ಸೋದರಿಗೆ ವಿವಾಹ ಸಂಬಂಧ ಕೂಡಿಬರಲಿದೆ, ಸ್ವಂತ ಮನೆ ಕೊಳ್ಳುವ ಕನಸು ನನಸು; ದ್ವಾದಶ ರಾಶಿಗಳ ನಾಳೆಯ ದಿನ ಭವಿಷ್ಯ
7th July Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ. (ಬರಹ: ಎಚ್. ಸತೀಶ್, ಜ್ಯೋತಿಷಿ)
ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (7th July 2024 Horoscope).
ನಾಳೆಯ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಢ ಮಾಸ-ಶುಕ್ಲಪಕ್ಷ-ಭಾನುವಾರ
ತಿಥಿ : ಬಿದಿಗೆ ರಾತ್ರಿ 04.08 ರವರೆಗೂ ಇದ್ದು ನಂತರ ತದಿಗೆ ಆರಂಭವಾಗುತ್ತದೆ.
ನಕ್ಷತ್ರ : ಪುಷ್ಯ ನಕ್ಷತ್ರವು ಬೆಳಗ್ಗೆ 06.03 ರವರೆಗೆ ಇದ್ದು ನಂತರ ಆಶ್ಲೇಷ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.58
ಸೂರ್ಯಾಸ್ತ: ಸಂಜೆ 06.49
ರಾಹುಕಾಲ: ಸಂಜೆ 05.16 ರಿಂದ 06.52
ರಾಶಿ ಫಲ
ಮೇಷ
ಸಮಯವನ್ನು ಗೌರವಿಸುವ ನೀವು ಸದಾ ಕಾಲ ಕೆಲಸ ಕಾರ್ಯದಲ್ಲಿ ನಿರತರಾಗಿರುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಿರುತ್ತದೆ. ಖರ್ಚು ವೆಚ್ಚಗಳನ್ನು ಕಡಿಮೆ ಮಾಡಿ ಹಣ ಉಳಿಸುವಿರಿ. ವಿದ್ಯಾರ್ಥಿಗಳು ಒತ್ತಡಕ್ಕೆ ಸಿಲುಕಿ ತಪ್ಪು ನಿರ್ಧಾರ ತೆಗೆದುಕೊಳ್ಳುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿತ ವರಮಾನ ದೊರೆಯುತ್ತದೆ.
ಪರಿಹಾರ : ಬೆಲ್ಲದಿಂದ ಮಾಡಿದ ಆಹಾರ ಸೇವಿಸಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಹಳದಿ
ವೃಷಭ
ಉದ್ಯೋಗದಲ್ಲಿನ ಬದಲಾವಣೆಗಳು ನಿಮಗೆ ಅನುಕೂಲ ಎಂಬಂತೆ ಕಂಡುಬರುವುದಿಲ್ಲ. ಹೆಚ್ಚಿನ ವರಮಾನದ ನಿರೀಕ್ಷೆಯಿಂದ ಉದ್ಯೋಗ ಬದಲಿಸುವಿರಿ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ವಿದ್ಯಾಭ್ಯಾಸದಲ್ಲಿ ಉನ್ನತ ಮಟ್ಟ ತಲುಪುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಅನಾವಶ್ಯಕವಾಗಿ ಖರ್ಚು ಮಾಡದೆ ಹಣ ಉಳಿಸುವಿರಿ. ಸೋದರಿಗೆ ವಿವಾಹ ಸಂಬಂಧ ಕೂಡಿಬರುತ್ತದೆ.
ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪ ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಹಸಿರು
ಮಿಥುನ
ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಸಹಾಯದಿಂದ ಉನ್ನತ ಪದವಿ ದೊರೆಯುತ್ತದೆ. ವಿದ್ಯಾರ್ಥಿಗಳು ವ್ಯಾಸಂಗದ ಜೊತೆ ಉದ್ಯೋಗವನ್ನೂ ಮಾಡುವ ಮನಸ್ಸು ಮಾಡುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಇರುತ್ತದೆ. ಸ್ವಂತ ಮನೆ ಕೊಳ್ಳುವ ಯೋಜನೆ ಕಾರ್ಯರೂಪಕ್ಕೆ ಬರಲಿದೆ. ಮನೆಯವರ ಒತ್ತಡದಿಂದ ಬಂಧುವೊಬ್ಬರಿಗೆ ಹಣ ನೀಡುವಿರಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ.
ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ನೀಲಿ
ಕಟಕ
ಮಕ್ಕಳಿಂದಾಗಿ ಕುಟುಂಬದಲ್ಲಿ ಸಂತಸ ಸಂಭ್ರಮ ಮನೆ ಮಾಡಿರುತ್ತದೆ. ಸಮಾಜದಲ್ಲಿ ಪ್ರತಿಷ್ಠಿತ ಸ್ಥಾನವನ್ನು ಅಲಂಕರಿಸುವಿರಿ. ಉದ್ಯೋಗದಲ್ಲಿನ ನಿಮ್ಮ ಕಾರ್ಯವೈಖರಿಗೆ ಎಲ್ಲರ ಮೆಚ್ಚುಗೆ ಗಳಿಸುವಿರಿ. ವಿದ್ಯಾರ್ಥಿಗಳು ಸಿಡುಕಿನ ಬುದ್ಧಿ ಬಿಡಬೇಕು. ವಿದ್ಯಾರ್ಥಿಗಳು ಎಲ್ಲರ ವಿಶ್ವಾಸ ಗಳಿಸಿದಲ್ಲಿ ವಿದ್ಯಾಭ್ಯಾಸ ಸುಗಮವಾಗಿ ಸಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ವಿರುತ್ತದೆ.
ಪರಿಹಾರ : ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ನೇರಳೆ
ಸಿಂಹ
ಸಮಾಜದಲ್ಲಿ ಗೌರವಯುತ ಸ್ಥಾನಮಾನ ದೊರೆಯುತ್ತದೆ. ವಿಶ್ರಾಂತಿ ಇಲ್ಲದೆ ದುಡಿಯುವಿರಿ. ಮಕ್ಕಳಿಗಾಗಿ ಬೇರೆಯವರಿಂದ ಹಣದ ಸಹಾಯ ಪಡುವಿರಿ. ಕುಟುಂಬದಲ್ಲಿ ಪರಸ್ಪರ ವಾದಿಸುವ ಪರಿಸ್ಥಿತಿ ಎದುರಾಗುತ್ತದೆ. ತಂದೆಯವರಿಗೆ ಸೇರಿದ ಉದ್ಯಮ ನಿಮ್ಮ ಪಾಲಿಗೆ ಬರಲಿದೆ. ವ್ಯಾಪಾರ ವ್ಯವಹಾರದ ಸಂಪೂರ್ಣ ಜವಾಬ್ದಾರಿಯನ್ನು ಸಂಗಾತಿಗೆ ವಹಿಸುವಿರಿ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ತಮ್ಮ ಗುರಿ ತಲುಪುತ್ತಾರೆ.
ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯ ಹಾಕಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ : ಗುಲಾಬಿ
ಕನ್ಯಾ
ಕಷ್ಟಪಟ್ಟು ಕೂಡಿಟ್ಟ ಹಣವನ್ನು ಖರ್ಚು ಮಾಡುವಿರಿ. ಮಾತುಕತೆಯಿಂದ ಆತ್ಮೀಯರೊಬ್ಬರ ಸಮಸ್ಯೆಯನ್ನು ಬಗೆಹರಿಸುವಿರಿ. ಸಂಗಾತಿಯಿಂದ ಹಣದ ಸಹಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಒತ್ತಡ ತೊರೆದು ಕಲಿಕೆಯಲ್ಲಿ ಯಶಸ್ಸು ಕಾಣುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ಹಾಕಿದ ಬಂಡವಾಳಕ್ಕೆ ಮೋಸವಾಗದು. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ.
ಪರಿಹಾರ : ತಾಯಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ : ಬಿಳಿ ಬಣ್ಣ
ತುಲಾ
ಉದ್ಯೋಗದಲ್ಲಿ ಯಾವುದೇ ತೊಂದರೆ ಕಂಡು ಬರದು. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಲಾಭವಿರುತ್ತದೆ. ಸೋದರಿಯ ಜೊತೆ ಮಾಡುವ ಪಾಲುದಾರಿಕೆ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ. ಹೋಟೆಲ್ ಉದ್ಯಮದಲ್ಲಿ ಆಸಕ್ತಿ ಉಂಟಾಗುತ್ತದೆ. ವಿದ್ಯಾರ್ಥಿಗಳು ಆಸಕ್ತಿಯಿಂದ ವಿದ್ಯೆ ಕಲಿಯುತ್ತಾರೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಬೆಳ್ಳಿ ಬಂಗಾರದ ವಸ್ತುಗಳಿಗೆ ಹಣ ಖರ್ಚುಮಾಡುವಿರಿ.
ಪರಿಹಾರ : ಪಕ್ಷಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಬೂದು ಬಣ್ಣ
ವೃಶ್ಚಿಕ
ವಿದ್ಯಾರ್ಥಿಗಳು ವ್ಯಾಸಂಗದ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕಾಗುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಜವಾಬ್ದಾರಿಯ ನಡಿಗೆಯನ್ನು ಅನುಸರಿಸುವಿರಿ. ಸ್ವತಂತ್ರ್ಯ ವ್ಯಾಪಾರ ವ್ಯವಹಾರದಲ್ಲಿ ಲಾಭವಿದೆ. ಲೇವಾದೇವಿ ವ್ಯವಹಾರದಿಂದ ತೊಂದರೆ ಉಂಟಾಗುತ್ತದೆ. ದಂಪತಿ ನಡುವೆ ಉತ್ತಮ ಒಡನಾಟ ಇರುತ್ತದೆ. ಮಕ್ಕಳ ಜೊತೆ ಅನಾವಶ್ಯಕವಾದ ವಾದ ವಿವಾದ ಇರುತ್ತದೆ. ಭೂ ವ್ಯವಹಾರದಲ್ಲಿ ಲಾಭವಿರುತ್ತದೆ.
ಪರಿಹಾರ : ಸಿಹಿ ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕಂದು
ಧನಸ್ಸು
ಉದ್ಯೋಗದಲ್ಲಿ ಯಾವುದೇ ತೊಂದರೆ ಕಂಡು ಬರದು. ವಿದ್ಯಾರ್ಥಿಗಳು ಆಸಕ್ತಿಯಿಂದ ಅಧ್ಯಯನದಲ್ಲಿ ತೊಡಗುತ್ತಾರೆ. ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಬದಲಾವಣೆಗಳು ಎದುರಾಗಲಿವೆ. ಭೂವ್ಯವಹಾರಕ್ಕೆ ಸಬಂಧಿಸಿದ ಸಂಸ್ಥೆಯನ್ನು ಆರಂಭಿಸುವ ಸೂಚನೆ ಇದೆ. ಸಂಗಾತಿಯೊಂದಿಗೆ ವಿದೇಶಕ್ಕೆ ತೆರಳುವಿರಿ. ಆರೋಗ್ಯದಲ್ಲಿ ತೊಂದರೆ ಮರೆಯಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭವಿದೆ.
ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಕಪ್ಪು
ಮಕರ
ಉದ್ಯೋಗ ಬದಲಿಸುವ ಸಾಧ್ಯತೆಗಳು ಕಂಡುಬರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಧನ ಲಾಭವಿದೆ. ನಿಮ್ಮಲ್ಲಿರುವ ವಾಹನವನ್ನು ಆತ್ಮೀಯರಿಗೆ ಉಡುಗೊರೆ ನೀಡುವಿರಿ. ಕಮೀಷನ್ ಆಧಾರಿತ ವ್ಯಾಪಾರದಲ್ಲಿ ಹೆಚ್ಚಿನ ಹಣ ಗಳಿಸುವಿರಿ. ಹಿರಿಯ ಸೋದರೊಂದಿಗೆ ಹಣಕಾಸಿನ ವಿಚಾರದಲ್ಲಿ ಮನಸ್ತಾಪ ಉಂಟಾಗುತ್ತದೆ. ವಿದ್ಯಾರ್ಥಿಗಳು ದೃಢವಾದ ಮನಸ್ಸಿನಿಂದ ಓದಿನಲ್ಲಿ ಮಗ್ನರಾಗುತ್ತಾರೆ.
ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ :11
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ತಿಳಿ ಹಸಿರು
ಕುಂಭ
ವಿದ್ಯಾರ್ಥಿಗಳಿಗೆ ಸಾಧಾರಣ ಪ್ರಗತಿ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಬಂಡವಾಳವನ್ನು ತೊಡಗಿಸುವಿರಿ. ನಿಮ್ಮ ಪಾಲಿಗೆ ಬಂದ ಲಾಭದ ಹಣದಲ್ಲಿ ಹೊಸ ಉದ್ಯಮವನ್ನು ಆರಂಭಿಸುವಿರಿ. ಸಾರ್ವಜನಿಕ ಸಭೆ ಸಮಾರಂಭಗಳನ್ನು ಯಶಸ್ವಿಯಾಗಿ ನಿರ್ವಹಿಸುವಿರಿ. ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ ಮಾಡುವವರು ಹೆಚ್ಚಿನ ಹಣ ಗಳಿಸುತ್ತಾರೆ. ಬೆನ್ನು ನೋವಿನಿಂದ ಬಳಲುವಿರಿ
ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ನಸು ಗೆಂಪು ಬಣ್ಣ
ಮೀನ
ಅನಿರೀಕ್ಷಿತ ಧನಲಾಭವಿದೆ. ಉದ್ಯೋಗದಲ್ಲಿ ಯಶಸ್ಸು ದೊರೆಯುತ್ತದೆ. ವಿದ್ಯಾರ್ಥಿಗಳು ಉನ್ನತ ಮಟ್ಟ ತಲುಪಲಿದ್ದಾರೆ. ಲೋಹದ ವ್ಯಾಪಾರ ವ್ಯವಹಾರದಲ್ಲಿ ಹಣ ಗಳಿಸುವಿರಿ. ದುಡುಕು ಮಾತಿನಿಂದ ವಿವಾದ ಎದುರಿಸಬೇಕಾಗುತ್ತದೆ. ವಂಶದ ಆಸ್ತಿಯಲ್ಲಿ ಇದ್ದ ವಿವಾದ ಬಗೆಹರಿಯುತ್ತದೆ. ಆತ್ಮೀಯರಿಗೆ ವಿವಾಹ ಯೋಗವಿದೆ. ನಿಮ್ಮ ಮೆಚ್ಚಿನ ಪ್ರದೇಶಕ್ಕೆ ಪ್ರವಾಸಕ್ಕೆ ತೆರಳುವಿರಿ.
ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).