Tomorrow Horoscope: ಪಶು ಸಂಗೋಪನೆಯಲ್ಲಿ ಆಸಕ್ತಿ ತೋರುವಿರಿ,ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ; ನಾಳೆಯ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಪಶು ಸಂಗೋಪನೆಯಲ್ಲಿ ಆಸಕ್ತಿ ತೋರುವಿರಿ,ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ; ನಾಳೆಯ ದಿನ ಭವಿಷ್ಯ

Tomorrow Horoscope: ಪಶು ಸಂಗೋಪನೆಯಲ್ಲಿ ಆಸಕ್ತಿ ತೋರುವಿರಿ,ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ; ನಾಳೆಯ ದಿನ ಭವಿಷ್ಯ

3rd June 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (3rd June 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಸೋಮವಾರ

ತಿಥಿ: ದ್ವಾದಶಿ ರಾತ್ರಿ 10.59 ರವರೆಗೂ ಇದ್ದು ನಂತರ ತ್ರಯೋದಶಿ ಆರಂಭವಾಗುತ್ತದೆ

ನಕ್ಷತ್ರ: ಅಶ್ವಿನಿ ನಕ್ಷತ್ರವು ರಾತ್ರಿ 11.13ರವರೆಗೂ ಇದ್ದು ನಂತರ ಭರಣಿ ನಕ್ಷತ್ರ ಆರಂಭವಾಗುತ್ತದೆ

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.42

ರಾಹುಕಾಲ: ಬೆಳಗ್ಗೆ 07.34 ರಿಂದ 09.10

ರಾಶಿಫಲ

ಮೇಷ

ಉತ್ತಮ ಭವಿಷ್ಯಕ್ಕಾಗಿ ಹಣವನ್ನು ವಿವಿಧ ಯೋಜನೆಯಲ್ಲಿ ಹೂಡಿಕೆ ಮಾಡುವಿರಿ. ಚಿಕ್ಕ ವಿಚಾರವಾದರೂ ಮನಸ್ಸಿಟ್ಟು, ಹಿಡಿದ ಕಾರ್ಯ ಸಾಧಿಸುವಿರಿ. ಉನ್ನತ ಉನ್ನತ ಅಧ್ಯಯನ ಮಾಡುವ ಆಸೆ ಈಡೇರಲಿದೆ. ನಿಮ್ಮ ನಿಸ್ವಾರ್ಥ ಮನೋಭಾವನೆ ಎಲ್ಲರ ಮನ ಗೆಲ್ಲುತ್ತದೆ. ಬುದ್ಧಿವಂತಿಕೆಯಿಂದ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಿರಿ. ಹಣಕಾಸಿನ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುವಿರಿ. ನಿಮ್ಮ ಕನಸುಗಳು ನನಸಾಗಲಿವೆ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕೆಂಪು

ವೃಷಭ

ನಿಮ್ಮ ಮನದಲ್ಲಿನ ಗೊಂದಲ ನಿವಾರಣೆ ಆಗಲಿದೆ. ಮಕ್ಕಳ ಜೊತೆ ಸಂತೋಷಕೂಟಕ್ಕೆ ತೆರಳುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ. ಎಷ್ಟೇ ಬುದ್ಧಿ ಇದ್ದರೂ ಹಣಕಾಸಿನ ವಿಚಾರದಲ್ಲಿ ತಪ್ಪು ನಿರ್ಧಾರ ಕೈಗೊಳ್ಳುವಿರಿ. ಮಾನಸಿಕ ಒತ್ತಡದಿಂದ ಹೊರ ಬರಲು ಪ್ರಯತ್ನಿಸಿ. ನಿಮ್ಮಲ್ಲಿನ ಸಕಾರಾತ್ಮಕ ಮನೋಭಾವನೆ ನಿರಾಸೆಯನ್ನು ದೂರ ಮಾಡಲಿದೆ. ಹೊಸ ಮನೆ ಕೊಳ್ಳುವ ಆಸೆಗೆ ಎಲ್ಲರ ಸಹಕಾರ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸಂತಸ ಮನೆ ಮಾಡಿರುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಿತ್ತಳೆ

ಮಿಥುನ

ಉತ್ತಮ ಆದಾಯ ಇದ್ದರೂ ಅನಾವಶ್ಯಕ ಖರ್ಚುವೆಚ್ಚಗಳು ಎದುರಾಗಲಿವೆ. ಆತುರದ ನಿರ್ಧಾರದಿಂದ ಅಪೂರ್ವವಾದ ಉದ್ಯೋವಕಾಶವನ್ನು ಕಳೆದುಕೊಳ್ಳಬಹುದು. ಹಣಕಾಸಿನ ವ್ಯವಹಾರಗಳನ್ನು ಸ್ವತಂತ್ರವಾಗಿ ನಿರ್ವಹಿಸಿ ಎಲ್ಲರ ಮನ ಸೆಳೆಯುವಿರಿ. ನಿಮ್ಮ ಆಕರ್ಷಣಾ ವ್ಯಕ್ತಿತ್ವ ಸಮಾಜದ ನಾಯಕರನ್ನಾಗಿ ಮಾಡುತ್ತದೆ. ಸ್ನೇಹಿತರ ಜೊತೆ ಪಾಲುದಾರಿಕೆ ವ್ಯಾಪಾರವನ್ನು ಆರಂಭಿಸುವಿರಿ.

ಪರಿಹಾರ : ತಾಯಿಯ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹಳದಿ

ಕಟಕ

ಕಷ್ಟಪಟ್ಟು ಗಳಿಸಿದ ಹಣವನ್ನು ಸಮಾಜಸೇವೆಗಾಗಿ ಖರ್ಚು ಮಾಡುವಿರಿ. ಕುಟುಂಬದಲ್ಲಿ ವಿಶೇಷ ಗೌರವ ದೊರೆಯುತ್ತದೆ. ಸಂಗಾತಿಯೊಂದಿಗೆ ಸಂತಸದಿಂದ ಬಾಳ್ವೆ ನಡೆಸುವಿರಿ. ಬಿಡುವಿಲ್ಲದ ಕೆಲಸದಿಂದ ನೆಮ್ಮದಿ ಕಳೆದುಕೊಳ್ಳುವಿರಿ. ಮನೆ ಮಂದಿ ಜೊತೆ ಮನರಂಜನಾ ಸ್ಥಳಕ್ಕೆ ತೆರಳುವಿರಿ. ನಿಮ್ಮ ಅಗತ್ಯಗಳನ್ನು ಪೂರೈಸಲು ಸಂಗಾತಿಯು ಪ್ರಯತ್ನಿಸುತ್ತಾರೆ. ವಿದ್ಯಾರ್ಥಿಗಳ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಉಂಟಾಗಲಿವೆ.

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಹಸಿರು

ಸಿಂಹ

ಆತಂಕದಿಂದ ಆರಂಭಿಸಿದ ಕೆಲಸವೊಂದನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ನಿಮ್ಮ ಮನದ ಭಾವನೆಗಳನ್ನು ಯಾರಿಗೂ ತಿಳಿಸುವುದಿಲ್ಲ. ನೀವು ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದಲ್ಲಿ ಪರಿಹಾರ ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ಸಮಯ ವ್ಯರ್ಥ ಮಾಡದೇ ಯಾವುದಾದರೊಂದು ಕೆಲಸದಲ್ಲಿ ಮಗ್ನರಾಗುವಿರಿ.

ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ನೀಲಿ

ಕನ್ಯಾ

ಹಣದ ನಷ್ಟ ಕಡಿಮೆ ಮಾಡುವಲ್ಲಿ ಯಶಸ್ವಿಯಾಗುವಿರಿ. ನಿಮ್ಮ ಮನದ ಆಶೋತ್ತರಗಳು ಈಡೇರಲಿವೆ. ವ್ಯಾಪಾರ ವ್ಯವಹಾರದಲ್ಲಿ ಎಚ್ಚರ ಇರಲಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಮಕ್ಕಳ ಜೊತೆ ಪ್ರೀತಿಯಿಂದ ದಿನ ಕಳೆಯುವಿರಿ. ಸಂತಾನ ಲಾಭವಿದೆ. ತಾಳ್ಮೆಯಿಂದ ವರ್ತಿಸಿದಷ್ಟೂ ಒಳ್ಳೆಯದು. ವಿಶೇಷ ವ್ಯಕ್ತಿಯೊಬ್ಬರನ್ನು ಭೇಟಿಯಾಗುವ ಸಾಧ್ಯತೆ ಇದೆ. ನಿಮ್ಮ ನಿಸ್ವಾರ್ಥ ಸೇವೆಯಿಂದ ಸಮಾಜದ ಕೇಂದ್ರಬಿಂದುವಾಗುವಿರಿ.

ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿ ದಾರದಲ್ಲಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ : ನೇರಳೆ

ತುಲಾ

ಹೊಸ ವ್ಯಾಪಾರವನ್ನು ಆರಂಭಿಸಿದಲ್ಲಿ ಯಾವುದೇ ಪ್ರಯೋಜನ ಇರುವುದಿಲ್ಲ. ಪಾಲುದಾರಿಕೆ ವ್ಯಾಪಾದಲ್ಲಿ ಉತ್ತಮ ಲಾಭಾಂಶ ದೊರೆಯುತ್ತದೆ. ಮಕ್ಕಳ ಆಶೋತ್ತರಗಳನ್ನು ಈಡೇರಿಸುವಿರಿ. ಸದಾಕಾಲ ಯಾವುದಾದರೊಂದು ಕೆಲಸದಲ್ಲಿ ತೊಡಗುವಿರಿ. ಸಂಗಾತಿ ಮತ್ತು ಮಕ್ಕಳಜೊತೆ ವಿಹಾರಕ್ಕೆ ತೆರಳುವಿರಿ. ಏಕಾಂಗಿತನ ನಿಮ್ಮನ್ನು ಕಾಡಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡುತ್ತದೆ.

ಪರಿಹಾರ : ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು ಈಶಾನ್ಯ

ಅದೃಷ್ಟದ ಬಣ್ಣ: ಗುಲಾಬಿ

ವೃಶ್ಚಿಕ

ಷೇರು ಮಾರುಕಟ್ಟೆಯಲ್ಲಿ ಹೂಡಿದ್ದ ಹಣಕ್ಕೆ ಉತ್ತಮ ಲಾಭ ತರುತ್ತವೆ. ದೂರದ ಸಂಬಂಧಿಯೊಬ್ಬರ ಕಾರ್ಯಕ್ರಮಕ್ಕೆ ತೆರಳುವಿರಿ. ಎಲ್ಲರ ಜೊತೆಯಲ್ಲಿ ಸಂತೋಷದಿಂದ ದಿನ ಕಳೆಯುವಿರಿ. ಅನಿರೀಕ್ಷಿತ ಸುದ್ದಿಯೊಂದು ನಿಮಗೆ ಸಂತಸವನ್ನು ನೀಡಲಿದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ನಿಮ್ಮಲ್ಲಿನ ಆತಂರಿಕ ಜ್ಞಾನವನ್ನು ಎಲ್ಲರಿಗೂ ತಿಳಿಯುವ ವೇದಿಕೆಯೊಂದು ಸಿದ್ದವಾಗಲಿದೆ. ಸ್ರೀಯರು ಸಮಾಜದ ಕೇಂದ್ರ ಬಿಂದುವಾಗಲಿದ್ದಾರೆ.

ಪರಿಹಾರ: ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಧನಸ್ಸು

ಸಂಬಂಧಿಕರೊಂದಿಗೆ ಆರಂಭಿಸಿರುವ ಪಾಲುಗಾರಿಕೆಯ ವ್ಯಾಪಾರದಲ್ಲಿ ಉತ್ತಮ ಲಾಭವಿದೆ. ಜನ ಸಾಮಾನ್ಯರ ಜೊತೆ ಆತ್ಮೀಯತೆಯಿಂದ ಬೆರೆಯುವಿರಿ. ಹಣಕಾಸಿನ ವಿಚಾರದಲ್ಲಿ ದುಡುಕದೆ ಯೋಚಿಸಿ ತೀರ್ಮಾನ ತೆಗೆದುಕೊಳ್ಳೂವಿರಿ. ಕುಟುಂಬದ ಒಗ್ಗಟ್ಟಿನ ಫಲವಾಗಿ ಆರ್ಥಿಕ ಪ್ರಗತಿ ಉಂಟಾಗಲಿದೆ. ಸ್ವಂತ ಸಮಸ್ಯೆಗಳನ್ನು ಬದಿಗೊತ್ತಿ ಬೇರೆಯವರಿಗೆ ಸಹಾಯ ಮಾಡುವಿರಿ.

ಪರಿಹಾರ : ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಬೂದು ಬಣ್ಣ

ಮಕರ

ಧಾರ್ಮಿಕ ಆಚರಣೆಗಾಗಿ ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳನ್ನು ನಿಯಂತ್ರಿಸಲು ವಿಫರಾಗುವಿರಿ. ಸಂಬಂಧಿಯೊಬ್ಬರನ್ನು ಭೇಟಿ ಮಾಡಲು ದೂರದ ಊರಿಗೆ ತೆರಳುವಿರಿ. ಆತುರದ ನಿರ್ಣಯ ತೆಗೆದುಕೊಳ್ಳದಿರಿ. ಮಕ್ಕಳ ದೈನಂದಿನ ಚಟುವಟಿಕೆಗಳು ನಿಮ್ಮನ್ನು ನಿರಾಸೆಗೊಳಿಸುತ್ತದೆ. ನಿಮ್ಮ ಸಂಗಾತಿಯ ಆರೋಗ್ಯದಲ್ಲಿ ತೊಂದರೆ ಇರಲಿದೆ. ಪಶು ಸಂಗೋಪನೆಯಲ್ಲಿ ಆಸಕ್ತಿ ತೋರುವಿರಿ.

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಂದು

ಕುಂಭ

ಸಂಗಾತಿಯ ಮನದ ಗೊಂದಲವನ್ನು ಸುಲಭವಾಗಿ ನಿವಾರಿಸುವಿರಿ. ನಿರಾಸೆಯಾದಾಗ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಕುಟುಂಬದ ಹಿರಿಯರ ಸಲಹೆಯಿಂದ ಹಣ ಉಳಿಸಲು ಸಾಧ್ಯವಾಗಲಿದೆ. ಹೆಣ್ಣು ಮಕ್ಕಳ ಅಗತ್ಯತೆಗಳನ್ನು ಪೂರೈಸಲು ವಿಫಲರಾಗುವಿರಿ. ಮಕ್ಕಳು ಮೊಮ್ಮಕ್ಕಳ ಆಗಮನದಿಂದ ಸಂತೋಷ ಹೆಚ್ಚಾಗಲಿದೆ. ಜೀವನದಲ್ಲಿ ಮಹತ್ತರ ಬದಲಾವಣೆ ಕಾಣಲಿದೆ.

ಪರಿಹಾರ : ತಾಯಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ತಿಳಿ ಹಸಿರು

ಮೀನ

ಸ್ವಂತ ಉದ್ಯಮ ಇದ್ದಲ್ಲಿ ಮಧ್ಯಮಗತಿಯ ಲಾಭ ದೊರೆಯುತ್ತದೆ. ಯಾವುದೇ ವಿಚಾರವಾದರೂ ಮೊದಲು ಯೋಚಿಸಿ ನಂತರ ಕಾರ್ಯರೂಪಕ್ಕೆ ತರುವಿರಿ. ಭವಿಷ್ಯದ ಉತ್ತಮ ಜೀವನಕ್ಕಾಗಿ ಹಲವು ಯೋಜನೆಯಲ್ಲಿ ಹಣದ ಹೂಡಿಕೆ ಮಾಡುವಿರಿ. ತೆಗೆದುಕೊಂಡ ತೀರ್ಮಾನವನ್ನು ಅನಗತ್ಯವಾಗಿ ಬದಲಾಯಿಸುವಿರಿ. ಹಣಕಾಸಿನ ವ್ಯವಹಾರವನ್ನು ಗೌಪ್ಯವಾಗಿ ಇಡುವಿರಿ. ದಾಂಪತ್ಯದಲ್ಲಿ ಪ್ರೀತಿ ವಿಶ್ವಾಸ ಇರುತ್ತದೆ. ಗುರು ಹಿರಿಯರ ಆಶೀರ್ವಾದ ನಿಮಗೆ ದೊರೆಯುತ್ತದೆ.

ಪರಿಹಾರ : ಪಕ್ಷಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 10

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.