ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಒತ್ತಡದಿಂದ ದೂರಾಗಲು ಕುಟುಂಬದೊಂದಿಗೆ ಪ್ರವಾಸ, ದಂಪತಿ ನಡುವೆ ಉತ್ತಮ ಹೊಂದಾಣಿಕೆ; ನಾಳೆಯ ದಿನ ಭವಿಷ್ಯ

ಒತ್ತಡದಿಂದ ದೂರಾಗಲು ಕುಟುಂಬದೊಂದಿಗೆ ಪ್ರವಾಸ, ದಂಪತಿ ನಡುವೆ ಉತ್ತಮ ಹೊಂದಾಣಿಕೆ; ನಾಳೆಯ ದಿನ ಭವಿಷ್ಯ

4th June 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ಒತ್ತಡದಿಂದ ದೂರಾಗಲು ಕುಟುಂಬದೊಂದಿಗೆ ಪ್ರವಾಸ, ದಂಪತಿ ನಡುವೆ ಉತ್ತಮ ಹೊಂದಾಣಿಕೆ; ನಾಳೆಯ ದಿನ ಭವಿಷ್ಯ
ಒತ್ತಡದಿಂದ ದೂರಾಗಲು ಕುಟುಂಬದೊಂದಿಗೆ ಪ್ರವಾಸ, ದಂಪತಿ ನಡುವೆ ಉತ್ತಮ ಹೊಂದಾಣಿಕೆ; ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (4th June 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಮಂಗಳವಾರ

ತಿಥಿ: ತ್ರಯೋದಶಿ ರಾತ್ರಿ 09.15 ರವರೆಗೂ ಇರುತ್ತದೆ ನಂತರ ಚತುರ್ದಶಿ ಆರಂಭವಾಗುತ್ತದೆ.

ನಕ್ಷತ್ರ: ಭರಣಿ ನಕ್ಷತ್ರವು ರಾತ್ರಿ 09.58ರವರೆಗೂ ಇದ್ದು ನಂತರ ಕೃತ್ತಿಕ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.42

ರಾಹುಕಾಲ: 03.34 ರಿಂದ ಸಂಜೆ 05.10

ರಾಶಿ ಫಲ

ಮೇಷ

ಮಾತಿನಲ್ಲಿ ಮೋಡಿ ಮಾಡಿ ಸ್ವಂತ ಕೆಲಸಗಳನ್ನು ಪೂರ್ಣಗೊಳಿಸುವಿರಿ. ಭೂವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ಉದ್ಯೋಗ ಬದಲಾಯಿಸುವ ಸಾಧ್ಯತೆಗಳಿವೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ನಿಮ್ಮ ನಿರೀಕ್ಷೆ ನಿಜವಾಗಲಿದೆ. ಹಣಕಾಸಿನ ಸಹಾಯ ದೊರೆಯುತ್ತದೆ. ವಂಶದ ಹಿರಿಯರನ್ನು ಭೇಟಿ ಮಾಡುವಿರಿ. ವಂಶದ ಆಸ್ತಿಯ ಹಂಚಿಕೆಯಲ್ಲಿ ನಿಮ್ಮ ಪಾತ್ರ ಮುಖ್ಯವಾಗುತ್ತದೆ. ದಂಪತಿ ನಡುವೆ ಉತ್ತಮ ಹೊಂದಾಣಿಕೆ ಇರಲಿದೆ.

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೀಲಿ

ವೃಷಭ

ಆತ್ಮೀಯರ ಹಣದ ಸಹಾಯ ನೆಮ್ಮದಿಯನ್ನು ನೀಡುತ್ತದೆ. ಮಕ್ಕಳ ಜೊತೆ ಸಂತೋಷದಿಂದ ದಿನ ಕಳೆಯುವಿರಿ. ದಿಢೀರ್ ಹಣ ಗಳಿಸುವ ಆಸೆ ಇರುವುದಿಲ್ಲ. ಕಷ್ಟವೆನಿಸಿದರೂ ಸಂಗಾತಿಯ ಮನೋಭಿಲಾಷೆಯನ್ನು ಪೂರೈಸುವಿರಿ. ಒತ್ತಡದಿಂದ ದೂರವಾಗಲು ಕುಟುಂಬವರೊಂದಿಗೆ ಕಿರು ಪ್ರವಾಸ ಕೈಗೊಳ್ಳುವಿರಿ. ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಲಸವೊಂದನ್ನು ಪೂರ್ಣಗೊಳಿಸುವಲ್ಲಿ ಯಶಸ್ಸು ಗಳಿಸುವಿರಿ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೇರಳೆ

ಮಿಥುನ

ಮನದಲ್ಲಿನ ನೋವನ್ನು ಮರೆತು ಎಲ್ಲರ ಜೊತೆ ಸಂತೋಷ ಮತ್ತು ಆನಂದದಿಂದ ದಿನಕಳೆಯುವಿರಿ. ಗೃಹಿಣಿಯರಿಗೆ ತವರಿನ ಸಹಾಯ ದೊರೆಯುತ್ತದೆ. ಒಳ್ಳೆಯ ಕೆಲಸ ಕಾರ್ಯಗಳಿಗಾಗಿ ಹಣ ಖರ್ಚು ಮಾಡುವಿರಿ. ಕುಟುಂಬದಲ್ಲಿನ ಸಮಸ್ಯೆಗಳು ದೂರವಾಗಲಿವೆ. ಹೆಚ್ಚಿನ ಕುಟುಂಬದ ಜವಾಬ್ದಾರಿಗಳನ್ನು ಯಾವುದೇ ಅಡೆ ತಡೆ ಇಲ್ಲದೆ ನಿರ್ವಹಿಸುವಿರಿ. ಸೋಲಿನ ಭಯದಲ್ಲಿ ಸಿಡುಕುತನದಿಂದ ವರ್ತಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಗುಲಾಬಿ

ಕಟಕ

ವಿದ್ಯಾರ್ಥಿಗಳು ತಮ್ಮ ಸಾಧನೆಯಿಂದ ಕುಟುಂಬದವರ ಪ್ರೀತಿ ಗಳಿಸುತ್ತಾರೆ. ಉನ್ನತ ಅಧ್ಯಯನ ಮಾಡುವ ಅವಕಾಶ ದೊರೆಯುತ್ತದೆ. ಉತ್ತಮ ಪ್ರಯತ್ನದ ಕಾರಣ ಆರ್ಥಿಕ ಬಿಕ್ಕಟ್ಟು ನಿವಾರಣೆ ಆಗಲಿದೆ. ನಿಮ್ಮ ಹಣೆ ಅಥವಾ ತಲೆಗೆ ಪೆಟ್ಟಾಗಬಹುದು. ಮನೆಯಲ್ಲಿ ಚಿಕ್ಕ ಮಕ್ಕಳಿದ್ದಲ್ಲಿ ಆರೋಗ್ಯದ ಬಗ್ಗೆಎಚ್ಚರಿಕೆ ಇರಬೇಕು. ಸಂಗಾತಿಯ ಮನಸ್ಸಿನ ಭಾವನೆಗಳನ್ನು ಅರ್ಥಮಾಡಿಕೊಂಡು ನಡೆದುಕೊಳ್ಳುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬಿಳಿ

ಸಿಂಹ

ಹಣಕಾಸಿನ ಸ್ಥಿತಿಯಲ್ಲಿ ಪ್ರಗತಿ ಕಂಡುಬರುತ್ತದೆ. ವಂಶದ ಆಸ್ತಿಯಲ್ಲಿನ ನ್ಯಾಯಯುತ ಭಾಗ ದೊರೆಯಲಿದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಏರಿಳಿತ ಉಂಟಾಗಲಿದೆ. ಮಕ್ಕಳನ್ನುಪ್ರೀತಿ ವಿಶ್ವಾಸದಿಂದ ಕಾಣುವಿರಿ. ನೇರ ನಿಷ್ಠುರದ ನಡೆ ನುಡಿಯಿಂದ ಸಂಬಂಧಿಕರ ಜೊತೆ ವಿವಾದ ಉಂಟಾಗಬಹುದು. ನಿಮ್ಮಲ್ಲಿ ಉತ್ತಮ ಸಂಘಟನಾ ಗುಣ ಎಲ್ಲರ ಮನ ಗೆಲ್ಲುತ್ತದೆ. ಜನಸಾಮಾನ್ಯರಿಂದ ದೂರ ಉಳಿಯಲು ಪ್ರಯತ್ನಿಸುವಿರಿ.

ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಬೂದು

ಕನ್ಯಾ

ಹಣಕಾಸಿನ ವಿಚಾರದಲ್ಲಿ ಸಮಾಧಾನ ಇರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ. ಹಣದ ವ್ಯವಹಾರದಲ್ಲಿನ ಗೊಂದಲ ನಿವಾರಣೆ ಆಗಲಿದೆ. ಕುಟುಂಬದಲ್ಲಿ ಪರಸ್ಪರ ಹೊಂದಾಣಿಕೆಯ ವಾತಾವರಣ ಇರುತ್ತದೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ದಂಪತಿ ನಡುವೆ ಉತ್ತಮ ಪ್ರೀತಿ ವಿಶ್ವಾಸ ಮನೆಮಾಡಿರುತ್ತವೆ. ನಿಮ್ಮಲ್ಲಿರುವ ತಪ್ಪನ್ನು ಸರಿಪಡಿಸಿಕೊಳ್ಳಲು ಪ್ರಯತ್ನಿಸುವಿರಿ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ : ಕಂದು

ತುಲಾ

ನಿಮ್ಮ ಮಕ್ಕಳಿಗೆ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ. ಹಣಕಾಸಿನ ವಿಚಾರದಲ್ಲಿ ಆತುರ ಪಡುವುದಿಲ್ಲ. ಹಣದ ಕೊರತೆ ಕಾಣುವುದಿಲ್ಲ. ಅತಿಯಾದ ಆತ್ಮವಿಶ್ವಾಸದಿಂದ ತಪ್ಪು ನಿರ್ಧಾರ ತೆಗೆದುಕೊಳ್ಳುವಿರಿ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಕುಟುಂಬದ ಸೌಖ್ಯಕ್ಕಾಗಿ ಯಾವುದೇ ತ್ಯಾಗಕ್ಕೂ ಹಿಂಜರಿಯುವುದಿಲ್ಲ. ಮನದಲ್ಲಿನ ಅಭಿಪ್ರಾಯವನ್ನು ವ್ಯಕ್ತಪಡಿಸಲು ವಿಫಲರಾಗುವಿರಿ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು ದಕ್ಷಿಣ

ಅದೃಷ್ಟದ ಬಣ್ಣ: ಕಪ್ಪು

ವೃಶ್ಚಿಕ

ಹಟದಿಂದ ಸದಾಕಾಲ ಯಶಸ್ಸಿನ ಹಾದಿಯಲ್ಲಿ ಸಾಗುವಿರಿ. ಸಾಲವಾಗಿ ಹಣ ನೀಡುವುದನ್ನು ಮತ್ತು ಪಡೆಯುವುದನ್ನು ಇಷ್ಟಪಡುವುದಿಲ್ಲ. ಕೆಲಸದ ನಡುವೆ ವಿಶ್ರಾಂತಿ ತೆಗೆದುಕೊಳ್ಳುವಿರಿ. ಅಪೂರ್ಣಗೊಂಡ ಕೆಲಸಗಳನ್ನು ಪೂರ್ಣಗೊಳಿಸುವಲ್ಲಿ ತಲ್ಲೀನರಾಗುವಿರಿ. ದಾಂಪತ್ಯ ಜೀವನದಲ್ಲಿ ಪ್ರೀತಿ ವಿಶ್ವಾಸ ಇರಲಿವೆ. ಎದುರಾಗುವ ಸಮಸ್ಯೆಗಳಿಗೆ ಬೆದರದೆ ಪರಿಹಾರವನ್ನು ಕಂಡು ಹಿಡಿಯುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ಧನಸ್ಸು

ಕಾನೂನಿನ ಹೋರಾಟವೊಂದರಲ್ಲಿ ಜಯ ಲಭಿಸುತ್ತದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಲಿದೆ. ಹಣಕಾಸಿನ ವ್ಯವಹಾರಗಳು ಮಧ್ಯಮಗತಿಯಲ್ಲಿ ಸಾಗಲಿವೆ. ಕಷ್ಟ ಎನಿಸಿದರೂ ಹಣ ಉಳಿಸುವಲ್ಲಿ ಸಫಲರಾಗುವಿರಿ. ವಂಶಾಧಾರಿತ ವೃತ್ತಿಯನ್ನು ಆರಂಭಿಸುವಿರಿ. ಸಾಲವಾಗಿ ನೀಡಿದ್ದ ಹಣವನ್ನು ಮರಳಿ ಪಡೆಯುವಿರಿ. ಕುಟುಂಬದ ಸಣ್ಣ ಸಣ್ಣ ಬದಲಾವಣೆಗೂ ಹೆಚ್ಚಿನ ಗಮನ ನೀಡುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನಸುಗೆಂಪು

ಮಕರ

ಆತುರ ಪಡದೆ ಕೆಲಸ ಕಾರ್ಯಗಳಲ್ಲಿ ಜಯ ಸಾಧಿಸುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಬಿಡುವಿನ ವೇಳೆ ಕಳೆಯುವಿರಿ. ನೀವು ಆನಂದಿಸುವ ಸ್ಥಳಗಳಿಗೆ ಪ್ರವಾಸಕ್ಕೆ ಹೋಗಲಿದ್ದೀರಿ. ಕಷ್ಟಕ್ಕೆ ತಕ್ಕ ಪ್ರತಿಫಲ ದೊರೆಯಲಿವೆ. ಹಣದ ಕೊರತೆ ಇರುವುದಿಲ್ಲ. ಬಡವರಿಗೆ ಸಹಾಯ ಮಾಡುವ ಕೆಲಸಗಳನ್ನು ಆರಂಭಿಸುವಿರಿ. ಆರೋಗ್ಯದ ಬಗ್ಗೆ ಗಮನ ಕೊಡಿ. ಹೊಸ ವಾಹನವನ್ನು ಕೊಳ್ಳುವಿರಿ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಕುಂಭ

ಉತ್ತಮ ಆದಾಯ ಇರಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡು ನಿಮ್ಮಲ್ಲಿ ಹೊಸ ಚೈತನ್ಯ ಮೂಡುತ್ತದೆ. ಉದ್ಯೋಗದಲ್ಲಿ ಉನ್ನತ ಸ್ಥಾನವನ್ನು ಮರಳಿ ಪಡೆಯಲು ಸಾಧ್ಯವಾಗುತ್ತದೆ. ಕೂಡಿಟ್ಟ ಹಣ ಈಗ ನಿಮಗೆ ಆಧಾರವಾಗಲಿದೆ. ಸುಖ ಮತ್ತು ದುಃಖವನ್ನು ಸಮಾನ ಮನಸ್ಥಿತಿಯಿಂದ ಸ್ವೀಕರಿಸುವಿರಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುವಂತೆ ಶ್ರಮಿಸುವಿರಿ. ಕುಟುಂಬದ ಜವಾಬ್ದಾರಿಯಿಂದ ಸಂಗಾತಿಗೆ ಮಾನಸಿಕ ಒತ್ತಡ ಹೆಚ್ಚುತ್ತದೆ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬೂದು ಬಣ್ಣ

ಮೀನ

ಸಂಗಾತಿಯ ಸಾಂತ್ವನದ ಮಾತು ಹೊಸ ಆಸೆ ಉಂಟು ಮಾಡುತ್ತದೆ. ಸಾಲದ ವ್ಯವಹಾರದಿಂದ ಮನಸ್ಸಿಗೆ ಬೇಸರ ಉಂಟಾಗುತ್ತದೆ. ಸ್ನೇಹಿತರಿಂದ ದೂರ ಉಳಿಯಬೇಕಾದ ಪ್ರಸಂಗ ಉಂಟಾಗುತ್ತದೆ. ಅವಿವಾಹಿತರಿಗೆ ಸಂಬಂಧ ಅಥವಾ ಪ್ರೀತಿಪಾತ್ರರ ಜೊತೆಯಲ್ಲಿ ವಿವಾಹವಾಗುತ್ತದೆ. ಸೋಲನ್ನು ಗೆಲುವಾಗಿಸಬಲ್ಲ ಉಪಾಯ ನಿಮಗೆ ತಿಳಿದಿರುತ್ತದೆ. ಉದ್ಯೋಗದಲ್ಲಿ ನಿಮ್ಮ ಪ್ರಯತ್ನದಿಂದ ಸಾಕಷ್ಟು ಬದಲಾವಣೆ ಕಾಣುತ್ತದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).