ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ವಾಹನ ಚಾಲನೆ ಮಾಡುವಾಗ ಎಚ್ಚರವಿರಲಿ, ಬದುಕು ಏರುಪೇರಾಗಲಿದೆ; ನಾಳಿನ ದಿನಭವಿಷ್ಯ

Tomorrow Horoscope: ವಾಹನ ಚಾಲನೆ ಮಾಡುವಾಗ ಎಚ್ಚರವಿರಲಿ, ಬದುಕು ಏರುಪೇರಾಗಲಿದೆ; ನಾಳಿನ ದಿನಭವಿಷ್ಯ

25th June 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ. ನಾಳೆಯ ದಿನ ಭವಿಷ್ಯ ಹೀಗಿದೆ.

ವಾಹನ ಚಾಲನೆ ಮಾಡುವಾಗ ಎಚ್ಚರವಿರಲಿ, ಬದುಕು ಏರುಪೇರಾಗಲಿದೆ; ನಾಳಿನ ದಿನಭವಿಷ್ಯ
ವಾಹನ ಚಾಲನೆ ಮಾಡುವಾಗ ಎಚ್ಚರವಿರಲಿ, ಬದುಕು ಏರುಪೇರಾಗಲಿದೆ; ನಾಳಿನ ದಿನಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (25th June 2024 Horoscope)

ನಾಳಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣಪಕ್ಷ, ಮಂಗಳವಾರ

ತಿಥಿ: ಚತುರ್ಥಿ ರಾತ್ರಿ 12.51ರವರೆಗೂ ಇದ್ದು ಅನಂತರ ಪಂಚಮಿ ಆರಂಭವಾಗುತ್ತದೆ.

ನಕ್ಷತ್ರ: ಶ್ರವಣ ನಕ್ಷತ್ರವು ಸಂಜೆ 4.37 ರವರೆಗೆ ಇದ್ದು ಅನಂತರ ಧನಿಷ್ಠ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಿಗ್ಗೆ 5.54

ಸೂರ್ಯಾಸ್ತ: ಸಂಜೆ 6.48

ರಾಹುಕಾಲ: ಬೆಳಿಗ್ಗೆ 3.37 ರಿಂದ ಸಂಜೆ 5.13

ನಾಳಿನ ವಿಶೇಷ ಅಂಗಾರಕ ಸಂಕಷ್ಠಹರ ಚತುರ್ಥಿ. ಚಂದ್ರೋದಯ ರಾತ್ರಿ: 10.06

ಮೇಷ

ಸಮಾಜದಲ್ಲಿ ಉನ್ನತ ಗೌರವ ಪಡೆಯಲು ಪ್ರಯತ್ನಿಸುವಿರಿ. ನಿಮ್ಮ ನಿರೀಕ್ಷೆಯಂತೆ ಕೆಲಸ ಕಾರ್ಯಗಳು ಸುಗಮವಾಗಿ ನಡೆಯುವುದಿಲ್ಲ. ಬೇರೆಯವರ ಹಣಕಾಸಿನ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿ ತೊಂದರೆಗೆ ಸಿಲುಕುವಿರಿ. ನಿಮಗಿರುವ ಕಾರ್ಯದಕ್ಷತೆಗೆ ತಕ್ಕನಾದ ಫಲಿತಾಂಶವನ್ನು ಗಳಿಸುವಿರಿ.

ಪರಿಹಾರ: ಬಡ ರೋಗಿಗಳಿಗೆ ಹಣ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿಬಣ್ಣ

ವೃಷಭ

ಮಕ್ಕಳಿಗೆ ಮನಸ್ಸಿನಲ್ಲಿ ಭೀತಿ ಆವರಿಸಿರುತ್ತದೆ. ಧಾರ್ಮಿಕ ಗುರುಗಳ ಬೋಧನೆಯನ್ನು ನಿತ್ಯ ಜೀವನಕ್ಕೆ ಅಳವಡಿಸಿಕೊಳ್ಳುವಿರಿ. ಸಂಘ ಸಂಸ್ಥೆಯ ಒಡೆತನ ನಿಮಗೆ ದೊರೆಯುತ್ತದೆ. ಜೀವನದಲ್ಲಿ ಸ್ಥಿರತೆ ಇರದೆ ಏರುಪೇರು ಎದುರಾಗುತ್ತದೆ.

ಪರಿಹಾರ: ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಮಿಥುನ

ಈ ಕಾರಣದಿಂದ ಮಾನಸಿಕ ಒತ್ತಡ ಇರುವುದಿಲ್ಲ. ಇರುವ ವಾಹನವನ್ನು ವಿಲೇವಾರಿ ಮಾಡಿ ಹೊಸ ವಾಹನಕೊಳ್ಳುವಿರಿ. ಅತಿಯಾದ ಖರ್ಚು ವೆಚ್ಚ ಜೀವನದ ಹಾದಿಯನ್ನು ಬದಲಿಸುತ್ತದೆ. ಕಾನೂನು ಚೌಕಟ್ಟಿನಲ್ಲಿ ಇರುವ ವಿವಾದಗಳನ್ನು ಗೆಲ್ಲುವಿರಿ. ಯಾರನ್ನೂ ಸುಲಭವಾಗಿ ನಂಬುವುದಿಲ್ಲ.

ಪರಿಹಾರ: ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಕಟಕ

ನಿಮ್ಮಲ್ಲಿ ಯಾವುದೇ ಆಸೆ ಆಕಾಂಕ್ಷಿಗಳು ಇರುವುದಿಲ್ಲ, ನಿಷ್ಕಪಟಿಗಳು. ಸಮಾಜದಲ್ಲಿ ವಿಶೇಷ ಕೀರ್ತಿ ಲಭಿಸುತ್ತದೆ. ಅಗೋಚರ ಶಕ್ತಿಯ ಬೆಂಬಲ ನಿಮಗಿರುತ್ತದೆ. ಗೃಹಿಣಿಯರ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಎಂತಹ ಸಂದರ್ಭವೆಂದರೂ ನಂಬಿಕೆ ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಸಫಲರಾಗುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಆಕಾಶ ನೀಲಿ ಬಣ್ಣ

ಸಿಂಹ

ದಾಂಪತ್ಯ ಜೀವನವು ಸಾಮಾನ್ಯವಾಗಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ವಿಶೇಷ ಲಾಭ ಗಳಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ಕಾನೂನಿನ ವಿಚಾರಗಳ ಬಗ್ಗೆ ಎಚ್ಚರವಿರಲಿ. ನೀವು ಮಾಡುವ ಕೆಲಸವೆಲ್ಲವೂ ಸರಿ ಎಂಬ ಭಾವನೆ ಇರುತ್ತದೆ. ಸಮಯವನ್ನು ವ್ಯರ್ಥ ಮಾಡದೆ ಯಾವುದಾದರೊಂದು ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಕನ್ಯಾ

ಮನದಲ್ಲಿ ಸದಾ ಬದಲಾವಣೆಗಳನ್ನು ನಿರೀಕ್ಷಿಸುವಿರಿ. ಧಾರ್ಮಿಕ ಕಾರ್ಯಗಳಿಂದ ಶುಭಫಲಗಳು ದೊರೆಯುತ್ತವೆ. ನಿಮ್ಮ ಮನಸ್ಸಿಗೆ ಹತ್ತಿರವಾದವರನ್ನು ಸದಾ ಕಾಲ ರಕ್ಷಿಸುವಿರಿ. ಉದಾರಿಗಳು. ನಿಮಗೆ ಮೃದುವಾದ ಮನಸ್ಸಿರುತ್ತದೆ. ಜೀವನದಲ್ಲಿ ದಿಢೀರನೆ ಒಳ್ಳೆಯ ಬದಲಾವಣೆಗಳು ಕಂಡುಬರುತ್ತದೆ.

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಎಲೆ ಹಸಿರು ಬಣ್ಣ

ತುಲಾ

ಹಿಂದಿನ ದಿನಗಳಲ್ಲಿ ಮಾಡಿದ ಸಹಾಯವನ್ನು ನೆನೆದು ಆಪ್ತರೊಬ್ಬರು ನಿಮ್ಮಗೆ ಸಹಾಯಕ್ಕೆ ಬರುತ್ತಾರೆ. ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಬೇಕು. ನಿಮ್ಮ ತಾಯಿಯವರಿಂದ ಹಣದ ಸಹಾಯ ದೊರೆಯುತ್ತದೆ. ಯುವಕ ಯುವತಿಯರಿಗೆ ವಿಶೇಷ ಅನುಕೂಲ ದೊರೆಯುತ್ತದೆ.

ಪರಿಹಾರ: ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 10

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ವೃಶ್ಚಿಕ

ಆತ್ಮೀಯರ ಮನೆಯ ವಿವಾಹ ಕಾರ್ಯದಲ್ಲಿ ಸಹಾಯ ಮಾಡುವಿರಿ. ಸೋದರ ವರ್ಗದಿಂದ ನಿಮಗೆ ಉತ್ತಮ ಸಹಾಯ ಸಹಕಾರ ದೊರೆಯುತ್ತದೆ. ದಾಂಪತ್ಯದಲ್ಲಿ ಉತ್ತಮ ಒಡನಾಟ ಇರುತ್ತದೆ. ಅತಿಯಾಗಿ ಸಣ್ಣಗಾಗುವಿರಿ. ಅನಾವಶ್ಯಕ ಜವಾಬ್ದಾರಿಯಿಂದ ನಿಮ್ಮ ಹಣ ಖರ್ಚಾಗಬಹುದು.

ಪರಿಹಾರ: ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಧನಸ್ಸು

ಮನೆಗೆ ಬಂದ ಅತಿಥಿಗಳನ್ನು ಪ್ರೀತಿ ಗೌರವದಿಂದ ಕಾಣುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ಕಂಡುಬರುತ್ತದೆ. ಹಲವಾರು ಜನರಿಗೆ ಸಹಾಯ ಮಾಡುವಿರಿ. ದೀರ್ಘ ಕಾಲದ ಪ್ರವಾಸಕ್ಕೆ ಯೋಜನೆ ರೂಪಿಸುವಿರಿ. ಹಣಕಾಸಿನ ವ್ಯವಹಾರದ ವಿಚಾರದಲ್ಲಿ ನಿಮ್ಮನ್ನು ಗೆಲ್ಲಲು ಯಾರಿಂದಲೂ ಸಾಧ್ಯವಾಗುವುದಿಲ್ಲ. ಹಣವನ್ನು ಉಳಿಸುವಲ್ಲಿ ವಿಫಲರಾಗುವಿರಿ.

ಪರಿಹಾರ: ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಮಕರ

ಬೆನ್ನುನೋವಿನಿಂದ ಬಳಲುವಿರಿ. ಕಷ್ಟದ ಸಂದರ್ಭದಲ್ಲಿ ಹೆದರದೆ ಬುದ್ಧಿವಂತಿಕೆಯಿಂದ ಪರಿಹಾರವನ್ನು ಕಂಡುಹಿಡಿಯುವಿರಿ. ಉತ್ತಮ ಹಾಸ್ಯಪ್ರಜ್ಞೆ ಇರುತ್ತದೆ. ನಿಮ್ಮ ಮನಸ್ಸಿನಲ್ಲಿ ಚಿತ್ರ ವಿಚಿತ್ರವಾದ ಯೋಚನೆ ಇರುತ್ತದೆ. ಪ್ರಾಣಿಗಳಿಂದ ತೊಂದರೆಯಾಗಬಹುದು ಎಚ್ಚರಿಕೆ ಇರಲಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕುಂಭ

ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಪ್ರವಾಸದ ಸಲುವಾಗಿ ವಿದೇಶಕ್ಕೆ ತೆರಳುವಿರಿ. ನಿಮಗೆ ಚಂಚಲವಾದ ಮನಸ್ಸಿರುತ್ತದೆ. ಪ್ರವಾಸದ ವೇಳೆ ನಿಮಗಿಷ್ಟವೆನಿಸುವ ವಸ್ತು ಕಳುವಾಗಬಹುದು. ಆದಾಯಕ್ಕಿಂತಲೂ ಖರ್ಚು ವೆಚ್ಚಗಳು ಅಧಿಕವಾಗಿರುತ್ತದೆ. ಬೇರೆಯವರಿಂದ ಹಣವನ್ನು ಪಡೆಯುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಮೀನ

ಮನಸ್ಸಿಗೆ ಒಪ್ಪುವ ವಸ್ತುಗಳನ್ನು ದುಬಾರಿಯಾದರು ಕೊಳ್ಳುವಿರಿ. ಸಂಬಂಧಿಕರೇ ನಿಮ್ಮ ವಿರೋಧಿಗಳಾಗಿ ಮಾರ್ಪಡುತ್ತಾರೆ. ಪ್ರಾಣಿಗಳಿಗೆ ಆಹಾರದ ವ್ಯವಸ್ಥೆ ಮಾಡುವಿರಿ. ಬಂಧು-ಬಳಗದವರಿಂದ ದೂರ ಉಳಿಯಲು ಬಯಸುವಿರಿ. ಹಣಕಾಸಿನ ವ್ಯವಹಾರದಲ್ಲಿ ಬೇರೆಯವರನ್ನು ಅವಲಂಬಿಸಬೇಡಿ.

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಹಸಿರು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.