ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ದೂರದೂರಿಗೆ ಪ್ರಯಾಣ ಸಾಧ್ಯತೆ, ಕೆಲಸದಲ್ಲಿ ಗಮನವಿರದೆ ಅಚಾತುರ್ಯ ಉಂಟಾಗಬಹುದು; ನಾಳಿನ ದಿನಭವಿಷ್ಯ

Tomorrow Horoscope: ದೂರದೂರಿಗೆ ಪ್ರಯಾಣ ಸಾಧ್ಯತೆ, ಕೆಲಸದಲ್ಲಿ ಗಮನವಿರದೆ ಅಚಾತುರ್ಯ ಉಂಟಾಗಬಹುದು; ನಾಳಿನ ದಿನಭವಿಷ್ಯ

6th April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ಏಪ್ರಿಲ್‌ 6ರ ದಿನಭವಿಷ್ಯ
ಏಪ್ರಿಲ್‌ 6ರ ದಿನಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (6th April 2024 Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ಶನಿವಾರ

ತಿಥಿ: ದ್ವಾದಶಿ ಬೆಳಿಗ್ಗೆ 7.24 ರವರೆಗೂ ಇರುತ್ತದೆ. ಉಪರಿ ತ್ರಯೋದಶಿ ಇರುತ್ತದೆ.

ನಕ್ಷತ್ರ: ಶತಭಿಷ ನಕ್ಷತ್ರವು ಬೆಳ್ಳಿಗ್ಗೆ 1.17 ರವರೆಗೂ ಇರುತ್ತದೆ. ಅನಂತರ ಪೂರ್ವಾಭಾದ್ರ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಿಗ್ಗೆ 6.11

ಸೂರ್ಯಾಸ್ತ: ಸಂಜೆ 6.31

ರಾಹುಕಾಲ: ಬೆಳಿಗ್ಗೆ 9.00 ರಿಂದ ಬೆಳಿಗ್ಗೆ 10.30

ಮೇಷ

ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಕಷ್ಟ ನಷ್ಟಗಳಿಂದ ಪಾರಾಗುವಿರಿ. ಕೆಲಸ-ಕಾರ್ಯಗಳಲ್ಲಿ ಆರಂಭದಲ್ಲಿ ನಿರಾಸೆ ಉಂಟಾಗಲಿದೆ. ವ್ಯಾಪಾರ ವ್ಯವಹಾರಗಳು ಲಾಭದಲ್ಲಿ ಸಾಗುತ್ತದೆ. ಹಣಕಾಸಿನ ತೊಂದರೆಯು ಕಡಿಮೆಯಾಗುತ್ತದೆ. ವಯೋವೃದ್ಧರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ.

ಪರಿಹಾರ: ತಾಯಿಯ ಆಶೀರ್ವಾದ ಪಡೆದು ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ವೃಷಭ

ಜೀವನಶೈಲಿಯನ್ನು ಬದಲಾಯಿಸಿಕೊಳ್ಳಲು ತೀರ್ಮಾನಿಸುವಿರಿ. ಬೇಸರದ ಕಾರಣ ಮುಖ್ಯವಾದ ಕೆಲಸ ಕಾರ್ಯಗಳನ್ನು ಆರಂಭಿಸುವುದಿಲ್ಲ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿನ ನಿಮ್ಮ ನಿರೀಕ್ಷೆ ಹುಸಿಯಾಗದು. ಹಣಕಾಸಿನ ಸಂಸ್ಥೆಯನ್ನು ನಡೆಸುತ್ತಿದ್ದಲ್ಲಿ ಉತ್ತಮ ಆದಾಯವಿರುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸಾಲದ ವ್ಯವಹಾರ ನಷ್ಟವನ್ನು ಉಂಟು ಮಾಡಲಿದೆ.

ಪರಿಹಾರ: ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಮಿಥುನ

ಸರಳವಾದ ಕೆಲಸ ಕಾರ್ಯಗಳನ್ನು ಪೂರೈಸಲು ಸಹ ಬೇರೊಬ್ಬರ ಸಹಾಯದ ನಿರೀಕ್ಷೆ ಇರಲಿದೆ. ವಿದ್ಯಾರ್ಥಿಗಳು ಸ್ಥಿರವಾದ ಮನಸ್ಥಿತಿಯನ್ನು ಬೆಳೆಸಿಕೊಳ್ಳುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಹಾಕಿದ ಬಂಡವಾಳಕ್ಕೆ ಮೋಸವಾಗದು. ಒಡವೆ ವಸ್ತ್ರಗಳನ್ನು ಕೊಳ್ಳುವಿರಿ.

ಪರಿಹಾರ: ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬೂದು ಬಣ್ಣ

ಕಟಕ

ಕೆಲಸ ಮಾಡುವ ಮನಸ್ಸಿದ್ದರೂ ವಯಸ್ಸು ಅಡ್ಡಿಯಾಗುತ್ತದೆ. ವಿದ್ಯಾರ್ಥಿಗಳು ಆಟವಾಡಿದಷ್ಟೇ ಸುಲಲಿತವಾಗಿ ಕಲಿಕೆಯಲ್ಲೂ ಮುಂದಿರುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗವನ್ನು ಬದಲಿಸುವ ತೀರ್ಮಾನಕ್ಕೆ ಬರುವಿರಿ. ಅವಿವಾಹಿತರಿಗೆ ಅಪರಿಚಿತರ ಸಹಾಯದಿಂದ, ಗೃಹಿಣಿಯರಿಗೆ ತವರಿಂದ ಶುಭ ವರ್ತಮಾನ ಸಿಗಲಿದೆ.

ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕಂದು ಬಣ್ಣ

ಸಿಂಹ

ಕುಟುಂಬದಲ್ಲಿ ಎಲ್ಲರ ಮೇಲೂ ಅಧಿಕಾರ ಚಲಾಯಿಸುವಿರಿ. ಇದರಿಂದ ಕೆಲವರ ವಿರೋಧವನ್ನು ಎದುರಿಸುವಿರಿ. ಉದ್ಯೋಗದಲ್ಲಿ ನಿಮ್ಮ ವಿರುದ್ದದ ಷಡ್ಯಂತ್ರವು ವಿಫಲವಾಗಲಿದೆ. ವಿದ್ಯಾರ್ಥಿಗಳು ಹಠದಿಂದ ಉನ್ನತ ವಿದ್ಯಾಭ್ಯಾಸವನ್ನು ಮುಂದುವರೆಸುವರು. ತಂದೆಯವರಿಗೆ ಇಷ್ಟವಾದ ತಿಂಡಿ ತಿನಿಸನ್ನು ನೀಡುವಿರಿ.

ಪರಿಹಾರ: ಕೆಂಪು ಬೆಲ್ಲದಿಂದ ಮಾಡಿದ ದ್ರವಾಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ : ಕಪ್ಪು ಬಣ್ಣ

ಕನ್ಯಾ

ಕೇವಲ ಟೀಕೆ ಮಾಡುವುದರಲ್ಲಿ ದಿನ ಕಳೆಯುವಿರಿ. ಮಾಡುವ ತಪ್ಪನ್ನು ಮುಚ್ಚಿಡಲು ಬೇರೆಯವರ ಮೇಲೆ ಅಪವಾದವನ್ನು ಹಾಕುವಿರಿ. ಉತ್ತಮ ಅಭ್ಯಾಸದಿಂದ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ಉದ್ಯೋಗದಲ್ಲಿ ನಿರೀಕ್ಷಿಸಿದ ಯಶಸ್ಸು ಲಭಿಸುತ್ತದೆ. ನೋವೆಲ್ಲವನ್ನು ಮರೆತು ಸಂತಸದಿಂದ ಇರುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ನಷ್ಟಗಳು ಸರಿದೂಗಲಿವೆ.

ಪರಿಹಾರ: ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ತಿಳಿ ಹಸಿರು

ತುಲಾ

ಅನಾವಶ್ಯಕ ಟೀಕೆ ಮಾಡುವ ಬದಲು ಮೌನದಿಂದ ಕಾರ್ಯ ಸಾಧಿಸಬಹುದು. ಬೇರೆಯವರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ಕುಟುಂಬದಲ್ಲಿ ಮಂಗಳ ಕಾರ್ಯವೊಂದು ನೆರವೇರುವುದು. ಎಲ್ಲರ ಜೊತೆಯಲ್ಲಿ ಮನದ ವಿಚಾರವನ್ನು ಹಂಚಿಕೊಳ್ಳುವಿರಿ. ವಿದ್ಯಾರ್ಥಿಗಳು ಉನ್ನತ ವ್ಯಾಸಂಗದಲ್ಲಿ ನಿರತರಾಗಲಿದ್ದಾರೆ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ನಸುಗೆಂಪುಬಣ್ಣ

ವೃಶ್ಚಿಕ

ಆತ್ಮೀಯರ ಬುದ್ಧಿ ಮಾತನ್ನು ಒಪ್ಪಿದಲ್ಲಿ ತೊಂದರೆಯೊಂದು ದೂರವಾಗಲಿದೆ. ಬೇಡದ ಮಾತುಕತೆಯಿಂದ ಆಲೋಚನೆಗಳು ಹೆಚ್ಚುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ನಷ್ಟದ ಮಾತಿರದು. ವಿದ್ಯಾರ್ಥಿಗಳಿಗೆ ಸಹಪಾಠಿಗಳ ಸಹಕಾರ ದೊರೆಯಲಿದೆ. ಭೂ ವ್ಯವಹಾರದಿಂದ ಹಣದ ಕೊರತೆ ಕಡಿಮೆಯಾಗುತ್ತದೆ. ಸಂಗಾತಿಯ ಜೊತೆಯಲ್ಲಿ ವಾದವಿವಾದ ಉಂಟಾಗಲಿದೆ.

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ

ಧನಸ್ಸು

ದೊರೆಯುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಲು ಪ್ರಯತ್ನಿಸಿ. ತೆಗೆದುಕೊಂಡ ನಿರ್ಧಾರವನ್ನು ಬದಲಿಸದೇ ಕೆಲಸ ಕಾರ್ಯಗಳಲ್ಲಿ ಯಶಸ್ವಿಯಾಗುವಿರಿ. ಕುಟುಂಬದಲ್ಲಿ ಪರಸ್ಪರ ನಂಬಿಕೆ ಇರುವ ಕಾರಣ ನೆಮ್ಮದಿ ಇರುತ್ತದೆ. ಉದ್ಯೋಗದಲ್ಲಿ ಹೊಸ ಬದಲಾವಣೆಗಳು ನಿಮಗೆ ಅನುಕೂಲಕರವಾಗಿರುತ್ತವೆ. ಖರ್ಚು ವೆಚ್ಚಗಳನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.

ಪರಿಹಾರ: ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಮಕರ

ಸರಳ ದೈಹಿಕ ವ್ಯಾಯಾಮ ಉತ್ತಮ ಆರೋಗ್ಯವನ್ನು ಉಳಿಸುತ್ತದೆ. ಕುಟುಂಬದಲ್ಲಿ ಬೇಸರ ತರಿಸುವಂತಹ ಮಾತನ್ನು ಅರಿವಿಲ್ಲದೆ ಆಡುವಿರಿ. ವಿಶ್ರಾಂತಿ ಇಲ್ಲದೆ ಕೆಲಸ ನಿರ್ವಹಿಸುವಿರಿ. ಉದ್ಯೋಗದಲ್ಲಿ ಯಾವುದೇ ತೊಂದರೆ ಬಾರದು. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ. ಸೋಮಾರಿತನವನ್ನು ಕಡಿಮೆಮಾಡಿಕೊಳ್ಳಬೇಕು.

ಪರಿಹಾರ: ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಕುಂಭ

ಪ್ರಭಾವಿ ಜನರ ಸಹಕಾರ ದೊರೆಯುತ್ತದೆ. ಎಲ್ಲರಿಗೂ ಮಾದರಿಯಾಗಬಲ್ಲ ಮನೋಧರ್ಮ ನಿಮ್ಮಲ್ಲಿ ಇರುತ್ತದೆ. ಹಣವನ್ನು ಉಳಿಸಲು ವಿಫಲರಾಗುವಿರಿ. ಅತಿಯಾದ ಒತ್ತಡ ಇದ್ದರೂ ಪ್ರವಾಸವನ್ನು ಆಯೋಜಿಸುವುದಿಲ್ಲ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಶ್ರದ್ಧೆ ತೋರುವುದರಿಂದ ವರಮಾನಕ್ಕೆ ಕೊರತೆಯಾಗದು. ವಿದ್ಯಾರ್ಥಿಗಳಿಗೆ ಶುಭವಿದೆ.

ಪರಿಹಾರ: ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಮೀನ

ಮನರಂಜನೆಗಾಗಿ ಹೆಚ್ಚಿನ ಹಣ ಖರ್ಚು ಮಾಡುವಿರಿ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಕಂಡುಬರುತ್ತದೆ. ವಿದ್ಯಾರ್ಥಿಗಳು ನಿಷ್ಠೆಯಿಂದ ಕಲಿಕೆಯಲ್ಲಿ ಮಗ್ನರಾಗುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ನಷ್ಟವಿಲ್ಲ. ಶೀತ ವಾಯುವಿನ ದೋಷ ಇರುತ್ತದೆ. ಮನೆಯಲ್ಲಿ ಸಾಕಿರುವ ಪ್ರಾಣಿಗಳ ಆರೋಗ್ಯದಲ್ಲಿ ತೊಂದರೆ ಉಂಟಾಗಲಿದೆ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).