ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ವಿದ್ಯಾರ್ಥಿಗಳಿಗೆ ವಿದೇಶ ಪ್ರಯಾಣದ ಯೋಗ, ಹಣಕಾಸಿನ ವಿಚಾರದಲ್ಲಿ ಸ್ನೇಹಿತರೊಂದಿಗೆ ಮನಸ್ತಾಪ; ನಾಳೆಯ ದಿನ ಭವಿಷ್ಯ

Tomorrow Horoscope: ವಿದ್ಯಾರ್ಥಿಗಳಿಗೆ ವಿದೇಶ ಪ್ರಯಾಣದ ಯೋಗ, ಹಣಕಾಸಿನ ವಿಚಾರದಲ್ಲಿ ಸ್ನೇಹಿತರೊಂದಿಗೆ ಮನಸ್ತಾಪ; ನಾಳೆಯ ದಿನ ಭವಿಷ್ಯ

5th May 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ. ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳಿನ ದಿನ ಭವಿಷ್ಯ ಇಂದೇ ತಿಳಿಯಿರಿ
ನಾಳಿನ ದಿನ ಭವಿಷ್ಯ ಇಂದೇ ತಿಳಿಯಿರಿ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (5th May 2024 Horoscope)

ನಾಳಿನ ಪಂಚಾಂಗ

ಶ್ರೀಕ್ರೋಧಿನಾಮ ಸಂವತ್ಸರ-ಉತ್ತರಾಯನ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಭಾನುವಾರ

ತಿಥಿ: ದ್ವಾದಶಿ ಹ. 03.25 ರವರೆಗು ಇರುತ್ತದೆ ಆನಂತರ ತ್ರಯೋದಶಿ ಆರಂಭವಾಗುತ್ತದೆ.

ನಕ್ಷತ್ರ: ಉತ್ತರಾಭಾದ್ರ ನಕ್ಷತ್ರವು ಸ. 06.04 ರವರೆಗು ಇರುತ್ತದೆ. ಆನಂತರ ರೇವತಿ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.57

ಸೂರ್ಯಾಸ್ತ: ಸಂಜೆ 06.35

ರಾಹುಕಾಲ: ಸಂಜೆ 05.04 ರಿಂದ ಸಂಜೆ 06.38

ಮೇಷ ರಾಶಿ

ಕುಟುಂಬದ ಆಂತರೀಕ ವ್ಯಾಜ್ಯಗಳು ಮಾತುಕತೆಯಿಂದ ಪರಿಹಾರವಾಗಲಿದೆ. ಹಳೆಯ ಭೂವಿವಾದವನ್ನು ಕಾನೂನಾತ್ಮಕವಾಗಿ ಪರಿಹರಿಸುವಿರಿ. ಉದ್ಯೋಗದಲ್ಲಿ ಉಂಟಾಗುವ ಬದಲಾವಣೆಗಳಿಗೆ ಹೊಂದಿಕೊಂಡು ಬಾಳುವಿರಿ. ವ್ಯಾಪಾರ ವಹಿವಾಟಿನಲ್ಲಿ ಮುಂಚಿನ ಆಸಕ್ತಿ ಇರುವುದಿಲ್ಲ. ನಯವಾದ ಮಾತಿನಿಂದ ತೊಂದರೆಯಿಂದ ಪಾರಾಗುವಿರಿ. ವಿದ್ಯಾರ್ಥಿಗಳಿಗೆ ಕಲಿಕೆಯ ಅವಧಿಯಲ್ಲಿಯೇ ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಮೃದುವಾದ ಬೆಲೆ ಬಾಳುವ ವಸ್ತುಗಳ ಖರೀದಿ ಮಾಡುವಿರಿ. ಸೋದರನ ಜೊತೆಯಲ್ಲಿ ಪಾಲುಗಾರಿಕೆಯ ವ್ಯಾಪಾರ ಆರಂಭಿಸುವಿರಿ.

ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ವೃಷಭ ರಾಶಿ

ಆತ್ಮವಿಶ್ವಾಸದಿಂದ ಕುಟುಂಬದ ನಿರ್ವಹಣೆಯಲ್ಲಿ ಯಶಸ್ವಿ ಆಗುವಿರಿ. ಸ್ವಂತ ಹಣಕಾಸಿನ ವ್ಯವಹಾರದಲ್ಲಿ ಲೋಪದೋಷ ಕಂಡುಬರುತ್ತದೆ. ನಿರೀಕ್ಷೆ ಇಲ್ಲದೆ ಹಣಕಾಸಿನ ಸಂಸ್ಥೆಯ ನಿರ್ವಹಣೆ ನಿಮ್ಮದಾಗಲಿದೆ. ಉದ್ಯೋಗದಲ್ಲಿನ ಆತಂರಿಕ ಬದಲಾವಣೆಗಳು ವಿಶೇಷವಾದ ಅನುಕೂಲ ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಮಧ್ಯಮ ಮಟ್ಟದ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಮಾನಸಿಕ ಒತ್ತಡದಿಂದ ತಪ್ಪು ನಿರ್ಧಾರ ತೆಗೆದುಕೊಳ್ಳಬಹುದು. ಎಚ್ಚರಿಕೆ ವಹಿಸಿ. ಕುಟುಂಬದ ಹಿರಿಯರ ವ್ಯಾಪಾರಕ್ಕೆ ಸಹಾಯ ಮಾಡುವಿರಿ. ವಿದ್ಯಾರ್ಥಿಗಳಿಗೆ ವಿದೇಶಪ್ರಯಾಣ ಯೋಗವಿದೆ.

ಪರಿಹಾರ: ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ : ಹಳದಿ ಬಣ್ಣ

ಮಿಥುನ ರಾಶಿ

ಕೌಟುಂಬಿಕ ಜೀವನದಲ್ಲಿ ಸಂತಸದ ವಾತಾವರಣ ನೆಲೆಸಿರುತ್ತದೆ. ಹೆಚ್ಚಿನ ವೇತನದ ನಿರೀಕ್ಷೆಯಿಂದ ಉದ್ಯೋಗವನ್ನು ಬದಲಾಯಿಸುವಿರಿ. ವ್ಯಾಪಾರ ವಹಿವಾಟಿನಲ್ಲಿ ಉತ್ತಮ ಲಾಭವಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಉತ್ತಮ ಬದಲಾವಣೆಗಳನ್ನು ಕಾಣಲಿದ್ದಾರೆ. ಉತ್ತಮ ಅನುಕೂಲತೆಗಾಗಿ ವಾಸ ಸ್ಥಳವನ್ನು ಬದಲಾಯಿಸುವಿರಿ. ಮನಸ್ಸಿಲ್ಲದೆ ಹೊಸ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ . ಸ್ನೇಹಿತರ ಜೊತೆಯಲ್ಲಿ ಹಣಕಾಸಿನ ವ್ಯವಹಾಲ್ಲಿ ಮನಸ್ತಾಪ ಉಂಟಾಗಲಿದೆ. ಅನಿವಾರ್ಯವಾಗಿ ಕುಟುಂಬದ ಹಿರಿಯರ ಕಟ್ಟುಪಾಡುಗಳಿಗೆ ಗೌರವ ನೀಡುವಿರಿ.

ಪರಿಹಾರ: ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಹಸಿರುಬಣ್ಣ

ಕಟಕ ರಾಶಿ

ಕುಟುಂಬದಲ್ಲಿ ಆರೋಗ್ಯದಲ್ಲಿ ಆತಂಕದ ಭಾವನೆ ಮನೆಮಾಡಿರುತ್ತದೆ. ಉದ್ಯೋಗದಲ್ಲಿ ಯಾವುದೆ ಅಡ್ಡಿ ಆತಂಕಗಳು ಇರುವುದಿಲ್ಲ. ಉದ್ಯೋಗವನ್ನು ಬದಲಿಸುವಿರಿ. ಸಮಾಜದಲ್ಲಿ ಉನ್ನತ ಸ್ಥಾನ ಗಳಿಸುವಿರಿ. ಆತುರದ ನಿರ್ಧಾರದಿಂದ ವ್ಯಾಪಾರ ವ್ಯವಹಾರದಲ್ಲಿ ಹಿನ್ನೆಡೆ ಉಂಟಾಗುತ್ತದೆ. ವಿದ್ಯಾರ್ಥಿಗಳು ಉನ್ನತ ಸಾಧನೆಯನ್ನು ಮಾಡುತ್ತಾರೆ. ಕುಟುಂಬದ ಎಲ್ಲರ ಪ್ರೀತಿ ಗೆಲ್ಲುವಿರಿ. ಸಂಗಾತಿಯ ಆರೋಗ್ಯದಲ್ಲಿನ ತೊಂದರೆ ದೂರವಾಗುತ್ತದೆ. ಆಡುವ ಮಾತಿನ ಮೇಲೆ ಗಮನವಿರಲಿ.

ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ ಬಣ್ಣ

ಸಿಂಹ ರಾಶಿ

ನಿಮ್ಮ ವರ್ತನೆಯಿಂದ ಕುಟುಂಬದಲ್ಲಿ ಸಂತಸವನ್ನು ಉಂಟುಮಾಡುತ್ತದೆ. ಶಾಂತಿ ಸಹನೆಯಿಂದ ಎಲ್ಲರೊಂದಿಗೆ ಬಾಳುವಿರಿ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಉಂಟಾಗುವುದಿಲ್ಲ. ನಿಮ್ಮ ಪಾತ್ರ ಇಲ್ಲದೆ ಯಾವುದೇ ಕೆಲಸ ಕಾರ್ಯಗಳು ನಡೆಯಲಾರದು. ಜನಸೇವೆಗೆ ಸಮಯ ಮೀಸಲಿಡುವಿರಿ. ಸಹೋದ್ಯೋಗಿಗಳ ಕಷ್ಟನಷ್ಟಗಳಿಗೆ ಸ್ಪಂದಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಎದುರಾಗುವ ತೊಂದರೆ ಬಹುಕಾಲ ಉಳಿಯದು.

ಪರಿಹಾರ: ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ಕನ್ಯಾ ರಾಶಿ

ಸಮಯದ ಅಭಾವದಿಂದ ಕುಟುಂಬದ ಕೆಲಸ ಕಾರ್ಯಗಳು ಅಪೂರ್ಣಗೊಳ್ಳಲಿದೆ. ವಿದೇಶಿ ನಿರ್ವಹಣೆಯ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ . ತಂದೆಯವರೊಡನೆ ಪಾಲುಗಾರಿಕೆಯಲ್ಲಿ ವ್ಯಾಪಾರ ವ್ಯವಹಾರವನ್ನು ಆರಂಭಿಸುವಿರಿ. ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ದೊರೆಯುವ ಕಾರಣ ಮಹತ್ತರ ಬದಲಾವಣೆ ಉಂಟಾಗುತ್ತದೆ. ಹಣಕಾಸಿನ ಸಹಾಯ ದೊರೆತರೆ ದೊಡ್ಡ ಸಾಧನೆ ಮಾಡಬಲ್ಲಿರಿ. ಪ್ರವಾಸವನ್ನು ಆಯೋಜಿಸುವ ವ್ಯಾಪಾರದಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ.

ಪರಿಹಾರ: ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 9

ಅಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ತುಲಾ ರಾಶಿ

ಕುಟುಂಬದ ಶಾಂತಿ ನೆಮ್ಮದಿ ಉಳಿಯುವಲ್ಲಿ ಮುಖ್ಯ ಪ್ರಾತ್ರಾ ವಹಿಸುವಿರಿ. ಆತುರದ ಬುದ್ಧಿ ನಿಮ್ಮಲ್ಲಿ ಇರುತ್ತದೆ. ಉಧ್ಯೋಗದಲ್ಲಿ ವಿಶೇಷ ಬದಲಾವಣೆ ಮತ್ತು ಉನ್ನತ ಗೌರವ ಲಭಿಸುತ್ತವೆ. ದೊರೆತ ಅವಕಾಶವನ್ನು ಬಳಸಿ ಉದ್ಯೋಗವನ್ನು ಬದಲಿಸಿ ವಿದೇಶಕ್ಕೆ ತೆರಳಬೇಕಾಗುತ್ತದೆ. ಮಹಿಳೆಯರು ಯಂತ್ರ ಸಂಬಂಧಿ ಸಂಸ್ಥೆಯ ಜೊತೆ ವ್ಯಾಪಾರದ ಒಡಂಬಳಿಕೆ ನಡೆಸುತ್ತಾರೆ. ವಿದ್ಯಾರ್ಥಿಗಳು ಅತಿಯಾದ ಆತ್ಮವಿಶ್ಚಾಸದಿಂದ ಆತಂಕದ ಕ್ಷಣವನ್ನು ಎದುರಿಸಲಿದ್ದಾರೆ. ಅನಾವಶ್ಯಕ ವಾದ ವಿವಾದಗಳಿಂದ ದೂರ ಉಳಿಯುವಿರಿ.

ಪರಿಹಾರ: ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ವೃಶ್ಚಿಕ ರಾಶಿ

ನಿಮ್ಮಲ್ಲಿನ ಧೈರ್ಯದ ಗುಣವು ಕುಟುಂಬವನ್ನು ತೊಂದರೆಗಳಿಂದ ದೂರಮಾಡಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ನಿಮ್ಮಲ್ಲಿನ ಅಚಲವಾದ ವಿಶ್ವಾಸ ಉದ್ಯೋಗದಲ್ಲಿ ಉನ್ನತ ಮಟ್ಟವನ್ನು ನೀಡುತ್ತದೆ. ಬುದ್ಧಿವಂತಿಕೆಯ ನಿರ್ಣಯಗಳಿಂದ ಹಣಕಾಸಿನ ಸಮಸ್ಯೆಯಿಂದ ಪಾರಾಗುವಿರಿ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದು ನಡೆಯಲಿದೆ. ವಿದ್ಯಾರ್ಥಿಗಳಿಗೆ ಶಿಕ್ಷರಿಂದ ದೊರೆಯುವ ಸ್ಪೂರ್ತಿ ಉನ್ನತ ಭವಿಷ್ಯ ರೂಪಿಸುತ್ತದೆ. ದುರಾಸೆ ತೋರದೆ ಅವಶ್ಯಕತೆ ಇರುವಷ್ಟು ಹಣವನ್ನು ಸಂಪಾದಿಸುವಿರಿ. ಕಷ್ಟದ ಪರಿಸ್ಥಿತಿಯಲ್ಲಿಯೂ ಹಣವನ್ನು ಉಳಿಸುವಿರಿ.

ಪರಿಹಾರ: ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಬೂದು ಬಣ್ಣ

ಧನಸ್ಸು ರಾಶಿ

ಹಠದ ಬುದ್ಧಿಯಿಂದಾಗಿ ಜನರಲ್ಲಿ ತಪ್ಪು ಅಭಿಪ್ರಾಯ ಉಂಟಾಗುತ್ತದೆ. ಕುಟುಂಬದಲ್ಲಿ ಅಸಹನೆ ಉಂಟಾಗುತ್ತದೆ . ದುಡುಕಿನ ಕಾರಣ ಉದ್ಯೋಗದ ಅವಕಾಶವೊಂದು ದೂರಾಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಒತ್ತಡದ ಸನ್ನಿವೇಶವನ್ನು ಎದುರಿಸುವಿರಿ . ಕುಟುಂಬದ ಹಿರಿಯ ವ್ಯಕ್ತಿಗಳ ಸಹಾಯ ಸಹಕಾರ ಲಭಿಸುತ್ತದೆ . ವ್ಯಾಪಾರ ವ್ಯವಹಾರದಲ್ಲಿ ಹೊಸ ಬದಲಾವಣೆಯನ್ನು ಕಾಣುವಿರಿ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಉನ್ನತ ಮಟ್ಟ ತಲುಪುವರು. ನೀರು ಅಥವಾ ವಾಹನದಿಂದ ತೊಂದರೆ ಆಗಬಹುದು ಎಚ್ಚರಿಕೆಯಿಂದ ಇರಿ.

ಪರಿಹಾರ: ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 10

ಅದೃಷ್ಟದ ದಿಕ್ಕು: ನೈರುತ್ಯ ಮತ್ತು ಉತ್ತರ

ಅದೃಷ್ಟದ ಬಣ್ಣ: ಕಂದು ಬಣ್ಣ

ಮಕರ ರಾಶಿ

ಕುಟುಂಬದ ಒತ್ತಡದಿಂದ ಪಾರಾಗಲು ಪ್ರವಾಸಕ್ಕೆ ತೆರಳುವಿರಿ. ಬಂಧು ಬಳಗದವರೊಬ್ಬರ ಮನೆಯ ಜವಾಬ್ದಾರಿಯೊಂದನ್ನು ನಿರ್ವಹಿಸುವಿರಿ. ಉದ್ಯೋಗದ ವಿಚಾರವಾಗಿ ವಿದೇಶಕ್ಕೆ ತೆರಳುವಿರಿ. ವ್ಯಾಪಾರ ವ್ಯವಹಾರದಲ್ಲಿ ಸಕಾರಾತ್ಮಕ ಬೆಳವಣಿಗೆಗಳು ಕಾಣಲಿವೆ. ಸಮಾಜದ ಗಣ್ಯ ವ್ಯಕ್ತಿಗಳ ಸ್ನೇಹ ಸಹಕಾರ ದೊರೆಯುತ್ತದೆ . ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ವಿದ್ಯಾಭ್ಯಾಸದಲ್ಲಿ ಕಳೆಯುವರು. ತಂದೆಯವರಿಗೆ ಅನಾರೋಗ್ಯವಿರುತ್ತದೆ . ಬೇಸಾಯದಲ್ಲಿ ಆಸಕ್ತಿ ಉಂಟಾಗುತ್ತದೆ. ಕಷ್ಟ ನಷ್ಟದ ವೇಳೆ ತಾಯಿಯವರಿಂದ ಹಣದ ಸಹಾಯ ದೊರೆಯುತ್ತದೆ

ಪರಿಹಾರ: ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ಈಶಾನ್ಯ ಮತ್ತು ದಕ್ಷಿಣ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಕುಂಭ ರಾಶಿ

ಕುಟುಂಬದ ವಾತಾವರಣದಲ್ಲಿ ಆತಂಕವೊಂದು ನೆಲೆಸಿರುತ್ತದೆ. ಉದ್ಯೋಗದಲ್ಲಿ ಸ್ವಂತ ನಿರ್ಣಯಗಳನ್ನು ತೆಗೆದುಕೊಳ್ಳುವಿರಿ. ಸಹೋದ್ಯೋಗಿಗಳ ಅವಕೃಪೆಗೆ ಒಳಗಾಗುವಿರಿ. ವಿದ್ಯಾರ್ಥಿಗಳ ಪ್ರಯತ್ನಕ್ಕೆ ತಕ್ಕಂತಹ ಫಲಿತಾಂಶ ದೊರೆಯುತ್ತದೆ . ಧೈರ್ಯಗೆಡದೆ ಎದುರಾಗುವ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಹಿಡಿಯುವಿರಿ. ವಿದೇಶಿ ವಿನಿಮಯದ ವ್ಯವಹಾರದಲ್ಲಿ ಲಾಭವಿರುತ್ತದೆ. ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತದೆ . ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

ಮೀನ ರಾಶಿ

ಹಣಕಾಸಿನ ವಿಚಾರದಲ್ಲಿ ಕುಟುಂಬದಲ್ಲಿ ಭಿನಾಭಿಪ್ರಾಯ ಉಂಟಾಗಲಿದೆ. ನಿಮ್ಮ ಮುಖ್ಯ ಕೆಲಸವೊಂದು ಪೂರ್ಣವಾಗದು. ಸಾರ್ವಜನಿಕ ಸಂಸ್ಥೆಯ ನಿರ್ವಹಣೆಯ ಜವಾಬ್ದಾರಿ ದೊರೆಯುತ್ತದೆ . ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಆದೇಶದಂತೆ ವಿದೇಶಕ್ಕೆ ತೆರಳುವಿರಿ . ವ್ಯಾಪಾರ ವ್ಯವಹಾರದಲ್ಲಿ ಅತಿಯಾದ ಆಸೆ ಇರದೆ ಸರಳತೆ ಇರುತ್ತದೆ. ವಂಶದ ಆಸ್ತಿಯಲ್ಲಿನ ನಿಮ್ಮ ಪಾಲನ್ನು ಮಾರಾಟ ಮಾಡುವಿರಿ. ಕೃಷಿ ಕಾರ್ಯದಲ್ಲಿ ಆಸಕ್ತಿ ಬೆಳೆಯುತ್ತದೆ.

ಪರಿಹಾರ: ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).