ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಹೊಸ ವಾಹನ ಕೊಳ್ಳಲಿದ್ದೀರಿ, ಅತಿಯಾದ ಕೋಪ ತೊಂದರೆಗೆ ಸಿಲುಕುವ ಸಾಧ್ಯತೆ; ನಾಳೆಯ ದಿನ ಭವಿಷ್ಯ

Tomorrow Horoscope: ಹೊಸ ವಾಹನ ಕೊಳ್ಳಲಿದ್ದೀರಿ, ಅತಿಯಾದ ಕೋಪ ತೊಂದರೆಗೆ ಸಿಲುಕುವ ಸಾಧ್ಯತೆ; ನಾಳೆಯ ದಿನ ಭವಿಷ್ಯ

9th June 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (9th June 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಭಾನುವಾರ

ತಿಥಿ: ತದಿಗೆ 04.05 ರವರೆಗೂ ಇರುತ್ತದೆ ನಂತರ ಚೌತಿ ಆರಂಭವಾಗುತ್ತದೆ.

ನಕ್ಷತ್ರ : ಪುನರ್ವಸು ನಕ್ಷತ್ರ ರಾತ್ರಿ 09.11 ರವರೆಗೂ ಇದ್ದು ನಂತರ ಪುಷ್ಯ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.44

ರಾಹುಕಾಲ: ಸಂಜೆ 05.11 ರಿಂದ ಸ. 06.47

ರಾಶಿ ಫಲ

ಮೇಷ

ಉದ್ಯೋಗ ಅರಸುತ್ತಿರುವವರಿಗೆ ಇಷ್ಟ ಪಟ್ಟ ಉದ್ಯೋಗ ದೊರೆಯುತ್ತದೆ. ವಿದ್ಯಾರ್ಥಿಗಳು ತಮ್ಮ ಹಾದಿಯಲ್ಲಿ ಅಡೆತಡೆಗಳನ್ನು ಎದುರಿಸಿದರೂ ಯಾವುದೇ ತೊಂದರೆ ಆಗುವುದಿಲ್ಲ. ವಿದ್ಯಾರ್ಥಿಗಳು ಪಠ್ಯೇತರ ವಿಚಾರಗಳನ್ನು ಮನಸ್ಸಿಟ್ಟು ಅಭ್ಯಾಸ ಮಾಡುವರು. ಎಲ್ಲರನ್ನು ಸಮಾನ ಭಾವನೆಯಿಂದ ಕಾಣುವಿರಿ. ಇದರಿಂದ ಕುಟುಂಬದ ಒಳಗೂ ಹೊರಗೂ ವಿಶೇಷ ಗೌರವವಿರುತ್ತದೆ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬಿಳಿ

ವೃಷಭ

ಆತಂಕದ ಪರಿಸ್ಥಿತಿಯಲ್ಲಿಯೂ ಸ್ವಂತ ನಿರ್ಧಾರಕ್ಕೆ ಬದ್ಧರಾಗುವಿರಿ. ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಗಳಿಸುವಿರಿ. ತಾಯಿಯ ಸಹಾಯದಿಂದ ಹಣಕಾಸಿನ ವಿಚಾರದಲ್ಲಿ ಪ್ರಗತಿ ಉಂಟಾಗುತ್ತದೆ. ದಿನ ಕಳೆದಂತೆ ಸಮಾಜದಲ್ಲಿ ಗೌರವದ ಸ್ಥಾನಮಾನ ಗಳಿಸುವಿರಿ. ಹೊಸ ವಾಹನ ಕೊಳ್ಳುವ ಸಾಧ್ಯತೆಗಳಿವೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬೂದು

ಮಿಥುನ

ಅನಾವಶ್ಯಕವಾಗಿ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಹಟದಿಂದ ಗುರಿ ಸಾಧಿಸುವಿರಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಒಮ್ಮೆ ತೆಗೆದುಕೊಂಡ ತೀರ್ಮಾನಗಳನ್ನು ಪದೇಪದೇ ಬದಲಾಯಿಸುವಿರಿ. ಕಷ್ಟದಲ್ಲಿ ಇದ್ದವರಿಗೆ ಸಹಾಯ ಮಾಡುವಿರಿ. ಕುಟುಂಬದಲ್ಲಿ ನಿಮ್ಮ ತಾಯಿಗೆ ವಿಶೇಷ ಗೌರವವಿರುತ್ತದೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗುತ್ತದೆ. ಅತಿಯಾದ ಕೋಪ ತೊಂದರೆಗೆ ಕಾರಣವಾಗುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ. 

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಆಕಾಶ ನೀಲಿ

ಕಟಕ

ಸಂಗಾತಿಯ ಕೋಪಕ್ಕೆ ಬೆದರಿ ಮಾಡದ ತಪ್ಪನ್ನು ನಿಮ್ಮ ಮೇಲೆ ಹಾಕಿಕೊಳ್ಳುವಿರಿ. ಆರಂಭದಲ್ಲಿ ತೊಂದರೆಯಾದರೂ ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲಿವೆ. ಮನದಲ್ಲಿ ಯಾವುದಾದರೊಂದು ಚಿಂತೆ ಇದ್ದೇ ಇರುತ್ತದೆ. ಮಕ್ಕಳ ಬಗ್ಗೆ ವಿಶೇಷ ಅಕ್ಕರೆ ಇರುತ್ತದೆ. ಅನಿರೀಕ್ಷಿತ ಧನ ಲಾಭವಿರುತ್ತದೆ. ಸದಾಕಾಲ ಒಳ್ಳೆಯ ವಿಚಾರಗಳ ಬಗ್ಗೆ ಯೋಜನೆ ರೂಪಿಸುವಿರಿ. ಒಮ್ಮೆ ತೆಗೆದುಕೊಂಡ ತೀರ್ಮಾನವನ್ನು ಬದಲಿಸುವುದಿಲ್ಲ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ :3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೆಂಪು

ಸಿಂಹ

ನೀವು ಆಡುವ ಅರ್ಥ ಇಲ್ಲದ ಮಾತುಗಳು ಕೇಳುಗರಿಗೆ ಬೇಸರ ಮೂಡುತ್ತದೆ. ನೆರೆಹೊರೆಯವರೊಂದಿಗೆ ಉತ್ತಮ ಬಾಂಧವ್ಯ ಇರುವುದಿಲ್ಲ. ಹಣಕಾಸಿನ ವಿಚಾರದಲ್ಲಿ ಸೋದರ ಅಥವಾ ಸೋದರಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಉದರಕ್ಕೆ ಸಂಬಂಧಿಸಿದ ದೋಷ ಉಂಟಾಗುತ್ತದೆ. ನೀರಿರುವ ಸ್ಥಳದಲ್ಲಿ ಎಚ್ಚರಿಕೆಯಿಂದ ಇರಿ. ಜನೋಪಕಾರಿ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಎಲೆ ಹಸಿರು

ಕನ್ಯಾ

ಕುಟುಂಬದ ಸ್ತ್ರೀಯರಿಗೆ ಸಂಬಂಧಿಸಿದ ಆಸ್ತಿಯ ವಿವಾದದಲ್ಲಿ ಯಶಸ್ಸು ದೊರೆಯುತ್ತದೆ. ಸಮಾಜದ ಗಣ್ಯ ವ್ಯಕ್ತಿಗಳ ಸಹಾಯ ಸಹಕಾರ ದೊರೆಯಲಿದೆ. ಸಂಗಾತಿಗೆ ಅನಾರೋಗ್ಯ ವಿರುತ್ತದೆ. ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಪ್ರಯತ್ನಪಡುವಿರಿ. ದುರಾಸೆ ಇರುವುದಿಲ್ಲ. ದೊರಕಿದಷ್ಟೇ ನನ್ನ ಭಾಗ್ಯ ಎಂಬ ಭಾವನೆ ಇರುತ್ತದೆ. ಉಷ್ಣವಾಯುವಿನ ದೋಷ ನಿಮ್ಮನ್ನು ಕಾಡಲಿದೆ.

ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು ನೈರುತ್ಯ

ಅದೃಷ್ಟದ ಬಣ್ಣ : ಕೇಸರಿ

ತುಲಾ

ಅನಾವಶ್ಯಕ ವಿಚಾರಗಳಿಗೆ ಯೋಚನೆ ಮಾಡುವಿರಿ. ನಿಮ್ಮ ನೇರವಾದ ನಡೆನುಡಿಯ ಕಾರಣ ವಿರೋಧಿಗಳು ಹೆಚ್ಚುತ್ತಾರೆ. ದುಡುಕದೆ ಲಾಭದಾಯಕ ಕೆಲಸ ಕಾರ್ಯಗಳನ್ನು ಮಾಡುವಿರಿ. ಮಕ್ಕಳ ವಿಚಾರವಾಗಿ ಆತ್ಮೀಯರೊಂದಿಗೆ ಮನಸ್ತಾಪ ಉಂಟಾಗುತ್ತದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಇರುತ್ತದೆ. ಪರಿಸ್ಥಿತಿಯ ಒತ್ತಡಕ್ಕೆ ಮಣಿದು ಹಣಕಾಸಿನ ವ್ಯವಹಾರವೊಂದನ್ನು ಆರಂಭಿಸುವಿರಿ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಕಂದು

ವೃಶ್ಚಿಕ

ಕೇವಲ ಕುಟುಂಬವಲ್ಲದೆ ಸಮಾಜದಲ್ಲಿಯೂ ನಿಮಗೆ ವಿಶೇಷ ಗೌರವ ದೊರೆಯುತ್ತದೆ. ನಿಮ್ಮ ತಾಯಿಗೆ ಶೀತ ಅಥವಾ ಕಫದ ದೋಷ ಉಂಟಾಗುತ್ತದೆ. ವಿದ್ಯಾರ್ಥಿಗಳು ದೊಡ್ಡಮಟ್ಟದ ಸಾಧನೆ ಮಾಡುತ್ತಾರೆ. ಮಹಿಳೆಯರಾದಲ್ಲಿ ತಪ್ಪಿಲ್ಲದಿದ್ದರೂ ವಿವಾದಕ್ಕೆ ಸಿಲುಕುವಿರಿ. ಸದಾ ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡುವಿರಿ. ಆರಂಭಿಸುವ ಕೆಲಸ ಕಾರ್ಯಗಳಲ್ಲಿ ಆರಂಭದಲ್ಲಿ ಅಡಚಣೆ ಎದುರಾಗುತ್ತದೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕೆಂಪು

ಧನಸ್ಸು

ವಿರೋಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುತ್ತಾರೆ. ಮಕ್ಕಳಿಗೆ ಎಲ್ಲಾ ರೀತಿಯ ಸೌಕರ್ಯವನ್ನು ಕಲ್ಪಿಸುವಿರಿ. ವಿದ್ಯಾರ್ಥಿಗಳು ವಿಶೇಷವಾದ ಸಾಧನೆ ಮತ್ತು ಗೌರವಕ್ಕೆ ಪಾತ್ರರಾಗುತ್ತಾರೆ. ದೈಹಿಕ ದೌರ್ಬಲ್ಯ ನಿಮ್ಮನ್ನು ಕಾಡಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ಆದರೆ ಆದಾಯದಲ್ಲಿಯೂ ಚೇತರಿಕೆ ಕಂಡು ಬರಲಿದೆ. ಆತ್ಮೀಯರಿಗೆ ಕಷ್ಟದ ಸಂದರ್ಭದಲ್ಲಿ ಸಹಾಯ ಹಸ್ತ ನೀಡುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಿತ್ತಳೆ

ಮಕರ

ಕಲುಷಿತ ಆಹಾರ ಸೇವನೆಯಿಂದ ತೊಂದರೆ ಉಂಟಾಗಬಹುದು. ಅವಶ್ಯಕವಿಲ್ಲದ ಕೆಲಸ ಕಾರ್ಯಗಳಿಗೆ ಹಣ ಖರ್ಚು ಮಾಡುವಿರಿ. ಕೋಪದಲ್ಲಿ ತಪ್ಪು ಮಾಡಿ ನಂತರ ಪಶ್ಚಾತಾಪ ಪಡುವಿರಿ. ಮುಖ್ಯವಾಗಿ ಗೃಹಿಣಿಯರು ಆರೋಗ್ಯದ ಬಗ್ಗೆ ಗಮನವಹಿಸಬೇಕು. ಆತ್ಮೀಯ ಸ್ನೇಹಿತರೊಬ್ಬರು ನಿಮ್ಮ ತಪ್ಪನ್ನು ತಿದ್ದುತ್ತಾರೆ. ಯಾವುದೇ ವಿಚಾರದಲ್ಲೂ ಧೃಡ ನಿಲುವನ್ನು ತೆಗೆದುಕೊಳ್ಳುವುದಿಲ್ಲ.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಳದಿ

ಕುಂಭ

ಸಭೆ ಸಮಾರಂಭಗಳಲ್ಲಿ ಮೌನದಿಂದ ವರ್ತಿಸುವಿರಿ. ಹಣದ ತೊಂದರೆ ಇರುವುದಿಲ್ಲ. ರುಚಿಕರವಾದ ಭೋಜನವನ್ನು ಇಷ್ಟಪಡುವಿರಿ. ಮನಸ್ಸಿನಲ್ಲಿ ಯಾವುದೋ ಒಂದು ಚಿಂತೆ ಮನೆ ಮಾಡಿರುತ್ತದೆ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳು ನಿಮ್ಮ ಪರವಾಗಿರುತ್ತಾರೆ. ಕಣ್ಣಿನ ದೋಷ ಇರುತ್ತದೆ. ನಿಷ್ಠೆಯಿಂದ ನಿಮ್ಮ ಕೆಲಸ ಕಾರ್ಯಗಳನ್ನು ಪೂರೈಸುವಿರಿ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹಸಿರು

ಮೀನ

ಅನಿರೀಕ್ಷಿತ ಶುಭ ಫಲಗಳು ದೊರೆಯುತ್ತವೆ. ಬಂಧು ಬಳಗದವರ ಜೊತೆ ಉತ್ತಮ ಬಾಂಧವ್ಯ ಇರುತ್ತದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಪ್ರಗತಿ ಕಂಡುಬರುತ್ತದೆ. ಮನೆಗೆ ಬೇಕಾದ ಅಲಂಕಾರದ ವಸ್ತುಗಳಿಗೆ ಹೆಚ್ಚು ಹಣ ಖರ್ಚು ಮಾಡುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಕುಟುಂಬದವ ಜೊತೆಯಲ್ಲಿ ದೀರ್ಘಕಾಲದ ಪ್ರವಾಸಕ್ಕೆ ತೆರಳುವಿರಿ. ಕಲಾವಿದರಿಗೆ ಉತ್ತಮ ಅವಕಾಶಗಳು ದೊರೆಯಲಿವೆ.

ಪರಿಹಾರ : ಕೈ ಅಥವಾ ಕಾಲಿನಲ್ಲಿ ಕಪ್ಪು ದಾರ ಧರಿಸುವುದರಿಂದ ಶುಭವಿರುತ್ತದೆ

ಅದೃಷ್ಟದ ಸಂಖ್ಯೆ 11

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ನೀಲಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).