Tomorrow Horoscope: ಕುಟುಂಬದ ಒಗ್ಗಟ್ಟಿಗೆ ಧಕ್ಕೆ ಬರುವ ಘಟನೆ ನಡೆಯಲಿದೆ, ಷೇರು ವ್ಯವಹಾರದಿಂದ ಲಾಭ; ನಾಳಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಕುಟುಂಬದ ಒಗ್ಗಟ್ಟಿಗೆ ಧಕ್ಕೆ ಬರುವ ಘಟನೆ ನಡೆಯಲಿದೆ, ಷೇರು ವ್ಯವಹಾರದಿಂದ ಲಾಭ; ನಾಳಿನ ದಿನಭವಿಷ್ಯ

Tomorrow Horoscope: ಕುಟುಂಬದ ಒಗ್ಗಟ್ಟಿಗೆ ಧಕ್ಕೆ ಬರುವ ಘಟನೆ ನಡೆಯಲಿದೆ, ಷೇರು ವ್ಯವಹಾರದಿಂದ ಲಾಭ; ನಾಳಿನ ದಿನಭವಿಷ್ಯ

10th April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ. ನಾಳೆಯ ದಿನ ಭವಿಷ್ಯ ಹೀಗಿದೆ.

ಏಪ್ರಿಲ್‌ 10ರ ದಿನಭವಿಷ್ಯ
ಏಪ್ರಿಲ್‌ 10ರ ದಿನಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಸಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವುದು ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀಲವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್‌. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (10th April 2024 Horoscope)

ನಾಳಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯನ, ವಸಂತ ಋತು, ಚೈತ್ರ ಮಾಸ, ಶುಕ್ಲಪಕ್ಷ, ಬುಧವಾರ

ತಿಥಿ: ಬಿದಿಗೆ ರಾತ್ರಿ 7.59 ರವರೆಗೂ ಇರುತ್ತದೆ. ಅನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ: ಅಶ್ವಿನಿ ನಕ್ಷತ್ರವು ಬೆಳಿಗ್ಗೆ 6.57 ರವರೆಗೂ ಇರುತ್ತದೆ. ಉಪರಿ ಭರಣಿ ನಕ್ಷತ್ರ ಇರುತ್ತದೆ.

ಸೂರ್ಯೋದಯ: ಬೆಳಿಗ್ಗೆ 6.09

ಸೂರ್ಯಾಸ್ತ: ಸಂಜೆ 6.31

ರಾಹುಕಾಲ: ಬೆಳಿಗ್ಗೆ 12.00 ರಿಂದ ಮಧ್ಯಾಹ್ನ 1.30

ಮೇಷ

ಕೈ ಹಿಡಿದ ಕೆಲಸ ಕಾರ್ಯದಲ್ಲಿ ಯಶಸ್ಸು ಲಭಿಸುತ್ತದೆ. ಉನ್ನತ ವಿದ್ಯಾಭ್ಯಾಸಕ್ಕೆ ಉತ್ತಮ ಅವಕಾಶ ದೊರೆಯಲಿದೆ. ತಾಯಿಯವರಿಗೆ ಸೇರಿದ ಆಸ್ತಿಯ ವಿವಾದ ಪರಿಹರಿಸುವಿರಿ. ವಾದ ವಿವಾದಗಳಿಗೆ ಹೆದರುವುದಿಲ್ಲ. ಶಾಂತಿಯ ಮಾತುಕತೆ ಸುಖಜೀವನಕ್ಕೆ ಕಾರಣವಾಗುತ್ತದೆ.

ಪರಿಹಾರ: ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ವೃಷಭ

ಕುಟುಂಬದ ಒಗ್ಗಟ್ಟಿಗೆ ಧಕ್ಕೆ ಬರುವ ಘಟನೆ ನಡೆಯಲಿದೆ. ಸತತ ಪ್ರಯತ್ನದಿಂದ ಕೈಹಿಡಿದ ಕೆಲಸಗಳಲ್ಲಿ ಯಶಸ್ಸು ಗಳಿಸುವಿರಿ. ಷೇರಿನ ವ್ಯವಹಾರದಲ್ಲಿ ಆದಾಯವಿರುತ್ತದೆ. ವಿವಾಹ ಯೋಗವಿದೆ. ಉದ್ಯೋಗದಲ್ಲಿ ಸ್ಥಿರತೆ ಕಂಡುಬರುತ್ತದೆ. ವಿದ್ಯಾರ್ಥಿಗಳು ನಿರೀಕ್ಷಿತ ಫಲಗಳನ್ನು ಪಡೆಯುತ್ತಾರೆ.

ಪರಿಹಾರ: ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಮಿಥುನ

ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಉನ್ನತ ಅಧ್ಯಯನವನ್ನು ಆರಂಭಿಸಲಿದ್ದೀರಿ. ಉದ್ಯೋಗದಲ್ಲಿ ಸಾಧಾರಣ ಮಟ್ಟದ ಬದಲಾವಣೆಗಳು ಉಂಟಾಗಲಿವೆ. ಹಣದ ಕೊರತೆ ಕಡಿಮೆ ಮಾಡಲು ಒಂದಕ್ಕಿಂತಲೂ ಹೆಚ್ಚಿನ ಉದ್ಯೋಗವನ್ನು ಮಾಡಲಿದ್ದೀರಿ. ಬೇರೆಯವರ ಹಣಕಾಸಿನ ವಿಚಾರದಲ್ಲಿ ಸಾಕ್ಷೀದಾರರಾಗದಿರಿ. ಅವಿವಾಹಿತರಿಗೆ ವಿವಾಹಯೋಗವಿದೆ.

ಪರಿಹಾರ: ಪುಟ್ಟ ಮಕ್ಕಳಿಗೆ ಬೆಣ್ಣೆ ನೀಡಿ ಇಂದಿನ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬೂದು ಬಣ್ಣ

ಕಟಕ

ಸಮಯಕ್ಕೆ ತಕ್ಕಂತಹ ತೀರ್ಮಾನದಿಂದ ವಿವಾದವಿಲ್ಲದೆ ಜೀವನ ನಡೆಸುವಿರಿ. ಒಳ್ಳೆಯ ಅವಕಾಶ ದೊರೆತು ಉದ್ಯೋಗವನ್ನು ಬದಲಾಯಿಸುವ ಸಾಧ್ಯತೆ ಇದೆ. ದಿನಬಳಕೆಯ ಪದಾರ್ಥಗಳ ವ್ಯಾಪಾರದಲ್ಲಿ ಹೆಚ್ಚಿನ ಆದಾಯ ಗಳಿಸುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆಯಲ್ಲಿ ದೀರ್ಘಕಾಲದ ಪ್ರವಾಸ ಆಯೋಜಿಸುವಿರಿ. ಷೇರಿನ ವ್ಯವಹಾರದಲ್ಲಿ ಲಾಭವಿದೆ.

ಪರಿಹಾರ: ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವುದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಕಂದು ಬಣ್ಣ

ಸಿಂಹ

ದಂಪತಿಗಳ ನಡುವೆ ಉತ್ತಮ ಅನುಬಂಧ ಇರಲಿದೆ. ವಂಶಾನುಗತವಾದ ವಿದ್ಯೆಯೊಂದರ ಆಸರೆ ದೊರೆಯುತ್ತದೆ. ಉದ್ಯೋಗದಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ವಯೋವೃದ್ಧರ ಆರೋಗ್ಯ್ಕವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿ. ತಂದೆಯ ಒಡೆತನದ ಸಂಸ್ಥೆ ವಿವಾದಕ್ಕೆ ಸಿಲುಕಬಹುದು.

ಪರಿಹಾರ: ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣುಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ : ಕಪ್ಪು ಬಣ್ಣ

ಕನ್ಯಾ

ಕುಟುಂಬದಲ್ಲಿನ ಬದಲಾವಣೆಗಳು ಶಾಂತಿ ನೆಲೆಸಲು ಕಾರಣವಾಗಲಿದೆ. ಸಮಾಜದ ಗಣ್ಯವ್ಯಕ್ತಿಯೊಬ್ಬರ ಸಹಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಉನ್ನತ ವಿಧ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುವರು. ಬಡ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವಿರಿ.

ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

ತುಲಾ

ತೊಂದರೆಯಲ್ಲಿ ಸಿಲುಕಿದವರಿಗೆ ಹಣದ ಸಹಾಯ ಮಾಡುವ ಯೋಜನೆ ಮಾಡುವಿರಿ. ಉದ್ಯೋಗಲ್ಲಿನ ಆಗುಹೋಗುಗಳು ನಿಮ್ಮ ಪರವಾಗಿರುತ್ತವೆ. ಸಂಗೀತ ಭರತನಾಟ್ಯ ಬಲ್ಲ ವಿದ್ಯಾರ್ಥಿಗಳಿಗೆ ವಿಶೇಷ ಗೌರವ ದೊರೆಯುತ್ತದೆ. ಕುಟುಂಬದ ವ್ಯಾಜ್ಯಗಳನ್ನು ತೀರ್ಮಾನಿಸುವ ಸಲುವಾಗಿ ಸಂದಾನಕೇಂದ್ರವನ್ನು ಆರಂಭಿಸುವಿರಿ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ನಸುಗೆಂಪುಬಣ್ಣ

ವೃಶ್ಚಿಕ

ಸುಲಭವಾಗಿ ಯಾರ ಸಲಹೆಯನ್ನು ಒಪ್ಪಿಕೊಳ್ಳುವುದಿಲ್ಲ. ಅನಾವಶ್ಯಕವಾಗಿ ಎಲ್ಲರ ಮೇಲೆ ಕೋಪಗೊಳ್ಳುವಿರಿ. ಉದ್ಯೋಗದಲ್ಲಿ ಯಾವುದೇ ಬದಲಾವಣೆ ಉಂಟಾಗದು. ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ದೇಹಾಲಸ್ಯ ಉಂಟಾಗುತ್ತದೆ. ವ್ಯವಸಾಯದಲ್ಲಿ ಆಸಕ್ತಿ ಉಂಟಾಗಲಿದೆ.

ಪರಿಹಾರ: ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ

ಧನಸ್ಸು

ವೃತ್ತಿಯಲ್ಲಿ ಅಧಿಕಾರದ ಜೊತೆ ಜವಾಬ್ದಾರಿಯು ಹೆಚ್ಚುತ್ತದೆ. ಅಜೀರ್ಣದ ತೊಂದರೆ ಸದಾ ಕಾಡಲಿದೆ. ಆದಾಯವನ್ನು ಹೆಚ್ಚಿಸಿಕೊಳ್ಳಲು ಹೊಸ ವ್ಯಾಪಾರವೊಂದನ್ನು ಆರಂಭಿಸುವಿರಿ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ಗಳಿಸುವಿರಿ. ನಿಮಗಿಷ್ಟವಾದ ಚಿನ್ನದ ಒಡವೆ ಕೊಳ್ಳುವಿರಿ.

ಪರಿಹಾರ: ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಮಕರ

ಕುಟುಂಬದಲ್ಲಿಅನಿಶ್ಚಿತ ವಾತಾವರಣ ಇರುತ್ತದೆ. ಆಧುನಿಕ ತಂತ್ರಜ್ಞಾನ ತಿಳಿದವರಿಗೆ ವಿದೇಶದಲ್ಲಿ ಉದ್ಯೋಗ ಲಭಿಸುತ್ತದೆ. ಹೊಸ ವಾಹನವನ್ನು ಕೊಳ್ಳುವಿರಿ. ಆರೋಗ್ಯವನ್ನು ಸ್ಥಿರವಾಗಿರಿಸಿಕೊಳ್ಳಲು ದೈಹಿಕ ವ್ಯಾಯಾಮದ ಮೊರೆ ಹೋಗುವಿರಿ. ವಂಶದ ಹಳೆಯ ಮನೆಯನ್ನು ನವೀಕರಣಗೊಳಿಸುವಿರಿ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಕುಂಭ

ಸರ್ಕಾರಿ ಆಡಳಿತದ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ವಿದ್ಯಾರ್ಥಿಗಳು ಮೌನವಾಗಿ ಎಲ್ಲವನ್ನೂ ಸಾಧಿಸಬಲ್ಲರು. ಕಷ್ಟವಿಲ್ಲದ ಸಂಪಾದನೆಯ ದಾರಿ ಹುಡುಕುವಿರಿ. ಆಹಾರ ಪದಾರ್ಥಗಳ ಸರಬರಾಜಿನ ಉದ್ಯೋಗದಲ್ಲಿ ಲಾಭವಿದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ

ಮೀನ

ಕುಟುಂಬದ ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ. ವಿನಾಕಾರಣ ಉದ್ಯೋಗವನ್ನು ಬದಲಿಸುವಿರಿ. ಸಂಗಾತಿಯ ಸಹಾಯ ಸಹಕಾರ ಸದಾ ದೊರೆಯುತ್ತದೆ. ಕುಟುಂಬದ ಹಿರಿಯರ ಜವಾಬ್ದಾರಿಯನ್ನು ಹಂಚಿಕೊಳ್ಳುವಿರಿ. ಗುರಿ ತಲುಪುವವರಿಗೆ ಕೆಲಸ-ಕಾರ್ಯದ ವಿಚಾರವನ್ನು ರಹಸ್ಯವಾಗಿಡುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಪೂಜಾದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 85468 65832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಗೌರಿವಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.