ಕನ್ನಡ ಸುದ್ದಿ  /  Astrology  /  Tomorrow Horoscope Astrological Prediction For 29th March 2024 Horoscope Kundali News In Kannada Sts

Tomorrow Horoscope: ಹಣಕಾಸಿನ ವಿಚಾರದಲ್ಲಿ ಬಹಳ ಎಚ್ಚರಿಕೆ ಅಗತ್ಯ, ಹೊಸ ವಾಹನ ಖರೀದಿ ಸಾಧ್ಯತೆ; ನಾಳೆಯ ದಿನ ಭವಿಷ್ಯ

29th March 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

29 ಮಾರ್ಚ್‌ 2024ರ ರಾಶಿಫಲ
29 ಮಾರ್ಚ್‌ 2024ರ ರಾಶಿಫಲ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (29th March 2024 Horoscope).

ನಾಳೆಯ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಶುಕ್ರವಾರ

ತಿಥಿ : ಚೌತಿ 04.56 ವರೆಗೂ ಇದ್ದು ನಂತರ ಪಂಚಮಿ ಆರಂಭವಾಗುತ್ತದೆ.

ನಕ್ಷತ್ರ : ವಿಶಾಖ ನಕ್ಷತ್ರವು ಸಂಜೆ 05.35 ರವರೆಗು ಇರುತ್ತದೆ ನಂತರ ಅನೂರಾಧಾ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.16

ಸೂರ್ಯಾಸ್ತ: ಸಂಜೆ 06.30

ರಾಹುಕಾಲ : ಬೆಳಗ್ಗೆ 10.30 ರಿಂದ 12.00

ರಾಶಿಫಲ

ಮೇಷ

ವೃತ್ತಿ ಬದಲಾವಣೆಯ ವಿಚಾರದಲ್ಲಿ ಆತುರದಿಂದ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬೇಡಿರಿ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಮಟ್ಟದ ಆದಾಯ ದೊರಕುತ್ತದೆ. ವಿದ್ಯಾರ್ಥಿಗಳು ಹೊಸ ನಿರೀಕ್ಷೆಯೊಂದಿಗೆ ಎಲ್ಲರೊಂದಿಗೆ ಸ್ನೇಹದಿಂದ ಬಾಳುತ್ತಾರೆ. ಸಂತಾನ ಲಾಭವಿದೆ. ಆರೋಗ್ಯದ ಬಗ್ಗೆ ಕೊಂಚ ಕಾಳಜಿ ಇರಲಿ. ದಂಪತಿಗಳ ನಡುವೆ ವಿವಾದ ಮರೆಯಾಗಲಿದೆ. ಅತಿಯಾದ ದೈರ್ಯದಿಂದ ಅಪಾಯಕಾರಿ ಕೆಲಸ ಕಾರ್ಯಗಳಲ್ಲಿ ಆಸಕ್ತಿ ತೋರುವಿರಿ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ವೃಷಭ

ಕುಟುಂಬದಲ್ಲಿ ಸ್ಥಿರವಾದ ಆದಾಯ ಇರದ ಕಾರಣ ಸಣ್ಣ ಪ್ರಮಾಣದ ವಾದ ವಿವಾದಗಳು ಇರಲಿವೆ. ಸರಳ ಜೀವನ ನಡೆಸುವಿರಿ. ವಿದ್ಯಾರ್ಥಿಗಳು ಎಲ್ಲರೊಂದಿಗೆ ಸಂತಸದಿಂದ ಇರಲಿದ್ದಾರೆ. ಅನಾವಶ್ಯಕ ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವಿರಿ. ವಾದ ವಿವಾದದ ಸಂದರ್ಭದಲ್ಲಿ ಮೌನವಾಗಿರುವಿರಿ. ಅನಿರೀಕ್ಷಿತ ಧನ ಲಾಭವಿದೆ. ಬೇರೆಯವರ ಹಣಕಾಸಿನ ವಿಚಾರದಿಂದ ದೂರ ಉಳಿಯುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು ಪೂರ್ವ

ಅದೃಷ್ಟದ ಬಣ್ಣ : ಕಡು ಬಾದಾಮಿ ಬಣ್ಣ

ಮಿಥುನ

ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಧನ ಲಾಭವಿರುತ್ತದೆ. ವಿದ್ಯಾರ್ಥಿಗಳು ದೃಢವಾದ ನಿರ್ಧಾರವನ್ನು ತೆಗೆದುಕೊಳ್ಳುವುದು ಒಳ್ಳೆಯದು. ಗೆಲ್ಲಬೇಕೆಂಬ ಹಠ ಇದ್ದಲ್ಲಿ ಯಾವುದು ಅಸಾಧ್ಯವಾಗದು. ಮನೆತನದ ಹಣದ ವಿವಾದಗಳು ಸುಲಭವಾಗಿ ಬಗೆಹರಿಯಲಿವೆ. ಹಳೆಯ ವಿಚಾರಗಳನ್ನು ಮರೆಯದಿರಿ. ಹೊಸ ವಾಹನವನ್ನು ಕೊಳ್ಳುವ ಸಾಧ್ಯತೆಗಳಿವೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು

ಕಟಕ

ವ್ಯಾಪಾರ ವ್ಯವಹಾರಗಳಲ್ಲಿ ಸಹನೆಯಿಂದ ವರ್ತಿಸುವುದು ಕ್ಷೇಮ. ನಿರೀಕ್ಷೆಗಿಂತಲೂ ಹೆಚ್ಚಿನ ಖರ್ಚು ವೆಚ್ಚಗಳು ಎದುರಾಗಲಿವೆ. ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನದಿಂದ ಗಳಿಸುವರು. ಮನೆಯ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಇರಲಿದೆ. ಅನಾವಶ್ಯಕವಾಗಿ ಸಂಗಾತಿಯ ಜೊತೆಯಲ್ಲಿ ಮನಸ್ತಾಪ ಉಂಟಾಗುತ್ತದೆ. ಅವಶ್ಯಕತೆ ಇರುವ ಕೆಲಸಗಳನ್ನಷ್ಟೇ ಆಯ್ದು ಮಾಡುವಿರಿ. ಧಾರ್ಮಿಕ ಕೇಂದ್ರಕ್ಕೆ ಹಣದ ಸಹಾಯ ಮಾಡಲು ನಿರ್ಧರಿಸುವಿರಿ. ಹೋಟೆಲ್ ಅಥವಾ ಬೇಕರಿ ವ್ಯಾಪಾರ ಆರಂಭಿಸುವಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ

ಸಿಂಹ

ವ್ಯಾಪಾರ ವ್ಯವಹಾರಗಳಲ್ಲಿ ಅನುಮಾನದ ಮಾತಿಗೆ ಬೆಲೆ ನೀಡದಿರಿ. ವಿದ್ಯಾರ್ಥಿಗಳು ಹಟದ ಗುಣ ಉತ್ತಮ ಫಲಗಳನ್ನು ನೀಡಲಿದೆ. ಹಣದ ವಿಚಾರದಲ್ಲಿ ಆತ್ಮೀಯರ ಸಲಹೆಯನ್ನು ಪಾಲಿಸಬೇಕಾಗುತ್ತದೆ. ಮಕ್ಕಳ ಜೊತೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಹೊಸ ವ್ಯಾಪಾರವನ್ನು ಆರಂಭಿಸುವ ಯೋಚನೆ ಮಾಡುವಿರಿ. ಭೂ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ.

ಪರಿಹಾರ: ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಹಳದಿ

ಕನ್ಯಾ

ಉದ್ಯೋಗದಲ್ಲಿ ತೆಗೆದುಕೊಂಡ ತಪ್ಪು ನಿರ್ಧಾರದಿಂದ ಆತಂಕದ ಕ್ಷಣವನ್ನು ಎದುರಿಸದಿರಿ. ವ್ಯಾಪಾರ ವ್ಯವಹಾರಗಳಲ್ಲಿ ಖರ್ಚಿಗೆ ತಕ್ಕ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಶಾಂತಿ ಸಹನೆ ಬೆಳೆಸಿಕೊಳ್ಳಬೇಕು. ಕಷ್ಟ ಪಟ್ಟು ಕೂಡಿಟ್ಟ ಹಣ ಖರ್ಚಾಗಬಹುದು. ಆತ್ಮೀಯರ ಆಸ್ತಿಯ ವಿವಾದ ಬಗೆಹರಿಸುವಿರಿ. ಸಂಗೀತ ನಾಟ್ಯದಂತಹ ಕಲೆ ಬಲ್ಲವರಿಗೆ ವಿಶೇಷ ಅವಕಾಶ ದೊರೆಯಲಿದೆ. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಬದಲಿಸದಿರಿ.

ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು ಉತ್ತರ

ಅದೃಷ್ಟದ ಬಣ್ಣ: ಹಸಿರು

ತುಲಾ

ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ದೊರೆಯುತ್ತದೆ. ಕುಟುಂಬದ ಸದಸ್ಯರ ಆರೋಗ್ಯದಲ್ಲಿ ತೊಂದರೆ ಇರಲಿದೆ. ಕೆಲಸದ ಒತ್ತಡದಿಂದ ಮಾನಸಿಕವಾಗಿ ಕುಗ್ಗುವಿರಿ. ಸಮಯದ ಅಭಾವದಿಂದ ಕೆಲಸ ಕಾರ್ಯಗಳು ಅಪೂರ್ಣಗೊಳ್ಳುತ್ತವೆ. ಆರೋಗ್ಯವನ್ನು ಉಳಿಸಿಕೊಳ್ಳಲು ಲಘು ವ್ಯಾಯಾಮವನ್ನು ಆರಂಭಿಸುವಿರಿ. ಸಂಗಾತಿಯ ಮಾತಿನ ಆಂತರ್ಯವನ್ನು ಅರಿಯದೆ ಹೋಗುವಿರಿ. ಮನೆಯ ಅಂದವನ್ನು ಹೆಚ್ಚಿಸಲು ದುಬಾರಿ ಪದಾರ್ಥಗಳನ್ನು ಕೊಳ್ಳುವಿರಿ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೀಲಿ

ವೃಶ್ಚಿಕ

ಅಧಿಕಾರಿಯ ಸ್ಥಾನ ಮಾನ ದೊರೆಯರೂ ಒತ್ತಡ ಕಡಿಮೆ ಆಗುವುದಿಲ್ಲ. ವ್ಯಾಪಾರ ವ್ಯವಹಾರಗಳ ಅಬಿವೃದ್ದಿಗೆ ಹೆಚ್ಚಿನ ಹಣಕಾಸಿನ ಅವಶ್ಯಕತೆ ಎದುರಾಗುತ್ತದೆ. ಮಕ್ಕಳ ವಿವಾಹದ ಬಗ್ಗೆ ಎಚ್ಚರಿಕೆಯ ತೀರ್ಮಾನ ಕೈಗೊಳ್ಳಿರಿ. ವಿದ್ಯಾರ್ಥಿಗಳು ಹಟ, ವಿವಾದವನ್ನು ಉಂಟುಮಾಡಲಿದೆ. ಕುಟುಂಬಕ್ಕೆ ಸೇರಿದ ಮುಖ್ಯವಾದ ಕೆಲಸವೊಂದು ಅಪೂರ್ಣಗೊಳ್ಳಲಿದೆ. ಹೊಸ ವ್ಯಾಪಾರವನ್ನು ಆರಂಭಿಸಿ ಯಶಸ್ಸನ್ನು ಗಳಿಸುವಿರಿ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೇರಳೆ

ಧನಸ್ಸು

ಸಮಾಜದಲ್ಲಿ ನಿಮ್ಮ ಮಾತಿಗೆ ವಿಶೇಷ ಪ್ರಾಮುಖ್ಯತೆ ದೊರೆಯುತ್ತದೆ. ಉದ್ಯೋಗದಲ್ಲಿ ಕೆಲಸದ ಒತ್ತಡಕ್ಕೆ ಹೊಂದಿಕೊಂಡು ಬಾಳುವಿರಿ. ಮನದಲ್ಲಿನ ಬೇಸರ ಕ್ರಮೇಣವಾಗಿ ಕಡಿಮೆ ಆಗಲಿದೆ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಬದಲಾವಣೆ ಕಂಡು ಬರುತ್ತದೆ. ವಿದ್ಯಾರ್ಥಿಗಳು ಏಕಾಂಗಿತನದಲ್ಲಿ ಸಂತಸ ಕಂಡುಕೊಳ್ಳುತ್ತಾರೆ. ಒತ್ತಡಕ್ಕೆ ಮಣಿದು ಎಲ್ಲರೊಂದಿಗೆ ಪ್ರವಾಸ ಕೈಗೊಳ್ಳುವಿರಿ. ಗರ್ಭಿಣಿಯರ ಆರೋಗ್ಯದಲ್ಲಿನ ಬದಲಾವಣೆಗಳು ಆತಂಕವನ್ನು ಉಂಟು ಮಾಡುತ್ತದೆ.  

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಗುಲಾಬಿ

ಮಕರ

ದೊರೆಯದ ಅವಕಾಶಗಳಿಂದ ಬೇಸತ್ತು ಉದ್ಯೋಗ ಬದಲಾಯಿಸುವ ನಿರ್ಧಾರಕ್ಕೆ ಬರುವಿರಿ. ವ್ಯಾಪಾರ ವ್ಯವಹಾರಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಲು ವಿಫಲರಾಗುವಿರಿ. ಸಾಲವು ಅವಶ್ಯಕತೆ ಮೀರಿ ಬೆಳೆಯುತ್ತದೆ. ಹಣಕಾಸಿನ ಅಭಿವೃದ್ಧಿ ಇರುತ್ತದೆ. ನಿಧಾನದ ಮಾತುಕತೆಯಿಂದ ವಿವಾದಗಳಿರದೆ ಬಾಳುವಿರಿ. ವಿದ್ಯಾರ್ಥಿಗಳು ಆತಂಕವನ್ನು ಮರೆತು ಬಾಳುವುದು ಒಳ್ಳೆಯದು. ಕೌಟುಂಬಿಕ ಸವಾಲುಗಳನ್ನು ಹಟದಿಂದ ಜಯಿಸುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬಿಳಿ

ಕುಂಭ

ಹಿರಿಯರು ತೆಗೆದುಕೊಂಡ ತೀರ್ಮಾನಗಳಿಗೆ ಬದ್ಧರಾಗುವಿರಿ. ವಿನಾಕಾರಣ ಉದ್ಯೋಗದಲ್ಲಿ ವಿರೋಧ ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿನ ಅನಿರೀಕ್ಷಿತ ಬದಲಾವಣೆಗಳಲ್ಲಿ ಅನುಕೂಲತೆ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭವಿರುತ್ತದೆ. ವಿದ್ಯಾರ್ಥಿಗಳು ಸ್ವಂತಂತ್ರವಾಗಿ ಪ್ರಗತಿಯತ್ತ ನಡೆಯುತ್ತಾರೆ. ಮನೆಗಾಗಿ ಹೆಚ್ಚಿನ ಹಣದ ಅವಶ್ಯಕತೆ ಇದೆ. ಸಂಬಂಧಿಯೊಬ್ಬರ ಸಹಾಯದಿಂದ ವಿವಾಹದ ಮಾತುಕತೆ ನಡೆಯುತ್ತದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಬೂದು

ಮೀನ

ಉದ್ಯೋಗದಲ್ಲಿ ಕಾರ್ಯದ ಒತ್ತಡವಿದ್ದರೂ ಸಹಜತೆಗೆ ಮರಳುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ನಿರ್ದಿಷ್ಟ ಲೆಕ್ಕಾಚಾರ ಇರುವುದಿಲ್ಲ. ವಿದ್ಯಾರ್ಥಿಗಳು ಗೆಲುವಿನಂತೆ ಸೋಲನ್ನು ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿ ಇರುತ್ತಾರೆ. ಆತ್ಮೀಯರಿಂದ ಹಣದ ಸಹಾಯ ದೊರೆಯಲಿದೆ. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ. ಆರೋಗ್ಯದ ಬಗ್ಗೆ ಗಮನಹರಿಸಿ. ಭೂವಿವಾದದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಬೇಡಿ. ಕುಟುಂಬದ ಹಿರಿಯರ ಆಗಮನವಾಗುತ್ತದೆ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಕಂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).