂಬದ ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಗಮನ ನೀಡುವಿರಿ. ವಿದ್ಯಾರ್ಥಿಗಳು ಎದುರಾಗುವ ಸಮಸ್ಯೆಗಳನ್ನು ಗೆಲ್ಲುವರು. ಬಹುದಿನದಿಂದ ಇದ್ದ ಹಣದ ಸಮಸೆಗಳು ಕ್ರಮೇಣವಾಗಿ ಕಡಿಮೆಯಾಗುತ್ತದೆ. ಎಲ್ಲರ ಜೊತೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಸಂಗಾತಿಗೆ ಸಂಬಂಧಿಸಿದ ಕೆಲಸವೊಂದನ್ನು ಪೂರ್ಣಗೊಳಿಸುವಿರಿ. ತಂದೆಯೊಂದಿಗಿನ ಮನಸ್ತಾಪ ಕೊನೆಗೊಳ್ಳುವುದು.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಕಂದು ಬಣ್ಣ

ಮೀನ

ಅನಿರೀಕ್ಷಿತ ಧನಲಾಭ ಇರಲಿದೆ. ವಿದ್ಯಾರ್ಥಿಗಳು ವಯಸ್ಸು ಚಿಕ್ಕದಾದರು ಸಾಧಕ ಬಾಧಕಗಳ ಬಗ್ಗೆ ಎಚ್ಚರಿಕೆ ವಹಿಸುತ್ತಾರೆ. ಗೃಹಿಣಿಯರು ತಮ್ಮ ಬಿಡುವಿನ ವೇಳೆಯಲ್ಲಿ ಸಣ್ಣ ಪ್ರಮಾಣದ ವ್ಯಾಪರವನ್ನು ಆರಂಭಿಸುವರು. ಅವಿವಾಹಿತರಿಗೆ ವಿವಾಹವಾಗುವ ಸೂಚನೆಗಳಿವೆ. ಎದುರಾಗುವ ಜವಾಬ್ದಾರಿಗಳನ್ನು ಒಮ್ಮೆಲೆ ಒಪ್ಪಿಕೊಳ್ಳುವುದಿಲ್ಲ. ಮನದಲ್ಲಿ ವೈರಾಗ್ಯ ಭಾವನೆ ಮೂಡುತ್ತದೆ.

ಪರಿಹಾರ: ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

 

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).