ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸಮಾಜದಲ್ಲಿ ವಿಶೇಷ ಸ್ಥಾನಮಾನ ನಿಮ್ಮದಾಗಲಿದೆ, ಧಾರ್ಮಿಕ ಕಾರ್ಯಗಳಿಂದ ಮನಸ್ಸಿನ ನೋವು ಮಾಯ; ನಾಳೆಯ ದಿನ ಭವಿಷ್ಯ

ಸಮಾಜದಲ್ಲಿ ವಿಶೇಷ ಸ್ಥಾನಮಾನ ನಿಮ್ಮದಾಗಲಿದೆ, ಧಾರ್ಮಿಕ ಕಾರ್ಯಗಳಿಂದ ಮನಸ್ಸಿನ ನೋವು ಮಾಯ; ನಾಳೆಯ ದಿನ ಭವಿಷ್ಯ

6th May 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (6th May 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಸೋಮವಾರ

ತಿಥಿ : ತ್ರಯೋದಶಿ 01.01 ರವರೆಗೂ ಇದ್ದು ನಂತರ ಚತುರ್ದಶಿ ಆರಂಭವಾಗುತ್ತದೆ.

ನಕ್ಷತ್ರ : ರೇವತಿ ನಕ್ಷತ್ರವು 04.29 ರವರೆಗೂ ಇದ್ದು ನಂತರ ಅಶ್ವಿನಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.57

ಸೂರ್ಯಾಸ್ತ: ಸಂಜೆ 06.35

ರಾಹುಕಾಲ: ಬೆಳಗ್ಗೆ 07.35 ರಿಂದ 09.10

ಮೇಷ

ಬಹುರಾಷ್ಟ್ರೀಯ ಕಂಪನಿ ಜೊತೆಯಲ್ಲಿ ಪಾಲುದಾರಿಕೆ ದೊರೆಯುತ್ತದೆ. ಸೋದರನ ಹಣದ ವಿವಾದವನ್ನು ಪರಿಹರಿಸುವಿರಿ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮುಂದುವರೆಯುವರು. ಕೃಷಿಕರಿಗೆ ಅನುಕೂಲಕರ ಪರಿಸ್ಥಿತಿ ಇರಲಿದೆ. ವ್ಯವಸಾಯಕ್ಕೆ ಬೇಕಾದ ಗೊಬ್ಬರ ಮುಂತಾದ ವಸ್ತುಗಳ ಮಾರಾಟದಲ್ಲಿ ಲಾಭವಿದೆ.

ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ವೃಷಭ

ವಾಣಿಜ್ಯ ವ್ಯವಹಾರಗಳಲ್ಲಿ ಹೆಚ್ಚಿನ ಆದಾಯ ದೊರೆಯಲಿದೆ. ಮನೆತನದ ಗೌರವ ಘನತೆಗೆ ಧಕ್ಕೆ ಕೆಲಸದಿಂದ ದೂರ ಉಳಿಯುವಿರಿ. ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡುತ್ತಾರೆ. ವ್ಯಾಪಾರ ವ್ಯವಹಾರದಲ್ಲಿ ಲಾಭವಿದೆ. ಹಣಕಾಸಿನ ವ್ಯವಹಾರದಲ್ಲಿ ಕೆಲಕಾಲ ಬೇಸರದ ವಾತಾವರಣ ಇರುತ್ತದೆ. ಸಮಾಜದ ಗಣ್ಯವ್ಯಕ್ತಿಗಳ ಸ್ನೇಹ ನಿಮಗೆ ದೊರೆಯುತ್ತದೆ.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಬಿಳಿ

ಮಿಥುನ

ಧಾರ್ಮಿಕ ಕಾರ್ಯಗಳನ್ನು ಆಯೋಜಿಸುವವರು ಉತ್ತಮ ಅದಾಯದ ಜೊತೆ ಜನಪ್ರಿಯತೆಯನ್ನು ಗಳಿಸುತ್ತಾರೆ. ವಜ್ರ ವೈಢೂರ್ಯಗಳ ವ್ಯಾಪಾರದಲ್ಲಿ ಲಾಭವಿರುತ್ತದೆ. ತಿನ್ನುವುದರಲ್ಲಿ ಮಿತಿ ಇಲ್ಲದೇ ಹೋದಲ್ಲಿ ಅಜೀರ್ಣತೆ ಉಂಟಾಗುತ್ತದೆ. ತಂದೆಯೊಡನೆ ಹಣಕಾಸಿನ ವಿಚಾರದಲ್ಲಿ ಬಿನ್ನಾಭಿಪ್ರಾಯ ಉಂಟಾಗುತ್ತದೆ. ಬಂದು ವರ್ಗದಲ್ಲಿ ಮುಖ್ಯ ವ್ಯಕ್ತಿಯಾಗಿ ಹೊರ ಹೊಮ್ಮುವಿರಿ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬೂದು

ಕಟಕ

ಧಾರ್ಮಿಕ ವಿಧಿವಿಧಾನಗಳಿಂದ ನಿಮ್ಮ ಮಾನಸಿಕ ನೋವು ಮಾಯವಾಗಲಿವೆ. ತಂದೆಯ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಆಹಾರ ಸಂಸ್ಕರಣೆಗೆ ಸಂಬಂಧಿಸಿದ ವ್ಯಾಪಾರದಲ್ಲಿ ಲಾಭವಿದೆ. ಸಮಾಜದಲ್ಲಿ ವಿಶೇಷ ಸ್ಥಾನ ಮಾನ ದೊರೆಯುತ್ತದೆ. ಹಣಕಾಸಿಗೆ ಸಂಬಂಧಿಸಿದಂತೆ ಮಕ್ಕಳ ಜೊತೆ ವಾದ ವಿವಾದ ಇರುತ್ತವೆ. ಮಾತಿನಲ್ಲಿ ಒರಟುತನ ಇದ್ದರೂ ಶುಭ್ರವಾದ ಮನಸ್ಸು ಇರುತ್ತದೆ.

ಪರಿಹಾರ : ನೆರೆಹೊರೆಯ ಮಕ್ಕಳಿಗೆ ಸಿಹಿ ತಿಂಡಿ ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಆಕಾಶ ನೀಲಿ

ಸಿಂಹ

ತಂದೆಯ ವೃತ್ತಿಯನ್ನು ಅನುಸರಿಸುವಿರಿ. ಪ್ರಯತ್ನಪಟ್ಟಲ್ಲಿ ಸರ್ಕಾರಿ ನೌಕರಿ ದೊರೆಯುತ್ತದೆ. ಸಮಾಜದ ಮುಖ್ಯ ಸ್ಥಾನವನ್ನು ಅಲಂಕರಿಸುವಿರಿ. ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ಸಂತಾನ ಲಾಭವಿದೆ. ಸ್ನೇಹ ಬೆಳಸುವ ಮುನ್ನ ಒಮ್ಮೆ ಯೋಚಿಸುವಿರಿ. ಜನರಿಗೆ ಅನುಕೂಲವಾಗುವ ಕೆಲಸ ಕಾರ್ಯಾಗಳನ್ನು ಆರಂಭಿಸುವಿರಿ. ಹಣಕಾಸಿನ ವಿವಾದವೊಂದು ಅಂತ್ಯಗೊಳ್ಳಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಕೆಂಪು

ಕನ್ಯಾ

ಹೆಚ್ಚಿನ ಪ್ರಯತ್ನದಿಂದ ಸರ್ಕಾರಿ ಉದ್ಯೋಗ ದೊರೆಯುವ ಸಾಧ್ಯತೆಗಳಿವೆ. ರಾಜಕಾರಣಿಗಳಿಗೆ ಶುಭ ಸುದ್ಧಿಯೊಂದು ದೊರೆಯಲಿದೆ. ಆಸ್ತಿ ವಿಚಾರದಲ್ಲಿ ತಂದೆಗೆ ಕಾನೂನಿನ ಅನ್ವಯ ಜಯ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ಶುಭವಿದೆ. ವಂಶದ ವೃತ್ತಿಯನ್ನು ಆರಂಭಿಸುವಿರಿ. ನಿಮ್ಮನ್ನು ಅಜೀರ್ಣ ಕಾಡುತ್ತದೆ. ಹಳ್ಳಿಯ ವಾತಾವರಣವನ್ನು ಬಯಸಿ ಕೃಷಿ ಭೂಮಿ ಕೊಳ್ಳುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಎಲೆ ಹಸಿರು

ತುಲಾ

ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ ನಿಮ್ಮದಾಗಲಿದೆ. ಮನಸ್ಸಿಲ್ಲದೇ ಹೋದರೂ ಉದ್ಯೋಗ ಬದಲಾಯಿಸುವ ಸಂದರ್ಭ ಎದುರಾಗುತ್ತದೆ. ಕುಟುಂಬದ ವಯೋವೃದ್ಧರ ಆರೋಗ್ಯದಲ್ಲಿ ಏರಿಳಿಕೆ ಇರುತ್ತದೆ. ಮನದಲ್ಲಿರುವ ಆಸೆ ಆಕಾಂಕ್ಷೆಗಳು ಈಡೇರಲು ಹೆಚ್ಚಿನ ಪರಿಶ್ರಮ ಬೇಕಾಗುತ್ತದೆ. ವಿದೇಶದಲ್ಲಿ ಉದ್ಯೋಗ ಲಭಿಸುತ್ತದೆ. ಕುಟುಂಬದಲ್ಲಿ ಅಶಾಂತಿಯ ಸನ್ನಿವೇಶ ಎದುರಾಗುತ್ತದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು ನೈರುತ್ಯ

ಅದೃಷ್ಟದ ಬಣ್ಣ: ಕೇಸರಿ

ವೃಶ್ಚಿಕ

ಚಾಡಿ ಮಾತನ್ನು ನಂಬಿ ನೆಮ್ಮದಿ ಕೆಡಿಸಿಕೊಳ್ಳುವಿರಿ. ಉದ್ಯೋಗದಲ್ಲಿ ನಿಮ್ಮ ನಿರೀಕ್ಷೆಯಂತೆ ಬಡ್ತಿ ದೊರೆಯುತ್ತದೆ. ನಿಮ್ಮ ಕಾರ್ಯ ದಕ್ಷತೆಯನ್ನು ಹಿರಿಯ ಅಧಿಕಾರಿಗಳು ಪ್ರಶಂಶಿಸುತ್ತಾರೆ. ಸಂಗಾತಿಯ ಸಹಕಾರ ಸದಾ ದೊರೆಯುತ್ತದೆ. ವಿದ್ಯಾರ್ಥಿಗಳು ಚುರುಕುತನದಿಂದ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುತ್ತಾರೆ. ಪಾಲುದಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಲಾಭವಿದೆ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಧನಸ್ಸು

ಕೋಪ ಬಂದರೂ ಕ್ಷಣದಲ್ಲಿಯೇ ಮರೆಯಾಗುವುದು. ತಪ್ಪನ್ನು ಕ್ಷಮಿಸುವ ಗುಣವಿರುವ ಕಾರಣ ನೆಮ್ಮದಿಯಿಂದ ಬಾಳುವಿರಿ. ಮಾತಿನಲ್ಲಿ ಮೋಡಿ ಮಾಡಿ ಮೋಸ ಮಾಡುವ ಜನರ ಬಗ್ಗೆ ಎಚ್ಚರವಿರಲಿ. ಹಣದ ವ್ಯವಹಾರ ಮಾಡುವ ವೇಳೆ ಎಚ್ಚರಿಕೆ ಇರಲಿ. ಉದ್ಯೋಗದಲ್ಲಿ ಶುಭಸುದ್ದಿಯೊಂದು ದೊರೆಯಲಿದೆ. ಭೂ ವಿವಾದದಲ್ಲಿ ಪರಸ್ಪರ ಮಾತುಕತೆಯಿಂದ ಮೈತ್ರಿ ಬೆಳೆಯುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕೆಂಪು

ಮಕರ

ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶಗಳು ದೊರೆಯುತ್ತವೆ. ಕುಟುಂಬದಲ್ಲಿ ಸಾಮರಸ್ಯವಿರುತ್ತದೆ. ಕುಟುಂಬದ ಹಿರಿಯರ ಆದೇಶವನ್ನು ಪಾಲಿಸುವಲ್ಲಿ ಸಂತೋಷ ಪಡುವಿರಿ. ಅರ್ಥವಿಲ್ಲದ ಮಾತುಕತೆ ವಿವಾದಕ್ಕೆ ಕಾರಣವಾಗುತ್ತದೆ. ಮಕ್ಕಳೊಂದಿಗೆ ಪ್ರೀತಿಯಿಂದ ನಡೆದುಕೊಳ್ಳುವಿರಿ. ಕೋಪ ಬಂದರೂ ಸಂಯಮದಿಂದ ವರ್ತಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಿತ್ತಳೆ

ಕುಂಭ

ನಿಮ್ಮಲ್ಲಿನ ಹುದುಗಿದ ಪ್ರತಿಭೆಯ ಅನಾವರಣ ಮಾಡಲು ಅವಕಾಶ ದೊರೆಯುತ್ತದೆ. ನಿಮ್ಮ ತಾಯಿಗೆ ಸಂಬಂಧಿಸಿದ ಆಸ್ತಿ ವಿಚಾರದಲ್ಲಿ ವಿವಾದ ಉಂಟಾಗುತ್ತದೆ. ಹಣಕಾಸಿನ ವಿಚಾರದಲ್ಲಿ ದಂಪತಿಗಳಲ್ಲಿ ಪರಸ್ಪರ ಭಿನಾಭಿಪ್ರಾಯ ಇರುತ್ತದೆ. ಉದ್ಯೋಗದಲ್ಲಿ ಉನ್ನತ ಮಟ್ಟವನ್ನು ತಲುಪುವಿರಿ. ಕುಟುಂಬದ ಧಾರ್ಮಿಕ ಕಾರ್ಯವೊಂದನ್ನು ನಡೆಸಿಕೊಡುವಿರಿ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಬಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಳದಿ

ಮೀನ

ಮಕ್ಕಳೊಂದಿಗೆ ಸುಮಧುರ ಸಂಬಂಧ ಇರುತ್ತದೆ. ಉತ್ತಮ ಅವಕಾಶ ದೊರೆವ ಕಾರಣ ಉದ್ಯೋಗ ಬದಲಾವಣೆ ಮಾಡುವಿರಿ. ವಿದ್ಯಾರ್ಥಿಗಳು ವಿಶೇಷ ಸಾಧನೆ ಮೂಲಕ ಜನ ಮನ್ನಣೆ ಗಳಿಸಲಿದ್ದಾರೆ. ಶೀತದ ತೊಂದರೆ ಇರುತ್ತದೆ. ಯೋಗ ಪ್ರಾಣಾಯಾಮದಿಂದ ಆರೋಗ್ಯ ಕಾಪಾಡಿಕೊಳ್ಳುವಿರಿ. ಸಮಾಜದಲ್ಲಿ ಗೌರವಾದರಗಳು ಲಭಿಸುತ್ತವೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಲಾಭವಿದೆ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).