Tomorrow Horoscope: ಅನಾವಶ್ಯಕವಾಗಿ ಸಮಯ ಹಾಳು ಮಾಡದಿರಿ, ಮಾಡುವ ತಪ್ಪಿಗೆ ಪಶ್ಚಾತ್ತಾಪ ಪಡಬೇಕಾಗುತ್ತದೆ; ನಾಳಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಅನಾವಶ್ಯಕವಾಗಿ ಸಮಯ ಹಾಳು ಮಾಡದಿರಿ, ಮಾಡುವ ತಪ್ಪಿಗೆ ಪಶ್ಚಾತ್ತಾಪ ಪಡಬೇಕಾಗುತ್ತದೆ; ನಾಳಿನ ದಿನಭವಿಷ್ಯ

Tomorrow Horoscope: ಅನಾವಶ್ಯಕವಾಗಿ ಸಮಯ ಹಾಳು ಮಾಡದಿರಿ, ಮಾಡುವ ತಪ್ಪಿಗೆ ಪಶ್ಚಾತ್ತಾಪ ಪಡಬೇಕಾಗುತ್ತದೆ; ನಾಳಿನ ದಿನಭವಿಷ್ಯ

30th April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ಏಪ್ರಿಲ್‌ 30ರ ದಿನಭವಿಷ್ಯ: ಮಾಡುವ ತಪ್ಪಿಗೆ ಪಶ್ಚಾತ್ತಾಪ ಪಡಬೇಕಾಗುತ್ತದೆ
ಏಪ್ರಿಲ್‌ 30ರ ದಿನಭವಿಷ್ಯ: ಮಾಡುವ ತಪ್ಪಿಗೆ ಪಶ್ಚಾತ್ತಾಪ ಪಡಬೇಕಾಗುತ್ತದೆ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (30th April 2024 Horoscope).

ನಾಳಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣಪಕ್ಷ, ಮಂಗಳವಾರ

ತಿಥಿ: ಸಪ್ತಮಿ ರಾತ್ರಿ 2.35 ರವರೆಗೂ ಇರುತ್ತದೆ, ಅನಂತರ ಅಷ್ಟಮಿ ಆರಂಭವಾಗುತ್ತದೆ.

ನಕ್ಷತ್ರ: ಉತ್ತರಾಷಾಢ ನಕ್ಷತ್ರವು ರಾತ್ರಿ 1.23 ರವರೆಗೂ ಇರುತ್ತದೆ. ಅನಂತರ ಶ್ರವಣ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಿಗ್ಗೆ 5.59

ಸೂರ್ಯಾಸ್ತ: ಸಂಜೆ 6.34

ರಾಹುಕಾಲ: ಮಧ್ಯಾಹ್ನ 3.28 ರಿಂದ ಸಂಜೆ 5.02

ಮೇಷ

ಕೆಲಸ ಕಾರ್ಯಗಳು ನಿರಂತರವಾಗಿ ನಡೆಯಲಿವೆ. ಬಿಡುವಿಲ್ಲದ ಕಾರಣ ಮಾನಸಿಕ ಒತ್ತಡ ಹೆಚ್ಚುತ್ತದೆ. ಉದ್ಯೋಗದಲ್ಲಿ ನಿಮ್ಮ ಮನದಾಳದಂತೆ ಬದಲಾವಣೆಗಳು ಉಂಟಾಗಲಿವೆ. ಕುಟುಂಬ ಸದಸ್ಯರಲ್ಲಿ ಹಣಕಾಸಿನ ಸಂಬಂಧಿತ ಭಿನ್ನಾಭಿಪ್ರಾಯ ಇರುತ್ತದೆ. ಕುಟುಂಬದ ಹಿರಿಯರ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗುವಿರಿ. 

ಪರಿಹಾರ: ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ವೃಷಭ

ಪರಿಸ್ಥಿತಿಗೆ ಅನುಗುಣವಾಗಿ ವರ್ತಿಸುವ ಕಾರಣ ವಿವಾದಗಳು ಇರುವುದಿಲ್ಲ. ಆತ್ಮವಿಶ್ವಾಸದಿಂದ ಹೊಸ ವ್ಯಾಪಾರವನ್ನು ಆರಂಭಿಸುವಿರಿ. ಆದಾಯದ ವಿಚಾರದಲ್ಲಿ ಅದೃಷ್ಟವಿದೆ. ಆದರೆ ಅನಾವಶ್ಯಕ ಖರ್ಚು ವೆಚ್ಚಗಳನ್ನು ನಿಯಂತ್ರಿಸಿ. ಹಠದ ಗುಣಕ್ಕೆ ಬೇಸರಗೊಂಡು ಆತ್ಮೀಯರೊಬ್ಬರು ದೂರವಾಗಲಿದ್ದಾರೆ. 

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ : ಕೆಂಪು ಬಣ್ಣ

ಮಿಥುನ  

ಉದ್ಯೋಗದಲ್ಲಿ ಆಂತರಿಕ ಬದಲಾವಣೆಗಳು ಕಂಡುಬರಲಿವೆ. ವಿದ್ಯಾರ್ಥಿಗಳು ಕೋಪವನ್ನು ನಿಯಂತ್ರಿಸಿಕೊಂಡಲ್ಲಿ ಯಶಸ್ಸು ಗಳಿಸುತ್ತಾರೆ. ಮಕ್ಕಳ ಆರೋಗ್ಯದ ವಿಚಾರದಲ್ಲಿ ಆತಂಕಕ್ಕೆ ಒಳಗಾಗುವಿರಿ. ವಿದೇಶದಲ್ಲಿ ಅಧ್ಯಯನ ಮುಂದುವರೆಸುವ ಆಶಯ ಇರಲಿದೆ. 

ಪರಿಹಾರ: ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕಟಕ

ಉದ್ಯೋಗದಲ್ಲಿ ನಿಮ್ಮ ಆದೇಶವನ್ನು ಒಪ್ಪಿ ನಡೆದುಕೊಳ್ಳುತ್ತಾರೆ. ವಿದ್ಯಾರ್ಥಿಗಳು ಅಭ್ಯಾಸಕ್ಕೆ ಹೆಚ್ಚಿನ ಸಮಯವನ್ನು ನೀಡುತ್ತಾರೆ. ನಿಷ್ಕಲ್ಮಶ ಮನಸ್ಸಿನ ಕಾರಣ ಎಲ್ಲರ ಪ್ರೀತಿ ಮತ್ತು ಹೊಗಳಿಕೆಗೆ ಪಾತ್ರರಾಗುವಿರಿ. ದೂರದ ಸಂಬಂಧಿಯೊಬ್ಬರ ಸಹಾಯದಿಂದ ವಿವಾಹ ನಿಶ್ಚಯವಾಗಬಹುದು. 

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ದೀಪದೆಣ್ಣೆ ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಸಿಂಹ

ಸ್ನೇಹಿತರ ಸಹಾಯದಿಂದ ವಿದೇಶಿ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆತಂಕದ ಛಾಯೆ ಇದ್ದರೂ ವರಮಾನದಲ್ಲಿ ತೊಂದರೆ ಕಂಡುಬಾರದು. ಉನ್ನತ ವಿದ್ಯಾಭ್ಯಾಸಕ್ಕೆ ಹೊರದೇಶಕ್ಕೆ ತೆರಳುವಿರಿ. ಹಣದ ಕೊರತೆ ಕ್ರಮೇಣವಾಗಿ ಕಡಿಮೆಯಾಗುತ್ತದೆ. 

ಪರಿಹಾರ: ತಾಯಿಯ ಆಶೀರ್ವಾದ ಪಡೆದು ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ : ಹಸಿರು ಬಣ್ಣ

ಕನ್ಯಾ

ಕುಟುಂಬದಲ್ಲಿ ಹಣಕಾಸಿನ ವಿಚಾರದಲ್ಲಿ ವಾದ ವಿವಾದ ಕಂಡು ಬರುತ್ತದೆ. ವಿದ್ಯಾರ್ಥಿಗಳು ಸುಲಭವಾಗಿ ಸಹಪಾಠಿಗಳ ಪ್ರಭಾವಕ್ಕೆ ಮಣಿಯುತ್ತಾರೆ. ಕಂತಿನ ವ್ಯಾಪಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ಆತ್ಮೀಯರೂಬ್ಬರಿಂದ ಹಣದ ಸಹಾಯ ದೊರೆಯಲಿದೆ. 

ಪರಿಹಾರ: ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ನೀಲಿ ಬಣ್ಣ

ತುಲಾ

ಉದ್ಯೋಗದಲ್ಲಿ ಎಲ್ಲರ ಸಹಮತದಿಂದ ಬದಲಾವಣೆ ಮಾಡುವಿರಿ. ವಿದ್ಯಾರ್ಥಿಗಳು ಕ್ರಿಯಾಶೀಲತೆಯಿಂದ ಜವಾಬ್ದಾರಿಯಿಂದ ಮುಂದುವರೆಯುವಿರಿ. ಸಮಾಜದಲ್ಲಿ ನಾಯಕತ್ವದ ಸ್ಥಾನಮಾನ ದೊರೆಯುತ್ತದೆ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವಿರಿ. 

ಪರಿಹಾರ: ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ವೃಶ್ಚಿಕ

ಕೌಟುಂಬಿಕ ಜೀವನದಲ್ಲಿ ಬೇಸರವಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಯಾವುದೇ ಬದಲಾವಣೆಗಳು ಕಾಣುವುದಿಲ್ಲ. ಹಗಲುಗನಸು ಕಾಣದೆ ಕೆಲಸ ಕಾರ್ಯಗಳಲ್ಲಿ ಮುಂದುವರೆಯುವಿರಿ. ಮಕ್ಕಳ ಶಿಕ್ಷಣಕ್ಕಾಗಿ ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ಮಾನಸಿಕ ಒತ್ತಡದಿಂದ ಅನಾರೋಗ್ಯ ಉಂಟಾಗುತ್ತದೆ.

ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಧನಸ್ಸು

ಉದ್ಯೋಗದಲ್ಲಿ ಸಮಸ್ಯೆಗಳು ಇರುವುದಿಲ್ಲ ಹಾಗೆಯೇ ಪ್ರಗತಿಯೂ ಇರುವುದಿಲ್ಲ. ಹಣಕಾಸಿನ ವ್ಯವಹಾರದಲ್ಲಿ ಸ್ವಂತ ನಿರ್ಧಾರಗಳಿಗೆ ಬದ್ದರಾಗಿರಿ. ಅನಿರೀಕ್ಷಿತ ಧನ ಲಾಭವಿದೆ. ಅಳುಕಿನ ಮನಸ್ಸಿನಿಂದ ತೆಗೆದುಕೊಳ್ಳುವ ನಿರ್ಧಾರ ತೊಂದರೆಗಳಿಗೆ ದಾರಿಯಾಗುತ್ತದೆ. 

ಪರಿಹಾರ: ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಮಕರ

ಕುಟುಂಬದಲ್ಲಿ ಬೇಸರದ ವಾತಾವರಣ ಇರುತ್ತದೆ. ಕೇಳದೇ ಹೋದರೂ ಸ್ನೇಹಿತರ ಸಹಾಯ ದೊರೆಯಲಿದೆ. ಎಲ್ಲರ ಜೊತೆಯಲ್ಲಿ ಶಾಂತಿ ಸಹನೆಯಿಂದ ವರ್ತಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ.

ಪರಿಹಾರ: ಸಹೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬೂದು ಬಣ್ಣ

ಕುಂಭ

ಬೇಸರದ ಕಾರಣ ಕುಟುಂಬದಲ್ಲಿ ಅಸಹಕಾರ ಭಾವನೆ ನೆಲೆಸಿರುತ್ತದೆ. ಉದ್ಯೋಗದಲ್ಲಿ ಸೋಲು ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಿರಿ. ಆತ್ಮೀಯರ ಒತ್ತಾಯಕ್ಕೆ ಮಣಿದು ಉದ್ಯೋಗ ಬದಲಿಸುವಿರಿ. ವಿದ್ಯಾರ್ಥಿಗಳು ಏಕಾಂಗಿಯಾಗಿ ಕಲಿಕೆಯಲ್ಲಿ ತೊಡಗುತ್ತಾರೆ. ಪ್ರಯೋಜನವಿಲ್ಲದ ಕೆಲಸ ಕಾರ್ಯಗಳಲ್ಲಿ ತೊಡಗುವಿರಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಂದು ಬಣ್ಣ

ಮೀನ

ಕುಟುಂಬದಲ್ಲಿ ಸಹಕಾರದ ವಾತಾವರಣವಿರುತ್ತದೆ. ಧೃಡವಾದ ಸಂಕಲ್ಪದಿಂದ ಮಾತ್ರ ಕೆಲಸ ಕಾರ್ಯಗಳಲ್ಲಿ ಜಯಗಳಿಸುವಿರಿ. ವಿದ್ಯಾರ್ಥಿಗಳು ದುಡುಕದೆ ಬುದ್ಧಿವಂತಿಕೆಯಿಂದ ಉನ್ನತ ಅಧ್ಯಯನದಲ್ಲಿ ಮುಂದುವರೆಯುತ್ತಾರೆ. ಒಂಟಿಯಾಗಿ ಎದುರಾಗುವ ಸಮಸ್ಯೆಗಳ ವಿರುದ್ದ ಜಯಗಳಿಸುವಿರಿ.

ಪರಿಹಾರ: ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಕಪ್ಪು ಬಣ್ಣ

 

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.