ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಹಣಕಾಸಿನ ವಿವಾದದಿಂದ ಪಾರು, ಉದ್ಯೋಗದಲ್ಲಿ ಅನುಕೂಲಕರ ಬೆಳವಣಿಗೆ; ನಾಳೆಯ ದಿನ ಭವಿಷ್ಯ

Tomorrow Horoscope: ಹಣಕಾಸಿನ ವಿವಾದದಿಂದ ಪಾರು, ಉದ್ಯೋಗದಲ್ಲಿ ಅನುಕೂಲಕರ ಬೆಳವಣಿಗೆ; ನಾಳೆಯ ದಿನ ಭವಿಷ್ಯ

25th May 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ. ನಾಳೆಯ ದಿನ ಭವಿಷ್ಯ ಹೀಗಿದೆ.

ಮೇ 25ರ ದಿನ ಭವಿಷ್ಯವನ್ನು ಇಂದೇ ತಿಳಿಯಿರಿ
ಮೇ 25ರ ದಿನ ಭವಿಷ್ಯವನ್ನು ಇಂದೇ ತಿಳಿಯಿರಿ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (25th May 2024 Horoscope)

ನಾಳಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯನ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಶನಿವಾರ

ತಿಥಿ: ಬಿದಿಗೆ ಸಂಜೆ 06.22 ರವರೆಗೂ ಇರುತ್ತದೆ. ಆನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ: ಜ್ಯೇಷ್ಠ ನಕ್ಷತ್ರವು ಬೆಳಗ್ಗೆ 10.23 ರವರೆಗು ಇರುತ್ತದೆ. ಆನಂತರ ಮೂಲ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.40

ರಾಹುಕಾಲ: ಬೆ. 09.08 ರಿಂದ ಬೆ. 10.44

ಮೇಷ ರಾಶಿ

ಉದ್ಯೋಗದ ವಿಚಾರದಲ್ಲಿ ಮನದಲ್ಲಿ ಆತಂಕದ ಭಾವನೆ ಇರುತ್ತದೆ. ಆತುರ ಪಡದೆ ಮಾಡುವ ಕೆಲಸದಲ್ಲಿ ಯಶಸ್ಸು ಲಭಿಸುತ್ತದೆ. ಸ್ನೇಹಿತರ ಜೊತೆಗೂಡಿ ಹಣಕಾಸಿನ ಸಂಸ್ಥೆಯನ್ನು ಆರಂಭಿಸುವಿರಿ. ನೂತನ ಆವಿಷ್ಕಾರದ ಗುಣದಿಂದ ಮುಂದುವರೆಯುವಿರಿ. ನಿಮ್ಮಲ್ಲಿನ ಪ್ರತಿಭಾಪ್ರದರ್ಶನಕ್ಕೆ ಒಳ್ಳೆಯ ಅವಕಾಶ ದೊರೆಯಲಿದೆ. ಬುದ್ಧಿ ಚಾತುರ್ಯದಿಂದ ಸಂಬರ್ಧಾನುಸಾರವಾಗಿ ವರ್ತಿಸುವಿರಿ. ಹಣಕಾಸಿನ ವಿವಾದವೊಂದರಿಂದ ಪಾರಾಗುವಿರಿ. ಅನುಮಾನದ ಗುಣಬೇಡ. ಸೋದರರಿಗೆ ಹಣದ ಕೊರತೆ ಇರುತ್ತದೆ. ಆರೋಗ್ಯದ ಬಗ್ಗೆ ಗಮನ ಇರಲಿ.

ಪರಿಹಾರ: ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಕಂದು ಬಣ್ಣ

ವೃಷಭ ರಾಶಿ

ಆತ್ಮೀಯರೊಬ್ಬರು ನಿಮ್ಮನ್ನು ತಪ್ಪಾಗಿ ಭಾವಿಸುತ್ತಾರೆ. ಕುಟುಂಬದಲ್ಲಿನ ಅನಾಸಕ್ತಿಯ ಮಾತುಗಳಿಂದ ಬೇಸರ ಅನುಭವಿಸುವಿರಿ. ಬದಲಾಗದ ಮನಸ್ಸಿನ ಕಾರಣ ಕೈಹಿಡಿದ ಕೆಲಸಗಳಲ್ಲಿ ಯಶಸ್ಸು ಗಳಿಸುವಿರಿ. ಭೂವ್ಯವಹಾರದಲ್ಲಿ ಎದುರಾಗುವ ತೊಂದರೆ ದೂರವಾಗುತ್ತದೆ. ಆರೋಗ್ಯದ ಬಗ್ಗೆಎಚ್ಚರಿಕೆ ಇರಲಿ. ದೂರದ ಸಂಬಂಧಿಯೊಬ್ಬರು ನಿಮ್ಮ ಆಶ್ರಯ ಬಯಸಿ ಬರಲಿದ್ದಾರೆ. ಸಾರಿಗೆವ್ಯವಸ್ಥೆಯನ್ನು ಕಲ್ಪಿಸುವ ವ್ಯಾಪಾರದಲ್ಲಿ ಆದಾಯವಿರುತ್ತದೆ. ಉದ್ಯೋಗದಲ್ಲಿ ಸ್ಥಿರತೆ ಕಂಡುಬರುತ್ತದೆ. ವಿದ್ಯಾರ್ಥಿಗಳು ನಿರೀಕ್ಷಿತ ಫಲಗಳನ್ನು ಪಡೆಯುತ್ತಾರೆ.

ಪರಿಹಾರ: ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 10

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಕಪ್ಪು

ಮಿಥುನ ರಾಶಿ

ಯಂತ್ರೋಪಕರಣಗಳಿಂದ ತೊಂದರೆ ಇರಲಿದೆ ಎಚ್ಚರವಿರಲಿ. ಉದ್ಯೋಗದಲ್ಲಿ ಬೇಸರವಿದ್ದರೂ ಉತ್ತಮ ವೇತನ ದೊರೆಯುತ್ತದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಕಲಿಕೆಯಲ್ಲಿ ಮುಂದುವರಿಯಲಿದ್ದಾರೆ. ಆಹಾರ ತಯಾರಿಕಾ ಕೇಂದ್ರವನ್ನು ಆರಂಭಿಸುವ ಆಸೆ ಪೂರ್ಣವಾಗಲಿದೆ. ಎರಡು ಅಥವ ಹೆಚ್ಚಿನ ಉದ್ಯೋಗವನ್ನು ಮಾಡುವಿರಿ. ಆದಾಯದಲ್ಲಿ ಏರಿಳಿತ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ಮಧ್ಯವರ್ತಿಗಳಾಗದಿರಿ. ವಿವಾಹಕಾರ್ಯವು ಮುಂದೂಡಲ್ಪಡುತ್ತದೆ.

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ತಿಳಿಹಸಿರು

ಕಟಕ ರಾಶಿ

ಗುರುಹಿರಿಯರನ್ನು ಗೌರವದಿಂದ ಕಾಣುವಿರಿ. ನಿಮ್ಮ ಜವಾಬ್ದಾರಿಯನ್ನು ತಪ್ಪಿಲ್ಲದಂತೆ ನಿರ್ವಹಿಸುವಿರಿ. ಉದ್ಯೋಗದಲ್ಲಿ ಅನಿರೀಕ್ಷಿತವಾದ ಉನ್ನತಿ ಇರುತ್ತದೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಯಶಸ್ವಿಯಾಗಿ ಉದ್ಯೋಗ ಗಳಿಸುವಲ್ಲಿ ಸಫಲರಾಗುತ್ತಾರೆ. ವಾಸವಿರುವ ಮನೆಯನ್ನು ಬದಲಾಯಿಸಲು ತೀರ್ಮಾನಿಸುವಿರಿ. ಕುಟುಂಬದ ಹಣಕಾಸಿನ ವ್ಯವಹಾರದಲ್ಲಿ ಅನಿರೀಕ್ಷಿತ ಬದಲಾವಣೆಗಳು ತೋರುತ್ತವೆ. ಕೃಷಿಗೊಬ್ಬರದ ವ್ಯಾಪಾರದಲ್ಲಿ ಲಾಭವಿರುತ್ತದೆ. ಯಾತ್ರಾಸ್ಥಳದ ಪ್ರವಾಸವನ್ನು ಮುದೂಡುವಿರಿ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ.

ಪರಿಹಾರ: ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಬಿಸಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ನಸುಗೆಂಪು

ಸಿಂಹ ರಾಶಿ

ನಿಮ್ಮ ಯೋಚನಾ ಹರಿಯು ಸರಿದಾರಿಯಲ್ಲಿರುತ್ತದೆ. ಪ್ರಸಕ್ತ ಸನ್ನಿವೇಶವನ್ನು ಆಧರಿಸಿ ಕೆಲಸ ಕಾರ್ಯಗಳಲ್ಲಿ ಮುನ್ನಡೆಯುವಿರಿ. ಭವಿಷ್ಯದ ಬಗ್ಗೆ ಪರಿಪಕ್ವವಾದ ಯೋಜನೆ ರೂಪಿಸುವಿರಿ. ತಪಿಲ್ಲದೆ ಹೋದರೂ ನಿತ್ಯಜೀವನದಲ್ಲಿ ಆತ್ಮೀಯರೊಬ್ಬರ ವಿರೋಧವನ್ನು ಎದುರಿಸುವಿರಿ. ಉದ್ಯೋಗದಲ್ಲಿ ನಿಮ್ಮಅನುಕೂಲಕ್ಕೆ ತಕ್ಕಂತಹ ಪರಿಸ್ಥಿತಿ ಇರುತ್ತದೆ. ಮಕ್ಕಳನ್ನು ಎಚ್ಚರಿಕೆಯಿಂದ ಗಮನಿಸಿ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ವಿಚಾರದಲ್ಲಿ ಹೊಸ ನಿರೀಕ್ಷೆಯಲ್ಲಿ ಇರುತ್ತಾರೆ. ನೆಮ್ಮದಿಯಿಂದ ಜೀವನ ನಡೆಸಲು ಸಾಕಾಗುವಷ್ಟು ಆದಾಯ ಇರುತ್ತದೆ.

ಪರಿಹಾರ: ಕೈ ಅಥವ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತಬಿಳಿ

ಕನ್ಯಾ ರಾಶಿ

ಮನದಲ್ಲಿ ಹೊಸ ಆಸೆ ಆಕಾಂಕ್ಷೆಗಳು ಮೂಡಲಿವೆ. ಗೃಹಿಣಿಯರ ನೆಚ್ಚಿನ ಆಭರಣ ಕೊಳ್ಳುವ ಆಸೆ ಸಾಕಾರಗೊಳ್ಳುತ್ತದೆ. ಸಾರಿಗೆ ಸಂಚಾರಕ್ಕೆ ಸಂಬಂಧಿಸಿದ ವೃತ್ತಿ ಇರುತ್ತದೆ. ಸುಖ ಸಂತೋಷದಿಂದ ಜೀವನ ಸಾಗಿಸುವಿರಿ. ವ್ಯಾಪಾರ ನಿರ್ವಹಣೆಗಾಗಿ ಹೊಸ ವಾಹನ ಕೊಳ್ಳುವಿರಿ. ಸಮಾಜದ ಗಣ್ಯವ್ಯಕ್ತಿಯೊಬ್ಬರ ಸಹಾಯ ದೊರೆಯುತ್ತದೆ. ಕಷ್ಟದ ವೇಳೆಯಲ್ಲಿ ಧೈರ್ಯಗೆಡದೆ ಸೂಕ್ತ ಪರಿಹಾರ ಕಂಡುಹಿಡಿಯುವಿರಿ. ವಿದ್ಯುತ್ ಉಪಕರಣಗಳನ್ನು ಕೊಳ್ಳಲು ಹೆಚ್ಚಿನ ಹಣ ವೆಚ್ಚವಾಗುತ್ತದೆ. ಮನೆಯ ದುರಸ್ತಿಯ ಕೆಲಸಕ್ಕೆ ಕೈಹಾಕುವಿರಿ.

ಪರಿಹಾರ: ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 2

ಅಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ತುಲಾ ರಾಶಿ

ಕಾನೂನುನಿನ ಅನ್ವಯ ಲೇವಾದೇವಿ ವ್ಯವಹಾರವನ್ನು ಆರಂಭಿಸುವಿರಿ. ಆತ್ಮೀಯರ ಕಷ್ಟದ ವೇಳೆ ಅವರ ಪರವಾಗಿ ಕೆಲಸ ಮಾಡುವಿರಿ. ಬಾಳಸಂಗಾತಿಯಿಂದ ಹಣದ ಸಹಾಯ ದೊರೆಯುತ್ತದೆ. ಜನಸೇವೆ ಮಾಡಲು ಅನುಕೂಲವಾಗುವ ಉದ್ಯೋಗ ದೊರೆಯುತ್ತದೆ. ಉದ್ಯೋಗದ ಹಿನ್ನೆಲೆಯಿಂದ ದೇಶ ವಿದೇಶಗಳನ್ನು ಸುತ್ತುವ ಅವಕಾಶ ದೊರೆಯುತ್ತದೆ. ಸಂಗೀತ ಭರತನಾಟ್ಯ ಬಲ್ಲವರಿಗೆ ಅವಕಾಶ ದೊರೆತು, ಅದಾಯದ ಜೊತೆಯಲ್ಲಿ ಜನಪ್ರಿಯತೆಯೂ ದೊರೆಯುತ್ತದೆ. ವಿದ್ಯಾರ್ಥಿಗಳು ನಿರೀಕ್ಷಿತ ಮಟ್ಟ ತಲುಪಲು ಹೆಚ್ಚಿನ ಪ್ರಯತ್ನ ಪಡಬೇಕಾಗುತ್ತದೆ.

ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ವೃಶ್ಚಿಕ ರಾಶಿ

ಒಮ್ಮೆ ತೆಗೆದುಕೊಂಡ ನಿರ್ಧಾರಗಳನ್ನು ಬದಲಾಯಿಸುವುದಿಲ್ಲ. ಬೇರೊಬ್ಬರ ಮಾತನ್ನೂ ಕೇಳುವುದಿಲ್ಲ. ನೇರವಾದ ನಡೆ ನುಡಿಯಿಂದ ವಿರೋಧಿಗಳು ಹೆಚ್ಚುತ್ತಾರೆ. ನಿರಾಸೆಯನ್ನು ತಡೆಯಲಾರದೆ ಕೋಪಗೊಳ್ಳುವಿರಿ. ತಂದೆಯವರ ಪ್ರಭಾವದಿಂದ ಮನೆಯ ಜವಾಬ್ದಾರಿಯನ್ನು ನಿರ್ವಹಿಸುವಿರಿ. ಉದ್ಯೋಗದಲ್ಲಿ ಬದಲಾವಣೆ ಉಂಟಾದರೂ ಯಾವುದೇ ತೊಂದರೆ ಬಾರದು. ಸೋದರನ ಜೊತೆಯಲ್ಲಿ ಪಾಲುಗಾರಿಕೆಯ ವ್ಯಾಪಾರ ಆರಂಭಿಸುವಿರಿ. ಕಾನೂನುರೀತ್ಯ ಕುಟುಂಬದ ವಿವಾದಕ್ಕೆ ಪರದೆ ಎಳೆಯುವಿರಿ. ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ದೇಹಾಲಸ್ಯ ಉಂಟಾಗುತ್ತದೆ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಆಕಾಶನೀಲಿ

ಧನಸ್ಸು ರಾಶಿ

ಉದ್ಯೋಗದಲ್ಲಿ ಅನುಕೂಲಕರ ಬೆಳವಣಿಗಗಳು ಉಂಟಾಗಲಿವೆ. ಅಧಿಕಾರದ ಜೊತೆಯಲ್ಲಿ ಕುಟುಂಬದ ಜವಾಬ್ದಾರಿಯು ಹೆಚ್ಚುತ್ತದೆ. ಸಮಾಜದಲ್ಲಿ ಗೌರವಯುತ ಸ್ಥಾನ ಮಾನ ದೊರೆಯುತ್ತದೆ. ಅಜೀರ್ಣದ ತೊಂದರೆ ಸದಾ ಕಾಡಲಿದೆ. ಹಣಕಾಸಿನ ನಿರ್ವಹಣೆಯಲ್ಲಿ ವಿಶೇಷವಾದ ಬುದ್ಧಿ ಇರುತ್ತದೆ. ಕುಟುಂಬದಲ್ಲಿ ನಡೆಯಬೇಕಿದ್ದ ವಿವಾಹಕಾರ್ಯವು ನಡೆಯಲಿದೆ. ಸ್ವಂತವಾಗಿ ಮಾಡುವ ವ್ಯಾಪಾರಲ್ಲಿ ಉತ್ತಮ ವರಮಾನ ಇರುತ್ತದೆ. ಆದಾಯವನ್ನು ಮೀರಿದ ಖರ್ಚು ವೆಚ್ಚಗಳು ನೆಮ್ಮದಿಯನ್ನು ದೂರಮಾಡುತ್ತದೆ.

ಪರಿಹಾರ: ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಮಕರ ರಾಶಿ

ಕಷ್ಟಕ್ಕೆ ಹೆದರದೆ ಪಟ್ಟು ಹಿಡಿದು ಕೆಲಸ ಮಾಡಿ ಎಲ್ಲರಿಗೂ ಮಾದರಿಯಾಗುವಿರಿ. ವೇಳೆಗೆ ಸರಿಯಾಗಿ ಯಾವುದೇ ತೀರ್ಮಾನವನ್ನು ತೆಗೆದುಕೊಳ್ಳುವುದಿಲ್ಲ. ಆಧುನಿಕ ತಂತ್ರಜ್ಞಾನದ ಅಧ್ಯಯನಕ್ಕೆ ವಿದೇಶಕ್ಕೆ ತೆರಳುವಿರಿ. ಕುಟುಂಬದ ವಿಚಾರಗಳ ಬಗ್ಗೆ ಸಂಪೂರ್ಣ ಅರಿವಿರುತ್ತದೆ. ಮಕ್ಕಳಿಗೆ ಹಣಕಾಸಿನ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಆದಾಯದ ಕೊರತೆ ನೀಗಲು ವ್ಯಾಪಾರವನ್ನು ಆರಂಭಿಸುವಿರಿ. ವಿದ್ಯಾರ್ಥಿಗಳಿಗೆ ಶುಭಸುದ್ಧಿಯೊಂದು ದೊರೆಯಲಿದೆ. ಹೊಸ ಅನ್ವೇಷಣೆಗಳ ಬಗ್ಗೆ ಆಸಕ್ತಿ ತೋರುವಿರಿ. ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಸುದೀರ್ಘವಾಗಿ ಕಾಡುತ್ತಿರುವ ಅನಾರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ.

ಪರಿಹಾರ: ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ: 10

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ

ಕುಂಭ ರಾಶಿ

ಮಾತಿನಿಂದ ಜನರ ಮನ ಗೆದ್ದು ನಿಮ್ಮ ಕೆಲಸ ಸಾಧಿಸುವಿರಿ. ಕಲುಷಿತ ನೀರಿಗೆ ಸಂಬಂಧಿಸಿದ ಅನಾರೋಗ್ಯ ಉಂಟಾಗುತ್ತದೆ. ವಿದೇಶಿ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಹಿರಿಯ ಅಧಿಕರಿಗಳ ಅನುಕಂಪವನ್ನು ಪಡೆಯುವಿರಿ. ಹಣದ ಬಗ್ಗೆ ವ್ಯಾಮೋಹ ಇರದು. ಸಂತೃಪ್ತಿಯ ಜೀವನ ನಡೆಸುವಿರಿ. ವಿದ್ಯಾರ್ಥಿಗಳು ಮೌನವಾಗಿ ತಮ್ಮ ಗುರಿ ತಲುಪಲಿದ್ದಾರೆ. ಸ್ವಂತ ವ್ಯಾಪಾರ ವಹಿವಾಟನ್ನು ಆರಂಭಿಸಿ ಯಶಸ್ಸನ್ನು ಗಳಿಸುವಿರಿ. ಸೋದರರ ವ್ಯಾಪಾರದಲ್ಲಿ ಸಹಭಾಗಿತ್ವ ಪಡೆಯುವಿರಿ. ಕಷ್ಟವಿಲ್ಲದ ಸಂಪಾದನೆಯನ್ನು ಅನುಸರಿಸುವಿರಿ. ಸತ್ಯದ ದಾರಿಯಲ್ಲಿ ನಡೆಯುವಿರಿ.

ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಕೇಸರಿ

ಮೀನ ರಾಶಿ

ಎಲ್ಲರನ್ನೂ ಸಮಾನ ಪ್ರೀತಿ ವಿಶ್ವಾಸದಿಂದ ಕಾಣುವಿರಿ. ಯಾರೊಬ್ಬರ ಸಲಹೆ ಸೂಚನೆಯನ್ನು ಪಾಲಿಸುವುದಿಲ್ಲ. ಒತ್ತಡಕ್ಕೆ ಮಣಿದು ಉದ್ಯೋಗವನ್ನು ಬದಲಿಸುವಿರಿ. ಬೇರೊಬ್ಬರ ಅಧೀನದಲ್ಲಿ ಕೆಲಸ ಮಾಡಲು ಇಚ್ಚಿಸುವುದಿಲ್ಲ. ಸ್ವತಂತ್ರವಾಗಿ ಕೆಲಸ ನಿರ್ವಹಿಸುವ ಸಲುವಾಗಿ ಸಂಸ್ಥೆಯೊಂದನ್ನು ಆರಂಭಿಸುವಿರಿ. ವಿದ್ಯಾರ್ಥಿಗಳು ನೂತನ ಸಾಧನೆ ಮಾಡಲಿದ್ದಾರೆ. ಸಮಾಜದಲ್ಲಿ ವಿಶೇಷವಾದ ಗೌರವಾದರಗಳು ಲಭ್ಯವಾಗಲಿದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಒತ್ತಾಯಪೂರ್ವಕವಾಗಿ ಪಾಲೊಳ್ಳುವಿರಿ. ತಂದೆಯಿಂದ ಬರಬೇಕಿರುವ ಆಸ್ತಿಯ ಪಾಲಿನಲ್ಲಿ ವಿವಾದ ಎದುರಾಗಲಿದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)