ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಆತ್ಮೀಯರಿಗೆ ಕೊಟ್ಟಿದ್ದ ಮಾತನ್ನು ಮರೆತು ಸಂದಿಗ್ಧತೆಗೆ ಸಿಲುಕುವಿರಿ; ನಾಳೆಯ ದಿನ ಭವಿಷ್ಯ

Tomorrow Horoscope: ಆತ್ಮೀಯರಿಗೆ ಕೊಟ್ಟಿದ್ದ ಮಾತನ್ನು ಮರೆತು ಸಂದಿಗ್ಧತೆಗೆ ಸಿಲುಕುವಿರಿ; ನಾಳೆಯ ದಿನ ಭವಿಷ್ಯ

29th April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (29th April 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಸೋಮವಾರ

ತಿಥಿ: ಷಷ್ಠಿ ರಾತ್ರಿ 04.09 ವರೆಗೂ ಇದ್ದು ನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಪೂರ್ವಾಷಾಢ ನಕ್ಷತ್ರವು ರಾತ್ರಿ 02.11 ವರೆಗು ಇದ್ದು ನಂತರ ಉತ್ತರಾಷಾಢ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.58

ಸೂರ್ಯಾಸ್ತ: ಸಂಜೆ 06.33

ರಾಹುಕಾಲ: ಬೆಳಗ್ಗೆ 07.39 ರಿಂದ 09.13

ರಾಶಿಫಲ

ಮೇಷ

ವಿಶ್ರಾಂತಿಯ ಅಗತ್ಯತೆ ಇದೆ. ಖರ್ಚು ವೆಚ್ಚಗಳನ್ನು ಕಡಿಮೆ ಮಾಡಲು ಪ್ರಯತ್ನಿಸುವಿರಿ. ಒಳ್ಳೆಯ ಮನಸ್ಸಿನಿಂದ ಕುಟುಂಬದ ಜನರೊಂದಿಗೆ ಪ್ರೀತಿಯಿಂದ ವರ್ತಿಸುವಿರಿ. ಎದುರಾದಾಗುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಹಿಡಿಯುವಿರಿ. ಮುಖ್ಯವಾದ ಕೆಲಸವನ್ನು ಮುಂದೂಡುವಿರಿ. ಸಂಗಾತಿಯ ಒಳ್ಳೆಯ ಮನಸ್ಸು ಜೀವನದಲ್ಲಿ ಹೊಸ ಆಸೆಯನ್ನು ಉಂಟುಮಾಡುತ್ತದೆ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬೂದು

ವೃಷಭ

ಯಾವುದೇ ವಿಷಯವನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ದುಡುಕದೆ ಪರಿಸ್ಥಿತಿಯನ್ನು ಅವಲೋಕಿಸಿ ತೀರ್ಮಾನ ಕೈಗೊಳ್ಳಿರಿ. ವಿದ್ಯಾರ್ಥಿಗಳಿಗೆ ಶಿಕ್ಷಕರ ಮಾರ್ಗದರ್ಶನ ದೊರೆಯುತ್ತದೆ. ಹಣಕಾಸಿನ ವ್ಯವಹಾರದಲ್ಲಿ ದುಡುಕಿನ ನಿರ್ಣಯ ತೆಗೆದುಕೊಳ್ಳುವಿರಿ. ಹಣದ ಕೊರತೆ ನಿಮ್ಮನ್ನು ಕಾಡುತ್ತದೆ. ಮನರಂಜನಾ ಕೂಟ ಮತ್ತು ಓಡಾಟಕ್ಕೆ ಹೆಚ್ಚಿನ ಹಣವನ್ನು ಖರ್ಚು ಮಾಡುವಿರಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 5

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಕಂದು

ಮಿಥುನ

ಮಾನಸಿಕವಾಗಿ ಸದೃಢವಾಗಿರುವಿರಿ. ಒತ್ತಡಕ್ಕೆ ಮಣಿಯದೆ ಎದುರಾಗುವ ಸಮಸ್ಯೆಗಳನ್ನು ಪರಿಹರಿಸುವಿರಿ. ದಾಂಪತ್ಯ ಜೀವನದಲ್ಲಿ ಯಾವುದೇ ತೊಂದರೆ ಎದುರಾಗದು. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಅಭ್ಯಾಸದಲ್ಲಿ ತಲ್ಲೀನರಾಗುತ್ತಾರೆ. ಕೆಲಸ ಕಾರ್ಯಗಳ ನಿರ್ವಹಣೆಯ ರೀತಿಗೆ ಎಲ್ಲರ ಮೆಚ್ಚುಗೆ ಗಳಿಸುವಿರಿ. ಬೇರೆಯವರ ಹಣಕಾಸಿನ ವ್ಯವಹಾರದಲ್ಲಿ ಸಹಾಯ ಮಾಡುವಿರಿ.

ಪರಿಹಾರ : ಸಾಧು ಸಂತರ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಪ್ಪು

ಕಟಕ

ಉದ್ಯೋಗದಲ್ಲಿನ ಬಹುತೇಕ ಜವಾಬ್ದಾರಿಯು ನಿಮ್ಮದಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ದೊರೆಯಲಿದೆ. ಆರೋಗ್ಯದ ಬಗ್ಗೆ ಮನಸ್ಸಿನಲ್ಲಿ ಆತಂಕವಿರುತ್ತದೆ. ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಮನರಂಜನೆಯಲ್ಲಿ ತೊಡಗುತ್ತಾರೆ. ಹಣದ ಕೊರತೆ ಕಾಡಲಿದೆ. ಕೆಲಸ ಕಾರ್ಯಗಳಲ್ಲಿ ಆತ್ಮೀಯರ ಸಹಕಾರ ದೊರೆಯುತ್ತದೆ. ಆತ್ಮೀಯರಿಗೆ ಕೊಟ್ಟಿದ್ದ ಮಾತನ್ನು ಮರೆತು ಸಂದಿಗ್ಧತೆಗೆ ಸಿಲುಕುವಿರಿ.

ಪರಿಹಾರ: ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ಸಿಂಹ

ಉದ್ಯೋಗದಲ್ಲಿ ಅಧಿಕಾರಿಗಳ ಜೊತೆಯಲ್ಲಿ ಅನಾವಶ್ಯಕ ವಾದ ವಿವಾದ ಉಂಟಾಗಲಿವೆ. ವ್ಯಾಪಾರ ವ್ಯವಹಾರಗಳಲ್ಲಿ ಯಾವುದೇ ತೊಂದರೆ ಕಾಣುವುದಿಲ್ಲ. ಮಹಿಳಾ ಉದ್ಯಮಿಗಳು ಉತ್ತಮ ಲಾಭ ಗಳಿಸುತ್ತಾರೆ. ವಿದ್ಯಾರ್ಥಿಗಳು ಎಲ್ಲರೊಡನೆ ಪ್ರೀತಿಯಿಂದ ನಡೆದುಕೊಳ್ಳಲಿದ್ದಾರೆ. ತೋಟಗಾರಿಕೆಯಲ್ಲಿ ಆಸಕ್ತಿ ಮೂಡಲಿದೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ನಸುಗೆಂಪು

ಕನ್ಯಾ

ಹೊಂದಾಣಿಕೆಯ ಗುಣದ ಕಾರಣ ಜೀವನದಲ್ಲಿ ಯಾವುದೇ ಸಮಸ್ಯೆ ಕಾಣದು. ವ್ಯಾಪಾರ ವ್ಯವಹಾರಗಳಲ್ಲಿ ಶಾಂತಿಯಿಂದ ವರ್ತಿಸಿರಿ. ಆತುರದ ನಿರ್ಧಾರದಿಂದ ಹಣಕಾಸಿನ ವಿಚಾರದಲ್ಲಿ ಸಂದಿಗ್ದತೆ ಎದುರಿಸುವಿರಿ. ವಿದ್ಯಾರ್ಥಿಗಳು ತಮ್ಮ ತಪ್ಪಿಗೆ ಬೇರೆಯವರನ್ನು ಗುರಿ ಮಾಡುತ್ತಾರೆ. ಸ್ನೇಹಿತರ ಅನುಪಸ್ಥಿತಿ ಕಾಡಲಿದೆ. ಸುಲಭವಾಗಿ ಹಣವನ್ನು ಖರ್ಚು ಮಾಡುವುದಿಲ್ಲ. ನಿರೀಕ್ಷೆಗೂ ಮೀರಿದ ಆದಾಯ ದೊರೆಯುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ತುಲಾ

ಉದ್ಯೋಗದಲ್ಲಿ ವಿಘ್ನವಿಲ್ಲದೆ ಕೆಲಸ ಕಾರ್ಯಗಳು ಪೂರ್ಣಗೊಳ್ಳುತ್ತವೆ. ಸಹೋದ್ಯೋಗಿಗಳ ಪ್ರೀತಿ ವಿಶ್ವಾಸ ಗಳಿಸಿದಲ್ಲಿ ಯಾವುದೆ ತೊಂದರೆ ಕಾಣದು. ವ್ಯಾಪಾರ ವ್ಯವಹಾರಗಳಲ್ಲಿ ಹೊಂದಾಣಿಕೆಯ ಬುದ್ಧಿ ಮುಖ್ಯವಾಗುತ್ತದೆ. ಅತಿ ಆಸೆ ತೋರದೆ ದೊರೆವ ಲಾಭವನ್ನು ಒಪ್ಪಿಕೊಳ್ಳುವಿರಿ. ಹಣ ಹೂಡಿಕೆಯ ವಿಚಾರದಲ್ಲಿ ಆತುರಕ್ಕೆ ಒಳಗಾಗದಿರಿ. ವಿದ್ಯಾರ್ಥಿಗಳು ಕಷ್ಟವಿಲ್ಲದೆ ಗುರಿ ಮೀರಿ ನಡೆಯುತ್ತಾರೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು ಪಶ್ಚಿಮ

ಅದೃಷ್ಟದ ಬಣ್ಣ: ಬಿಳಿ

ವೃಶ್ಚಿಕ

ನಿರಾಸೆಯನ್ನು ತಾಳಲಾರದೆ ಕೋಪದಿಂದ ವರ್ತಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಹಣದ ತೊಂದರೆ ಉಂಟಾಗುವುದಿಲ್ಲ. ಮನಸ್ಸಿನಲ್ಲಿ ಒಳ್ಳೆಯದಿದ್ದರೂ ದುಡುಕುತನದಿಂದ ವಿರೋಧವನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಏಕಾಂಗಿಯಾಗಿ ಕುಳಿತು ತಮ್ಮ ಕೆಲಸ ಪೂರೈಸುತ್ತಾರೆ. ಆಧುನಿಕ ತಂತ್ರಜ್ಞಾನವನ್ನು ಕಲಿಯುವ ಅವಕಾಶ ದೊರೆಯುತ್ತದೆ.

ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬೂದು

ಧನಸ್ಸು

ಹಣಕಾಸಿನ ವಿಚಾರದಲ್ಲಿ ಒತ್ತಡವಿದ್ದರೂ ಯಾವುದೇ ತೊಂದರೆ ಎದುರಾಗದು. ಅನಿರೀಕ್ಷಿತ ಧನ ಲಾಭವಿದೆ. ಆಹಾರ ಸೇವನೆಯಲ್ಲಿ ಇತಿ ಮಿತಿ ಇರದ ಕಾರಣ ಅಜೀರ್ಣದಿಂದ ಬಳಲುವಿರಿ. ವಿವಾಹದ ವಿಚಾರದಲ್ಲಿ ಅಡ್ಡಿ ಆತಂಕ ಎದುರಾಗುತ್ತದೆ. ಬುದ್ದಿವಂತಿಕೆಯ ತೀರ್ಮಾನದಿಂದಾಗಿ ಹಳೆಯ ಸಮಸ್ಯೆಗೊಂದು ಬಗೆಹರಿಯುತ್ತದೆ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಆಕಾಶ ನೀಲಿ

ಮಕರ

ಬಂಧು-ಬಳಗದವರ ಜೊತೆಯಲ್ಲಿ ಶಾಂತಿ ಸಹನೆಯಿಂದ ವರ್ತಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಏಕಾಂಗಿಯಾಗಿ ಜವಾಬ್ದಾರಿ ನಿರ್ವಹಿಸುವಿರಿ. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಆಸಕ್ತಿ ಕಡಿಮೆಯಾಗುತ್ತದೆ. ಬೇಸರದಿಂದ ಹೊರ ಬರಲು ಮಕ್ಕಳೊಂದಿಗೆ ಮನರಂಜನಾ ಸ್ಥಳಕ್ಕೆ ಭೇಟಿ ನೀಡುವಿರಿ. ಚಾಡಿ ಮಾತನ್ನು ನಂಬದಿರಿ. ಹಣಕಾಸಿನ ವ್ಯವಹಾರದಲ್ಲಿ ತೊಂದರೆ ಎದುರಾಗುತ್ತದೆ.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೆಂಪು

ಕುಂಭ

ದೊರೆಯುವ ಹೊಸ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ. ಆತ್ಮೀಯರ ಸಲಹೆಯಂತೆ ಉದ್ಯೋಗ ಬದಲಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ನಷ್ಟವಿರದು. ಚಿಕ್ಕಪುಟ್ಟ ಕೆಲಸ ಕಾರ್ಯಗಳಿಗೂ ಹೆಚ್ಚಿನ ಪ್ರಮಾಣದ ಅವಶ್ಯಕತೆ ಇದೆ. ವಿದ್ಯಾರ್ಥಿಗಳು ಏಕಾಂಗಿಯಾಗಿ ಕಲಿಕೆಯಲ್ಲಿ ತೊಡಗುತ್ತಾರೆ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಎಲೆ ಹಸಿರು

ಮೀನ

ಉದ್ಯೋಗದಲ್ಲಿನ ಫಲಿತಾಂಶಗಳು ನಿರೀಕ್ಷೆಯಂತೆ ದೊರೆಯುವುದಿಲ್ಲ. ದೃಢ ಸಂಕಲ್ಪದಿಂದ ಮಾತ್ರ ಕೆಲಸ ಕಾರ್ಯಗಳಲ್ಲಿ ಜಯ ಗಳಿಸಲು ಸಾಧ್ಯ. ವ್ಯಾಪಾರ ವ್ಯವಹಾರಗಳಲ್ಲಿ ದೊರೆವ ಅವಕಾಶವನ್ನು ಬಳಸಿಕೊಂಡರೆ ಹಣದ ಕೊರತೆ ಕಾಣದು. ವಿದ್ಯಾರ್ಥಿಗಳು ದುಡುಕದೆ ಬುದ್ಧಿವಂತಿಕೆಯಿಂದ ಅಭ್ಯಾಸದಲ್ಲಿ ತೊಡಗುತ್ತಾರೆ.

ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಕೇಸರಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).