ಕನ್ನಡ ಸುದ್ದಿ  /  Astrology  /  Tomorrow Horoscope Astrological Prediction For 2nd April 2024 Horoscope Kundali News In Kannada Sts

Tomorrow Horoscope: ಅವಿವಾಹಿತರಿಗೆ ವಿವಾಹ ಯೋಗ; ಸಂಗೀತ ಬಲ್ಲವರಿಗೆ ಅಪೂರ್ವ ಅವಕಾಶ; ನಾಳೆಯ ದಿನ ಭವಿಷ್ಯ

2nd April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನಭವಿಷ್ಯ
ನಾಳೆಯ ದಿನಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (2nd April 2024 Horoscope).

ನಾಳೆಯ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಮಂಗಳವಾರ

ತಿಥಿ: ಅಷ್ಟಮಿ 03.14 ರವರೆಗೂ ಇದ್ದು ನಂತರ ನವಮಿ ಆರಂಭವಾಗಲಿದೆ.

ನಕ್ಷತ್ರ : ಪೂರ್ವಾಷಾಢ ನಕ್ಷತ್ರವು ಸಂಜೆ 06.22 ರವರೆಗೂ ಇದ್ದು ನಂತರ ಉತ್ತರಾಷಾಢ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.16

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: 03.00 ರಿಂದ 04.30

ರಾಶಿ ಫಲ

ಮೇಷ

ವ್ಯಾಪಾರ ವ್ಯವಹಾರಗಳಲ್ಲಿ ಸಮಾಧಾನಕರ ವರಮಾನ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಆತಂಕದ ಛಾಯೆ ಇದ್ದರೂ ತೊಂದರೆ ಆಗದು. ವಿದ್ಯಾರ್ಥಿಗಳಿಗೆ ಸಹಪಾಠಿಗಳ ನೆರವು ದೊರೆಯುತ್ತದೆ. ಮನಸ್ಸಿನಲ್ಲಿ ವೈರಾಗ್ಯದ ಭಾವನೆ ಮೂಡುತ್ತದೆ. ಸ್ವಗೃಹ ಭೂಲಾಭವಿದೆ. ಆತ್ಮೀಯರ ಸಹಾಯದಿಂದ ಅವಿವಾಹಿತರಿಗೆ ವಿವಾಹ ನಿಶ್ಚಯವಾಗುತ್ತದೆ. ಇರುವ ಬುದ್ಧಿ ಶಕ್ತಿಯನ್ನು ಸರಿಯಾದ ಮಾತಲ್ಲಿ ಬಳಸಿದಲ್ಲಿ ಧನಾತ್ಮಕ ಫಲಿತಾಂಶ ದೊರೆಯುತ್ತದೆ. ಹೊಸ ವ್ಯಾಪಾರ ಆರಂಭಿಸಲು ಸಾಧ್ಯವಾಗದು.

ಪರಿಹಾರ: ತಾಯಿಯ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೇಸರಿ

ವೃಷಭ

ಉದ್ಯೋಗದಲ್ಲಿ ಹೊಸ ಯೋಜನೆಗಳ ಕಾರಣ ಒತ್ತಡ ಇರುತ್ತದೆ. ದೀರ್ಘಕಾಲದ ಪ್ರಯತ್ನದ ನಂತರ ಆಸ್ತಿಯ ಸಮಸ್ಯೆಯೊಂದು ಬಗೆಹರಿಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ನಷ್ಟವಿರದು. ವಿದ್ಯಾರ್ಥಿಗಳು ಅನಾರೋಗ್ಯದಿಂದ ಬಳಲುತ್ತಾರೆ. ಮಕ್ಕಳು ಕಲಿಕೆಯಲ್ಲಿ ಉತ್ತತ ಮಟ್ಟ ತಲುಪಲು ಹೆಚ್ಚಿನ ಪ್ರಯತ್ನ ಪಡಬೇಕು. ಆತ್ಮೀಯರೊಂದಿಗೆ ಚರ್ಚಿಸಿದ ನಂತರ ಕೆಲಸ ಕಾರ್ಯಗಳಲ್ಲಿ ಮುಂದುವರೆಯಿರಿ.

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು ದಕ್ಷಿಣ

ಅದೃಷ್ಟದ ಬಣ್ಣ : ಮಣ್ಣಿನ ಬಣ್ಣ

ಮಿಥುನ

ವಿದ್ಯಾರ್ಥಿಗಳು ಹಟದಿಂದ ನಿರೀಕ್ಷಿತ ಮಟ್ಟವನ್ನು ತಲುಪುತ್ತಾರೆ. ಒತ್ತಡಕ್ಕೆ ಮಣಿದು ಸ್ನೇಹಿತರಿಗೆ ಹಣದ ಸಹಾಯ ಮಾಡುವಿರಿ. ಕೆಲಸ ಕಾರ್ಯಗಳ ನಡುವೆಯೂ ಕುಟುಂಬದ ಸದಸ್ಯರ ಜೊತೆಯಲ್ಲಿ ಐತಿಹಾಸಿಕ ಕ್ಶೇತ್ರಕ್ಕೆ ಭೇಟಿ ನೀಡುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಸಂಗೀತ ಬಲ್ಲವರಿಗೆ ಅಪೂರ್ವವಾದ ಅವಕಾಶವೊಂದು ದೊರೆಯಲಿದೆ. ಸ್ವಂತ ಬಳಕೆಗಾಗಿ ವಾಹನವೊಂದನ್ನು ಕೊಳ್ಳುವಿರಿ.

ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಂದು

ಕಟಕ

ಹಣಕಾಸಿನ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರುತ್ತದೆ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳ ಮಾರ್ಗದರ್ಶನ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಅನಗತ್ಯ ಹೆಚ್ಚಿನ ಬಂಡವಾಳ ಹೂಡದಿರಿ. ದುಡುಕುತನದ ಮಾತಿನಿಂದ ಆತ್ಮೀಯತೆ ಕೆಡುತ್ತದೆ. ವಿದ್ಯಾರ್ಥಿಗಳು ತಪ್ಪು ನಿರ್ಧಾರದಿಂದ ತೊಂದರೆಗೆ ಸಿಲುಕುವರು. ಕುಟುಂಬದ ಆದಾಯ ಹೆಚ್ಚುತ್ತದೆ. ಹಣಕಾಸು ಸಂಸ್ಥೆಯ ನಿರ್ವಹಣೆಯಲ್ಲಿ ಹಿನ್ನೆಡೆ ಕಾಣುವಿರಿ.

ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪು

ಸಿಂಹ

ಅತಿಯಾದ ಆತ್ಮವಿಶ್ವಾಸದಿಂದ ಉದ್ಯೋಗದಲ್ಲಿ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಬೇಕು. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಕಂಡು ಬರುತ್ತದೆ. ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಮುಂದುವರೆಯುತ್ತಾರೆ. ಸರ್ಕಾರಿ ನೌಕರಿ ಅಥವಾ ಸರ್ಕಾರದ ಅನುದಾನದಲ್ಲಿ ನಡೆಯುತ್ತಿರುವ ಸಂಸ್ಥೆಗಳಲ್ಲಿ ಉದ್ಯೋಗ ದೊರೆಯುತ್ತದೆ. ಧಾರ್ಮಿಕ ಮನೋಭಾವನೆ ಹೆಚ್ಚುತ್ತದೆ. ವಂಶದ ಹಿರಿಯರೊಬ್ಬರ ಆಗಮನ ಸಂತಸಕ್ಕೆ ಕಾರಣವಾಗುತ್ತದೆ.

ಪರಿಹಾರ : ಕೆಂಪು ಬೆಲ್ಲದಿಂದ ಮಾಡಿದ ದ್ರವಾಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು ಉತ್ತರ

ಅದೃಷ್ಟದ ಬಣ್ಣ : ಕಿತ್ತಳೆ

ಕನ್ಯಾ

ಉದ್ಯೋಗದಲ್ಲಿ ಆಕಸ್ಮಿಕವಾಗಿ ಎದುರಾಗುವ ಸಮಸ್ಯೆಗಳನ್ನು ಗೆಲ್ಲುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಅನಾವಶ್ಯಕ ಖರ್ಚು ವೆಚ್ಚಗಳು ಕಂಡುಬರುತ್ತವೆ. ವಿವಾಹ ಯೋಗವಿದೆ. ಕುಟುಂಬದ ಹಿರಿಯರ ಆರೋಗ್ಯಕ್ಕಾಗಿ ಹೆಚ್ಚಿನ ಹಣ ವೆಚ್ಚವಾಗಬಹುದು. ಬೇಸರದಿಂದ ದೂರವಾಗಲು ಮನರಂಜನೆಯನ್ನು ಆಶ್ರಯಿಸುವಿರಿ. ಕಾನೂನಿನ ಸಹಾಯದಿಂದ ಭೂವಿವಾದವನ್ನು ಗೆಲ್ಲುವಿರಿ. ಪಶು ಸಂಗೋಪನೆಯಲ್ಲಿ ಆಸಕ್ತಿ ಇರುತ್ತದೆ.

ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು ಈಶಾನ್ಯ

ಅದೃಷ್ಟದ ಬಣ್ಣ: ಹಳದಿ

ತುಲಾ

ಹಣಕಾಸಿನ ವಿಚಾರದಲ್ಲಿ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಉದ್ಯೋಗದಲ್ಲಿ ಆತುರದ ತೀರ್ಮಾನ ತೆಗೆದುಕೊಂಡು ತೊಂದರೆಗೆ ಒಳಗಾಗುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭವಿದೆ. ಕುಟುಂಬದ ಹಿರಿಯರ ಮತ್ತು ಸಮಾಜದ ಗಣ್ಯ ವ್ಯಕ್ತಿಗಳ ಸಹಾಯ ಸಹಕಾರ ದೊರೆಯುತ್ತದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಆದಾಯವನ್ನು ಹೆಚ್ಚಿಸಿಕೊಳ್ಳಲು ಸಣ್ಣಪ್ರಮಾಣದ ವ್ಯಾಪಾರವನ್ನು ಆರಂಭಿಸುವಿರಿ. ಸ್ವಂತ ಭೂಮಿ ಅಥವಾ ಮನೆಯನ್ನು ಕೊಳ್ಳುವ ಯೋಜನೆ ಸಾಕಾರಗೊಳ್ಳಲಿದೆ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು ಪೂರ್ವ

ಅದೃಷ್ಟದ ಬಣ್ಣ: ಹಸಿರು

ವೃಶ್ಚಿಕ

ಮನೆಯಲ್ಲಿ ವಿಶೇಷವಾದ ಧಾರ್ಮಿಕ ಕಾರ್ಯಕ್ರಮ ನಡೆಸುವಿರಿ. ಉದ್ಯೋಗದಲ್ಲಿ ಯಾರನ್ನೂ ಟೀಕಿಸದೆ ಸಹನೆಯಿಂದ ವರ್ತಿಸಿ. ಆತ್ಮೀಯರೊಂದಿಗೆ ಹಣಕಾಸಿನ ವಿಚಾರದಲ್ಲಿ ವಿರೋಧ ಉಂಟಾಗಬಹುದು. ವ್ಯಾಪಾರ ವ್ಯವಹಾರಗಳು ತೊಂದರೆ ಇಲ್ಲದೆ ಸಾಗುತ್ತದೆ. ಪರಿಚಯ ಇರುವವರ ಜೊತೆಯಲ್ಲಿ ವಿವಾಹ ನಿಶ್ಚಯವಾಗುತ್ತದೆ. ಆರ್ಥಿಕ ಪ್ರಗತಿಗಾಗಿ ಪರಸ್ಥಳಕ್ಕೆ ಪ್ರಯಾಣ ಬೆಳೆಸುವಿರಿ. ಮನೆಯಲ್ಲಿರುವ ಹೆಣ್ಣು ಮಕ್ಕಳಿಗೆ ಸಂತಸ ತರುವ ಕೆಲಸವೊಂದು ನಡೆಯಲಿದೆ.

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೇರಳೆ

ಧನಸ್ಸು

ಸಂಪಾದಿಸಿದ ಹಣದಲ್ಲಿ ಬಹು ಭಾಗವನ್ನು ಧಾರ್ಮಿಕ ಕ್ರಿಯಾ ವಿಧಿಗಳಿಗಾಗಿ ಬಳಸುವಿರಿ. ಸ್ವಂತ ಉದ್ದಿಮೆಯನ್ನು ಆರಂಭಿಸುವ ಕನಸು ನನಸಾಗಲಿದೆ. ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುತ್ತದೆ. ಬಹು ದಿನಗಳ ನಿರೀಕ್ಷಿತ ಕೆಲಸ ಒಂದು ಸೋದರರ ಸಹಾಯದಿಂದ ನೆರವೇರುತ್ತದೆ. ಬೇರೆಯವರ ಮಾತನ್ನು ನಂಬುವ ಮೊದಲು ಒಮ್ಮೆ ಯೋಚಿಸಿ ನೋಡಿ. ವಿದ್ಯಾರ್ಥಿಗಳು ನಿರೇಕ್ಷಿಸಿದ ಯಶಸ್ಸನ್ನು ಗಳಿಸಲಿದ್ದಾರೆ. ಮಕ್ಕಳಿಗೆ ವಿವಾಹ ಯೋಗವಿದೆ.

ಪರಿಹಾರ : ತಾಯಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಮಕರ

ಉದ್ಯೋಗದಲ್ಲಿ ತಡವಾದರೂ ಧನಾತ್ಮಕ ಫಲಿತಾಂಶ ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ನಿರೀಕ್ಷಿಸಬಹುದು. ವಿದ್ಯಾರ್ಥಿಗಳು ಕಲಿಕೆಯ ಅವಧಿಯಲ್ಲಿಯೇ ಉದ್ಯೋಗ ಸಂಪಾದಿಸುತ್ತಾರೆ. ಗಾಯನ ಬಲ್ಲವರಿಗೆ ವಿನೂತನ ಅವಕಾಶಗಳ ಲಭ್ಯತೆ ಇದೆ. ಸಂಗೀತ ಮತ್ತು ನೃತ್ಯದ ಕಲಾವಿದರಿಗೆ ವಿಶೇಷವಾದ ಸಾಮಾಜಿಕ ಗೌರವ ಲಭಿಸುತ್ತದೆ. ಪಾಲುಗಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ.

ಪರಿಹಾರ : ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಕುಂಭ

ಉದ್ಯೋಗದಲ್ಲಿ ಆತಂಕದ ಪರಿಸ್ಥಿತಿ ಎದುರಾಗುತದೆ. ಹಿರಿಯ ಅಧಿಕಾರಿಗಳ ಅನುಕಂಪದಿಂದ ಸುಸ್ಥಿತಿಯನ್ನು ಗಳಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿತ ಮಟ್ಟ ತಲುಪಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಉನ್ನತ ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳುವರು. ಅನಾವಶ್ಯಕ ಖರ್ಚು ವೆಚ್ಚಗಳನ್ನು ನಿಯಂತ್ರಿಸಿ. ಕುಟುಂಬದವರ ಜೊತೆಯಲ್ಲಿ ಕಿರು ಪ್ರವಾಸ ಕೈಗೊಳ್ಳುವಿರಿ.

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಬೂದು ಬಣ್ಣ

ಮೀನ

ಕೆಲಸ ಕಾರ್ಯಗಳಲ್ಲಿ ಯಾವುದೇ ಅಡ್ಡಿ ಆತಂಕಗಳು ಎದುರಾಗುವುದಿಲ್ಲ. ಹಣದ ಕೊರತೆ ಉಂಟಾಗುತ್ತದೆ. ವಿದ್ಯಾರ್ಥಿಗಳು ವಿಶೇಷವಾದ ಗೌರವಕ್ಕೆ ಪಾತ್ರರಾಗುತ್ತಾರೆ. ವಿವಾಹ ಯೋಗವಿದೆ. ದಂಪತಿ ನಡುವೆ ಇದ್ದ ಮನಸ್ತಾಪ ಕೊನೆಗೊಳ್ಳಲಿದೆ. ಆಡುವ ಮಾತಿನ ಮೇಲೆ ಹಿಡಿತವಿದ್ದಲ್ಲಿ ಯಾವುದೇ ಸಮಸ್ಯೆ ತಲೆದೋರದು. ಮನೆಯ ಮುಂದಿರುವ ಗಿಡ ಸಂರಕ್ಷಿಸುವ ಕೆಲಸದಲ್ಲಿ ಸಂತಸ ಕಾಣುವಿರಿ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಕಂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).