ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗುತ್ತದೆ, ಆರೋಗ್ಯ ಸಮಸ್ಯೆ ಕಾಡಲಿದೆ; ನಾಳಿನ ದಿನಭವಿಷ್ಯ

Tomorrow Horoscope: ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗುತ್ತದೆ, ಆರೋಗ್ಯ ಸಮಸ್ಯೆ ಕಾಡಲಿದೆ; ನಾಳಿನ ದಿನಭವಿಷ್ಯ

6th June 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ಆರೋಗ್ಯ ಸಮಸ್ಯೆ ಕಾಡಲಿದೆ; ನಾಳಿನ ದಿನಭವಿಷ್ಯ
ಆರೋಗ್ಯ ಸಮಸ್ಯೆ ಕಾಡಲಿದೆ; ನಾಳಿನ ದಿನಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (6th June 2024 Horoscope).

ನಾಳಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣಪಕ್ಷ, ಗುರುವಾರ

ತಿಥಿ: ಅಮಾವಾಸ್ಯೆ ಸಂಜೆ 5.44 ರವರೆಗೂ ಇರುತ್ತದೆ. ಅನಂತರ ಪಾಡ್ಯ ಆರಂಭವಾಗುತ್ತದೆ.

ನಕ್ಷತ್ರ: ರೋಹಿಣಿ ನಕ್ಷತ್ರವು ರಾತ್ರಿ 8.22 ರವರೆಗೂ ಇರುತ್ತದೆ. ಅನಂತರ ಮೃಗಶಿರ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳ್ಳಿಗ್ಗೆ 5.52

ಸೂರ್ಯಾಸ್ತ: ಸಂಜೆ 6.44

ರಾಹುಕಾಲ: ಮಧ್ಯಾಹ್ನ 1.58 ರಿಂದ ಮಧ್ಯಾಹ್ನ 3.34

ರಾಶಿಫಲ

ಮೇಷ

ಅನಿರೀಕ್ಷಿತವಾದ ಖರ್ಚು ವೆಚ್ಚಗಳ ಕಾರಣ ಹಣದ ಕೊರತೆ ಕಂಡುಬರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಆತುರ ತೋರದ ಕಾರಣ ತೊಂದರೆಯೊಂದು ದೂರವಾಗಲಿದೆ. ಧಾರ್ಮಿಕ ಕಾರ್ಯವೊಂದರ ನಿಮಿತ್ತ ಸಂಬಂಧಿಯೊಬ್ಬರ ಮನೆಗೆ ತೆರಳುವಿರಿ. ಸಂಗಾತಿಯ ಶಾಂತಿ ಸಹನೆ ಕುಟುಂಬದ ಒಗ್ಗಟ್ಟನ್ನು ಕಾಪಾಡುತ್ತದೆ.

ಪರಿಹಾರ: ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ವೃಷಭ

ಪ್ರತಿಯೊಂದು ವಿಚಾರದಲ್ಲಿಯೂ ಹಿಂಜರಿಯದೆ ನಿಮ್ಮ ನಿಲುವನ್ನು ವ್ಯಕ್ತಪಡಿಸುವಿರಿ. ಕುಟುಂಬದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಲಿದೆ. ನೀವು ನಂಬಿದ ಜನರೇ ನಿಮ್ಮ ಪ್ರಗತಿಗೆ ಅಡ್ಡಗಾಲಾಗುತ್ತಾರೆ. ಸಂಗಾತಿಯ ಸಹಾಯದಿಂದ ಕುಟುಂಬದ ಖರ್ಚಿನ ಮೇಲೆ ನಿಯಂತ್ರಣ ಸಾಧಿಸುವಿರಿ. ವೈಯಕ್ತಿಕ ಆಶೋತ್ತರಗಳಿಗೆ ಹೆಚ್ಚಿನ ಗಮನ ನೀಡುವುದಿಲ್ಲ. ಯಾರೊಬ್ಬರ ಮನಸ್ಸನ್ನು ನೋಯಿಸದೇ ಮುನ್ನಡೆಯುವಿರಿ.

ಪರಿಹಾರ: ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಮಿಥುನ

ಸರಳವಾದ ಕೆಲಸ ಕಾರ್ಯಗಳನ್ನೂ ಮಾತ್ರ ಆಯ್ದುಕೊಳ್ಳುವಿರಿ. ಸಮಾಜದಲ್ಲಿ ಉನ್ನತ ಗೌರವ ಗಳಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಅದಾಯದ ಜೊತೆಗೆ ಒಳ್ಳೆಯ ಹೆಸರನ್ನು ಗಳಿಸುವಿರಿ. ಕುಟುಂಬದ ಹಿರಿಯರ ಜೊತೆ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗುತ್ತದೆ.

ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕಟಕ

ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಉದ್ಯೋಗ ಗಳಿಸುವಿರಿ. ಸಂಗಾತಿಗಾಗಿ ದುಬಾರಿ ಒಡವೆ ವಸ್ತ್ರಗಳನ್ನು ಖರೀದಿಸುವಿರಿ. ಉತ್ತಮ ಪ್ರಯತ್ನದ ಕಾರಣ ನಿಮ್ಮೆಲ್ಲಾ ಇಚ್ಛೆಗಳು ಪೂರ್ಣಗೊಳ್ಳಲಿವೆ. ಅಹಾರ ಸಂಸ್ಕರಣೆಗೆ ಸಂಬಂಧಿಸಿದ ವ್ಯಾಪಾರದಲ್ಲಿ ಲಾಭವಿದೆ. ಸಮಾಜದಲ್ಲಿ ವಿಶೇಷ ಸ್ಥಾನಮಾನ ದೊರೆಯುತ್ತದೆ. ನಿಮ್ಮ ಮಾತಿನಲ್ಲಿ ಗೆಲ್ಲುವ ವಿಶ್ವಾಸ ಇರುತ್ತದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಅಕ್ಕಿ, ಬೇಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಹಳದಿಬಣ್ಣ

ಸಿಂಹ

ಬೇರಯವರ ಯಶಸ್ಸನ್ನು ಆಚರಿಸುವ ಮನಸ್ಸಿರುತ್ತದೆ. ತಂದೆಯ ಮಾರ್ಗದರ್ಶನದಲ್ಲಿ ಹಣಕಾಸಿನ ವ್ಯವಹಾರದಲ್ಲಿ ಯಶಸ್ಸು ಗಳಿಸುವಿರಿ. ಸಮಾಜದ ಮುಖ್ಯ ಸ್ಥಾನವು ನಿಮ್ಮದಾಗಲಿದೆ. ಸಿಡುಕುತನದಿಂದ ಹೊರಬಂದು ಎಲ್ಲರೊಂದಿಗೆ ಸ್ನೇಹ ಬೆಳಸುವಿರಿ. ಸಾಲದ ವ್ಯವಹಾರದಲ್ಲಿ ಯೋಚಿಸಿ ಮುಂದುವರೆಯುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಹಸಿರು ಬಣ್ಣ

ಕನ್ಯಾ

ದೂರದ ಸಂಬಂಧಿಕರ ಸಹಕಾರ ನಿಮಗಿರುತ್ತದೆ. ಅಮೂಲ್ಯವಾದ ಕಾಣಿಕೆಯನ್ನು ಪಡೆಯುವಿರಿ. ನಿರುದ್ಯೋಗಿಗಳಿಗೆ ಸರ್ಕಾರಿ ಉದ್ಯೋಗ ದೊರೆಯುವ ಸಾಧ್ಯತೆಗಳಿವೆ. ರಾಜಕಾರಣಿಗಳ ಮನದಾಸೆಯೊಂದು ನೆರವೇರಲಿದೆ. ಹೊಸ ಪಾಲುಗಾರಿಕೆಯ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ. ಆರೋಗ್ಯದ ತೊಂದರೆ ಇರಲಿದೆ.

ಪರಿಹಾರ: ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 6

ಅಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ನೀಲಿ ಬಣ್ಣ

ತುಲಾ

ದೈಹಿಕ ಸದೃಢತೆ ಉತ್ತಮ ಆರೋಗ್ಯ ನೀಡಲಿದೆ. ಕುಟುಂಬದಲ್ಲಿ ಎಂದೆಂದಿಗೂ ಆನಂದ ತುಂಬಿರುತ್ತದೆ. ವಂಶದ ಹಿರಿಯ ವ್ಯಕ್ತಿಯೊಬ್ಬರನ್ನು ಭೇಟಿ ಮಾಡುವಿರಿ. ಸ್ನೇಹಿತರು ಮತ್ತು ಸಂಬಂಧಿಗಳೊಡನೆ ದೀರ್ಘಕಾಲದ ಪ್ರವಾಸಕ್ಕೆ ತೆರಳುವಿರಿ. ಮಹಿಳಾ ಉದ್ಧಿಮೆಗಾರರಿಗೆ ವಿಶೇಷ ಸಹಾಯ ಮತ್ತು ಆದಾಯ ದೊರೆಯುತ್ತದೆ. ಹೊರಗಿನ ಜನರ ಮಾತುಗಳಿಗೆ ಪ್ರಾಶಸ್ತ್ಯ ನೀಡದಿರಿ.

ಪರಿಹಾರ: ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ವೃಶ್ಚಿಕ

ಹೊಸ ವ್ಯಾಪಾರ ವ್ಯವಹಾರ ಪ್ರಾರಂಭಿಸಲು ಯೋಜನೆ ರೂಪಿಸುವಿರಿ. ಕುಟುಂಬದ ಆದಾಯದಲ್ಲಿ ಗಣನೀಯ ಏರಿಕೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಕುಟುಂಬದ ಹಿರಿಯರ ಬೆಂಬಲ ದೊರೆಯುತ್ತದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಸಿರುತ್ತದೆ.

ಪರಿಹಾರ: ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಧನಸ್ಸು

ಒಳ್ಳೆಯ ಭಾವನೆ ಇರುವ ಜನರ ಒಡೆತನ ದೊರೆಯುತ್ತದೆ. ಖರ್ಚು ವೆಚ್ಚಗಳಿಗೆ ಸರಿ ಹೊಂದುವಷ್ಟು ಹಣವನ್ನು ಸಂಪಾದಿಸಬಲ್ಲಿರಿ. ವಿದ್ಯಾರ್ಥಿಗಳು ಕಲಿಕೆಯ ಜೊತೆಯಲ್ಲಿ ಹೊರಾಂಗಣ ಕ್ರೀಡೆಗಳಲ್ಲೂ ಭಾಗವಹಿಸುತ್ತಾರೆ. ಆತ್ಮೀಯರ ಜೊತೆಯಲ್ಲಿ ಯಾತ್ರಾಸ್ಥಳಕ್ಕೆ ಪ್ರಯಾಣ ಬೆಳೆಸುವಿರಿ.

ಪರಿಹಾರ: ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಮಕರ

ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡುವಿರಿ. ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನ ಮಾಡುವಿರಿ. ನಿರುದ್ಯೋಗಿಗಳಿಗೆ ಆತ್ಮೀಯರ ಸಹಾಯದಿಂದ ಉದ್ಯೋಗ ದೊರೆಯುತ್ತದೆ. ಸಂಗಾತಿಯ ಬುದ್ದಿವಂತಿಕೆಯ ತೀರ್ಮಾನವು ಮನೆಯಲ್ಲಿ ಸಂತೋಷವನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಗಳು ಒತ್ತಡವಿಲ್ಲದೆ ಬಾಳುತ್ತಾರೆ.

ಪರಿಹಾರ: ತಲೆಗೆ ಹಾಲಲ್ಲಿಟ್ಟು ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಬೂದು ಬಣ್ಣ

ಕುಂಭ

ನಿಮ್ಮ ಪ್ರಾವಿಣ್ಯವನ್ನು ಗುರುತಿಸಿ ಆತ್ಮೀಯರು ಅಭಿನಂದನಾ ಸಮಾರಂಭವನ್ನು ಏರ್ಪಡಿಸುತ್ತಾರೆ. ತಾಯಿಯವರ ಸಹಾಯದಿಂದ ನಿಮ್ಮ ಹಣಕಾಸಿನ ಸ್ಥಿತಿ ಉತ್ತಮಗೊಳ್ಳುತ್ತದೆ. ಚಾಡಿ ಮಾತಿಗೆ ಬೆಲೆ ನೀಡಿದಲ್ಲಿ ಸಂಗಾತಿಯ ಜೊತೆ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಪ್ರೀತಿ ವಿಶ್ವಾಸಕ್ಕೆ ಬೆಲೆ ನೀಡುವಿರಿ. ಮೌನ ತೊರೆದು ಮಾತನಾಡಲು ಪ್ರಯತ್ನಿಸಿ.

ಪರಿಹಾರ : ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಂದು ಬಣ್ಣ

ಮೀನ

ಆಧ್ಯಾತ್ಮದಲ್ಲಿ ವಿಶೇಷವಾದ ಆಸಕ್ತಿ ಉಂಟಾಗುತ್ತದೆ. ಮನಸ್ಸಿಗೆ ಒಪ್ಪುವಂತಹ ಒಡವೆಗಳಿಗೆ ಹಣ ಖರ್ಚು ಮಾಡುವಿರಿ. ಮಾನಸಿಕ ಒತ್ತಡಕ್ಕೆ ಒಳಗಾಗದೆ ಕೆಲಸ ನಿರ್ವಹಿಸುವಿರಿ. ಅನಿರೀಕ್ಷಿತವಾಗಿ ಹಣದ ಸಹಾಯ ದೊರೆಯುತ್ತದೆ. ಸ್ವಂತ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರ ಕಂಡುಕೊಳ್ಳುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).