ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಸಮಾಜದಲ್ಲಿ ಉನ್ನತ ಕೀರ್ತಿ ಪ್ರತಿಷ್ಠೆ ದೊರೆಯಲಿದೆ, ಅತಿಯಾದ ಖರ್ಚಿನಿಂದ ಹಣದ ಸಮಸ್ಯೆ ಕಾಡಬಹುದು; ನಾಳೆಯ ದಿನ ಭವಿಷ್ಯ

Tomorrow Horoscope: ಸಮಾಜದಲ್ಲಿ ಉನ್ನತ ಕೀರ್ತಿ ಪ್ರತಿಷ್ಠೆ ದೊರೆಯಲಿದೆ, ಅತಿಯಾದ ಖರ್ಚಿನಿಂದ ಹಣದ ಸಮಸ್ಯೆ ಕಾಡಬಹುದು; ನಾಳೆಯ ದಿನ ಭವಿಷ್ಯ

8th June 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (8th June 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಶನಿವಾರ

ತಿಥಿ: ಬಿದಿಗೆ 04.09 ರವರೆಗೂ ಇರುತ್ತದೆ ನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ:ಆರ್ದ್ರೆ ನಕ್ಷತ್ರವು ರಾತ್ರಿ 08.26 ರವರೆಗೂ ಇದ್ದು ನಂತರ ಪುನರ್ವಸು ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.44

ರಾಹುಕಾಲ: ಬೆಳಗ್ಗೆ 09.11 ರಿಂದ 10.47

ರಾಶಿಫಲ

ಮೇಷ

ಸದಾಕಾಲ ಒಳ್ಳೆಯ ಹಾದಿಯಲ್ಲಿ ನಡೆಯುವ ನೀವು ಎಲ್ಲರ ಮನ ಗೆಲ್ಲುವಿರಿ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಕಂಡು ಬರುತ್ತದೆ. ಸಮಯಕ್ಕೆ ತಕ್ಕಂತೆ ಮಾತನಾಡುವಿರಿ. ದೂರದ ಊರಿಗೆ ಪ್ರವಾಸ ಬೆಳೆಸುವುದನ್ನು ಇಷ್ಟಪಡುವಿರಿ. ಸಮಾಜದಲ್ಲಿ ಉನ್ನತ ಕೀರ್ತಿ ಪ್ರತಿಷ್ಠೆ ದೊರೆಯುತ್ತದೆ. ಕುಟುಂಬದಲ್ಲಿ ಅಸಮಾಧಾನ ಇರುತ್ತದೆ. ಉತ್ತಮ ಆದಾಯವಿದ್ದರೂ ಮಿತಿಮೀರಿದ ಖರ್ಚು ವೆಚ್ಚದಿಂದ ತೊಂದರೆಗೆ ಒಳಗಾಗುವಿರಿ.

ಪರಿಹಾರ : ಸಿಹಿ ತಿಂದು ನೀರು ಕುಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಳದಿ

ವೃಷಭ

ಹೃದಯದ ಸಮಸ್ಯೆ ಇರುವವರು ಎಚ್ಚರಿಕೆಯಿಂದ ಇರಬೇಕು. ಸ್ತ್ರೀಯರು ಶುಭ ಫಲಗಳನ್ನು ಪಡೆಯುತ್ತಾರೆ. ಅವಿವಾಹಿತರಿಗೆ ವಿವಾಹವಾಗುವ ಸಾಧ್ಯತೆ ಇದೆ. ಮಕ್ಕಳು ಜ್ವರದಿಂದ ಬಳಲುತ್ತಾರೆ. ತಂದೆಯಿಂದ ಅವಶ್ಯಕತೆ ತಕ್ಕಂತ ಸಹಾಯ ದೊರೆಯಲಿದೆ. ನಿಮ್ಮ ಮಕ್ಕಳಿಗೆ ಉದ್ಯೋಗ, ಕೀರ್ತಿ ಲಭಿಸುತ್ತದೆ. ಹಟದ ಗುಣವನ್ನು ತೊರೆದರೆ ನೀವು ಯಾವುದೇ ರೀತಿಯ ಕೆಲಸವನ್ನು ಮಾಡಬಹುದು.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಸಿರು

ಮಿಥುನ

ಅವಶ್ಯಕತೆಗೆ ತಕ್ಕಷ್ಟು ಹಣ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ಶುಭ ವರ್ತಮಾನವೊಂದು ಬರಲಿದೆ. ಸಮಾಜದ ಗಣ್ಯ ವ್ಯಕ್ತಿ ಒಬ್ಬರ ಪರಿಚಯವಾಗುತ್ತದೆ. ಹೆಣ್ಣು ಮಕ್ಕಳಿಂದ ಸಹಾಯವಿರುತ್ತದೆ. ಖ್ಯಾತ ಹಣಕಾಸಿನ ಸಂಸ್ಥೆಯ ಒಡೆತನ ಲಭಿಸುತ್ತದೆ. ಸೋದರನ ಜೊತೆ ಹಣಕಾಸಿನ ವಿಚಾರದಲ್ಲಿ ಮನಸ್ತಾಪ ಉಂಟಾಗುತ್ತದೆ. ವಾಹನ ಚಾಲನೆ ಮಾಡುವ ವೇಳೆ ತೊಂದರೆ ಉಂಟಾಗಬಹುದು.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ. .

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೀಲಿ

ಕಟಕ

ನವಜಾತ ಶಿಶುಗಳಿಗೆ ಅನಾರೋಗ್ಯ ಕಾಡುತ್ತದೆ. ಮನದಲ್ಲಿ ಅಳುಕಿನ ಭಾವನೆ ಇರುವುದಿಲ್ಲ. ಆದಾಯಕ್ಕಿಂದ ಖರ್ಚು ಹೆಚ್ಚುತ್ತದೆ. ಕುಟುಂಬದ ಹಿರಿಯರು ಕಿರಿಯರಿಗೆ ಸಲಹೆ ಸೂಚನೆಗಳನ್ನು ನೀಡುತ್ತಾರೆ. ಹಣಕಾಸಿನ ವಿಚಾರದಲ್ಲಿ ನಿಮ್ಮ ನಿರ್ಧಾರವೇ ಸರಿ ಎಂಬ ಭಾವನೆ ಇರುತ್ತದೆ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ದೊರೆಯಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ :10

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೇರಳೆ

ಸಿಂಹ

ಯಾವುದಕ್ಕೂ ಭಯಪಡದೆ ಎಲ್ಲವನ್ನೂ ಎದುರಿಸಬಲ್ಲಿರಿ. ಹೊಸ ವಾಹನವನ್ನು ಕೊಳ್ಳುವಿರಿ. ಮಕ್ಕಳಿಗೆ ದೂರದ ಊರಿನಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ನಿಮ್ಮ ತಂದೆ ಉದ್ಯೋಗಸ್ಥರಾದಲ್ಲಿ ಬಡ್ತಿ ದೊರೆತು ದೂರದ ಊರಿಗೆ ಪ್ರಯಾಣ ಬೆಳೆಸುತ್ತಾರೆ. ಅತಿಯಾದ ಖರ್ಚು ವೆಚ್ಚದ ಕಾರಣ ಹಣದ ಕೊರತೆ ಕಂಡುಬರುತ್ತದೆ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಗುಲಾಬಿ

ಕನ್ಯಾ

ನಿಮ್ಮಲ್ಲಿರುವ ಬುದ್ಧಿವಂತಿಕೆಯನ್ನು ಸಮಯಕ್ಕೆ ತಕ್ಕಂತೆ ಉಪಯೋಗಿಸುವುದಿಲ್ಲ. ಸಂತಾನ ಲಾಭವಿದೆ. ಹಿಂದೊಮ್ಮೆ ಸ್ನೇಹಿತರಿಗೆ ನೀಡಿದ್ದ ಹಣ ಮರಳಿ ಕೈ ಸೇರುತ್ತದೆ. ನಿಮ್ಮ ಮಕ್ಕಳಿಗೆ ಉನ್ನತ ಮಟ್ಟದ ಉದ್ಯೋಗ ದೊರೆಯುತ್ತದೆ. ತಂದೆಯವರಿಗೆ ಸಮಾಜದಲ್ಲಿ ಗೌರವಯುತ ಸ್ಥಾನಮಾನ ದೊರೆಯುತ್ತದೆ. ನಿಮ್ಮ ನೇರವಾದ ನಡೆನುಡಿಯಿಂದ ವಿರೋಧಿಗಳು ಹೆಚ್ಚಬಹುದು.

ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ : ಬಿಳಿ

ತುಲಾ

ತಂದೆಗೆ ದೈಹಿಕ ದೌರ್ಬಲ್ಯ ಇರುತ್ತದೆ. ನಿಮ್ಮಿಂದ ಸಹಾಯ ಪಡೆದವರೇ ನಿಮಗೆ ತೊಂದರೆ ನೀಡಬಹುದು. ನಿಮ್ಮ ಮಕ್ಕಳಿಗೆ ವಿಶೇಷ ಬುದ್ಧಿಯಿದ್ದು ಸ್ವತಂತ್ರವಾಗಿ ತಮ್ಮ ಕೆಲಸ ಸಾಧಿಸುತ್ತಾರೆ. ಕುಟುಂಬದಲ್ಲಿ ನಡೆಯಬೇಕಿದ್ದ ವಿವಾಹ ಮುಂದೆ ಹೋಗಲಿದೆ. ಸ್ತ್ರೀಯರು ಅನಾವಶ್ಯಕ ವಾದ ವಿವಾದಗಳನ್ನು ಎದುರಿಸಬೇಕಾಗುತ್ತದೆ. ಮನೆಯ ಜವಾಬ್ದಾರಿ ಮರೆತು ಬೇರೆಯವರಿಗೆ ಸಹಾಯ ಮಾಡಬೇಕಾಗುತ್ತದೆ.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸ ಆರಂಭಿಸಿರಿ

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು ಈಶಾನ್ಯ

ಅದೃಷ್ಟದ ಬಣ್ಣ: ಬೂದು

ವೃಶ್ಚಿಕ

ಸ್ತ್ರೀಯರು ತಮ್ಮ ಸ್ನೇಹಿತ ವರ್ಗದವರಿಗೆ ಸಹಾಯ ಮಾಡುತ್ತಾರೆ. ಆಶ್ಚರ್ಯಕರ ರೀತಿಯಲ್ಲಿ ನಿಮ್ಮ ಉದ್ಯೋಗದಲ್ಲಿ ಪ್ರಗತಿ ಉಂಟಾಗುತ್ತದೆ. ಹಣಕಾಸಿನ ವ್ಯವಹಾರದಲ್ಲಿ ನಿರೀಕ್ಷಿತ ವರಮಾನವಿರುತ್ತದೆ. ವಂಶಾನುಗತವಾಗಿ ಬಂದ ವಿದ್ಯೆಯೊಂದು ನಿಮಗೆ ಆಸರೆಯಾಗಲಿದೆ. ತಲೆಗೆ ಪೆಟ್ಟಾಗುವ ಸಾಧ್ಯತೆ ಇದೆ ಎಚ್ಚರದಿಂದಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮ ತಿರುವು ಕಂಡು ಬರುತ್ತದೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಂದು

ಧನಸ್ಸು

ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯವಿರುತ್ತದೆ. ಅಲಂಕಾರ ಸಾಮಗ್ರಿಗಳ ವ್ಯಾಪಾರ ವ್ಯವಹಾರದಲ್ಲಿ ಲಾಭವಿದೆ. ಗುರು ಹಿರಿಯರಿಗೆ ವಿಶೇಷ ಮನ್ನಣೆ ನೀಡುವಿರಿ. ತಾಯಿಯೊಂದಿಗೆ ಇದ್ದ ಮನಸ್ತಾಪ ದೂರವಾಗಲಿದೆ. ಧ್ಯಾನ ಮಾರ್ಗದಲ್ಲಿ ನಂಬಿಕೆ ಇರುತ್ತದೆ. ಸಮಾಜದಲ್ಲಿ ನಿಮ್ಮ ಕಾರ್ಯ ದಕ್ಷತೆಗೆ ಮೆಚ್ಚುಗೆ ದೊರೆಯುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಉನ್ನತ ಮಟ್ಟ ತಲುಪುತ್ತಾರೆ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಪ್ಪು

ಮಕರ

ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳುತ್ತಾರೆ. ಹಳೆಯ ಕಾಲದ ಧಾರ್ಮಿಕ ಮಂದಿರಗಳ ಜೀರ್ಣೋದ್ಧಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿರಿ. ಆರಂಭದಲ್ಲಿ ಹಣಕಾಸಿನ ತೊಂದರೆ ಇದ್ದರೂ ಕ್ರಮೇಣವಾಗಿ ವರಮಾನ ಹೆಚ್ಚುತ್ತದೆ. ನಿಮಗೆ ಅರಿವಿಲ್ಲದೆ ತಪ್ಪು ನಿರ್ಧಾರಗಳನ್ನು ಕೈಗೊಳ್ಳುವಿರಿ. ಮುಂಗೋಪವಿರುತ್ತದೆ. ಕುಟುಂಬದವರ ಜೊತೆ ಪ್ರವಾಸ ಮಾಡಲು ಇಷ್ಟಪಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ಕುಂಭ

ಬೇಡದ ವಿಚಾರಗಳಿಗೆ ಹಣ ಖರ್ಚು ಮಾಡಬೇಕಾಗುತ್ತದೆ. ಮನೆಯಲ್ಲಿ ಸಾಕಿರುವ ಪ್ರಾಣಿಗಳ ಕಾಳಜಿ ಮಾಡುವಿರಿ. ಯಾವುದೇ ತೊಂದರೆ ಬಂದರೂ ಮಾತಿನಿಂದಲೇ ಸಮಸ್ಯೆ ಬಗೆಹರಿಸಿಕೊಳ್ಳುವಿರಿ. ದಂಪತಿ ನಡುವೆ ಇದ್ದ ಮನಸ್ತಾಪ ದೂರವಾಗುವುದು. ವಿಶ್ರಾಂತಿ ಬಯಸಿ ಕುಟುಂಬದ ಹಿರಿಯರು ಉದ್ಯೋಗ ತೊರೆಯುತ್ತಾರೆ. ಧಾರ್ಮಿಕ ಕ್ರಿಯಾ ವಿಧಿಗಳಲ್ಲಿ ಹೆಚ್ಚಿನ ನಂಬಿಕೆ ಇರುತ್ತದೆ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನಸು ಗೆಂಪು

ಮೀನ

ಬುದ್ಧಿವಂತಿಕೆಯಿಂದ ಕಷ್ಟಗಳಿಂದ ಪಾರಾಗುವಿರಿ. ಅತಿಯಾದ ಮಾತುಕತೆ ಕೇಳುಗರಲ್ಲಿ ಬೇಸರ ಮೂಡಿಸಬಹುದು. ಹಟದಿಂದ ನಿಮ್ಮ ಕಾರ್ಯ ಸಾಧಿಸಿ ಕೊಳ್ಳುವಿರಿ. ನಿಮ್ಮ ತಾಯಿಯ ಪರೋಪಕಾರದ ಬುದ್ಧಿ ನಿಮಗೆ ಬರುತ್ತದೆ. ಹಣಕಾಸಿನ ತೊಂದರೆ ಇರುವುದಿಲ್ಲ. ಆದರೂ ಹಣದ ಬಗ್ಗೆ ಸಂತೃಪ್ತಿ ಇರುವುದಿಲ್ಲ. ಹೆಚ್ಚಿನ ವಿದ್ಯಾಭ್ಯಾಸದ ಸಲುವಾಗಿ ಪರಸ್ಥಳಕ್ಕೆ ತೆರಳುವ ಸೂಚನೆಗಳಿವೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 6

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).