Tomorrow Horoscope: ಅತಿಯಾದ ಆತ್ಮವಿಶ್ವಾಸದಿಂದ ತೊಂದರೆ, ವಿಶ್ರಾಂತಿ ಇಲ್ಲದ ದುಡಿಮೆಯಿಂದ ಬೇಸರ; ನಾಳೆಯ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಅತಿಯಾದ ಆತ್ಮವಿಶ್ವಾಸದಿಂದ ತೊಂದರೆ, ವಿಶ್ರಾಂತಿ ಇಲ್ಲದ ದುಡಿಮೆಯಿಂದ ಬೇಸರ; ನಾಳೆಯ ದಿನ ಭವಿಷ್ಯ

Tomorrow Horoscope: ಅತಿಯಾದ ಆತ್ಮವಿಶ್ವಾಸದಿಂದ ತೊಂದರೆ, ವಿಶ್ರಾಂತಿ ಇಲ್ಲದ ದುಡಿಮೆಯಿಂದ ಬೇಸರ; ನಾಳೆಯ ದಿನ ಭವಿಷ್ಯ

5th April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (5th April 2024 Horoscope).

ನಾಳೆಯ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಶುಕ್ರವಾರ

ತಿಥಿ : ಏಕಾದಶಿ ಬೆಳಗ್ಗೆ 09.43 ರವರೆಗೂ ಇರುತ್ತದೆ ನಂತರ ದ್ವಾದಶಿ ಆರಂಭವಾಗಲಿದೆ

ನಕ್ಷತ್ರ : ಧನಿಷ್ಠ ನಕ್ಷತ್ರವು 02.52 ರವರೆಗೂ ಇದ್ದು ನಂತರ ಶತಭಿಷ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.11

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: 10.30 ರಿಂದ 12.00

ರಾಶಿಫಲ

ಮೇಷ

ಉದ್ಯೋಗದಲ್ಲಿ ಯಾವುದೇ ತೊಂದರೆ ಕಂಡು ಬರದು. ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರಲಿದೆ. ವಿದ್ಯಾರ್ಥಿಗಳು ಸುಲಭವಾಗಿ ತಮ್ಮ ಗುರಿ ಸಾಧಿಸುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿಒತ್ತಡದ ಸನ್ನಿವೇಶವನ್ನು ಎದುರಾಗುತ್ತದೆ. ಬೇರೊಬ್ಬರ ಸಹಾಯ ಇಲ್ಲದೆ ವ್ಯಾಪಾರ ವ್ಯವಹಾರದಲ್ಲಿನ ಸಮಸ್ಯೆ ಬಗೆಹರಿಯುತ್ತದೆ. ಆರೋಗ್ಯದ ಬಗ್ಗೆ ಗಮನವಿರಲಿ. ಪ್ರಯಾಣದ ವೇಳೆಯಲ್ಲಿ ಕಾಲುಗಳಿಗೆ ಪೆಟ್ಟಾಗುವ ಸಾಧ್ಯತೆ ಇದೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬಿಳಿ

ವೃಷಭ

ಕುಟುಂಬದಲ್ಲಿ ಸ್ಪೂರ್ತಿದಾಯಕ ವಾತಾವರಣ ಇರುತ್ತದೆ. ಎದುರಾಗುವ ಸವಾಲುಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇರುತ್ತದೆ. ವಿಶ್ರಾಂತಿ ಇಲ್ಲದ ದುಡಿಮೆ ಇರುತ್ತದೆ. ಉದ್ಯೋಗದಲ್ಲಿ ಏಕಾಂಗಿಯಾಗಿ ಕಾರ್ಯ ನಿರ್ವಹಿಸುವಿರಿ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಲಾಭ ನಷ್ಟ ಸರಿಸಮನಾಗಿರುತ್ತದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಕಲಿಕೆಯಲ್ಲಿ ಮಗ್ನರಾಗುತ್ತಾರೆ. ಪಾರುದಾರಿಕೆ ವ್ಯಾಪಾರದಲ್ಲಿ ಗೊಂದಲದ ಕ್ಷಣ ಎದುರಾಗುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 11

ಅದೃಷ್ಟದ ದಿಕ್ಕು ಉತ್ತರ

ಅದೃಷ್ಟದ ಬಣ್ಣ : ಬೂದಿ ಬಣ್ಣ

ಮಿಥುನ

ಅತಿಯಾದ ಆತ್ಮವಿಶ್ವಾಸ ತೊಂದರೆಗೆ ಕಾರಣವಾಗುತ್ತದೆ. ಹಣದ ಬಗ್ಗೆ ದುರಾಸೆ ಇರುವುದಿಲ್ಲ. ಅವಶ್ಯಕತೆ ಇದ್ದಷ್ಟು ಹಣ ಸಂಪಾದಿಸುವಿರಿ. ಕುಟುಂಬದಲ್ಲಿ ಆಶಾದಾಯಕ ಬದಲಾವಣೆಗಳು ಕಂಡುಬರುತ್ತವೆ. ಉದ್ಯೋಗದಲ್ಲಿ ಒತ್ತಡದಿಂದ ಕೆಲಸ ನಿರ್ವಹಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಒತ್ತಡದ ನಡುವೆ ಯಶಸ್ಸನ್ನು ಗಳಿಸುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಆತ್ಮೀಯರ ಸಹಾಯ ಬೇಕಾಗುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಆಕಾಶ ನೀಲಿ

ಕಟಕ

ವ್ಯಾಪಾರ ವ್ಯವಹಾರಗಳಲ್ಲಿ ಅನಾವಶ್ಯಕ ವಾದ ವಿವಾದಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಯಶಸ್ಸನ್ನು ಗಳಿಸುತ್ತಾರೆ. ಆಧುನಿಕ ತಂತ್ರಜ್ಞಾನಕ್ಕೆ ಸಂಬಂಧಿಸಿದ ವ್ಯಾಪಾರ ಆರಂಭಿಸುವಿರಿ. ಗಣ್ಯ ವ್ಯಕ್ತಿಗಳ ಒಡನಾಟ ಉಂಟಾಗುತ್ತದೆ. ಭೂವಿವಾದದಿಂದ ನೆಮ್ಮದಿ ಕಳೆದುಕೊಳ್ಳುವಿರಿ.

ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೆಂಪು

ಸಿಂಹ

ವಿದ್ಯಾರ್ಥಿಗಳು ಹುಮ್ಮಸ್ಸಿನಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಮಕ್ಕಳ ಒಳಿತಿಗಾಗಿ ಶ್ರಮ ವಹಿಸಿ ದುಡಿಯುವಿರಿ. ಸಿಡುಕುತನದ ಗುಣ ಕಡಿಮೆ ಆಗಲಿದೆ. ಕೆಲಸ ಕಾರ್ಯಗಳನ್ನು ಏಕಾಂಗಿ ಯಾಗಿಯಾಗಿ ಪೂರ್ಣಗೊಳಿಸುವಿರಿ. ನೀವು ತೋರುವ ಪ್ರೀತಿ ವಿಶ್ವಾಸಕ್ಕೆ ಎಲ್ಲರೂ ಮಾರುಹೋಗುತ್ತಾರೆ. ಉದ್ಯೋಗದಲ್ಲಿ ನಿಮ್ಮ ಯೋಜನೆಗಳು ಒಪ್ಪಿಗೆ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ತಂದೆಯವರ ಸಲಹೆ ಸೂಚನೆಗಳನ್ನು ಪಾಲಿಸುವುದು ಒಳ್ಳೆಯದು.

ಪರಿಹಾರ : ಗೋ ಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು ದಕ್ಷಿಣ

ಅದೃಷ್ಟದ ಬಣ್ಣ : ಎಲೆ ಹಸಿರು

ಕನ್ಯಾ

ಅನಾವಶ್ಯಕವಾಗಿ ಟೀಕಿಸುವ ಕಾರಣ ಆತ್ಮೀಯರಲ್ಲಿ ಬೇಸರ ಉಂಟಾಗುತ್ತದೆ. ನಿಮ್ಮಲ್ಲಿನ ಆತ್ಮವಿಶ್ವಾಸವು ವಿವಾದಗಳನ್ನು ದೂರ ಮಾಡುತ್ತದೆ. ಕುಟುಂಬದಲ್ಲಿ ಬೇಸರದ ಸನ್ನಿವೇಶ ಎದುರಾಗುತ್ತದೆ. ವ್ಯೆಯುಕ್ತಿಕ ಕೆಲಸ ಕಾರ್ಯದಲ್ಲಿ ಆಸಕ್ತಿ ತೋರುವುದಿಲ್ಲ. ಪಾಲುಗಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭವಿರುತ್ತದೆ. ವಿದ್ಯಾರ್ಥಿಗಳು ಉನ್ನತ ಸಾಧನೆಯಿಂದ ಎಲ್ಲರ ಗಮನ ಸೆಳೆಯುತ್ತಾರೆ.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಕೇಸರಿ

ತುಲಾ

ಸತ್ಯವನ್ನು ಒಪ್ಪಿ ಸುಳ್ಳನ್ನು ಖಂಡಿಸುವ ಕಾರಣ ವಿರೋಧ ಎದುರಿಸಬೇಕು. ಕುಟುಂಬದಲ್ಲಿ ಶಾಂತಿಯ ವಾತಾವರಣ ಉಂಟಾಗುತ್ತದೆ. ಉದ್ಯೋಗದಲ್ಲಿ ಪ್ರತಿಯೊಂದು ವಿಚಾರವು ನಿಮಗೆ ಅನುಕೂಲಕರಾಗಿರುತ್ತದೆ. ವಿದ್ಯಾರ್ಥಿಗಳು ಜವಾಬ್ದಾರಿಯುತ ನಡಿಗೆ ಅನುಸರಿಸುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ನಷ್ಟವಿರದು. ಪರೋಪಕಾರದ ಗುಣವಿರುತ್ತದೆ. ಸಮಾಜದ ಮುಖ್ಯಸ್ಥರಾಗಿ ಯಶಸ್ಸನ್ನು ಕಾಣುವಿರಿ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು ಪಶ್ಚಿಮ

ಅದೃಷ್ಟದ ಬಣ್ಣ: ಕಂದು ಬಣ್ಣ

ವೃಶ್ಚಿಕ

ಕೆಲಸ ಕಾರ್ಯಗಳಲ್ಲಿನ ಫಲಿತಾಂಶಗಳನ್ನು ಕ್ರೀಡಾ ಸ್ಪೂರ್ತಿಯಿಂದ ತೆಗೆದುಕೊಳ್ಳುವಿರಿ. ಉದ್ಯೋಗದಲ್ಲಿ ಯಾವುದೇ ತೊಂದರೆಯಾಗದು. ಕುಟುಂಬದಲ್ಲಿ ಅನುಕೂಲಕರ ವಾತಾವರಣ ಇರಲಿದೆ. ಗೃಹಿಣಿಯರಿಗೆ ಏಕಾಂಗಿತನ ಕಾಡುತ್ತದೆ. ಕೌಟುಂಬಿಕ ಕೆಲಸ ಕಾರ್ಯಗಳಲ್ಲಿ ಮಕ್ಕಳ ಸಹಾಯ ಸಹಕಾರ ದೊರೆಯುತ್ತದೆ. ವಿದ್ಯಾರ್ಥಿಗಳು ಸಹಪಾಠಿಗಳಿಂದ ದೂರ ಉಳಿಯುತ್ತಾರೆ. ಸ್ವಂತ ವ್ಯಾಪಾರ ಉದ್ಯಮಗಳಲ್ಲಿ ಹೆಚ್ಚಿನ ಆಸಕ್ತಿ ತೋರುವುದಿಲ್ಲ.

ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕೆಂಪು

ಧನಸ್ಸು

ಉದ್ಯೋಗದಲ್ಲಿ ಸತತ ಬದಲಾವಣೆಗೆ ಹೊಂದಿಕೊಂಡು ಹೋಗುವಿರಿ. ಬೇರೆಯವರನ್ನು ಸುಲಭವಾಗಿ ನಂಬುವುದಿಲ್ಲ. ಕೋಪದಿಂದ ತಪ್ಪಾದ ನಿರ್ಧಾರ ತೆಗೆದುಕೊಳ್ಳುವಿರಿ. ನಿಮ್ಮ ಪ್ರತಿಭೆಗೆ ಒಪ್ಪುವ ಅವಕಾಶ ದೊರೆಯುತ್ತದೆ. ಭವಿಷ್ಯದ ಜೀವನಕ್ಕಾಗಿ ಹಣದ ಉಳಿತಾಯ ಮಾಡುವಿರಿ. ತಮ್ಮ ಇಚ್ಚೆಗೆ ಅನುಗುಣವಾದ ವಿಷಯವನ್ನು ವಿದ್ಯಾರ್ಥಿಗಳು ಆಯ್ಕೆ ಮಾಡುತ್ತಾರೆ. ಹಣಕಾಸಿನ ವಿಚಾರದಲ್ಲಿ ಆತ್ಮೀಯರಿಗೆ ನೀಡಿದ ಮಾತನ್ನು ಉಳಿಸಿಕೊಳ್ಳಲು ಸಾಧ್ಯವಾಗದು. .

ಪರಿಹಾರ : ಹಣೆಯಲ್ಲಿ ತಿಲಕವನ್ನು ಇಟ್ಟು ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಳದಿ

ಮಕರ

ಒಳ್ಳೆಯ ಗುಣವಿದ್ದರೂ ದುಡುಕಿ ಮಾತನಾಡುವ ಕಾರಣ ಕೆಟ್ಟ ಹೆಸರನ್ನು ಗಳಿಸುವಿರಿ. ಶಾಂತಿ ಸಂಯಮದಿಂದ ವರ್ತಿಸಲು ಪ್ರಯತ್ನಿಸಿ. ಉದ್ಯೋಗದಲ್ಲಿ ನಿರೀಕ್ಷಿಸಿದ ಮಟ್ಟದ ಯಶಸ್ಸು ಲಭಿಸುತ್ತದೆ. ಗಲಿಬಿಲಿಯ ವಾತಾವರಣದಲ್ಲಿ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಲಿದ್ದಾರೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಮಟ್ಟದ ಲಾಭ ದೊರೆಯಲಿದೆ. ಪಾಲುದಾರಿಕೆ ವ್ಯಾಪಾರ ಆರಂಭಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಸಿರು

ಕುಂಭ

ನಿಮ್ಮಲ್ಲಿರುವ ಗೆಲ್ಲುವ ಛಲ ಎಲ್ಲರಿಗೂ ಸ್ಪೂರ್ತಿಯಾಗುತ್ತದೆ. ಸ್ವಂತ ಕೆಲಸ ಕಾರ್ಯಗಳು ಅತಿ ನಿಧಾನವಾಗುವ ಕಾರಣ ಮಾನಸಿಕ ಒತ್ತಡ ಅನುಭವಿಸುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ವಿದೇಶಿ ಸಂಸ್ಥೆಯೊಂದರ ಪಾಲುದಾರಿಕೆಯು ದೊರೆಯುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಲಿ. ತೆರೆಮರೆಯ ಕಲಾವಿದರಿಗೆ ವಿಶೇಷ ಗೌರವ ಮತ್ತು ಪ್ರಶಸ್ತಿ ಲಭಿಸುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ತೊಂದರೆ ಇರದು.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ಮೀನ

ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಾಣುವುದಿಲ್ಲ. ಉನ್ನತ ಅಧಿಕಾರದ ಆಸೆ ಇರುವುದಿಲ್ಲ. ಕೃಷಿ ಉತ್ಪನ್ನಗಳ ವ್ಯಾಪಾರದಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ. ಹವ್ಯಾಸಕ್ಕೆಂದು ಆರಂಭಿಸಿದ ಬರವಣಿಗೆಯು ಜೀವನ ನಡೆಸಲು ಸಹಕಾರಿಯಾಗುತ್ತದೆ. ತಂದೆಯವರಿಗೆ ಅನಿರೀಕ್ಷಿತ ಧನ ಲಾಭವಿದೆ. ಕುಟುಂಬದಲ್ಲಿರುವ ಕಲಹ ದೂರವಾಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ವಿಶೇಷ ಲಾಭ ದೊರೆಯುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಎಳನೀರು ಮತ್ತು ದೀಪದ ಎಣ್ಣೆ ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.