ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ವ್ಯಾಪಾರದಲ್ಲಿ ನಿರೀಕ್ಷೆಗೂ ಮೀರಿದ ಲಾಭ, ಸಿಡುಕುತನ ಕಡಿಮೆ ಮಾಡಿ ಜನರ ಮನಸು ಗೆಲ್ಲಿರಿ; ನಾಳೆಯ ದಿನ ಭವಿಷ್ಯ

Tomorrow Horoscope: ವ್ಯಾಪಾರದಲ್ಲಿ ನಿರೀಕ್ಷೆಗೂ ಮೀರಿದ ಲಾಭ, ಸಿಡುಕುತನ ಕಡಿಮೆ ಮಾಡಿ ಜನರ ಮನಸು ಗೆಲ್ಲಿರಿ; ನಾಳೆಯ ದಿನ ಭವಿಷ್ಯ

26th May 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ. ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳಿನ ದಿನ ಭವಿಷ್ಯ ಇಂದೇ ತಿಳಿಯಿರಿ
ನಾಳಿನ ದಿನ ಭವಿಷ್ಯ ಇಂದೇ ತಿಳಿಯಿರಿ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (26th May 2024 Horoscope)

ನಾಳಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯನ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಭಾನುವಾರ

ತಿಥಿ: ತದಿಗೆ ಸಂಜೆ 05.38 ರವರೆಗೂ ಇರುತ್ತದೆ. ಆನಂತರ ಚೌತಿ ಆರಂಭವಾಗುತ್ತದೆ.

ನಕ್ಷತ್ರ: ಮೂಲ ನಕ್ಷತ್ರವು ಬೆಳಗ್ಗೆ 10.31 ರವರೆಗೆ ಇರುತ್ತದೆ. ಆನಂತರ ಪೂರ್ವಾಷಾಡ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಿಗ್ಗೆ 05.52

ಸೂರ್ಯಾಸ್ತ ಸಂಜೆ 06.40

ರಾಹುಕಾಲ: ಸಂಜೆ 05.08 ರಿಂದ 06.43 ರವರೆಗೆ

ಮೇಷ ರಾಶಿ

ಕುಟುಂಬದಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಹೆಚ್ಚುತ್ತದೆ. ಬೇಸರವಿಲ್ಲದೆ ಎಲ್ಲರ ಸಲಹೆಯನ್ನೂ ಆಲಿಸುವಿರಿ. ಉದ್ಯೋಗದಲ್ಲಿನ ಬದಲಾವಣೆಗಳಿಂದ ಅನುಕೂಲಕರ ವಾತಾವರಣ ಉಂಟಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆಯನ್ನು ಮೀರಿದ ಲಾಭ ದೊರೆಯುವುದು. ವಿದ್ಯಾರ್ಥಿಗಳಲ್ಲಿ ಹೊಸ ವಿಚಾರ ಕಲಿಯುವ ಆಸೆ ಮೂಡುತ್ತದೆ. ಅಪರೂಪದ ಪ್ರತಿಭೆ ನಿಮ್ಮಲ್ಲಿದ್ದು, ಎಲ್ಲರ ಗಮನ ಸೆಳೆಯುವಿರಿ. ತಾಯಿಗೆ ತವರಿನಿಂದ ಹಣದ ಸಹಾಯ ದೊರೆಯುತ್ತದೆ. ಇಷ್ಟಪಟ್ಟ ವಾಹನವನ್ನು ಕೊಳ್ಳುವಿರಿ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ವೃಷಭ ರಾಶಿ

ಕುಟುಂಬದಲ್ಲಿ ಬಿಗುವಿನ ವಾತಾವರಣ ಇರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಆತಂಕದ ಪರಿಸ್ಥಿತಿ ಎದುರಾಗುತ್ತದೆ. ಖರ್ಚನ್ನು ಕಡಿಮೆ ಮಾಡುವತ್ತ ಗಮನ ನೀಡಿರಿ. ವಿದ್ಯಾರ್ಥಿಗಳು ಯಾರೊಬ್ಬರನ್ನೂ ಅವಲಂಭಿಸದೆ ಸ್ವತಂತ್ರವಾಗಿ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಕುಟುಂಬಕ್ಕೆ ಸಂಬಂಧಿಸಿದ ಭೂಮಿಯ ವಿವಾದ ಎದುರಾಗಲಿದೆ. ರಾಜಕೀಯದಲ್ಲಿ ಪ್ರಭಾವಶಾಲಿ ಸ್ಥಾನ ದೊರೆಯುತ್ತದೆ. ಸ್ನೇಹಿತರಿಂದ ಪಡೆದ ಸಾಲದ ಹಣ ಹಿಂದಿರುಗಿಸುವಿರಿ. ಬೇರೆಯವರ ಹಣಕಾಸಿನ ವ್ಯವಹಾರದಿಂದ ದೂರ ಉಳಿಯುವಿರಿ.

ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ

ಮಿಥುನ ರಾಶಿ

ಉದ್ಯೋಗದಲ್ಲಿ ಯಾವುದೆ ಬದಲಾವಣೆ ಕಾಣುವುದಿಲ್ಲ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭವಿದೆ. ಪ್ರತಿಯೊಂದು ಕೆಲಸದಲ್ಲಿಯೂ ಲಾಭದ ನಿರೀಕ್ಷೆ ಇರುತ್ತದೆ. ವಿದ್ಯಾರ್ಥಿಗಳು ಒತ್ತಡದಲ್ಲಿ ಅಭ್ಯಾಸನಿರಗರಾಗುತ್ತಾರೆ. ಕೆಲಸವನ್ನು ಶ್ರದ್ಧೆಯಿಂದ ಮಾಡುವಿರಿ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ವರಮಾನ ದೊರೆಯುತ್ತದೆ. ಮನಸ್ಸು ಒಳ್ಳೆಯದಾದರು ಉಪಯೋಗವಿಲ್ಲ. ಭೂವ್ಯವಹಾರದಲ್ಲಿ ಲಾಭವಿದೆ. ವಂಶದ ಜಮೀನನ್ನು ಮಾರಾಟಮಾಡಿ ಹೊಸ ಮನೆಕೊಳ್ಳುವ ನಿರ್ಧಾರಕ್ಕೆ ಬರುವಿರಿ. ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ.

ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಹಳದಿ

ಕಟಕ ರಾಶಿ

ಕುಟುಂಬದ ಜವಾಬ್ದಾರಿಯುತ ಸ್ಥಾನ ನಿಮ್ಮದಾಗುತ್ತದೆ. ನಿಮ್ಮ ಜವಾಬ್ದಾರಿಯೂ ಹೆಚ್ಚುತ್ತದೆ. ಶ್ರದ್ಧೆಯಿಂದ ಧಾರ್ಮಿಕ ಕೆಲಸಗಳನ್ನು ನಿರ್ವಹಿಸುವಿರಿ. ಸಮಯ ವ್ಯರ್ಥ ಮಾಡದೆ ಉದ್ಯೋಗದಲ್ಲಿ ಹೊಸ ವಿಚಾರವನ್ನು ಕಲಿಯುವಿರಿ. ವ್ಯಾಪಾರ ವ್ಯವಹಾರದಲ್ಲಿ ಲಾಭವಿರುತ್ತದೆ. ಸಮಾಜಕ್ಕೆ ನೆರವಾಗುವ ಕೆಲಸಗಳನ್ನು ಮಾಡುವಿರಿ. ವಿದ್ಯಾರ್ಥಿಗಳು ತಮ್ಮ ವಯಸ್ಸಿನವರ ಮಧ್ಯೆ ನಾಯಕನ ಸ್ಥಾನ ಗಳಿಸುವರು. ರಾಜಕೀಯ ಪ್ರವೇಶಿಸುವ ಆಶಯ ಈಡೇರುತ್ತದೆ. ದೊರೆವ ಅವಕಾಶಗಳನ್ನು ಸರಿಯಾದ ಹಾದಿಯಲ್ಲಿ ಬಳಸುವಿರಿ. ಕೃಷಿ ಕಾರ್ಯದಿಂದ ಹೆಚ್ಚಿನ ಆದಾಯ ದೊರೆಯುತ್ತದೆ.

ಪರಿಹಾರ: ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಹಸಿರು

ಸಿಂಹ ರಾಶಿ

ತಾನೆ ದೊಡ್ಡವನೆಂಬ ಭಾವನೆ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳಲು ಪ್ರೇರೇಪಿಸುತ್ತದೆ. ನೀವು ಆಡುವ ಮಾತು ವಿವಿಧ ಅರ್ಥವನ್ನು ನೀಡುತ್ತದೆ. ನಿಮ್ಮಲ್ಲಿನ ನಿಸ್ವಾರ್ಥದ ಗುಣವು ಕುಟುಂಬದಲ್ಲಿ ನೆಮ್ಮದಿ ಉಂಟುಮಾಡುತ್ತದೆ. ಉದ್ಯೋಗದಲ್ಲಿ ಸುಲಭವಾಗಿ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ವ್ಯಾಪಾರ ವ್ಯವಹಾರಲ್ಲಿ ವಿವಾದವೊಂದು ಎದುರಾಗಲಿದೆ. ಪ್ರತಿ ವಿಷಯದಲ್ಲಿಯೂ ಅಂತಿಮ ನಿರ್ಧಾರ ತೆಗೆದುಕೊಳ್ಳುವಿರಿ. ಸ್ವಗೃಹ ಭೂಲಾಭವಿದೆ. ತಂದೆಯವರಿಂದ ಹಣದ ಸಹಾಯ ದೊರೆಯುತ್ತದೆ. ಹಣಕಾಸಿನ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ. ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ.

ಪರಿಹಾರ: ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ನೀಲಿ

ಕನ್ಯಾ ರಾಶಿ

ಕಟುವಾದ ಮಾತುಕತೆ ಕುಟುಂಬದ್ದಲ್ಲಿ ಬೇಸರ ಉಂಟುಮಾಡುತ್ತದೆ. ತಪ್ಪು ಮಾಹಿತಿಯನ್ನು ನಂಬಿ ಉದ್ಯೋಗದಲ್ಲಿ ತೊಂದರೆಯನ್ನು ಎದುರಿಸುವಿರಿ. ಆರೋಗ್ಯದಲ್ಲಿ ಏರಿಳಿತಗಳು ಇರುತ್ತವೆ. ವಿದ್ಯಾರ್ಥಿಗಳು ಸ್ಥಿರವಾದ ಮನಸ್ಸಿನಿಂದ ವ್ಯಾಸಂಗದಲ್ಲಿ ಮುಂದುವರಿಯುವರು. ಸೋದರನಿಗೆ ದೂರದ ಸ್ಥಳದಲ್ಲಿ ಉದ್ಯೋಗ ದೊರೆಯುತ್ತದೆ. ಬರಹಗಾರರಿಗೆ ವಿಶೇಷವಾದ ಗೌರವಾದರಗಳು ಲಭಿಸುತ್ತವೆ. ಭೂ ಸಂಬಂಧಿತ ವ್ಯವಹಾರಗಳನ್ನು ಆರಂಭಿಸದಿರಿ. ತಂದೆಯವರ ಜೊತೆಗೂಡಿ ಮಾಡುವ ವ್ಯಾಪಾರದಲ್ಲಿ ಆಸಕ್ತಿ ಉಂಟಾಗಲಿದೆ. ಹಣದ ವಿವಾದವೊಂದು ಆತ್ಮವಿಶ್ವಾಸವನ್ನು ಕಡಿಮೆ ಮಾಡುತ್ತದೆ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 8

ಅಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ನೇರಳೆ

ತುಲಾ ರಾಶಿ

ಕುಟುಂಬದ ಒಳಿತಿಗಾಗಿ ವಿಶ್ರಾಂತಿ ಪಡೆಯದೆ ದುಡಿಯುವಿರಿ. ಬಿಡುವಿನ ವೇಳೆಯಲ್ಲಿ ಸಮಾಜಸೇವೆಯನ್ನು ಮಾಡುವಿರಿ. ಅನಿವಾರ್ಯವಾಗಿ ಉದ್ಯೋಗವನ್ನು ಬದಲಾಯಿಸುವಿರಿ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶ ಪ್ರಯಾಣ ಮಾಡುವರು. ಯಂತ್ರೋಪಕರಣಗಳಿಂದ ತೊಂದರೆ ಉಂಟಾಗಬಹುದು ವ್ಯಾಪಾರ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಇರುತ್ತದೆ. ಸ್ನೇಹಿತರೊಂದಿಗೆ ಹಣಕಾಸಿನ ವ್ಯವಹಾರ ಮಾಡುವುದಿಲ್ಲ. ದಂಪತಿಗಳ ನಡುವೆ ಕೆಲಕಾಲ ವಿರಸವಿರುತ್ತದೆ. ಸಾಲದ ವ್ಯವಹಾರ ಮಾಡದಿರಿ. ಪ್ರಾಣಿಗಳ ಸಂರಕ್ಷೆಣೆಯ ಬಗ್ಗೆ ಆಸಕ್ತಿ ವಹಿಸುವಿರಿ.

ಪರಿಹಾರ: ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಗುಲಾಬಿ

ವೃಶ್ಚಿಕ ರಾಶಿ

ಒಮ್ಮೆ ತೆಗೆದುಕೊಂಡ ನಿರ್ಧಾರಗಳನ್ನು ಬದಲಾಯಿಸುವುದಿಲ್ಲ. ಬೇರೊಬ್ಬರ ಮಾತನ್ನೂ ಕೇಳುವುದಿಲ್ಲ. ನೇರವಾದ ನಡೆ ನುಡಿಯಿಂದ ವಿರೋಧಿಗಳು ಹೆಚ್ಚುತ್ತಾರೆ. ನಿರಾಸೆಯನ್ನು ತಡೆಯಲಾರದೆ ಕೋಪಗೊಳ್ಳುವಿರಿ. ತಂದೆಯವರ ಪ್ರಭಾವದಿಂದ ಮನೆಯ ಜವಾಬ್ದಾರಿಯನ್ನು ನಿರ್ವಹಿಸುವಿರಿ. ಉದ್ಯೋಗದಲ್ಲಿ ಬದಲಾವಣೆ ಉಂಟಾದರೂ ಯಾವುದೇ ತೊಂದರೆ ಬಾರದು. ಸೋದರನ ಜೊತೆಯಲ್ಲಿ ಪಾಲುಗಾರಿಕೆಯ ವ್ಯಾಪಾರ ಆರಂಭಿಸುವಿರಿ. ಕಾನೂನುರೀತ್ಯ ಕುಟುಂಬದ ವಿವಾದಕ್ಕೆ ಪರದೆ ಎಳೆಯುವಿರಿ. ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ದೇಹಾಲಸ್ಯ ಉಂಟಾಗುತ್ತದೆ. ವ್ಯವಸಾಯದಲ್ಲಿ ಆಸಕ್ತಿ ಮೂಡುತ್ತದೆ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಬಿಳಿ

ಧನಸ್ಸು ರಾಶಿ

ಕುಟುಂಬದಲ್ಲಿ ಹಣದ ವಿಚಾರದಲ್ಲಿ ಸಂದಿಗ್ಧತೆಯ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ಉಂಟಾಗುವ ಬದಲಾವಣೆಗಳಿಗೆ ಹೊಂದಿಕೊಳ್ಳುವಿರಿ. ವಿದ್ಯಾರ್ಥಿಗಳ ಯಶಸ್ಸಿಗೆ ಮಿತಿ ಇರದು. ಒತ್ತಡಕ್ಕಾಗಿ ಆರಂಭಿಸಿದ ವ್ಯಾಪಾರದಲ್ಲಿ ಉತ್ತಮ ಲಾಭವಿರುತ್ತದೆ. ಮಕ್ಕಳ ಮನಸ್ಸು ಸ್ಥಿಮಿತದಲ್ಲಿ ಇರುವುದಿಲ್ಲ. ಅನಾವಶ್ಯಕ ಕೋಪಕ್ಕೆ ಒಳಗಾಗುವಿರಿ. ನಿರ್ದಿಷ್ಟ ಗುರಿ ಇಲ್ಲದೆ ದೊರೆವ ಅವಕಾಶವನ್ನು ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಪ್ರೀತಿ ವಿಶ್ವಾಸದಿಂದ ವರ್ತಿಸಿದರೆ ಮನದಾಸೆಯೊಂದು ನೆರವೇರುತ್ತದೆ. ನಿತ್ಯಜೀವನಕ್ಕೆ ಸಾಕಾಗುವಷ್ಟು ಹಣವನ್ನು ಗಳಿಸುವಿರಿ. ತಂದೆಯವರ ವ್ಯಾಪಾರಕ್ಕೆ ಸಹಾಯಮಾಡುವಿರಿ.

ಪರಿಹಾರ: ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಬೂದು

ಮಕರ ರಾಶಿ

ಕುಟುಂಬದ ಹಣಕಾಸಿನ ಸಮಸ್ಯೆಯೊಂದು ಪರಿಹಾರಗೊಳ್ಳುತ್ತದೆ. ಹೊಂದಾಣಿಕೆ ಇರುವ ಕಾರಣ ಉದ್ಯೋಗದಲ್ಲಿ ಯಾವುದೇ ತೊಂದರೆ ಎದುರಾಗದು. ಸಮಾಜದಲ್ಲಿ ನಿಮಗೆ ಉನ್ನತ ಸ್ಥಾನ ಪಡೆಯುವಿರಿ. ಅತಿಯಾಸೆ ಇರದೆ ಅವಶ್ಯಕತೆ ಇರುವ ವರಮಾನಕ್ಕೆ ಸಮಾಧಾನ ಪಡುವಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ. ಸಮಯವನ್ನು ಅರಿತು ವರ್ತಿಸುವ ಕಾರಣ ವಿದ್ಯಾರ್ಥಿಗಳು ಆತಂಕದಿಂದ ದೂರ ಇರುತ್ತಾರೆ. ದಂಪತಿಗಳು ಸಂತಸದಿಂದ ಸುಖಜೀವನ ನಡೆಸುತ್ತಾರೆ. ಆಸ್ತಿಯ ವಿವಾದವು ಸಂಗಾತಿಯ ಸಹಾಯದಿಂದ ಬಗೆಹರಿಯುತ್ತದೆ.

ಪರಿಹಾರ: ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಕಂದು

ಕುಂಭ ರಾಶಿ

ಕುಟುಂಬದಲ್ಲಿ ನಿಧಾನತೆಗೆ ಪ್ರಾಧಾನ್ಯತೆ ಕಂಡುಬರುತ್ತದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆ ಕಾಣದು. ವಿದ್ಯಾರ್ಥಿಗಳು ಕಲಿಕೆಯ ಜೊತೆಯಲ್ಲಿ ಮನರಂಜನೆಯನ್ನು ಇಷ್ಟಪಡುತ್ತಾರೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ಇರದೆ ಹೋದರೂ ನಷ್ಟದ ಮಾತಿಲ್ಲ. ಬೇಸರ ಕಳೆಯಲು ಸಂತೋಷಕೂಟವನ್ನು ಏರ್ಪಡಿಸುವಿರಿ. ಮಕ್ಕಳಿಗೆ ವಿದೇಶದಲ್ಲಿ ಅಧ್ಯಯನ ಮಾಡುವ ಅವಕಾಶ ಲಭ್ಯವಾಗುತ್ತದೆ. ಬಳಸಿದ ವಾಹನವನ್ನು ವಿಲೇವಾರಿ ಮಾಡುವಿರಿ. ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಪ್ರಾಣಾಯಾಮದ ಮೊರೆ ಹೋಗುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಕಪ್ಪು

ಮೀನ ರಾಶಿ

ಧಾರ್ಮಿಕ ಕ್ರಿಯಾವಿಧಿಗಳ ವೆಚ್ಚ ಅಧಿಕವಾಗುತ್ತದೆ. ಕುಟುಂಬದ ಆಸ್ತಿಯ ವಿಚಾರಗಳಲ್ಲಿ ಸ್ಥಿರವಾದ ತೀರ್ಮಾನ ಕೈಗೊಳ್ಳುವುದಿಲ್ಲ. ಉದ್ಯೋಗದಲ್ಲಿನ ವ್ಯವಹಾರಗಳು ಸರಳಗತಿಯಲ್ಲಿ ನಡೆಯಲಿವೆ. ಉದ್ಯೋಗವನ್ನು ಉಳಿಸಿಕೊಳ್ಳಲು ಕೆಲವೊಂದು ತ್ಯಾಗವನ್ನು ಮಾಡುವಿರಿ. ಹಣದ ವ್ಯವಹಾರದಲ್ಲಿನ ತೊಂದರೆ ಮರೆಯಾಗುತ್ತದೆ. ಆತ್ಮೀಯರೊಬ್ಬರು ನಿಮ್ಮ ಮಾತನ್ನು ತಪ್ಪಾಗಿ ಅರ್ಥಮಾಡಿಕೊಳ್ಳುತ್ತಾರೆ. ಸಮಾಜ ಸೇವೆ ಮಾಡುವ ಇಂಗಿತ ವ್ಯಕ್ತಪಡಿಸುವಿರಿ.ಸಾರ್ವಜನಿಕ ಸಂಘ ಸಂಸ್ಥೆಯ ಒಡೆತನ ಲಭಿಸುತ್ತದೆ. ಖರ್ಚು ವೆಚ್ಚಗಳನ್ನು ಸರಿತೂಗಿಸಲು ಬಿಡಿವಿನ ವೇಳೆ ಸಹ ವೃತ್ತಿಯನ್ನು ಮಾಡುವಿರಿ.

ಪರಿಹಾರ: ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 10

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ನಸುಗೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)