ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನ ಲಾಭ, ಮಕ್ಕಳ ಆರೋಗ್ಯದಲ್ಲಿ ಏರುಪೇರು; ದ್ವಾದಶ ರಾಶಿಗಳ ನಾಳೆಯ ದಿನ ಭವಿಷ್ಯ

ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನ ಲಾಭ, ಮಕ್ಕಳ ಆರೋಗ್ಯದಲ್ಲಿ ಏರುಪೇರು; ದ್ವಾದಶ ರಾಶಿಗಳ ನಾಳೆಯ ದಿನ ಭವಿಷ್ಯ

8th July Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನ ಲಾಭ, ಮಕ್ಕಳ ಆರೋಗ್ಯದಲ್ಲಿ ಏರುಪೇರು; ದ್ವಾದಶ ರಾಶಿಗಳ ನಾಳೆಯ ದಿನ ಭವಿಷ್ಯ
ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನ ಲಾಭ, ಮಕ್ಕಳ ಆರೋಗ್ಯದಲ್ಲಿ ಏರುಪೇರು; ದ್ವಾದಶ ರಾಶಿಗಳ ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಡ ಮಾಸ-ಶುಕ್ಲಪಕ್ಷ-ಸೋಮವಾರ

ತಿಥಿ : ತದಿಗೆ ಬೆಳಗ್ಗೆ05.01 ರವರೆಗೂ ಇದ್ದು ನಂತರ ಚೌತಿ ಆರಂಭವಾಗುತ್ತದೆ.

ನಕ್ಷತ್ರ : ಆಶ್ಲೇಷ ನಕ್ಷತ್ರವು ದಿನಪೂರ್ತಿ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 05.58

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: ಬೆಳಗ್ಗೆ 07.40 ರಿಂದ 09.16 ವರೆಗೆ

ರಾಶಿಫಲ

ಮೇಷ

ಹಿರಿಯರ ಸಲಹೆ ಸೂಚನೆಯನ್ನು ಪಾಲಿಸಿದರೆ ಹಣದ ಕೊರತೆ ಕಾಣದು. ಕುಟುಂಬದ ಪ್ರತಿಯೊಬ್ಬರೊಂದಿಗೂ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಉದ್ಯೋಗದಲ್ಲಿ ಬುದ್ಧಿವಂತಿಕೆಯಿಂದ ಸೋಲನ್ನು ಜಯವನ್ನಾಗಿ ಪರಿವರ್ತಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಗಳಿಸುವಿರಿ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಆಟ ಪಾಠಗಳಲ್ಲಿ ಪಾಲ್ಗೊಳ್ಳುತ್ತಾರೆ. ಸ್ನೇಹಿತರ ಜೊತೆ ಪಾಲುದಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ವೃಷಭ

ತಪ್ಪು ಕಲ್ಪನೆಯಿಂದ ದೊರೆತ ಉದ್ಯೋಗಾವಕಾಶವನ್ನು ಕಳೆದುಕೊಳ್ಳುವಿರಿ. ಆರೋಗ್ಯದಲ್ಲಿನ ತೊಂದರೆ ದೂರವಾಗಲಿದೆ. ವ್ಯಾಪಾರ ವ್ಯವಹಾರಗಳ ಬಗ್ಗೆ ಇದ್ದ ನಿರೀಕ್ಷೆ ಹುಸಿಯಾಗುತ್ತದೆ. ಸ್ಟಾಕ್ ಮತ್ತು ಷೇರಿನಲ್ಲಿ ಹೆಚ್ಚಿನ ಹಣವನ್ನು ಬಂಡವಾಳವನ್ನಾಗಿ ವಿನಿಯೋಗಿಸುವಿರಿ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರೆಯುತ್ತದೆ. ಅವಶ್ಯಕತೆ ಇದ್ದಲ್ಲಿ ಬೇರೆಯವರ ಸಲಹೆಯನ್ನು ಒಪ್ಪಿಕೊಳ್ಳಿರಿ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಮಿಥುನ

ಕುಟುಂಬದಲ್ಲಿ ಹೊಂದಾಣಿಕೆಯ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ಉನ್ನತ ಮಟ್ಟ ತಲುಪುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನ ಲಾಭವಿದೆ. ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿಯಿಂದ ಗುರಿ ತಲುಪಲಿದ್ದಾರೆ. ಸೋದರರು ಜೀವನದಲ್ಲಿ ಅಭಿವೃದ್ಧಿ ಕಾಣಲಿದ್ದಾರೆ. ಸಂಬಂಧ ಅಥವಾ ಪರಿಚಿತರ ಜೊತೆ ದೀರ್ಘಕಾಲದ ಪ್ರವಾಸಕ್ಕೆ ತೆರಳುವಿರಿ. ಉತ್ತಮ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ ಗಳಿಸಬಹುದು.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕಟಕ

ವೇತನದ ವಿಚಾರವಾಗಿ ಹಿರಿಯ ಅಧಿಕಾರಗಳೊಂದಿಗೆ ವಾದ ನಡೆಸುವಿರಿ. ಗೃಹಿಣಿಯರು ಆರಂಭಿಸುವ ವ್ಯಾಪಾರಕ್ಕೆ ಹಣದ ಸಹಾಯ ಮಾಡುವಿರಿ. ವಿದ್ಯಾರ್ಥಿಗಳು ಮನಸ್ಸು ಬದಲಿಸದೆ ಕಲಿಕೆಯಲ್ಲಿ ಮುಂದಿರುತ್ತಾರೆ. ಹಣಕಾಸಿನ ವ್ಯವಹಾರದ ವೇಳೆ ತಾಳ್ಮೆಯಿಂದ ವರ್ತಿಸುವಿರಿ. ವಂಶದ ಆಸ್ತಿಯ ವಿವಾದ ಎದುರಾಗುವ ಪರಿಸ್ಥಿತಿಯನ್ನು ಅವಲೋಕಿಸಿ ಒಂದೊಳ್ಳೆ ತೀರ್ಮಾನ ಕೈಗೊಳ್ಳುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ. ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಸಿಂಹ

ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯಲಿದೆ. ಕುಟುಂಬದ ಹಿರಿಯರ ಜವಾಬ್ದಾರಿ ನಿಮ್ಮದಾಗುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಾರೆ. ರಾಜಕೀಯದಲ್ಲಿ ಉನ್ನತ ಸ್ಥಾನಮಾನ ದೊರೆಯುತ್ತದೆ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಸಂಗಾತಿಯ ಜೊತೆ ಬೇಡದ ವಿಚಾರಗಳಿಗೆ ವಾದ ವಿವಾದ ಇರುತ್ತದೆ. ತಂದೆಯವರ ಸೂಚನೆಯಂತೆ ಹೊಸ ವ್ಯಾಪಾರದಲ್ಲಿ ತೊಡಗುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಹಸಿರು

ಕನ್ಯಾ

ಸಂಬಂಧಗಳ ನಿಜವಾದ ಅರ್ಥವನ್ನು ಎಲ್ಲರಿಗೂ ತಿಳಿಸುವಿರಿ. ಸಂಗಾತಿಯ ಮನಸ್ಸು ಅರಿಯಲು ಇದು ಉತ್ತಮ ಸಮಯ. ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುವ ಸಾಧ್ಯತೆಗಳಿವೆ. ಸಾಲದ ವ್ಯವಹಾರ ಮಾಡದಿರಿ. ವ್ಯಾಪಾರ ವ್ಯವಹಾರದಲ್ಲಿ ಹಣದ ತೊಂದರೆ ಇರುವುದಿಲ್ಲ. ವಿದ್ಯಾರ್ಥಿಗಳು ತಮ್ಮ ತಪ್ಪಿಗೆ ಬೇರೆಯವರನ್ನು ದೂರಲಿದ್ದಾರೆ. ವಿದ್ಯಾರ್ಥಿಗಳು ಸಮೂಹಕಲಿಕೆಯಲ್ಲಿ ನಿರತರಾಗಲಿದ್ದಾರೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ : ನೀಲಿ

ತುಲಾ

ಪ್ರೀತಿಯಿಂದ ವರ್ತಿಸಿ ಕುಟುಂಬದ ಎಲ್ಲರ ಪ್ರೀತಿ-ವಿಶ್ವಾಸವನ್ನು ಸಂಪಾದಿಸುವಿರಿ. ಉದ್ಯೋಗ ಬದಲಿಸುವ ಸೂಚನೆಗಳಿವೆ. ಹಣಕಾಸಿನ ತೊಂದರೆ ಎದುರಾಗದು. ಆತ್ಮೀಯ ಸ್ನೇಹಿತರೊಂದಿಗೆ ದೂರದೂರಿಗೆ ಪ್ರವಾಸಕ್ಕೆ ತೆರಳುವಿರಿ. ವಿದ್ಯಾರ್ಥಿಗಳು ಒತ್ತಡದ ನಡುವೆಯೂ ಯಶಸ್ಸು ಕಾಣುತ್ತಾರೆ. ದಿಢೀರನೆ ವಿವಾಹ ನಿಶ್ಚಯವಾಗುತ್ತದೆ. ಕಾನೂನು ಸಲಹೆಗಾರರನ್ನು

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ನೇರಳೆ

ವೃಶ್ಚಿಕ

ಕುಟುಂಬದ ಸದಸ್ಯರು ಪರಸ್ಪರ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುತ್ತಾರೆ. ಉದ್ಯೋಗದಲ್ಲಿ ಎದುರಾಗುವ ತೊಂದರೆಯಿಂದ ಪಾರಾಗುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿರಿ. ನಿಮ್ಮ ಅಧಿಕಾರದಲ್ಲಿ ಕೆಲಸ ಮಾಡುವವರ ಬಗ್ಗೆ ಅನುಕಂಪ ಇರಲಿ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಉನ್ನತ ಮಟ್ಟ ತಲುಪುತ್ತಾರೆ. ಹೊಸ ವ್ಯಾಪಾರ ವ್ಯವಹಾರಗಳನ್ನು ಆರಂಭಿಸಲು ಸಾಧ್ಯವಾಗದು.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಧನಸ್ಸು

ಉದ್ಯೋಗದಲ್ಲಿ ನಿರೀಕ್ಷಿತ ಯಶಸ್ಸನ್ನು ಗಳಿಸುವಿರಿ. ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ದೊರೆಯುತ್ತದೆ. ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ವಸತಿ ಗೃಹಗಳನ್ನು ಕಟ್ಟಿಸುವ ಕೆಲಸದಲ್ಲಿ ಉತ್ತಮ ಆದಾಯವಿರುತ್ತದೆ. ಉತ್ತಮ ಆರೋಗ್ಯಕ್ಕಾಗಿ ವಿಶ್ರಾಂತಿಯನ್ನು ಆಶ್ರಯಿಸುವಿರಿ. ಸ್ವಂತ ಜಮೀನು ಅಥವಾ ಮನೆಯನ್ನು ಕೊಳ್ಳಲು ಸೋದರರ ಸಹಾಯ ದೊರೆಯುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಮಕರ

ಕುತೂಹಲದಿಂದ ಅಸಾಧ್ಯವಾದ ಕೆಲಸಗಳನ್ನು ಮಾಡಬಯಸುವಿರಿ. ಉದ್ಯೋಗದಲ್ಲಿ ನೆಮ್ಮದಿಯ ವಾತಾವರಣ ಕಂಡುಬರುತ್ತದೆ. ಉನ್ನತ ಅಧಿಕಾರಿಗಳ ಸಹಾಯ ದೊರೆಯಲಿದೆ. ಅನಾವಶ್ಯಕ ಖರ್ಚು ವೆಚ್ಚಗಳು ಎದುರಾಗಲಿವೆ. ವಿದ್ಯಾರ್ಥಿಗಳು ಉನ್ನತ ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳುವ ಅವಕಾಶ ಪಡೆಯುತ್ತಾರೆ. ಭೂಮಿಗೆ ಸಂಬಂಧಪಟ್ಟ ವಿವಾದ ಒಂದು ಸುಖಾಂತ್ಯಗೊಳ್ಳಲಿದೆ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಬಿಸಿ.

ಅದೃಷ್ಟದ ಸಂಖ್ಯೆ :6

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬೂದು ಬಣ್ಣ

ಕುಂಭ

ಆದಾಯಕ್ಕೆ ತಕ್ಕಂತಹ ಖರ್ಚು ವೆಚ್ಚಗಳು ಎದುರಾಗುತ್ತವೆ. ಕುಟುಂಬದಲ್ಲಿ ಸುಖ ಸಂತೋಷ ಮನೆ ಮಾಡಿರುತ್ತದೆ. ಉದ್ಯೋಗದಲ್ಲಿ ನಿಮ್ಮ ಪ್ರಯತ್ನಕ್ಕೆ ತಕ್ಕಫಲ ದೊರೆಯದು. ವ್ಯಾಪಾರ ವ್ಯವಹಾರಗಳಲ್ಲಿ ಉನ್ನತಿ ಕಾಣುವಿರಿ. ವಿದ್ಯಾರ್ಥಿಗಳು ಹಟದಿಂದ ತಮ್ಮ ಕೆಲಸ ಸಾಧಿಸಿಕೊಳ್ಳಲಿದ್ದಾರೆ. ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವ ಯೋಗವಿದೆ. ವ್ಯವಸಾಯಕ್ಕೆ ಬೇಕಾದ ಪದಾರ್ಥಗಳ ವ್ಯಾಪಾರದಲ್ಲಿ ಆಸಕ್ತಿ ಉಂಟಾಗಲಿದೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಂದು ಬಣ್ಣ

ಮೀನ

ಕುಟುಂಬದ ಸದಸ್ಯರ ಸಹಾಯದಿಂದ ಹೊಸ ವ್ಯಾಪಾರ ವ್ಯವಹಾರವನ್ನು ಆರಂಭಿಸುವಿರಿ. ಉತ್ತಮ ಉದ್ಯೋಗವಿದ್ದರೂ ಅಲ್ಪ ಬಂಡವಾಳದ ಸ್ವಂತ ವ್ಯಾಪಾರವನ್ನು ಆರಂಭಿಸುವಿರಿ. ಉಷ್ಣದ ತೊಂದರೆಯಿಂದ ಬಳಲುವಿರಿ. ಸಂಗೀತ ನಾಟ್ಯ ಬಲ್ಲವರಿಗೆ ವಿಶೇಷ ಅವಕಾಶ ದೊರೆಯುತ್ತದೆ. ತಂದೆಯ ಆರೋಗ್ಯದಲ್ಲಿ ಸಮಸ್ಯೆ ಎದುರಾಗುತ್ತದೆ. ಮಕ್ಕಳ ಜೊತೆ ಸಂತೋಷದಿಂದ ದಿನ ಕಳೆಯುವಿರಿ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 12

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಕಪ್ಪು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.