ಭೂ ವ್ಯವಹಾರದಿಂದ ಉತ್ತಮ ಆದಾಯ, ಮತ್ತೊಬ್ಬರಿಗೆ ಬುದ್ಧಿವಾದ ಹೇಳಲು ಹೋಗಿ ಅಪಹಾಸ್ಯಕ್ಕೆ ಗುರಿಯಾಗುವಿರಿ; ನಾಳೆಯ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಭೂ ವ್ಯವಹಾರದಿಂದ ಉತ್ತಮ ಆದಾಯ, ಮತ್ತೊಬ್ಬರಿಗೆ ಬುದ್ಧಿವಾದ ಹೇಳಲು ಹೋಗಿ ಅಪಹಾಸ್ಯಕ್ಕೆ ಗುರಿಯಾಗುವಿರಿ; ನಾಳೆಯ ದಿನ ಭವಿಷ್ಯ

ಭೂ ವ್ಯವಹಾರದಿಂದ ಉತ್ತಮ ಆದಾಯ, ಮತ್ತೊಬ್ಬರಿಗೆ ಬುದ್ಧಿವಾದ ಹೇಳಲು ಹೋಗಿ ಅಪಹಾಸ್ಯಕ್ಕೆ ಗುರಿಯಾಗುವಿರಿ; ನಾಳೆಯ ದಿನ ಭವಿಷ್ಯ

6th July Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ)

ಭೂ ವ್ಯವಹಾರದಿಂದ ಉತ್ತಮ ಆದಾಯ, ಬುದ್ಧಿವಾದ ಹೇಳಲು ಹೋಗಿ ಅಪಹಾಸ್ಯಕ್ಕೆ ಗುರಿಯಾಗುವಿರಿ; ನಾಳೆಯ ದಿನ ಭವಿಷ್ಯ
ಭೂ ವ್ಯವಹಾರದಿಂದ ಉತ್ತಮ ಆದಾಯ, ಬುದ್ಧಿವಾದ ಹೇಳಲು ಹೋಗಿ ಅಪಹಾಸ್ಯಕ್ಕೆ ಗುರಿಯಾಗುವಿರಿ; ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (6th July 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಢ ಮಾಸ-ಶುಕ್ಲಪಕ್ಷ-ಶನಿವಾರ

ತಿಥಿ : ಪಾಡ್ಯ ರಾತ್ರಿ 03.43 ರವರೆಗೂ ಇದ್ದು ನಂತರ ಬಿದಿಗೆ ಆರಂಭವಾಗುತ್ತದೆ.

ನಕ್ಷತ್ರ: ಪುನರ್ವಸು ನಕ್ಷತ್ರವು ರಾತ್ರಿ 04.55 ರವರೆಗೆ ಇದ್ದು ನಂತರ ಪುಷ್ಯ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.58

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: ಬೆಳಗ್ಗೆ 09.16 ರಿಂದ 10.52

ರಾಶಿಫಲ

ಮೇಷ

ಸ್ವಂತ ಪ್ರತಿಭೆಗೆ ಉತ್ತಮ ಪುರಸ್ಕಾರ ದೊರೆಯುತ್ತದೆ. ಹಣಕಾಸಿನ ವ್ಯವಹಾರದಲ್ಲಿ ನಿರೀಕ್ಷಿತ ವರಮಾನ ದೊರೆಯಲಿದೆ. ವಿದ್ಯಾರ್ಥಿಗಳು ಆತಂಕದ ಪರಿಸ್ಥಿತಿಯಲ್ಲಿಯೂ ತಮ್ಮ ಸ್ಥಾನವನ್ನು ಕಾಪಾಡಿಕೊಳ್ಳುತ್ತಾರೆ. ನಿಮಗೆ ಅರಿಯದ ವಿಚಾರವನ್ನು ಬೇರೆಯವರೊಂದಿಗೆ ಚರ್ಚಿಸಿ ತಿಳಿದುಕೊಳ್ಳುವಿರಿ. ಸೋದರ ಅಥವಾ ಸೋದರಿಯ ಜೊತೆ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಲಿದೆ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ವೃಷಭ

ಉದ್ಯೋಗ ಬದಲಿಸುವ ಯೋಗವಿದ್ದು ಅದರಿಂದ ಉತ್ತಮ ಫಲಗಳನ್ನು ಪಡೆಯುವಿರಿ. ನಿಮ್ಮ ತಂದೆಯವರು ನೀವು ತಪ್ಪು ಮಾಡಿದಾಗ ಖಂಡಿಸಿ ಸರಿದಾರಿಗೆ ತರುವರು. ಸಮಾಜದಲ್ಲಿ ನಿಮ್ಮದೇ ಆದ ಪ್ರತಿಷ್ಠಿತ ಸ್ಥಾನ ದೊರೆಯುತ್ತದೆ. ಬುದ್ಧಿವಂತಿಕೆಯಲ್ಲಿ ವಂಶದವರಿಗೆ ನಿಮಗೆ ಪ್ರಥಮ ಸ್ಥಾನ ಲಭಿಸುತ್ತದೆ. ಸಭೆ ಸಮಾರಂಭಗಳಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವಿರಿ. ಉತ್ತಮ ಭಾಷಾಜ್ಞಾನವಿರುತ್ತದೆ.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನಸುಗೆಂಪು

ಮಿಥುನ

ನಿಮ್ಮ ಮಕ್ಕಳಿಗೆ ವಿದ್ಯೆಗಿಂತಲೂ ಹೆಚ್ಚಿನ ಬುದ್ಧಿಶಕ್ತಿ ಇರುತ್ತದೆ. ಸಮಾಜದ ಗಣ್ಯ ವ್ಯಕ್ತಿಯ ಸ್ನೇಹ ದೊರೆಯಲಿದೆ. ವೈಭವದ ಮತ್ತು ದುಬಾರಿ ವಸ್ತುಗಳನ್ನು ಕೊಳ್ಳುವಿರಿ. ರಕ್ತದೋಷವಿದ್ದಲ್ಲಿ ಆರೋಗ್ಯದ ಬಗ್ಗೆ ಗಮನ ನೀಡಬೇಕು. ನಿಮ್ಮ ಮಕ್ಕಳಿಗೆ ವಿಶೇಷ ಕೀರ್ತಿ ಲಭಿಸುತ್ತದೆ. ನಿಮ್ಮ ಮಕ್ಕಳ ವಿದ್ಯಾಭ್ಯಾಸದಲ್ಲಿನ ಸಾಧನೆಯಿಂದ ನಿಮಗೆ ಸಮಾಜದಲ್ಲಿ ವಿಶೇಷ ಗೌರವ ಲಭಿಸುತ್ತದೆ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಕಟಕ

ಬೇರೆಯವರ ವಿವಾದಗಳಲ್ಲಿ ಸಂಧಾನ ನಡೆಸುವಲ್ಲಿ ಯಶಸ್ಸನ್ನು ಕಾಣುವಿರಿ. ಕುಟುಂಬದ ಹಿರಿಯರ ಸಹಾಯ ಸಹಕಾರ ದೊರೆಯುತ್ತದೆ. ಉದ್ಯೋಗದಲ್ಲಿ ಉತ್ತಮ ಯಶಸ್ಸು ಮತ್ತು ಗೌರವ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುತ್ತದೆ. ತಂದೆಯವರ ಬುದ್ದಿವಾದದ ಕಾರಣ ಆಪತ್ತಿನಿಂದ ಪಾರಾಗುವಿರಿ. ನಿಮ್ಮ ಮುಖದಲ್ಲಿ ಗೆಲುವಿನ ಆತ್ಮವಿಶ್ವಾಸ ತುಂಬಿರುತ್ತದೆ.

ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬಿಳಿ

ಸಿಂಹ

ಸ್ವಂತ ಜಮೀನನ್ನು ಕೊಳ್ಳುವ ಆಸೆ ಈಡೇರುತ್ತದೆ. ಸಾಕು ಪ್ರಾಣಿಗಳ ಬಗ್ಗೆ ವಿಶೇಷವಾದ ಅನುಕಂಪ ತೋರುವಿರಿ. ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆಯುವಿರಿ. ನಿಮ್ಮ ಮಾತಿನಲ್ಲಿ ಜನರನ್ನು ಆಕರ್ಷಿಸುವ ಬಲವಿರುತ್ತದೆ. ದುಬಾರಿ ವಸ್ತುಗಳನ್ನು ಸಂಗ್ರಹಿಸುವ ಹವ್ಯಾಸವಿರುತ್ತದೆ. ನಿಮ್ಮ ವಿದ್ಯಾ ಬುದ್ಧಿಗೆ ತಕ್ಕನಾದ ಉದ್ಯೋಗ ಲಭಿಸುತ್ತದೆ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಅತಿಯಾದ ಆಸೆ ಇರುವುದಿಲ್ಲ.

ಪರಿಹಾರ : ಹಣೆಗೆ ತಿಲಕವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಬೂದು

ಕನ್ಯಾ

ಆತ್ಮೀಯರ ಸಹಾಯ ಸಹಕಾರ ದೊರೆಯುತ್ತದೆ. ಬೇರೆಯವರ ವ್ಯಾಪಾರ ವ್ಯವಹಾರದಲ್ಲಿ ಪಾಲುಗಾರಿಕೆ ದೊರೆಯುತ್ತದೆ. ಗೃಹಿಣಿಯರಿಗೆ ಮನಸ್ಸಿಗೆ ಶಾಂತಿ ಇರುವುದಿಲ್ಲ. ಆರಂಭದಲ್ಲಿ ಕಷ್ಟ ಎದುರಾದರು ಕ್ರಮೇಣವಾಗಿ ಸರಿದಾರಿಗೆ ಬರಲಿದೆ. ಸೋದರಿಯ ಕುಟುಂಬದಲ್ಲಿನ ಬೇಸರವು ನಿಮ್ಮ ಮಧ್ಯಸ್ಥಿಕೆಯಿಂದ ದೂರವಾಗುತ್ತದೆ. ದಂಪತಿಗಳ ನಡುವೆ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ವಿರುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ : ಆಕಾಶ ನೀಲಿ

ತುಲಾ

ಬಂಧು ಬಳಗದವರ ವಿಶ್ವಾಸ ಗಳಿಸುವಿರಿ. ನಿಮ್ಮ ತಂದೆಯವರು ತೆಗೆದುಕೊಳ್ಳುವ ನಿರ್ಧಾರ ನಿಮ್ಮ ಜೀವನವನ್ನು ರೂಪಿಸುತ್ತದೆ. ನಿಮಗೆ ಭೂವ್ಯಹಾರದಲ್ಲಿ ಉತ್ತಮ ಆದಾಯ ದೊರೆಕುತ್ತದೆ. ಆದಾಯದ ಬಗ್ಗೆ ಅತಿಯಾದ ಆಸೆ ಇರುವುದಿಲ್ಲ. ಸಾಮಾನ್ಯವಾಗಿ ನಿಮಗೆ ಪ್ರತಿಯೊಂದು ವಿಚಾರದಲ್ಲಿಯೂ ಉತ್ತಮ ಜ್ಞಾನ ವಿರುತ್ತದೆ. ನಿಮ್ಮ ನುಡಿಗಳು ಕೇಳುಗಳಿಗೆ ಹಿತವೆನಿಸುವ ಕಾರಣ ಜನರ ಮಧ್ಯೆ ಬಾಳುವಿರಿ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಕೆಂಪು

ವೃಶ್ಚಿಕ

ಹೊಸ ವಾಹನ ಕೊಳ್ಳುವ ಸೂಚನೆ ಇದೆ. ಸದಾಕಾಲ ಸಮಾಜದ ಗಣ್ಯವ್ಯಕ್ತಿಗಳ ಒಡನಾಟ ಇರುತ್ತದೆ. ಕುಟುಂಬದ ಬಗ್ಗೆ ಸಮಯ ಹೊಂದಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ದಂಪತಿಗಳ ನಡುವೆ ಪರಸ್ಪರ ಬೇಸರವಿರುತ್ತದೆ. ಆಪತ್ತಿಗೆ ಸಿಲುಕಿದವರಿಗೆ ಸಹಾಯ ಮಾಡುವ ಬದಲು ಬುದ್ಧಿವಾದ ಹೇಳುವಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗಬಹುದು. ಪ್ರಾಚೀನ ಕಾಲದ ವಿಚಾರಗಳ ಬಗ್ಗೆ ಅಧ್ಯಯನ ನಡೆಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಎಲೆ ಹಸಿರು

ಧನಸ್ಸು

ವಿವಾಹ ಯೋಗವಿದೆ. ಹೆಣ್ಣು ಮಕ್ಕಳಿಗೆ ತವರು ಮನೆಯಲ್ಲಿ ಮತ್ತು ಗಂಡನ ಮನೆಯಲ್ಲಿ ಉನ್ನತ ಅಧಿಕಾರ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಬೇರೊಬ್ಬರ ಮಾತನ್ನು ಕೇಳುವುದಿಲ್ಲ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಯಾರೊಂದಿಗೂ ವಾದ ಮಾಡದ ಕಾರಣ ಮನಸ್ಸಿಗೆ ನೆಮ್ಮದಿ ಇರುತ್ತದೆ. ಅನ್ಯರೀಕ್ಷಿತ ಧನ ಲಾಭವಿದೆ. ಸಮಾಜದಲ್ಲಿ ದೊರೆತ ಗೌರವವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುವಿರಿ.

ಪರಿಹಾರ : ತಾಯಿಯ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕೇಸರಿ

ಮಕರ

ನಿಮ್ಮ ಮನಸ್ಸಿಗೆ ಸರಿ ಎನಿಸದ ಕೆಲಸ ಕಾರ್ಯಗಳನ್ನು ಮಾಡುವುದಿಲ್ಲ. ಧಾರ್ಮಿಕ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸುವಿರಿ. ವಿದ್ಯಾರ್ಥಿಗಳು ಹೆಚ್ಚಿನ ಶ್ರದ್ಧೆಯಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಕುಟುಂಬದ ಕೆಲಸ ಕಾರ್ಯಗಳನ್ನು ಪೂರೈಸುವ ಜವಾಬ್ದಾರಿ ನಿಮ್ಮದಾಗುತ್ತದೆ. ಅನಾವಶ್ಯಕ ಸುತ್ತಾಟಗಳಿಂದ ಬೇಸರಗೊಳ್ಳುವಿರಿ. ಸದಾಕಾಲ ಜನರ ಮಧ್ಯೆ ಕೆಲಸ ನಿರ್ವಹಿಸುವಿರಿ.

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ :4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಕುಂಭ

ಯೌವ್ವನಾವಸ್ಥೆಯಲ್ಲಿ ಇರುವವರಿಗೆ ಉನ್ನತ ಅಭಿವೃದ್ಧಿ ಕಂಡು ಬರುತ್ತದೆ. ಧರ್ಮಕರ್ಮಗಳಿಗೆ ಹೆದರುವ ಕಾರಣ ತಪ್ಪು ಹೆಜ್ಜೆ ಇಡುವುದಿಲ್ಲ. ಮಕ್ಕಳಿಗೆ ವಿದ್ಯಾಭ್ಯಾಸದಲ್ಲಿ ವಿಶೇಷ ಪ್ರಗತಿ ಕಂಡು ಬರುತ್ತದೆ. ತಂದೆಯ ಆರೋಗ್ಯದಲ್ಲಿ ಏರಿಳಿಕೆ ಕಂಡು ಬರುತ್ತದೆ. ಇದರಿಂದ ಆತಂಕಕ್ಕೆ ಒಳಗಾಗುವಿರಿ. ಸ್ವಂತ ಹಣಕಾಸಿನ ಸಂಸ್ಥೆಯನ್ನು ಆರಂಭಿಸುವ ಸೂಚನೆ ಇದೆ.

ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಮೀನ

ಯಾವುದೇ ಕೆಲಸವನ್ನು ಒಂದೇ ಮನಸ್ಸಿನಿಂದ ಮಾಡುವುದಿಲ್ಲ. ಪದೇ ಪದೇ ಮನಸ್ಸನ್ನು ಬದಲಾಯಿಸುವ ಕಾರಣ ಕೆಲಸ ಕಾರ್ಯಗಳಲ್ಲಿ ತೊಂದರೆ ಉಂಟಾಗುತ್ತದೆ. ಮಕ್ಕಳ ಜೊತೆ ಹಣಕಾಸಿನ ವಿಚಾರದಲ್ಲಿ ಮನಸ್ತಾಪ ಉಂಟಾಗುತ್ತದೆ. ಉದ್ಯೋಗದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತದೆ. ಆತ್ಮೀಯರಿಂದ ಕುಟುಂಬದ ಸಮಸ್ಯೆಯೊಂದು ಬಗೆಹರಿಯುತ್ತದೆ.

ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿ ದಾರದಲ್ಲಿ ಕತ್ತಿನಲ್ಲಿ ಧರಿಸಿ

ಅದೃಷ್ಟದ ಸಂಖ್ಯೆ: 10

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಕಿತ್ತಳೆ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.