ಕನ್ನಡ ಸುದ್ದಿ  /  Astrology  /  Tomorrow Horoscope Astrology Prediction In Kannada 1 March 2024 Zodiac Signs Kundali News Sts

Tomorrow Horoscope: ಕುಟುಂಬದ ಸಂದಿಗ್ಧ ಪರಿಸ್ಥಿತಿಯನ್ನು ದೂರ ಮಾಡುವಿರಿ, ಉತ್ತಮ ಆರೋಗ್ಯ ಮರಳುವುದು; ಶುಕ್ರವಾರದ ದಿನಭವಿಷ್ಯ

1 March 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ಇಂದು ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ಶುಕ್ರವಾರದ ದಿನಭವಿಷ್ಯ ಹೀಗಿದೆ..

ಶುಕ್ರವಾರದ ದಿನಭವಿಷ್ಯ
ಶುಕ್ರವಾರದ ದಿನಭವಿಷ್ಯ

ನಾಳೆಯ ರಾಶಿ ಭವಿಷ್ಯ: ʼನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (Tomorrow Horoscope In Kannada, 1 March 2024)

ನಾಳಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಶುಕ್ರವಾರ

ತಿಥಿ : ಷಷ್ಠಿ ರಾ.02.59 ರವರೆಗು ಇದ್ದು ಆನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಸ್ವಾತಿ ನಕ್ಷತ್ರವು ಬೆ.09.02 ರವರೆಗೆ ಇರುತ್ತದೆ. ಆನಂತರ ವಿಶಾಖ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.36

ಸೂರ್ಯಾಸ್ತ: ಸ.06.27

ರಾಹುಕಾಲ : ಬೆ.10.30 ರಿಂದ ಮ.12.00

ರಾಶಿ ಫಲಗಳು

ಮೇಷ

ಕುಟುಂಬದಲ್ಲಿ ಸಂತಸದ ಘಳಿಗೆಯೊಂದು ಎದುರಾಗಲಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡುವಿರಿ. ತರಾತುರಿಯಲ್ಲಿ ಯಾವುದೇ ಕೆಲಸವನ್ನು ಮಾಡುವುದಿಲ್ಲ. ಹಳೆಯ ಸ್ನೇಹಿತರ ಸಹಾಯದಿಂದ ಉದ್ಯೋಗ ದೊರೆಯಲಿದೆ. ಹಿರಿಯರ ಮಾರ್ಗದರ್ಶನದಿಂದ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಗಳಿಸುವಿರಿ. ಹಣಕಾಸಿನ ವ್ಯವಹಾರ ಒಂದರಲ್ಲಿ ನಿರಾಸೆ ಉಂಟಾಗುತ್ತದೆ. ವಿದ್ಯಾರ್ಥಿಗಳು ನಿಧಾನಗತಿಯಲ್ಲಿ ಕಲಿಕೆಯನ್ನು ಮುಂದುವರೆಸುತ್ತಾರೆ. ಪ್ರಕೃತಿಯ ಸಂತಸದ ಕ್ಷಣಗಳನ್ನು ಅನುಭವಿಸಲು ಪ್ರವಾಸಕ್ಕೆ ತೆರಳುವಿರಿ. ನಿಮ್ಮದೇ ತಪ್ಪಿನಿಂದಾಗಿ ಅನಾರೋಗ್ಯ ಉಂಟಾಗಬಹುದು. ಅನಿರೀಕ್ಷಿತವಾಗಿ ಹಣದ ಸಹಾಯ ಒದಗಿ ಬರುತ್ತದೆ. ಹಣದ ಕೊರತೆ ಇದ್ದರೂ ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವಿರಿ.

ಪರಿಹಾರ : ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ವೃಷಭ

ಕ್ಷಿಪ್ರ ಗತಿಯಲ್ಲಿ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಕುಟುಂಬದಲ್ಲಿ ಎಲ್ಲರ ಮನಸ್ಸಿನ ಯೋಚನೆಯು ಒಂದೇ ಆಗಿರುತ್ತದೆ. ಚುರುಕಿನ ಬುದ್ಧಿ ಎಲ್ಲರಲ್ಲೂ ಆಶ್ಚರ್ಯ ಮೂಡಿಸುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಸ್ವಂತ ಕೆಲಸ ಕಾರ್ಯಗಳ ನಂತರ ಬೇರೆಯವರಿಗೆ ಸಹಾಯ ಮಾಡುವಿರಿ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಾಣುವುದಿಲ್ಲ. ನಿಮ್ಮ ನಿರೀಕ್ಷೆಯಂತೆ ಫಲಿತಾಂಶಗಳು ಮನಸ್ಸಿನಲ್ಲಿ ನೆಮ್ಮದಿ ಇರುತ್ತದೆ. ಕಷ್ಟಪಟ್ಟು ಹಣವನ್ನು ಉಳಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಆಸಕ್ತಿ ಇರುವುದಿಲ್ಲ. ಸಮಯ ವ್ಯರ್ಥ ಮಾಡುವ ಜನರನ್ನು ವಿರೋಧಿಸುವಿರಿ. ಮಕ್ಕಳ ಬಗ್ಗೆ ಹೆಚ್ಚಿನ ಗಮನ ನೀಡುವಿರಿ. ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಲು ಪ್ರಯತ್ನ ಮಾಡಲಿದ್ದಾರೆ. ಕೈಕಾಲುಗಳ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಮಣ್ಣಿನ ಬಣ್ಣ

ಮಿಥುನ

ಕುಟುಂಬದ ಕೆಲಸ ಕಾರ್ಯಗಳು ಪೂರ್ಣಗೊಳ್ಳುತ್ತವೆ. ಬೇರೆಯವರ ಸಹಾಯವಿಲ್ಲದೆ ಯಾವುದೇ ಕೆಲಸ ಆರಂಭಿಸುವುದಿಲ್ಲ. ಉದ್ಯೋಗದಲ್ಲಿ ಸಮಸ್ಯೆಯೊಂದು ಎದುರಾಗಲಿದೆ. ಆದರೂ ಕಿರಿಯ ಅಧಿಕಾರಿಗಳು ಸೂಕ್ತ ಪರಿಹಾರ ಸೂಚಿಸುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ನಷ್ಟಗಳು ಸರಿದೂಗಲಿವೆ. ಜನೋಪಕಾರಿ ಕೆಲಸಗಳಲ್ಲಿ ಆಸಕ್ತಿ ತೋರವಿರಿ. ಸಮಾಜದ ನಾಯಕತ್ವ ವಹಿಸುವಿರಿ. ಕಷ್ಟಕ್ಕೆಂದು ಪಡೆದ ಹಣವನ್ನು ಮರಳಿ ನೀಡುವಿರಿ. ವಿದ್ಯಾರ್ಥಿಗಳು ಸಮಯವನ್ನು ಗೌರವಿಸಿ ತಮ್ಮ ಕರ್ತವ್ಯದಲ್ಲಿ ಭಾಗಿಯಾಗುತ್ತಾರೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗುತ್ತದೆ. ಕುಟುಂಬದ ಹಣಕಾಸಿನ ಸಮಸ್ಯೆ ಬಗೆಹರಿಯುತ್ತದೆ. ಹಣದ ಮೇಲೆ ಹೆಚ್ಚಿನ ವ್ಯಾಮೋಹ ಇರುವುದಿಲ್ಲ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಕಟಕ

ಕಳೆದು ಹೋದ ಚೈತನ್ಯವನ್ನು ಮರಳಿ ಗಳಿಸಲು ಸ್ನೇಹಿತರ ಸಹಾಯ ದೊರೆಯುತ್ತದೆ. ಕುಟುಂಬದಲ್ಲಿ ನಿಧಾನಗತಿಯಲ್ಲಿ ನಡೆದ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ಕುಟುಂಬಕ್ಕೆ ನಿಮ್ಮ ಅನಿವಾರ್ಯತೆ ಹೆಚ್ಚಿನದಾಗಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ನಷ್ಟ ಉಂಟಾಗುವುದಿಲ್ಲ. ಹಣದ ಕೊರತೆ ಕಂಡು ಬಂದರೆ ಸಿಡುಕಿನಿಂದ ವರ್ತಿಸುವಿರಿ. ವಿದ್ಯಾರ್ಥಿಗಳು ಮನರಂಜನೆಯನ್ನು ಮರೆತು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒಲವು ನೀಡಲಿದ್ದಾರೆ. ನಿಮ್ಮ ಕಷ್ಟದ ನಡುವೆಯೂ ಬಂಧು ಬಳಗದವರಿಗೆ ಸಹಾಯ ಮಾಡುವಿರಿ. ಆಡುವ ಮಾತಿನ ಮೇಲೆ ಎಚ್ಚರಿಕೆ ವಹಿಸಿ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ವಿಶೇಷ ಅಧಿಕಾರ ದೊರೆಯಲಿದೆ. ಸಂಗಾತಿಯ ಜೊತೆ ಉತ್ತಮ ಸಂಬಂಧ ಏರ್ಪಡುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಸಿಂಹ

ಆತ್ಮಸ್ಥೈರ್ಯದ ಕಾರಣ ಉತ್ತಮ ಆರೋಗ್ಯ ಗಳಿಸುವಿರಿ. ಕುಟುಂಬದಲ್ಲಿನ ಕೆಲಸ ಕಾರ್ಯಗಳು ಮುಂದೂಡಲ್ಪಡುತ್ತವೆ. ಸಣ್ಣ ಪುಟ್ಟ ವಿಚಾರಗಳಿಗೂ ಭಿನ್ನಾಭಿಪ್ರಾಯ ಉಂಟಾಗಲಿದೆ. ಉದ್ಯೋಗದಲ್ಲಿ ಹಿರಿತನವನ್ನು ಆಧರಿಸಿ ಹೆಚ್ಚಿನ ಜವಾಬ್ದಾರಿಯನ್ನು ಒಪ್ಪಿಕೊಳ್ಳಬೇಕಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಯಾವುದೇ ಬದಲಾವಣೆ ಕಾಣುವುದಿಲ್ಲ. ವಿದ್ಯಾರ್ಥಿಗಳು ಹಠದ ಬುದ್ಧಿಯಿಂದ ಕಲಿಕೆಯಲ್ಲಿ ಮುಂಚೂಣಿಯಲ್ಲಿರುತ್ತಾರೆ. ಕಮಿಷನ್ ವ್ಯವಹಾರವು ಯಾವುದೇ ತೊಡಕಿಲ್ಲದೆ ನಡೆಯಲಿದೆ. ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಂಡು ನಡೆಯುವಿರಿ. ಅಪಾರ ಧೈರ್ಯವಿರುವ ಕಾರಣ ಕಷ್ಟನಷ್ಟಗಳಿಗೆ ಹೆದರುವುದಿಲ್ಲ. ಸಮಾಜದ ಗಣ್ಯ ವ್ಯಕ್ತಿಗಳ ಸಹಾಯ ನಿಮಗಿರುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಕನ್ಯಾ

ಕುಟುಂಬದಲ್ಲಿ ನೀಡಿದ ಭರವಸೆಗಳನ್ನು ಪೂರೈಸಲು ಪ್ರಯತ್ನಿಸುವಿರಿ. ಕುಟುಂಬದಲ್ಲಿ ಹೊಸತನದ ನಿರೀಕ್ಷೆ ತುಂಬಿರುತ್ತದೆ. ಮನಸ್ಸಿಲ್ಲದೆ ಹೋದರು ಅಧಿಕಾರಿಗಳ ಆದೇಶದಂತೆ ವಿದೇಶಕ್ಕೆ ತೆರಳ ಬೇಕಾಗಬಹುದು. ಉದ್ಯೋಗ ಬದಲಿಸುವ ಸಾಧ್ಯತೆ ಇಲ್ಲ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿಸಿದ ವರಮಾನ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಮಾಡಿದ ತಪ್ಪನ್ನು ಮನ್ನಿಸಿ ಸ್ನೇಹಿತರು ಸಹಾಯ ಮಾಡಲಿದ್ದಾರೆ. ಹೊಸ ವಸ್ತುಗಳನ್ನು ಕೊಳ್ಳಲು ಹಣವನ್ನು ಖರ್ಚು ಮಾಡುವಿರಿ. ನಿಮ್ಮ ತಪ್ಪಿಗೂ ಬೇರೆಯವರನ್ನು ದೂಷಿಸುವಿರಿ. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಬದಲಿಸದಿರಿ. ಉದ್ಯೋಗದಲ್ಲಿ ಮೇಲುಗೈ ಸಾಧಿಸುವಿರಿ. ಅತಿಯಾದ ಆಹಾರ ಸೇವನೆಯಿಂದ ಅನಾರೋಗ್ಯ ಸಂಭವಿಸಬಹುದು. ಬೇಸರ ಕಡೆಯಲು ಮನರಂಜನೆಯನ್ನು ಆಶ್ರಯಿಸುವಿರಿ.

ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಸಿರು ಬಣ್ಣ

ತುಲಾ

ನಿಮ್ಮಲ್ಲಿರುವ ಗುಣ ಧರ್ಮದಿಂದ ಎಲ್ಲರನ್ನೂ ಆಕರ್ಷಿಸುವಿರಿ. ಕುಟುಂಬದ ಕೆಲಸ ಕಾರ್ಯಗಳು ಸರಾಗವಾಗಿ ನಡೆಯಲಿವೆ. ಒಟ್ಟಾರೆ ನೆಮ್ಮದಿಯ ಜೀವನ ನಡೆಸುವಿರಿ. ಉದ್ಯೋಗದಲ್ಲಿ ನಿಮ್ಮ ಅವಗಾಹನೆಗೆ ತರದೆ ಸಹೋದ್ಯೋಗಿಗಳು ಮುಖ್ಯ ನಿರ್ಧಾರ ಕೈಗೊಳ್ಳಲಿದ್ದಾರೆ. ಇದರಿಂದ ಬೇಸರವಾಗಬಹುದು. ವ್ಯಾಪಾರ ವ್ಯವಹಾರದಲ್ಲಿ ದೊರೆಯುವ ಆದಾಯ ಆಶ್ಚರ್ಯವನ್ನು ಉಂಟು ಮಾಡುತ್ತದೆ. ವಿದ್ಯಾರ್ಥಿಗಳು ತಮ್ಮದಲ್ಲದ ವಿಚಾರಗಳಿಂದ ದೂರವಿರುತ್ತಾರೆ. ಏಕಾಂಗಿತನದಿಂದ ಕಲಿಕೆಯಲ್ಲಿ ಶ್ರದ್ದೆ ತೋರುತ್ತಾರೆ. ಸುತ್ತಮುತ್ತಲಿನ ಜನ ನಿಮ್ಮನ್ನು ಹೊಗಳಿ ಕೆಲಸ ಸಾಧಿಸುತ್ತಾರೆ. ಪ್ರತಿಕ್ಷಣದಲ್ಲಿಯೂ ಹೊಸದನ್ನು ಕಲಿತು ಎಲ್ಲರಿಗೂ ಮಾದರಿಯಾಗುವಿರಿ. ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಇರಲಿ. ತಂದೆ ಮತ್ತು ಸೋದರ ನಡುವಿನ ಮನಸ್ತಾಪವು ಕೊನೆಯಾಗಲಿದೆ..

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೀಲಿ ಬಣ್ಣ

ವೃಶ್ಚಿಕ

ಬುದ್ಧಿವಂತಿಕೆಯಿಂದ ಕುಟುಂಬದ ಸಂದಿಗ್ಧ ಪರಿಸ್ಥಿತಿಯನ್ನು ದೂರ ಮಾಡುವಿರಿ. ತಂದೆಯವರ ಜವಾಬ್ದಾರಿಯೊಂದಿಗೆ ಅವರ ಸಹಾಯವು ದೊರೆಯಲಿದೆ. ಅನಿರೀಕ್ಷಿತ ಧನ ಲಾಭವು ಆದಾಯದ ಕೊರತೆಯನ್ನು ಕಡಿಮೆ ಮಾಡುತ್ತದೆ. ಉದ್ಯೋಗದಲ್ಲಿ ಕೆಲಸ ಕಾರ್ಯಗಳ ಬಗ್ಗೆ ನೀರಸ ಪ್ರತಿಕ್ರಿಯೆ ದೊರೆಯುತ್ತದೆ. ವಿದ್ಯಾರ್ಥಿಗಳು ಒತ್ತಡಕ್ಕೆ ಮಣಿಯದೆ ಮೇಲ್ಮಟ್ಟ ತಲುಪುತ್ತಾರೆ. ಜೀವನದಲ್ಲಿ ಅನೇಕ ಪರಿವರ್ತನೆಗಳು ಸಂತೋಷ ನೀಡಲಿವೆ. ಆತ್ಮೀಯರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುವಿರಿ. ವಿಶೇಷ ಚೇತನ ಚೇತನರಿಗೆ ಹಣಕಾಸಿನ ಸೌಲಭ್ಯತೆ ದೊರೆಯುತ್ತದೆ. ಮಾನಸಿಕ ಒತ್ತಡ ಕೆಲಸ ಕಾರ್ಯಗಳ ಮೇಲೆ ಪ್ರಭಾವ ಬೀರುತ್ತದೆ. ಬೇರೆಯವರ ಹಣಕಾಸಿನ ವ್ಯವಹಾರದಲ್ಲಿ ಮಧ್ಯಸ್ಥಿಕೆ ವಹಿಸದಿರಿ.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ಧನಸ್ಸು

ಅಪರೂಪಕ್ಕೆ ಆಗಮಿಸಿದ ನೆಂಟರಿಂದ ಕುಟುಂಬದಲ್ಲಿ ನೆಮ್ಮದಿ ನೆಲೆಸುತ್ತದೆ. ಸ್ನೇಹಿತರ ಸಹಾಯದಿಂದ ಉದ್ಯೋಗವನ್ನು ಬದಲಿಸಬಹುದು. ಆತ್ಮೀಯರ ಜೊತೆ ಉದ್ದಿಮೆಯನ್ನು ಆರಂಭಿಸಲು ಒಡಂಬಳಿಕೆ ಮಾಡಿಕೊಳ್ಳುವಿರಿ. ಉತ್ತಮ ಆರೋಗ್ಯ ಮರಳುತ್ತದೆ. ಒಳ್ಳೆಯ ಕೆಲಸವನ್ನು ಮಾಡಲು ಮಕ್ಕಳಿಗೆ ಉತ್ತೇಜನ ನೀಡುವಿರಿ. ವ್ಯಾಪಾರ ವ್ಯವಹಾರಗಳು ಸುಗಮವಾಗಿ ನಡೆಯಲಿವೆ. ವಿದ್ಯಾರ್ಥಿಗಳು ಹೆಚ್ಚಿನ ನಿರೀಕ್ಷೆಯಿಂದ ವಿದ್ಯಾಭ್ಯಾಸದಲ್ಲಿ ತೊಡಗುತ್ತಾರೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಬಹುದು. ಅನಾವಶ್ಯಕ ಖರ್ಚು ವೆಚ್ಚಗಳು ಮಾನಸಿಕ ಒತ್ತಡಕ್ಕೆ ದಾರಿಯಾಗಲಿವೆ. ಯೋಜಿತ ಪ್ರವಾಸವು ರದ್ದಾಗಲಿದೆ. ತೆಗೆದುಕೊಂಡ ತೀರ್ಮಾನವೊಂದನ್ನು ಬದಲಿಸಿ ತೊಂದರೆಗೆ ಒಳಗಾಗುವಿರಿ. ಆತ್ಮೀಯರಿಂದ ಹಣದ ಸಹಾಯ ದೊರೆಯಲಿದೆ. ತಾಯಿಯ ಆರೋಗ್ಯದ ಬಗ್ಗೆ ಗಮನವಿರಲಿ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಮಕರ

ನಿಮ್ಮ ಕೆಲಸ ಕಾರ್ಯಗಳು ಕುಟುಂಬದ ಅಸಮಾಧಾನಕ್ಕೆ ಕಾರಣವಾಗಲಿದೆ. ಉದ್ಯೋಗದಲ್ಲಿ ಅನವಶ್ಯಕ ಗೊಂದಲಗಳು ಎದುರಾಗಲಿವೆ. ಬೇಸರದಿಂದ ಉದ್ಯೋಗ ಬದಲಿಸುವ ನಿರ್ಧಾರ ಮಾಡಬೇಕು. ಅನಾವಶ್ಯಕವಾದ ಚಿಂತೆಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಆರೋಗ್ಯದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾಗಲಿವೆ. ವ್ಯಾಪಾರ ವ್ಯವಹಾರಗಳು ಉತ್ತಮ ವರಮಾನ ನೀಡಲಿದೆ. ಹಣಕಾಸಿನ ತೊಂದರೆ ಕಾಣುವುದಿಲ್ಲ. ಸಂಗಾತಿ ಜೊತೆ ಇರುವ ಅನುಬಂಧ ಉತ್ತಮಗೊಳ್ಳುತ್ತದೆ. ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ವಹಿಸಬೇಕು. ಭೂವಿವಾದ ಖಿನ್ನತೆಯನ್ನು ಹೆಚ್ಚಿಸುತ್ತದೆ. ಒಮ್ಮೆ ತೆಗೆದುಕೊಂಡ ನಿರ್ಧಾರಗಳನ್ನು ಅನವಶ್ಯಕವಾಗಿ ಬದಲಿಸದಿರಿ. ಹಣಕಾಸಿನ ವ್ಯವಹಾರದಲ್ಲಿ ನಿರೀಕ್ಷಿಸಿದ ಲಾಭ ದೊರೆಯಲಿದೆ

ಪರಿಹಾರ : ತಲೆಗೆ ಹಾಲನ್ನಿಟ್ಟು ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಕುಂಭ

ಕುಟುಂಬದ ಪ್ರಮುಖ ವಿಚಾರಗಳಲ್ಲಿ ನಿರಾಸೆ ಉಂಟಾಗಲಿದೆ. ದೊರೆಯುವ ಅವಕಾಶಗಳನ್ನು ಬಳಸಿಕೊಳ್ಳಿ. ಹಿಂದಿನ ದಿನಗಳ ಸಮಸ್ಯೆ ಪರಿಹಾರವಾಗಲಿದೆ. ಉತ್ತಮ ಆರೋಗ್ಯ ಗಳಿಸಲು ಪ್ರಕೃತಿಯನ್ನು ಅವಲಂಬಿಸುವಿರಿ. ಕುಟುಂಬದ ಒಮ್ಮತದ ತೀರ್ಮಾನದ ಪ್ರಯೋಜನ ನಿಮಗಿದೆ. ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳುತ್ತದೆ. ಉದ್ಯೋಗದಲ್ಲಿ ಅನಿಶ್ಚಿತ ವಾತಾವರಣ ಉಂಟಾಗಲಿದೆ. ಸಂಯಮದಿಂದ ಯಶಸ್ಸನ್ನು ಗಳಿಸುವಿರಿ. ವ್ಯಾಪಾರ ವ್ಯವಹಾರಗಳು ಕಡಿಮೆ ಮಟ್ಟದ ಆದಾಯ ಗಳಿಸುತ್ತದೆ. ಆತ್ಮೀಯರೂ ನಿಮ್ಮ ಸಮಸ್ಯೆಗಳನ್ನು ಪರಿಹರಿಸುತ್ತಾರೆ. ವೈವಾಹಿಕ ಜೀವನದಲ್ಲಿ ಸಂತಸದ ವಾತಾವರಣ ಇರಲಿದೆ. ಬಂಧುಭಾಂದವರ ಆಗಮನದಿಂದ ಖರ್ಚು ವೆಚ್ಚಗಳು ಹೆಚ್ಚಲಿವೆ.

ಪರಿಹಾರ : ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬೂದು ಬಣ್ಣ

ಮೀನ

ಸ್ನೇಹಿತರ ಜೊತೆಯಲ್ಲಿ ಹಣಕಾಸಿನ ವಿವಾದವು ಎದುರಾಗಲಿದೆ. ಕುಟುಂಬದಲ್ಲಿನ ಒಗ್ಗಟ್ಟು ಬಹುಕಾಲ ಉಳಿಯಲಿದೆ. ಎಲ್ಲರೊಂದಿಗೆ ಚರ್ಚಿಸಿ ಮುಖ್ಯ ತೀರ್ಮಾನಗಳನ್ನು ತೆಗೆದುಕೊಳ್ಳುವಿರಿ. ಉದ್ಯೋಗದಲ್ಲಿ ನಿಮ್ಮ ಮಾತನ್ನು ಪ್ರತಿಯೊಬ್ಬರು ಗೌರವಿಸುತ್ತಾರೆ. ಕೌಟುಂಬಿಕ ವಿವಾದವು ಬಗೆಹರಿಯಲಿದೆ. ಅವಿವಾಹಿತರಿಗೆ ವಿವಾಹವಾಗಲಿದೆ. ಕಷ್ಟಪಟ್ಟು ದುಡಿದ ಹಣವನ್ನುಒಳ್ಳೆಯ ಕೆಲಸಗಳಿಗೆ ಬಳಸುವಿರಿ. ದಂಪತಿಗಳ ನಡುವೆ ಅನವಶ್ಯಕ ವಾದ ವಿವಾದಗಳು ಎದುರಾಗಲಿವೆ. ಸಂಬಂಧ ತೊರೆದು ಹೋದ ಒಬ್ಬರು ಮತ್ತೊಮ್ಮೆ ಸ್ನೇಹ ಬಯಸಿ ಬರಲಿದ್ದಾರೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಕಷ್ಟಪಟ್ಟು ಮುಂದುವರೆಯುತ್ತಾರೆ. ಕುಟುಂಬದ ಸದಸ್ಯರ ಜೊತೆಯಲ್ಲಿ ಯಾತ್ರಾಸ್ಥಳಕ್ಕೆ ಭೇಟಿ ನೀಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಂದು ಬಣ್ಣ

----------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).